ಕ್ರೈಂ

ಚಾಮುಂಡಿ‌ ಬೆಟ್ಟಕ್ಕೆ ತೆರಳುವಾಗ ಹೃದಯಾಘಾತ| ಮಾಜಿ ಶಾಸಕ ಆರ್.ವಿ ದೇವರಾಜ್ ನಿಧನ

ಸಮಗ್ರ ನ್ಯೂಸ್: ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್​​ ಮಾಜಿ ಶಾಸಕ ಆರ್​​ವಿ ದೇವರಾಜ್​ ನಿಧನ ಹೊಂದಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಾಗ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಮೈಸೂರಿನಲ್ಲಿರುವ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಡಿ.3ರಂದು ಜನ್ಮದಿನ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ತೆರಳಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಮೈಸೂರಿನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಸದ್ಯ ವೈದ್ಯರು ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ. ಚಿಕ್ಕಪೇಟೆ ಮಾಜಿ ಶಾಸಕ ಮತ್ತು […]

ಚಾಮುಂಡಿ‌ ಬೆಟ್ಟಕ್ಕೆ ತೆರಳುವಾಗ ಹೃದಯಾಘಾತ| ಮಾಜಿ ಶಾಸಕ ಆರ್.ವಿ ದೇವರಾಜ್ ನಿಧನ Read More »

ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿಗಳನ್ನು ಹೊರಕಳುಹಿಸಿದ ಪ್ರಿನ್ಸಿಪಾಲ್| ಭಜರಂಗದಳದಿಂದ ಆಕ್ರೋಶ

ಸಮಗ್ರ ನ್ಯೂಸ್: ಶಬರಿಮಲೆ ಅಯ್ಯಪ್ಪ ಸ್ವಾಮಿಯ ಮಾಲೆ ಧರಿಸಿ ಕಾಲೇಜಿಗೆ ಬಂದ ಇಬ್ಬರು ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿಯು ಹೊರಗೆ ನಿಲ್ಲಿಸಿದ ಘಟನೆ ಚಿಕ್ಕಮಗಳೂರು ನಗರದ ಪ್ರತಿಷ್ಠಿತ ಎಂ.ಇ.ಎಸ್. ಕಾಲೇಜಿನಲ್ಲಿ ನಡೆದಿದೆ. ಸಮವಸ್ತ್ರ ನೀತಿಯನ್ನು ಉಲ್ಲಂಘಿಸಲಾಗಿದೆ ಎಂದು ಆಡಳಿತ ಮಂಡಳಿ ವಾದಿಸಿದರೆ, ಇದು ಧಾರ್ಮಿಕ ಭಾವನೆಗೆ ಧಕ್ಕೆ ಎಂದು ಬಜರಂಗದಳ ಮತ್ತು ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂ.ಇ.ಎಸ್. ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಅಯ್ಯಪ್ಪ ಮಾಲೆ ಧರಿಸಿ ಕಾಲೇಜಿಗೆ ಆಗಮಿಸಿದ್ದರು. ಇದಕ್ಕೆ

ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿಗಳನ್ನು ಹೊರಕಳುಹಿಸಿದ ಪ್ರಿನ್ಸಿಪಾಲ್| ಭಜರಂಗದಳದಿಂದ ಆಕ್ರೋಶ Read More »

ಉಡುಪಿ: ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ಯುವತಿಯನ್ನು ನಿರ್ಜನ ಪ್ರದೇಶದಲ್ಲಿ ಅಡ್ಡಗಟ್ಟಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತನೋರ್ವನನ್ನು ಉಡುಪಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪೆರ್ಡೂರು ಹಿಂದು ಜಾಗರಣಾ ವೇದಿಕೆಯ ನಾಯರ್‌ಕೋಡು ಘಟಕದ ಪ್ರದೀಪ್ ಪೂಜಾರಿ(26) ಬಂಧಿತ ಆರೋಪಿ. ಈತ ಯುವತಿಯೊಬ್ಬಳನ್ನು ಮದುವೆಯಾಗುವಂತೆ ನಿರಂತರ ಕಿರುಕುಳ ನೀಡುತ್ತಿದ್ದು, ಆಕೆ ಆತನೊಂದಿಗೆ ಮದುವೆಗೆ ನಿರಾಕರಿಸಿದ್ದಳು. ಈ ಬಗ್ಗೆ ಆಕೆ ಹಿರಿಯಡ್ಕ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಆತನನ್ನು ಪೊಲೀಸರು ಬಂಧಿಸಿದ್ದು, ಬಳಿಕ ಆತ ಜಾಮೀನಿನ ಮೇಲೆ

ಉಡುಪಿ: ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ ಅರೆಸ್ಟ್ Read More »

ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ| ಕೋಲಾರದ ಐವರು ಮೃತ್ಯು

ಸಮಗ್ರ ನ್ಯೂಸ್: ಆಂಧ್ರಪ್ರದೇಶದ ಕೋಟೆಕಲ್ ಗ್ರಾಮದಲ್ಲಿ ಇಂದು(ನ.29) ಮುಂಜಾನೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಚಿಕ್ಕಹೊಸಹಳ್ಳಿ ಗ್ರಾಮದ 5 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮಂತ್ರಾಲಯದಿಂದ ರಾಘವೇಂದ್ರ ಸ್ವಾಮಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದ್ದು, ಮೃತರ ಪೈಕಿ ಇಬ್ಬರು ಮಕ್ಕಳಿದ್ದರು ಎಂದು ಹೇಳಲಾಗಿದ್ದು, ಚಾಲಕ ಮಾತ್ರ ಬದುಕುಳಿದಿರುವ ಬಗ್ಗೆ ತಿಳಿದು ಬಂದಿದೆ. ಆಂಧ್ರದ ಎಮ್ಮಿಗನೂರು ತಾಲೂಕಿನ ಕೋಟೆಕಲ್ ಗ್ರಾಮದಲ್ಲಿ ಇಂದು ಮುಂಜಾನೆ 5 ಗಂಟೆಗೆ ಎರಡು ಕಾರುಗಳ

ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ| ಕೋಲಾರದ ಐವರು ಮೃತ್ಯು Read More »

ಕಲಬುರಗಿಯಲ್ಲಿ ಭೀಕರ ಅಪಘಾತ| ಹಿರಿಯ ಐಎಎಸ್ ಅಧಿಕಾರ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

ಸಮಗ್ರ ನ್ಯೂಸ್: ಭೀಕರ ಕಾರು ಅಪಘಾತದಲ್ಲಿ ಕರ್ನಾಟಕದ ಹಿರಿಯ ಐಎಎಸ್ ಅಧಿಕಾರಿ, ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗದಿಂದ ಕಲಬುರಗಿಗೆ ಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಶ್ವಾನ ಅಡ್ಡ ಬಂದ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅಪಘಾತದಲ್ಲಿ ಮಹಾಂತೇಶ್ ಬೀಳಗಿ, ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತಪಟ್ಟಿದ್ದಾರೆ

ಕಲಬುರಗಿಯಲ್ಲಿ ಭೀಕರ ಅಪಘಾತ| ಹಿರಿಯ ಐಎಎಸ್ ಅಧಿಕಾರ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು Read More »

ಧರ್ಮಸ್ಥಳ ಬುರುಡೆ ಪ್ರಕರಣ| ಆರೋಪಿ ಚೆನ್ನಯಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿದ್ದ ಬುರುಡೆ ಕೇಸ್ ಗೆ ಸಂಬಂಧಿಸಿದಂತೆ ಆರೋಪಿ ಚಿನ್ನಯ್ಯಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಧರ್ಮಸ್ಥಳ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿ ಚಿನ್ನಯ್ಯಗೆ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಚಿನ್ನಯ್ಯ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದ. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, 1 ಲಕ್ಷ ರೂ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿ ಸೇರಿದಂತೆ 12 ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ.

ಧರ್ಮಸ್ಥಳ ಬುರುಡೆ ಪ್ರಕರಣ| ಆರೋಪಿ ಚೆನ್ನಯಗೆ ಜಾಮೀನು ಮಂಜೂರು Read More »

ಬಜ್ಪೆ: ಯುವಕನ ಮೇಲೆ‌ ಚೂರಿ ಇರಿತ| ಆರೋಪಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಮಂಗಳೂರಿನ ಬಜಪೆ ಪೊಲೀಸ್ ಠಾಣೆಯ ವ್ಯಾಪ್ತಿಯ ಎಡಪದವಿನಲ್ಲಿ ಸೋಮವಾರ ಬೈಕಿನಲ್ಲಿ ಸಾಗುತ್ತಿದ್ದ ನಾಲ್ವರು ಯುವಕರ ಗುಂಪು ಚೂರಿ ಇರಿದು ಯುವಕನನ್ನು ಕೊಲ್ಲಲು ಯತ್ನಿಸಿದೆ. ಈ ಕೃತ್ಯದಲ್ಲಿ ಭಾಗಿಯಾದ ಒಬ್ಬ ಆರೋಪಿಯನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಖಿಲೇಶ್‌ ಹಲ್ಲೆಗೊಳಗಾದ ಯುವಕ. ಒಂದೇ ಬೈಕಿನಲ್ಲಿ ನಾಲ್ವರು ಕುಳಿತುಕೊಂಡು, ಕೈಯಲ್ಲಿ ಚೂರಿ ಹಿಡಿದುಕೊಂಡು ಸಾಗುತ್ತಿದ್ದುದ್ದನ್ನು ಅಖಿಲೇಶ್‌ ನೋಡಿದ್ದರು. ಈ ಕುರಿತು ವಿಡಿಯೊ ಚಿತ್ರೀಕರಿಸಲು ಅವರನ್ನು ಹಿಂಬಾಲಿಸಿದ್ದರು. ಬೈಕಿನಲ್ಲಿ ಸಾಗುತ್ತಿದ್ದ ಕಿಡಿಗೇಡಿಗಳು ಅಖಿಲೇಶ್‌ ಅವರತ್ತ ಚೂರಿ ಬೀಸಿದ್ದು, ಅವರ

