ಕ್ರೈಂ

ಕ್ರೂಸರ್ – ಗೂಡ್ಸ್ ವಾಹನದ ಮದ್ಯೆ ಭೀಕರ ಅಪಘಾತ; ಇಬ್ಬರು ಗಂಭೀರ

ಸಮಗ್ರ ನ್ಯೂಸ್: ಕ್ರೂಸರ್ ಮತ್ತು ಗೂಡ್ಸ್ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ‌ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಡ್ಡೆರಹಟ್ಟಿ – ಸಮೀಪದ ಘಟ್ಟನಟ್ಟಿ ಕ್ರಾಸ್ ಬಳಿ ನಡೆದಿದೆ. ಕ್ರೂಸರ್ ನಲ್ಲಿದ್ದವರು ಸವದತ್ತಿ ಎಲ್ಲಮ್ಮ ದೇವಿಯ ದರ್ಶನ ಪಡೆದು ಮರಳಿ ತಮ್ಮೂರಿಗೆ ತೆರಳುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಗಾಯಗೊಂಡವರನ್ನು ಸಿಂದಗಿ ತಾಲೂಕಿನ ಭಕ್ತಾದಿಗಳೆಂದು ಗುರುತಿಸಲಾಗಿದೆ. ಕ್ರೂಸರ್ ನಲ್ಲಿದ್ದ 12 ಜನರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿರುತ್ತದೆ. ಗಾಯಾಳುಗಳನ್ನು ಇವರನ್ನು ಅಂಬುಲೆನ್ಸ್ ಮುಖಾಂತರ

ಕ್ರೂಸರ್ – ಗೂಡ್ಸ್ ವಾಹನದ ಮದ್ಯೆ ಭೀಕರ ಅಪಘಾತ; ಇಬ್ಬರು ಗಂಭೀರ Read More »

ಖ್ಯಾತ ಗಾಯಕಿ ವಾಣಿ ಜಯರಾಂ ಇನ್ನಿಲ್ಲ

ಸಮಗ್ರ ನ್ಯೂಸ್: ಐದು ದಶಕಗಳ ವೃತ್ತಿಜೀವನವನ್ನ ಹೊಂದಿದ್ದ ಜನಪ್ರಿಯ ಹಿನ್ನೆಲೆ ಗಾಯಕಿ ವಾಣಿ ಜಯರಾಮ್ ಶನಿವಾರ ಚೆನ್ನೈನಲ್ಲಿ ನಿಧನರಾಗಿದ್ದಾರೆ. ವಾಣಿ ಜಯರಾಮ್ ಕನ್ನಡ ಸೇರಿ ತಮಿಳು, ಹಿಂದಿ, ತೆಲುಗು, ಮಲಯಾಳಂ, ಮರಾಠಿ, ಒಡಿಯಾ, ಬಂಗಾಳಿ ಮತ್ತು ತುಳು ಸೇರಿದಂತೆ 19 ಭಾರತೀಯ ಭಾಷೆಗಳಲ್ಲಿ ಹಾಡಿದ್ದಾರೆ. ವಾಣಿ ಜಯರಾಮ್ ಅವರು ಭಕ್ತಿಗೀತೆಗಳು ಮತ್ತು ಖಾಸಗಿ ಆಲ್ಬಂಗಳು ಸೇರಿದಂತೆ 10,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಅವರು ಪ್ರಪಂಚದಾದ್ಯಂತ ಹಲವಾರು ಏಕವ್ಯಕ್ತಿ ಸಂಗೀತ ಕಚೇರಿಗಳನ್ನು ಸಹ ನೀಡಿದ್ದಾರೆ. ವಾಣಿ ಜಯರಾಮ್

ಖ್ಯಾತ ಗಾಯಕಿ ವಾಣಿ ಜಯರಾಂ ಇನ್ನಿಲ್ಲ Read More »

