ಕ್ರೈಂ

ಕೇರಳದ ಮಲಪ್ಪುರಂನಲ್ಲಿ ಬೋಟ್ ಪಲ್ಟಿ| ಮಹಿಳೆಯರು, ಮಕ್ಕಳು ಸೇರಿ‌ ‌21 ಮಂದಿ ದುರ್ಮರಣ

ಸಮಗ್ರ ನ್ಯೂಸ್: ಕೇರಳದ ಮಲಪ್ಪುರಂ ಜಿಲ್ಲೆಯ ತನೂರ್ ಪ್ರದೇಶದ ತುವಲ್ತಿರಾಮ್ ಬೀಚ್ ಬಳಿ ಭಾನುವಾರ ಸಂಜೆ ಸುಮಾರು 30 ಪ್ರಯಾಣಿಕರಿದ್ದ ಹೌಸ್ ಬೋಟ್ ಪಲ್ಟಿಯಾಗಿ ಮುಳುಗಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 21 ಮಂದಿ ಸಾವನ್ನಪ್ಪಿದ್ದಾರೆ. ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ತನೂರ್ ಕರಾವಳಿ ಬಳಿ ಪ್ರವಾಸಿ ದೋಣಿ ಮಗುಚಿ ಬಿದ್ದಿದೆ. ಈ ಘಟನೆ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ. ದೋಣಿಯಲ್ಲಿದ್ದವರೆಲ್ಲರೂ ಪ್ರವಾಸಿಗರಾಗಿದ್ದಾರೆ. ಈ ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ

ಕೇರಳದ ಮಲಪ್ಪುರಂನಲ್ಲಿ ಬೋಟ್ ಪಲ್ಟಿ| ಮಹಿಳೆಯರು, ಮಕ್ಕಳು ಸೇರಿ‌ ‌21 ಮಂದಿ ದುರ್ಮರಣ Read More »

ಗರ್ಲ್​ಫ್ರೆಂಡ್​ ಜತೆಗಿದ್ದರೂ ಮತ್ತೊಂದು ಯುವತಿಯ ಮೇಲೆ ಕಾಮದಾಸೆ; ಆರೋಪಿ ಜೈಲಿಗೆ

ಸಮಗ್ರ ನ್ಯೂಸ್: ಬಸ್ ನಲ್ಲಿ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಕ್ಕೆ‌ ಡ್ರೈವರ್​ ಮತ್ತು ಕಂಡಕ್ಟರ್​ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ. ಸಂತ್ರಸ್ತೆಯು ತಮಿಳುನಾಡಿನ ತಿಂಡಿವನಂ ಮೂಲದವಳು. ಆರೋಪಿಯನ್ನು ಶರತ್​ ಎಂದು ಗುರುತಿಸಲಾಗಿದೆ. ಆರೋಪಿ ಶರತ್​ ತನ್ನ ಗರ್ಲ್​ಫ್ರೆಂಡ್​ ಜತೆ ಬಸ್​ ಏರಿದ್ದು ಬಳಿಕ ಆಕೆಯನ್ನು ಮಲಗಿಕೊಂಡಿದ್ದಾಳೆ. ಈ ವೇಳೆ ಸಂತ್ರಸ್ತೆ ಬೆಂಗಳೂರಿಗೆ ತಲುಪಲು ಪುದುಚೇರಿಯಿಂದ ಸ್ಲೀಪರ್​ ಕೋಚ್​ ಬಸ್​ ಏರಿದ್ದಳು. ಬಸ್​ ಸ್ವಲ್ಪ ದೂರ ಪ್ರಯಾಣಿಸಿದ ಕೂಡಲೇ ಹಿಂದಿನ ಸೀಟಿನಲ್ಲಿದ ಶರತ್​ ಮೈಮುಟ್ಟಲು ಶುರು ಮಾಡಿದ.