ಬಜ್ಪೆ: ಯುವಕನ ಮೇಲೆ‌ ಚೂರಿ ಇರಿತ| ಆರೋಪಿ ಪೊಲೀಸ್ ವಶಕ್ಕೆ Read More »

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ

ಸಮಗ್ರ ನ್ಯೂಸ್: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ (89) ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ‘ಬಾಲಿವುಡ್ ಹೀ ಮ್ಯಾನ್’ ಎಂದೇ ಖ್ಯಾತಿಯಾಗಿದ್ದ ಧರ್ಮೇಂದ್ರ ನಿಧನಕ್ಕೆ ಹಲವು ನಟರು ಕಂಬನಿ ಮಿಡಿದಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 89 ವರ್ಷದ ಧರ್ಮೇಂದ್ರ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ನಂತರ ಅವರನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಆದರೆ ಇಂದು ನಟ ಧರ್ಮೇಂದ್ರ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಅವರ ಸಾವಿನ ವದಂತಿಗಳು

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ Read More »

ಬೆಳ್ತಂಗಡಿ: ರಸ್ತೆ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

ಸಮಗ್ರ ನ್ಯೂಸ್: ಕಾರು ಹಾಗೂ ಸ್ಕೂಟಿ ಮಧ್ಯೆ ನಡೆದ ಅಪಘಾತವೊಂದರಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಬಳಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿ 21 ವರ್ಷದ ಅನನ್ಯಾ ಎಂದು ಗುರುತಿಸಲಾಗಿದೆ. ಸ್ಕೂಟರ್‌ನಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಪೃಥ್ವಿ ರಾವ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಇಬ್ಬರು ವಿದ್ಯಾರ್ಥಿನಿಯರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಇಬ್ಬರೂ ಬೆಳ್ತಂಗಂಡಿಯಿಂದ ಕಾಲೇಜಿಗೆ

ಬೆಳ್ತಂಗಡಿ: ರಸ್ತೆ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು Read More »

ಭಾರತೀಯ ನೌಕಾಪಡೆಯ ರಹಸ್ಯ ಪಾಕ್ ಗೆ ರವಾನೆ| ಉಡುಪಿಯಲ್ಲಿ ಇಬ್ಬರು ದೇಶದ್ರೋಹಿಗಳು ಅರೆಸ್ಟ್

ಸಮಗ್ರ ನ್ಯೂಸ್: ದೆಹಲಿಯಲ್ಲಿ ಕಾರು ಬಾಂಬ್ ಸ್ಫೋಟ ದುರಂತಕ್ಕೆ ಸಂಬಂಧಪಟ್ಟಂತೆ ಈಗಾಗಲೇ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಈ ಒಂದು ಪ್ರಕರಣ ತನಿಖೆ ನಡೆಯುತ್ತಿರುವಾಗಲೇ ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆಯ ಗೌಪ್ಯ ಮಾಹಿತಿ ಹಾಗೂ ಕೆಲವು ರಹಸ್ಯಗಳನ್ನು ಕಳುಹಿಸಿರುವ ಆರೋಪದ ಮೇರೆಗೆ ಶಿಪ್ ಯಾರ್ಡ್ ನ ಇಬ್ಬರು ನೌಕರರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.  ಭಾರತದ ನೌಕಾ ಸೇನೆಗೆ ಸಂಬಂಧಪಟ್ಟ ಗೌಪ್ಯ ಪಟ್ಟಿ, ಇತರ ಗೌಪ್ಯ ಮಾಹಿತಿಗಳನ್ನು ವಾಟ್ಸಪ್‌ ಹಾಗೂ ಫೇಸ್‌ಬುಕ್ ಮೂಲಕ ಅನಧಿಕೃತವಾಗಿ ಶೇರ್‌ ಮಾಡಿ, ಅಕ್ರಮ ಲಾಭ

ಭಾರತೀಯ ನೌಕಾಪಡೆಯ ರಹಸ್ಯ ಪಾಕ್ ಗೆ ರವಾನೆ| ಉಡುಪಿಯಲ್ಲಿ ಇಬ್ಬರು ದೇಶದ್ರೋಹಿಗಳು ಅರೆಸ್ಟ್ Read More »