ಕ್ರೈಂ

ಸುಳ್ಯ: ಸಾರಿಗೆ ಬಸ್ ಗೆ ಗುದ್ದಿ ಲಾರಿ ಡ್ರೈವರ್ ಪರಾರಿ

ಸಮಗ್ರ ನ್ಯೂಸ್: ರಾಜ್ಯ ರಸ್ತೆ ಸಾರಿಗೆ ಬಸ್ ಗೆ ಲಾರಿಯೊಂದು ಹಿಂದಿನಿಂದ ಬಂದು ಗುದ್ದಿದ್ದು ಲಾರಿ ಡ್ರೈವರ್ ಪರಾರಿಯಾದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಸುಳ್ಯ ಸಮೀಪದ ಪರಿವಾರಕಾನ ಬಳಿ ನಡೆದಿದೆ. ಸುಳ್ಯದಿಂದ ಕೊಯನಾಡಿಗೆ ತೆರಳುತ್ತಿದ್ದ ಬಸ್ ಗೆ ಅದರ ಹಿಂದಿನಿಂದ ವೇಗವಾಗಿ ಬಂದ ಲಾರಿ(KA 51 AH 9126) ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬಸ್ ನ ಹಿಂಭಾಗ ಜಖಂಗೊಂಡಿದ್ದು, ಲಾರಿ ಚಾಲಕ ಹೆದರಿ ಪರಾರಿಯಾಗಿದ್ದಾನೆ. ಸುಳ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಳ್ಯ: ಸಾರಿಗೆ ಬಸ್ ಗೆ ಗುದ್ದಿ ಲಾರಿ ಡ್ರೈವರ್ ಪರಾರಿ Read More »

ಸುಳ್ಯ:ಸ್ಕೂಟಿ ಮತ್ತು ಕಾರು ನಡುವೆ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಸ್ಕೂಟಿ‌ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಣಿ-ಮೈಸೂರು ರಾ.ಹೆದ್ದಾರಿಯ ಅರಂತೋಡು ಮರ್ಕಂಜ ಕ್ರಾಸ್ ಬಳಿ ನಡೆದಿದೆ. ಮೃತಪಟ್ಟ ಸ್ಕೂಟಿ ಸವಾರನನ್ನು ಸುಳ್ಯದ ಕುಕ್ಕುಜಡ್ಕ ಮೂಲದ ನವೀನ್(30) ಎಂದು ಹೇಳಲಾಗಿದೆ. ಕಾರು ಮಂಡ್ಯ ಮೂಲದ್ದಾಗಿದ್ದು ಮಡಿಕೇರಿಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿತ್ತು.ಈ ವೇಳೆ ಅರಂತೋಡು ಮರ್ಕಂಜ ಕ್ರಾಸ್ ಬಳಿ ಕಲ್ಲುಗುಂಡಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಘಟನೆ ಪರಿಣಾಮ ಸ್ಕೂಟಿ ನಜ್ಜುಗುಜ್ಜಾಗಿದ್ದು ಸವಾರ ಸ್ಥಳದಲ್ಲಿ

ಸುಳ್ಯ:ಸ್ಕೂಟಿ ಮತ್ತು ಕಾರು ನಡುವೆ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಸಾವು Read More »