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಆಟೋ – ಮಹಿಳೆ ಸಾವು

ಸಮಗ್ರ ನ್ಯೂಸ್ :ಚಾಲಕನ ನಿಯಂತ್ರಣ ತಪ್ಪಿ ಆಟೊ ರಿಕ್ಷಾವೊಂದು ಮೃತ್ಯುಂಜಯ ನದಿಗೆ ಉರುಳಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿರುವ ಘಟನೆ ಮುಂಡಾಜೆ ಕಾಪು ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮೃತರನ್ನು ಕಕ್ಕಿಂಜೆ ಕತ್ತರಿ ಗುಡ್ಡೆ ನಿವಾಸಿ ಸಫಿಯಾ(57) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ರಾತ್ರಿ 11 ಗಂಟೆಗೆ ಮುಂಡಾಜೆಯಿಂದ ಕಕ್ಕಿಂಜೆ ಕಡೆಗೆ ಹೋಗುತ್ತಿದ್ದ ರಿಕ್ಷಾ, ಕಾಪು ಚಡಾವು ಹತ್ತಿರ ಚಾಲಕನ ನಿಯಂತ್ರಣ ಕಳೆದು ಕೊಂಡು ಮೃತ್ಯುಂಜಯ ನದಿಗೆ ಉರುಳಿ ಬಿದ್ದಿದೆ. ಕಿಂಡಿ ಅಣೆಕಟ್ಟುಗಳಲ್ಲಿ ನೀರು ನಿಂತಿರುವುದರಿಂದ ನದಿಯಲ್ಲಿ

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಆಟೋ – ಮಹಿಳೆ ಸಾವು Read More »

ಸೌದಿಯಲ್ಲಿ ಭೀಕರ ಅಪಘಾತ| ಮಂಗಳೂರಿನ ‌ಮೂವರು ಸೇರಿ ನಾಲ್ಕು ಮಂದಿ ದುರ್ಮರಣ

ಸಮಗ್ರ‌ ನ್ಯೂಸ್: ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿ ಒಟ್ಟು ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಕಳೆದ ರಾತ್ರಿ ನಡೆದಿದೆ. ಅಕೀಲ್, ನಾಸಿರ್, ರಿಝ್ವಾನ್, ಶಿಹಾಬ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸೌದಿ ಅರೇಬಿಯಾದ ರಿಯಾದ್ ಪ್ರಾಂತ್ಯದ ಖುರೈಸ್ ರಸ್ತೆಯ ಬಳಿ ಕಳೆದ ರಾತ್ರಿ ಈ ಅಪಘಾತ ಸಂಭವಿಸಿದೆ. ನಾಲ್ವರು ಕಾರಿನಲ್ಲಿ ಹೋಗುತ್ತಿದ್ದಾಗ ಖುರೈಸ್ ರಸ್ತೆಯ ಬಳಿ ಒಂಟೆಗೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಕಾರಿನಲ್ಲಿದ್ದವರು SAQCO ಎಂಬ

ಸೌದಿಯಲ್ಲಿ ಭೀಕರ ಅಪಘಾತ| ಮಂಗಳೂರಿನ ‌ಮೂವರು ಸೇರಿ ನಾಲ್ಕು ಮಂದಿ ದುರ್ಮರಣ Read More »

ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಶವ| ಅತ್ಯಾಚಾರ ಶಂಕೆ; ಕಾಲೇಜು ಪ್ರಾಂಶುಪಾಲರ ಮೇಲೆ ಅನುಮಾನ

