ಕ್ರೈಂ

ಫಾರ್ಮಾ ಕಂಪನಿಯಲ್ಲಿ ರಿಯಾಕ್ಟರ್‌ ಸ್ಫೋಟ| 14 ಮಂದಿ ಕಾರ್ಮಿಕರು ಸಾವು, 20 ಮಂದಿಗೆ ಗಾಯ

ಸಮಗ್ರ ನ್ಯೂಸ್: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ರಿಯಾಕ್ಟರ್‌ ಸ್ಫೋಟಗೊಂಡು 14 ಮಂದಿ ಕಾರ್ಮಿಕರು ಸಾವನ್ನಪ್ಪಿ, ಸುಮಾರು 20 ಕಾರ್ಮಿಕರು ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶದ ಅನಕಪಲ್ಲಿಯಲ್ಲಿ ನಡೆದಿದೆ. ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ ಎಸ್ಸೆಂಟಿಯಾ ಫಾರ್ಮಾ ಕಂಪನಿಯಲ್ಲಿ ಸ್ಫೋಟ ಸಂಭವಿಸಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಎನ್‌ಟಿಆರ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಮಧ್ಯಾಹ್ನ ವೇಳೆ ಸ್ಫೋಟ ಸಂಭವಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಕಾರ್ಖಾನೆಯಲ್ಲಿ ನಡೆದ ಸ್ಫೋಟದಿಂದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ದಟ್ಟ ಹೊಗೆ ಆವರಿಸಿದೆ. ಘಟನೆ ಕುರಿತ ವೀಡಿಯೋ […]

ಫಾರ್ಮಾ ಕಂಪನಿಯಲ್ಲಿ ರಿಯಾಕ್ಟರ್‌ ಸ್ಫೋಟ| 14 ಮಂದಿ ಕಾರ್ಮಿಕರು ಸಾವು, 20 ಮಂದಿಗೆ ಗಾಯ Read More »

ಬೆಳ್ತಂಗಡಿ: ನಿವೃತ್ತ ಶಿಕ್ಷಕನ ಕಗ್ಗೊಲೆ ಪ್ರಕರಣ| ದ.ಕ ಎಸ್ಪಿ ಯತೀಶ್ ಎನ್ ಹೇಳಿದ್ದಿಷ್ಟು…

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಬೆಳಾಲು ನಲ್ಲಿ ನಿವೃತ್ತ ಶಿಕ್ಷಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಯತೀಶ್. ಎನ್ ಮಾಹಿತಿ ನೀಡಿದ್ದಾರೆ. ಬೆಳ್ತಂಗಡಿಯ ಬೆಳಾಲು ಗ್ರಾಮದ ಎಸ್‌ಪಿಬಿ ಕಂಪೌಂಡ್ ನಲ್ಲಿ ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕ ಎಸ್.ಪಿ ಬಾಲಕೃಷ್ಣ ಭಟ್(73) ಅವರನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಲಾಗಿತ್ತು. ಈ ಬಗ್ಗೆ ಮಾಹಿತಿ ನೀಡಿದ ಎಸ್ಪಿ ಮನೆ ಪಕ್ಕದಲ್ಲೇ ಶಿಕ್ಷಕನನ್ನು ದುಷ್ಕರ್ಮಿಗಳು ಮಾರಕಾಯುಧಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಬೆಳ್ತಂಗಡಿ: ನಿವೃತ್ತ ಶಿಕ್ಷಕನ ಕಗ್ಗೊಲೆ ಪ್ರಕರಣ| ದ.ಕ ಎಸ್ಪಿ ಯತೀಶ್ ಎನ್ ಹೇಳಿದ್ದಿಷ್ಟು… Read More »