ಉಪ್ಪಿನಂಗಡಿ: ವಿದ್ಯುತ್ ಶಾಕ್ ಗೆ ಕಾಲೇಜು ವಿದ್ಯಾರ್ಥಿ ಬಲಿ

ಸಮಗ್ರ ನ್ಯೂಸ್: ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಹಿರೇಬಂಡಾಡಿ ಗ್ರಾಮದ ಅಡಕ್ಕಲ್ ಬಳಿ ನಡೆದಿದೆ. ಶರೀಪುದ್ದೀನ್(19) ಮೃತ ವಿದ್ಯಾರ್ಥಿ. ಯುವಕ ಹಮ್ಮಬ್ಬ ಅವರ ಸಹೋದರಿಯ ಪುತ್ರನಾಗಿದ್ದು, ಹುಮ್ಮಬ್ಬ ಅವರ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಘಟನೆಯ ಬಗ್ಗೆ ಹುಮ್ಮಬ್ಬ ಅವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನಲ್ಲಿ ಸಾರ್ವಜನಿಕರ ಮೂಲಕ ನನ್ನ ತಂಗಿಯ ಮಗನಿಗೆ ಶರೀಪುದ್ದೀನ್ ಗೆ ಅಡೆಕ್ಕಲ್ ಕುಮಾರಧಾರ ನದಿ ಕಿನಾರೆಯ ಬಳಿ ವಿಧ್ಯುತ್ ಸ್ಪರ್ಶವಾಗಿ ಅಸ್ವಸ್ಥಗೊಂಡಿರುವ ಬಗ್ಗೆ ಮಾಹಿತಿ ಬಂದಿದೆ. ಸ್ಥಳೀಯರು

ಉಪ್ಪಿನಂಗಡಿ: ವಿದ್ಯುತ್ ಶಾಕ್ ಗೆ ಕಾಲೇಜು ವಿದ್ಯಾರ್ಥಿ ಬಲಿ Read More »

ಸುಳ್ಯ; ಬೈಕ್ ಅಪಘಾತ ಓರ್ವ ಮೃತ್ಯು

ಸಮಗ್ರ ನೂಸ್: ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸುಳ್ಯದ ಪಾಲಡ್ಕ ಎಂಬಲ್ಲಿ ಮೇ.22 ರಂದು ಸಂಭವಿಸಿದೆ.ಮೃತಪಟ್ಟಾತ ಕೆವಿಜಿ ಆಯುರ್ವೇದ ಕಾಲೇಜು ವಿಧ್ಯಾರ್ಥಿ ಸ್ವರೂಪ್(22) ಎಂದು ಗುರುತಿಸಲಾಗಿದೆ. ಈತ ಬೈಕ್ ನಲ್ಲಿ ತೆರಳುತ್ತಿದ್ದು ಓವರ್ ಟೇಕ್ ಮಾಡುವ ರಭಸದಲ್ಲಿ ಎದುರಿನಿಂದ ಬಂದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಎನ್ನಲಾಗಿದೆ. ಈ ವೇಳೆ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡಿದ್ದು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದು

ಸುಳ್ಯ; ಬೈಕ್ ಅಪಘಾತ ಓರ್ವ ಮೃತ್ಯು Read More »

ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ಮೇ 22, ಕಾಲೇಜು ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ನಡೆದಿದೆ. ಶೇಖಮಲೆಯ ಜಾರತ್ತಾರು ನಿವಾಸಿ ಆನಂದ ರವರ ಪುತ್ರ ರಿತೇಶ್(18) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಇಂದು ಮಧ್ಯಾಹ್ನ ಮನೆಯ ಪಕ್ಕದಲ್ಲಿರುವ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಗೆ ಶರಣಾಗಿದ್ದಾನೆ. ಈತ ಪುತ್ತೂರಿನ ಜಿಡೆಕಲ್ಲು ಸರಕಾರಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಕಾಲೇಜಿನ ಸಹಪಾಠಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಎಂದು ಅವನ ಸ್ನೇಹಿತರಿಂದ ತಿಳಿದು ಬಂದಿದೆ. ಹದಿನೆಂಟರ ಹರೆಯದ ರಿತೇಶ್

ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ಮಾಜಿ ಶಾಸಕ ಯು.ಆರ್ ಸಭಾಪತಿ ನಿಧನ