ಸಮಗ್ರ ನ್ಯೂಸ್: ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿ 17 ವರ್ಷದ ವಿದ್ಯಾರ್ಥಿನಿಯ ಶವ ಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರಿನಲ್ಲಿ ನಡೆದಿದೆ. ಘಟನೆ ಬಗ್ಗೆ ಅನುಮಾನ ಮೂಡಿದ್ದು, ಕಾಲೇಜಿನ ಪ್ರಿನ್ಸಿಪಾಲ್ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಲಿಂಗಸುಗೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ತನ್ನ ವಿರುದ್ಧ ಆರೋಪ ಬರದಂತೆ ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿಯನ್ನು ಕೊಂದು ಪ್ರಿನ್ಸಿಪಾಲ್ ನೇಣಿಗೆ ಹಾಕಿದ್ದಾರೆ ಎಂದು ಸಂಬಂಧಿಕರು, ಪೋಷಕರು ಆರೋಪಿಸಿದ್ದಾರೆ. ಪ್ರಥಮ ಪಿಯುಸಿ ವಿಜ್ಞಾನ

ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಶವ| ಅತ್ಯಾಚಾರ ಶಂಕೆ; ಕಾಲೇಜು ಪ್ರಾಂಶುಪಾಲರ ಮೇಲೆ ಅನುಮಾನ Read More »

ಕಾಸರಗೋಡು: ಎಸ್. ಐ ಕಿವಿ ಕಚ್ಚಿದ ಆರೋಪಿ

ಸಮಗ್ರ ನ್ಯೂಸ್: ಪೊಲೀಸ್ ಕಸ್ಟಡಿಗೆ ಕರೆದೊಯ್ಯುತ್ತಿದ್ದಾಗ ಆರೋಪಿಯೋರ್ವ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರವರ ಕಿವಿಯನ್ನು ಕಚ್ಚಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮಧೂರು ಅರಂತೋಡಿನ ಸ್ಟ್ಯಾನಿ ರೊಡ್ರಿಗಸ್(45) ಈ ಕೃತ್ಯ ನಡೆಸಿದ್ದು, ಕಾಸರಗೋಡು ಠಾಣಾ ಸಬ್ ಇನ್ಸ್ ಪೆಕ್ಟರ್ ಎಂ . ವಿ ವಿಷ್ಣು ನಾಥ್ ರವರ ಕಿವಿಗೆ ಕಚ್ಚಿ ಗಾಯಗೊಳಿಸಿದ್ದಾನೆ. ಗುರುವಾರ ಸಂಜೆ ಘಟನೆ ನಡೆದಿದೆ. ಉಳಿಯತ್ತಡ್ಕದಲ್ಲಿ ಸ್ಟ್ಯಾನಿ ಚಲಾಯಿಸುತ್ತಿದ್ದ ಬೈಕ್ ವ್ಯಾನ್ ಗೆ ಡಿಕ್ಕಿಹೊಡೆದಿದೆ. ಈ ಸಂದರ್ಭದಲ್ಲಿ ಪರಸ್ಪರ ವಾಗ್ವಾದ ನಡೆದಿದೆ. ಸ್ಟ್ಯಾನಿ ಪಾನಮತ್ತನಾಗಿರುವುದಾಗಿ

ಕಾಸರಗೋಡು: ಎಸ್. ಐ ಕಿವಿ ಕಚ್ಚಿದ ಆರೋಪಿ Read More »

ಮುಲ್ಕಿ ಹಿಟ್ ಆ್ಯಂಡ್ ರನ್ ಪ್ರಕರಣ| ತುಳು ಸ್ಟ್ಯಾಂಡ್ ಅಪ್ ಕಾಮಿಡಿಯನ್ ಅರ್ಪಿತ್ ಅರೆಸ್ಟ್

ಸಮಗ್ರ ನ್ಯೂಸ್: ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಮಧ್ಯರಾತ್ರಿ ಕಾರು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಾರಿಯಾಗಿದ್ದ ಆರೋಪಿ ಕಾರು ಚಾಲಕನನ್ನು ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಕಾರು ಸಮೇತ ಬಂಧಿಸಿರುವುದಾಗಿ ವರದಿಯಾಗಿದೆ. ಆರೋಪಿ ಕಾರು ಚಾಲಕನನ್ನು ಹಳೆಯಂಗಡಿ ಇಂದ್ರ ನಗರ ನಿವಾಸಿ ಅರ್ಪಿತ್ ಎಂದು ಗುರುತಿಸಲಾಗಿದ್ದು, ಈತ ತುಳು ಸ್ಟ್ಯಾಂಡ್ ಆಫ್ ಕಾಮಿಡಿ ಯೂಟ್ಯೂಬರ್ ಎಂದು ತಿಳಿದು ಬಂದಿದೆ. ಮಧ್ಯಪ್ರದೇಶದ