ಗರ್ಲ್​ಫ್ರೆಂಡ್​ ಜತೆಗಿದ್ದರೂ ಮತ್ತೊಂದು ಯುವತಿಯ ಮೇಲೆ ಕಾಮದಾಸೆ; ಆರೋಪಿ ಜೈಲಿಗೆ Read More »

ಚಿಕ್ಕಮಗಳೂರು:ಮಾಜಿ‌ ಶಾಸನರ ಮೇಲೆ ಹಲ್ಲೆಗೈದು ಮನೆ ದರೋಡೆ

ಸಮಗ್ರ ನ್ಯೂಸ್: ಮಾಜಿ‌ ಶಾಸಕರೊಬ್ಬರ ಮೇಲೆ ಹಲ್ಲೆಗೈದು ಅವರ ಮನೆ ದರೋಡೆಗೈದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ. ತರೀಕೆರೆಯ ಮಾಜಿ ಶಾಸಕ ಎಸ್ ಎಂ ನಾಗರಾಜ್ ಅವರ ಮನೆ ಮೇಲೆ ಕೆಲ ದುಷ್ಕರ್ಮಿಗಳು ಬಂದೂಕು, ಮಚ್ಚುನೊಂದಿಗೆ ದಾಳಿ ಮಾಡಿದ್ದಾರೆ. ಮನೆಯ ಬಾಗಿಲು ಮುರಿದು, ಮಾಜಿ ಶಾಸಕರ ಮೇಲೆ ನಡೆಸಿದ್ದಾರೆ. 1ಕೆ.ಜಿಗೂ ಅಧಿಕ ಚಿನ್ನಾಭರಣ, ಹಣ ದರೋಡೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಚುನಾವಣೆ ಸಮಯದಲ್ಲಿ ಈ ಘಟನೆ ನಡೆದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಸದ್ಯ ಸ್ಥಳಕ್ಕೆ

ಚಿಕ್ಕಮಗಳೂರು:ಮಾಜಿ‌ ಶಾಸನರ ಮೇಲೆ ಹಲ್ಲೆಗೈದು ಮನೆ ದರೋಡೆ Read More »

ಒಂದೇ ಮನೆಯ ಮೂವರು ಮಹಿಳೆಯರು ಸೇರಿ 6 ಮಂದಿಯನ್ನು ಗುಂಡಿಕ್ಕಿ ಹತ್ಯೆ!

ಸಮಗ್ರ ನ್ಯೂಸ್: ಜಮೀನು ವಿವಾದದ ಗಲಾಟೆಯಲ್ಲಿ ಒಂದೇ ಕುಟುಂಬದ ಆರು ಸದಸ್ಯರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಶುಕ್ರವಾರ ಮಧ್ಯಪ್ರದೇಶದ ಮೊರೆನಾದಲ್ಲಿ ನಡೆದಿದೆ. ಘಟನೆಯ ಆಘಾತಕಾರಿ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಈ ವೀಡಿಯೋದಲ್ಲಿ ಇಬ್ಬರು ರೈಫಲ್ ಗಳನ್ನು ಹಿಡಿದು ಇನ್ನೊಂದು ಗುಂಪಿನ ಕಡೆ ಗುಂಡು ಹಾರಿಸಿರುವುದು ದಾಖಲಾಗಿದೆ. ನಂತರ ಕೆಲವರು ಅವರನ್ನು ಕೋಲುಗಳಿಂದ ಥಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಧೀರ್ ಸಿಂಗ್ ತೋಮರ್ ಮತ್ತು ಗಜೇಂದ್ರ ಸಿಂಗ್ ತೋಮರ್ ಕುಟುಂಬಗಳ ನಡುವೆ

ಒಂದೇ ಮನೆಯ ಮೂವರು ಮಹಿಳೆಯರು ಸೇರಿ 6 ಮಂದಿಯನ್ನು ಗುಂಡಿಕ್ಕಿ ಹತ್ಯೆ! Read More »