ಸಮಗ್ರ ನ್ಯೂಸ್: ಕಾಂಗ್ರೆಸ್ ನ ಹಿರಿಯ ಮುಖಂಡ, ಮಾಜಿ ಶಾಸಕ ಯು.ಆರ್. ಸಭಾಪತಿ(71) ಅಲ್ಪಕಾಲದ ಅಸೌಖ್ಯದಿಂದ ಇದ್ದ ಇವರು ಉಡುಪಿಯ ಬಡಗುಪೇಟೆಯ ತಮ್ಮ ಮನೆಯಲ್ಲಿ ಇಂದು ನಿಧನರಾಗಿದ್ದಾರೆ. 1952 ರಲ್ಲಿ ಹುಟ್ಟಿದ ಅವರು, 1994 ರಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ(ಕೆಸಿಪಿ) ಚುನಾಯಿತರಾಗಿ ವಿಧಾನಸಭೆ ಪ್ರವೇಶಿಸಿದ್ದರು. ಅನಂತರ ಕೆಸಿಪಿ ಕಾಂಗ್ರೆಸ್ ನೊಂದಿಗೆ ವಿಲೀನಗೊಂಡಿತ್ತು. 1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಎಂಎಲ್ ಎ ಆಗಿ ಮರು ಆಯ್ಕೆಯಾಗಿದ್ದರು. ಅನಂತರ ಜಿಲ್ಲೆಯ ರಾಜಕಾರಣದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಎರಡು ಗಂಡು,

ಮಾಜಿ ಶಾಸಕ ಯು.ಆರ್ ಸಭಾಪತಿ ನಿಧನ Read More »

ಸುಳ್ಯ: ಸಿದ್ದರಾಮಯ್ಯ ಅಭಿನಂದನಾ ಬ್ಯಾನರ್ ಹರಿದ ಕಿಡಿಗೇಡಿಗಳು

ಸಮಗ್ರ ನ್ಯೂಸ್: ಕರ್ನಾಟಕದ ನೂತನ ಸಿಎಂ ಆಗಿ ಪದಗ್ರಹಣ ವಹಿಸಿಕೊಂಡ ಸಿದ್ದರಾಮಯ್ಯ ಅವರಿಗೆ ಅಭಿನಂದಿಸಿ ಹಾಕಲಾಗಿದ್ದ ಬ್ಯಾನರ್ ಅನ್ನು ಹರಿದ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರು ಸಮೀಪದ ವಳಲಂಬೆಯಲ್ಲಿ ನಡೆದಿದೆ. ಇಲ್ಲಿನ ಬಸ್ ತಂಗುದಾಣ ಪಕ್ಕ ಸಿಎಂ ಸಿದ್ದರಾಮಯ್ಯರಿಗೆ ಅಭಿನಂದನೆ ಸಲ್ಲಿಸುವ ಬ್ಯಾನರ್ ಅನ್ನು ಅವರ ಅಭಿಮಾನಿ ಬಳಗಿದಂದ ಅಳವಡಿಸಲಾಗಿತ್ತು. ಶನಿವಾರ ರಾತ್ರಿ ಈ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ ಘಟನೆ ನಡೆದಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಳ್ಯ: ಸಿದ್ದರಾಮಯ್ಯ ಅಭಿನಂದನಾ ಬ್ಯಾನರ್ ಹರಿದ ಕಿಡಿಗೇಡಿಗಳು Read More »

ಕೆಟ್ಟು ನಿಂತ ಲಾರಿಗೆ ಕಾರು ಡಿಕ್ಕಿ

ಸಮಗ್ರ ನ್ಯೂಸ್: ಮಾಣಿ ಮೈಸೂರು ಹೆದ್ದಾರಿಯ ಕೊಯನಾಡು ಬಲಿ ಕೆಟ್ಟು ನಿಂತ ಲಾರಿಗೆ ಮಾರುತಿ 800 ಕಾರು ಡಿಕ್ಕಿಯಾದ ಘಟನೆ ಮೇ 20ರಂದು ಸಂಭವಿಸಿದೆ. ಮಡಿಕೇರಿಯಿಂದ ಸುಳ್ಯ ಕಡೆ ಹೋಗುತ್ತಿದ್ದ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಕೆಟ್ಟು ನಿಂತ ಲಾರಿಗೆ ಕಾರು ಡಿಕ್ಕಿ Read More »