ಮುಲ್ಕಿ ಹಿಟ್ ಆ್ಯಂಡ್ ರನ್ ಪ್ರಕರಣ| ತುಳು ಸ್ಟ್ಯಾಂಡ್ ಅಪ್ ಕಾಮಿಡಿಯನ್ ಅರ್ಪಿತ್ ಅರೆಸ್ಟ್ Read More »

ಎನ್‌ಐಎಗೆ ಭಯೋತ್ಪಾದನಾ ದಾಳಿಯ ಬೆದರಿಕೆ ಸಂದೇಶ

ಸಮಗ್ರ ನ್ಯೂಸ್ :ಮುಂಬೈನಲ್ಲಿ ಭಯೋತ್ಪಾದನಾ ದಾಳಿ ನಡೆಸುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಮೇಲ್ ಸಂದೇಶ ಬಂದಿದೆ. ಪೊಲೀಸ್ ಮೂಲಗಳ ಪ್ರಕಾರ, ತಾಲಿಬಾನಿ ಸದಸ್ಯ ಎಂದು ಹೇಳಿಕೊಳ್ಳುವ ಅಪರಿಚಿತ ವ್ಯಕ್ತಿಯಿಂದ ಮೇಲ್ ಸ್ವೀಕರಿಸಲಾಗಿದೆ. ಹೀಗಾಗಿ ಮಹಾರಾಷ್ಟ್ರದ ವಿವಿಧ ನಗರಗಳಲ್ಲಿ ಅಲರ್ಟ್ ಆಗಿರಲು ಎನ್‌ಐಎ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದೆ. “ಬೆದರಿಕೆ ಮೇಲ್ ಕಳುಹಿಸಿದ ವ್ಯಕ್ತಿ ತನ್ನನ್ನು ತಾಲಿಬಾನಿ ಎಂದು ಹೇಳಿಕೊಂಡಿದ್ದಾನೆ. ಮುಂಬೈನಲ್ಲಿ ಭಯೋತ್ಪಾದಕ ದಾಳಿ ನಡೆಯಲಿದೆ ಎಂದು ಆತ ಹೇಳಿಕೊಂಡಿದ್ದಾನೆ ಎಂದು ಮುಂಬೈ ಪೊಲೀಸ್ ಮೂಲಗಳು ತಿಳಿಸಿವೆ. ಬೆದರಿಕೆ

ಎನ್‌ಐಎಗೆ ಭಯೋತ್ಪಾದನಾ ದಾಳಿಯ ಬೆದರಿಕೆ ಸಂದೇಶ Read More »

500 ಹುಡುಗೀರ ಮಧ್ಯೆ ಒಬ್ನೇ ಹುಡುಗ| ಎಕ್ಸಾಂ ಬರೆಯೋಕೆ ಹೋದವ ಚಳಿಜ್ವರದಿದಂ ಆಸ್ಪತ್ರೆ ದಾಖಲು!