ಜಮೀನು ವೀವಾದಕ್ಕೆ ಯುವಕ ಬಲಿ

ಸಮಗ್ರ ನ್ಯೂಸ್: ಜಮೀನಿನ ರಸ್ತೆಗೆ ಸಂಬಂದಿಸಿದಂತೆ ನಡೆಯುತ್ತಿದ್ದ ವಿವಾದಕ್ಕೆ ಯುವಕನೋರ್ವನ ಬಲಿಯಾದ ಘಟನೆ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಚಿಕ್ಕಳ್ಳ ಗ್ರಾಮದ ಪ್ರವೀಣ್ (46 ವರ್ಷ) ಕೊಲೆಯಾದ ಯುವಕ. ರಸ್ತೆಗೆ ಸಂಬಂಧಿಸಿದಂತೆ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ವಿವಾದ ನಡೆಯುತ್ತಿತ್ತು. ಮೇ.5ರ ಬೆಳಿಗ್ಗೆ ತನ್ನ ಜಮೀನಿನಲ್ಲಿ ಹಾದುಹೋಗಿದ್ದ  ವಿವಾದಿತ ರಸ್ತೆಯಲ್ಲಿ ವಿರೋಧಿ ಗುಂಪಿನವರು ಕೆಲಸ ಮಾಡುತ್ತಿದ್ದಾಗ ಅದನ್ನು ಪ್ರಶ್ನಿಸಲು ಬಂದ ಪ್ರವೀಣ್ ಮೇಲೆ ಗುಂಪು ಕತ್ತಿ ಹಾರೆಯಿಂದ ಮಾರಣಾಂತಿಕವಾಗಿ ಹಲ್ಲೇ ನಡೆಸಿದ್ದರು ಎಂದು ತಿಳಿದುಬಂದಿದೆ. ತೀವ್ರ

ಜಮೀನು ವೀವಾದಕ್ಕೆ ಯುವಕ ಬಲಿ Read More »

ಜಮ್ಮು- ಕಾಶ್ಮೀರದಲ್ಲಿ ಉಗ್ರರಿಂದ ಬಾಂಬ್ ಸ್ಫೋಟ| ಇಬ್ಬರು ಯೋಧರು ಹುತಾತ್ಮ; ನಾಲ್ವರಿಗೆ ಗಾಯ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು (ಮೇ.5) ಬೆಳಗ್ಗೆ ಭಯೋತ್ಪಾದಕರು ನಡೆಸಿದ ಬಾಂಬ್‌ ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ರಾಜೌರಿ ಸೆಕ್ಟರ್‌ನ ಕಂಡಿ ಅರಣ್ಯ ಪ್ರದೇಶದಲ್ಲಿ ಸೇನಾ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮಂಗಳವಾರ ಜಮ್ಮು ಪ್ರದೇಶದ ಭಟ ಧುರಿಯನ್‌ನ ತೋಟಾ ಗಲಿ ಪ್ರದೇಶದಲ್ಲಿ ಸೇನಾ ಟ್ರಕ್‌ಗೆ ಹೊಂಚುದಾಳಿ ನಡೆಸಿದ ಭಯೋತ್ಪಾದಕರ ಗುಂಪನ್ನು ಪತ್ತೆಹಚ್ಚಲು ಮತ್ತು ನಿರ್ಮೂಲನೆ

ಜಮ್ಮು- ಕಾಶ್ಮೀರದಲ್ಲಿ ಉಗ್ರರಿಂದ ಬಾಂಬ್ ಸ್ಫೋಟ| ಇಬ್ಬರು ಯೋಧರು ಹುತಾತ್ಮ; ನಾಲ್ವರಿಗೆ ಗಾಯ Read More »

ಬಸ್ – ಕಾರು ನಡುವೆ ಭೀಕರ ಅಪಘಾತ| ಮೂವರು ಸ್ಥಳದಲ್ಲೇ ದುರ್ಮರಣ

ಸಮಗ್ರ ನ್ಯೂಸ್: ಕೆಎಸ್‍ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಾದಗಿರಿಯ ಶಹಪುರ ತಾಲೂಕಿನ ಮದ್ದರಕಿ ಬಳಿಯ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕೃಷಿ ಇಲಾಖೆಯಲ್ಲಿ ಅಧಿಕಾರಿಯಾಗಿದ್ದ ರಂಗಂಪೇಟೆಯ ನಾಗರಾಜ ಸಜ್ಜನ್ (59), ಪತ್ನಿ ಮಹಾದೇವಿ (50) ಹಾಗೂ ಸಂಬಂಧಿ ರೇಣುಕಾ (45) ಮೃತ ದುರ್ದೈವಿಗಳು. ಮೃತರು ಇಂದು ಕಲಬುರಗಿಯಲ್ಲಿ ಸಂಬಂಧಿಕರ ಮದುವೆಗೆ ತೆರಳಿದ್ದು ಮದುವೆ ಮುಗಿಸಿ ವಾಪಾಸ್ ಆಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ

ಬಸ್ – ಕಾರು ನಡುವೆ ಭೀಕರ ಅಪಘಾತ| ಮೂವರು ಸ್ಥಳದಲ್ಲೇ ದುರ್ಮರಣ Read More »