13 ವರ್ಷದ ಬಾಲಕಿ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ

ಸಮಗ್ರ ನ್ಯೂಸ್: 13 ವರ್ಷದ ಬಾಲಕಿಯ ಮೇಲೆ ಚಲಿಸುತ್ತಿರುವ ವಾಹನದಲ್ಲಿ ಸಾಮೂಹಿಕ ಬಲಾತ್ಕಾರ ಮಾಡಿರುವ ಘಟನೆ ಆಸ್ಸಾಂ ರಾಜ್ಯದ ಕೊಕರಾಝಾರ ಜಿಲ್ಲೆಯ ಡೋಟಮಾ ಪ್ರದೇಶದಲ್ಲಿ ನಡೆದಿದೆ. ಆರೋಪಿಗಳನ್ನು ರೂಬೆಲ್ ರೆಹಮಾನ, ಇಮ್ರಾನ್ ಹುಸೇನ, ಅನ್ವರ ಹುಸೇನ ಮತ್ತು ಮೊಮಿನೂರ ರಹಮಾನ ಎಂದು ಗುರುತಿಸಲಾಗಿದೆ. ಪೊಲೀಸರು ಗಸ್ತು ಮಾಡುತ್ತಿರುವಾಗ ಅವರಿಗೆ ವಾಹನದ ಬಗ್ಗೆ ಸಂದೇಹ ಬಂದಿತು. ಅವರು ವಾಹನವನ್ನು ನಿಲ್ಲಿಸಿದಾಗ ಈ ಪ್ರಕರಣ ಬೆಳಕಿಗೆ ಬಂತು. ಅ. 13 ರಂದು ಮಧ್ಯಾಹ್ನ ಡೊಟಮಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರ

13 ವರ್ಷದ ಬಾಲಕಿ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ Read More »

ಖ್ಯಾತ ನೇತ್ರ ತಜ್ಞ ಡಾ.ಭುಜಂಗ ಶೆಟ್ಟಿ ಇನ್ನಿಲ್ಲ

ಸಮಗ್ರ ನ್ಯೂಸ್: ಬೆಂಗಳೂರಿನ ನಾರಾಯಣ ನೇತ್ರಾಲಯದ ಮುಖ್ಯಸ್ಥ, ಖ್ಯಾತ ನೇತ್ರ ತಜ್ಞ ಡಾ ಕೆ ಭುಜಂಗಶೆಟ್ಟಿ ಅವರು ನಿಧನ ಹೊಂದಿದ್ದಾರೆ. ಇಂದು ಆಸ್ಪತ್ರೆಗೆ ಹೋಗಿ ಚಿಕಿತ್ಸೆ ನೀಡಿದ್ದ ಡಾ.ಭುಜಂಗ ಶೆಟ್ಟಿ ಅವರಿಗೆ ಸಂಜೆ 6 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತವಾಗಿತ್ತು. ಆಸ್ಪತ್ರೆಯಿಂದ ಮನೆಗೆ ವಾಪಸಾದ ಬಳಿಕ ಹೃದಯಾಘಾತವಾಗಿದ್ದು, ಕೂಡಲೇ ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಡಾ.ಕೆ ಭುಜಂಗಶೆಟ್ಟಿ ಅವರು, ಬೆಂಗಳೂರು ವೈದ್ಯಕೀಯ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿದ್ದು, ಅಲ್ಲಿ ಅವರು 1978ರಲ್ಲಿ ಎಂಬಿಬಿಎಸ್ ಮಾಡಿದರು.

ಖ್ಯಾತ ನೇತ್ರ ತಜ್ಞ ಡಾ.ಭುಜಂಗ ಶೆಟ್ಟಿ ಇನ್ನಿಲ್ಲ Read More »