ಹುಡುಗೀರ ಫ್ರೆಂಡ್‌ಶಿಪ್ ಮಾಡ್ಕೊಳ್ಳೋಕೆ ಕೆಲ ಹುಡುಗರು ತುದಿಗಾಲಲ್ಲಿ ನಿಂತಿರ್ತಾರೆ. ಆದ್ರೆ ಇಲ್ಲೊಬ್ಬಾತ ಮಾತ್ರ ಪರೀಕ್ಷಾ ಕೇಂದ್ರದಲ್ಲಿ 500 ಹುಡುಗಿಯರನ್ನು ಕಂಡು ಪ್ರಜ್ಞೆ ತಪ್ಪಿ ಬಿದ್ದದಲ್ಲದೆ ಆತನಿಗೆ ಜ್ವರ ಬಂದಿರೋ ಕಾರಣ ಹಾಸ್ಪಿಟಲ್‌ಗೆ ದಾಖಲಾದ ಘಟನೆ ಬಿಹಾರದಲ್ಲಿ ನಡೆದಿದೆ. ಪರೀಕ್ಷಾರ್ಥಿ ಮನೀಶ್‌ಗೆ ಎಕ್ಸಾಂ ಸೆಂಟರ್ ತಲುಪಿದ ಬೆನ್ನಲ್ಲೇ ಹುಡುಗಿಯರನ್ನು ನೋಡಿ ಅಸೌಖ್ಯ ಉಂಟಾಗಿದ್ದು, ಬಳಿಕ ಚಳಿ, ತಲೆನೋವು ಕಾಣಿಸಿಕೊಂಡು ತಲೆಸುತ್ತು ಬಂದು ಬಿದ್ದಿದ್ದಾನೆ. ತಕ್ಷಣವೇ ಆತನನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬಿಹಾರದ ನಳಂದಾದ ಬೋರ್ಡ್ ಪರೀಕ್ಷಾ ಕೇಂದ್ರದಲ್ಲಿ

500 ಹುಡುಗೀರ ಮಧ್ಯೆ ಒಬ್ನೇ ಹುಡುಗ| ಎಕ್ಸಾಂ ಬರೆಯೋಕೆ ಹೋದವ ಚಳಿಜ್ವರದಿದಂ ಆಸ್ಪತ್ರೆ ದಾಖಲು! Read More »

ಪುತ್ತೂರು: ಕಾರಿಗೆ ಡಿಕ್ಕಿಯಾಗಿ ಬಂಪರ್ ನೊಳಗೆ 70 ಕಿ.ಮೀ. ಸಾಗಿದ ನಾಯಿ

ಸಮಗ್ರ ನ್ಯೂಸ್: ಕಾರಿಗೆ ನಾಯಿಯೊಂದು ಢಿಕ್ಕಿಯಾಗಿ ಬಂಪರಿನೊಳಗೆ ಸಿಲುಕಿಕೊಂಡು ಸುಮಾರು 70 ಕಿಲೋಮೀಟರ್ ಸಾಗಿ ಇಳಿದು ಹೋಗಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಕಬಕ ನಿವಾಸಿ ಸುಬ್ರಹ್ಮಣ್ಯ ದಂಪತಿಗಳು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಪುತ್ತೂರಿಗೆ ವಾಪಾಸಾಗುತ್ತಿದ್ದ ದಾರಿ ಮಧ್ಯೆ ಬಳ್ಪ ಎಂಬಲ್ಲಿ ನಾಯೊಂದು ಕಾರಿಗೆ ಡಿಕ್ಕಿ ಹೊಡೆದಿದ್ದು, ತಕ್ಷಣವೇ ಸುಬ್ರಹ್ಮಣ್ಯ ಅವರು ಕಾರನ್ನು ನಿಲ್ಲಿಸಿದ್ದು, ಕಾರಿನ ಸುತ್ತಮುತ್ತ ನಾಯಿಗಾಗಿ ಹುಡುಕಾಡಿದ್ದಾರೆ. ಆದರೆ ನಾಯಿ ಪತ್ತೆಯಾಗಿರಲಿಲ್ಲ. ಇನ್ನು ಅಲ್ಲಿಂದ ನೇರವಾಗಿ ಕಬಕದ ತನ್ನ ಮನೆಗೆ ಬಂದು

ಪುತ್ತೂರು: ಕಾರಿಗೆ ಡಿಕ್ಕಿಯಾಗಿ ಬಂಪರ್ ನೊಳಗೆ 70 ಕಿ.ಮೀ. ಸಾಗಿದ ನಾಯಿ Read More »