ಆಟೋ ರಿಕ್ಷಾ ಹೊತ್ತಿ ಮಹಿಳೆ ಸಜೀವ ದಹನ

ಸಮಗ್ರ ನ್ಯೂಸ್: ಮೇ 3 ಮಹಾರಾಷ್ಟ್ರದ ಥಾಣೆ ನಗರದಲ್ಲಿ ಆಟೋ ರಿಕ್ಷಾಕ್ಕೆ ಬೆಂಕಿ ಹೊತ್ತಿಕೊಂಡು ಮಹಿಳೆಯೊಬ್ಬರು ಆಟೋದಲ್ಲೇ ಸಜೀವ ದಹನಗೊಂಡಿದ್ದಾರೆ. ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಆಟೋ ರಸ್ತೆಯ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಮಹಿಳೆ ಆಟೋದಲ್ಲೇ ಇದ್ದ ಕಾರಣ ಸಜೀವ ದಹನವಾಗೊಂಡಿದ್ದಾರೆ. ಸಂಪೂರ್ಣ ದೇಹ ಸುಟ್ಟು ಹೋದ ಕಾರಣ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಘಟನೆಯಲ್ಲಿ ಆಟೋ ಚಾಲಕ ರಾಜೇಶ್‌ ಕುಮಾರ್‌ (45) ಅವರಿಗೆ ಸುಟ್ಟ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಟೋ ರಿಕ್ಷಾ ಹೊತ್ತಿ ಮಹಿಳೆ ಸಜೀವ ದಹನ Read More »

ಪುತ್ತೂರಿನಲ್ಲಿ ನೈತಿಕ ಪೊಲೀಸ್ ಗಿರಿ| ಯುವತಿ ಜೊತೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆಗೈದ ಹಿಂದೂ ಯುವಕರು

ಸಮಗ್ರ ನ್ಯೂಸ್: ಭಜರಂಗದಳ ನಿಷೇಧದ ಕುರಿತು ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಲಾಗಿದೆ. ಯುವತಿ ಜತೆ ಮಾತನಾಡಿದ್ದಕ್ಕೆ ಹಿಂದು ಸಂಘಟನೆ ಕಾರ್ಯಕರ್ತರು ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಮೊಹಮ್ಮದ್‌ ಪಾರಿಶ್ (18) ಎಂಬ ಯುವಕನಿಗೆ ಹಿಂದು ಕಾರ್ಯಕರ್ತರು ಥಳಿಸಿದ್ದು, ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಫಾರಿಶ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ. ಹಿಂದೂ ಯುವತಿ ಜೊತೆ ಮಾತನಾಡಿದ್ದಕ್ಕಾಗಿ ಪ್ರಥಮ ಪಿಯುಸಿ ವಿದ್ಯಾರ್ಥಿ ಮೇಲೆ

ಪುತ್ತೂರಿನಲ್ಲಿ ನೈತಿಕ ಪೊಲೀಸ್ ಗಿರಿ| ಯುವತಿ ಜೊತೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆಗೈದ ಹಿಂದೂ ಯುವಕರು Read More »

ದಶಪಥ‌ ಹೆದ್ದಾರಿಯ ರಾಮನಗರ ಸಮೀಪ ಭೀಕರ ಅಪಘಾತ| ಇಬ್ಬರು ಸ್ಥಳದಲ್ಲೇ ಸಾವು; ಮತ್ತೋರ್ವ ಗಂಭೀರ

ಸಮಗ್ರ ನ್ಯೂಸ್: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಒಂದೇ ಬೈಕ್‌ನಲ್ಲಿದ್ದ ಮೂವರಿಗೆ ಹಿಂಬದಿಯಿಂದ ಬಂದ ಮತ್ತೊಂದು ‌ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಬಿದ್ದ ಯುವಕರ ಮೇಲೆ ಮತ್ತೊಂದು ಕಾರು ಹರಿದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಸ್ಥಳಕ್ಕೆ ರಾಮನಗರ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಮತ್ತೊಬ್ಬನ

ದಶಪಥ‌ ಹೆದ್ದಾರಿಯ ರಾಮನಗರ ಸಮೀಪ ಭೀಕರ ಅಪಘಾತ| ಇಬ್ಬರು ಸ್ಥಳದಲ್ಲೇ ಸಾವು; ಮತ್ತೋರ್ವ ಗಂಭೀರ Read More »