ಮದುವೆಗೆ ಒಪ್ಪದ ಪ್ರಿಯಕರನ ಮರ್ಮಾಂಗಕ್ಕೆ ಚಾಕುವಿನಿಂದ ಇರಿದ ಯುವತಿ

ಸಮಗ್ರ ನ್ಯೂಸ್: ಗೆಳೆಯ ಮದುವೆಗೆ ಒಪ್ಪಲಿಲ್ಲ ಎಂದು ಯುವತಿ ಆತನ ಮರ್ಮಾಂಗಕ್ಕೆ ಚಾಕುವಿನಿಂದ ಇರಿದಿರುವ ಘಟನೆ ಆ. 16 ರಂದು ಮಹಾರಾಷ್ಟ್ರದ ಭಿವಂಡಿಯಲ್ಲಿ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಷ್ಟು ವರ್ಷಗಳ ಕಾಲ ಪ್ರೀತಿಸಿದ್ದ ಪ್ರಿಯಕರ ತನಗೆ ಸಿಗುವುದಿಲ್ಲ ಎಂದು ಕೋಪಗೊಂಡ ಯುವತಿ ಆತನ ಮೇಲೆ ಹಲ್ಲೆ ನಡೆಸಿದ್ದಾಳೆ. ಪದ್ಮಾ ನಗರ ಪ್ರದೇಶದ ತನ್ನ ಮನೆಯಲ್ಲಿ ಮಹಿಳೆ ತನ್ನ 31 ವರ್ಷದ ಗೆಳೆಯನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾಳೆ. ತನ್ನನ್ನು ಮದುವೆಯಾಗಲು ನಿರಾಕರಿಸಿದ ನಂತರ ಆಕೆ ವ್ಯಕ್ತಿಯ

ಮದುವೆಗೆ ಒಪ್ಪದ ಪ್ರಿಯಕರನ ಮರ್ಮಾಂಗಕ್ಕೆ ಚಾಕುವಿನಿಂದ ಇರಿದ ಯುವತಿ Read More »

ಚಿಕ್ಕಬಳ್ಳಾಪುರ: ಆಸ್ಪತ್ರೆಗೆ ಬಂದಿದ್ದ 65 ವರ್ಷದ ವೃದ್ಧೆ ಮೇಲೆ ಯುವಕನಿಂದ ಅತ್ಯಾಚಾರ

ಸಮಗ್ರ ನ್ಯೂಸ್: ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ 65 ವರ್ಷದ ವೃದ್ದೆಯ ಮೇಲೆ 24 ವರ್ಷದ ಯುವಕ ಅತ್ಯಾಚಾರ ನಡೆಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ. ಚಿಕಿತ್ಸೆಗೆ ಬಂದು ಆಸ್ಪತ್ರೆಯ ಆಕ್ಸಿಜನ್ ಪ್ಲಾಂಟ್ ಬಳಿ ಇದ್ದ ವೃದ್ದೆ ಮೇಲೆ ಚಿಕಿತ್ಸೆಗೆ ಬಂದಿದ್ದ ಯುವಕನಿಂದ ಅಮಾನವೀಯ ಘಟನೆ ನಡೆದಿದೆ. ಆರೋಪಿಯನ್ನು ಚಿಂತಾಮಣಿ ನಗರದ ಹೈದರಾಲಿ ನಗರದ ಇರ್ಫನ್ ಎಂದು ಗುರುತಿಸಲಾಗಿದೆ. ಇನ್ನು ಅಸ್ವಸ್ಥ ವೃದ್ದೆಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಸಂತೋಷ ಕುಮಾರ್

ಚಿಕ್ಕಬಳ್ಳಾಪುರ: ಆಸ್ಪತ್ರೆಗೆ ಬಂದಿದ್ದ 65 ವರ್ಷದ ವೃದ್ಧೆ ಮೇಲೆ ಯುವಕನಿಂದ ಅತ್ಯಾಚಾರ Read More »

ಕಾರ್ಕಳ : ಬಸ್ಸಿನಿಂದ ಕೆಳಕ್ಕೆ ಎಸೆಯಲ್ಪಟ್ಟ ಕಾಲೇಜು ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು

ಸಮಗ್ರ ನ್ಯೂಸ್: ಬಸ್ಸಿನಿಂದ ಬಿದ್ದು ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಬುಧವಾರ (ಆ.21) ಬೆಳಗ್ಗೆ ಕಾರ್ಕಳದ ನಿಟ್ಟೆಯಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿ ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್ ಶೆಟ್ಟಿ (19) ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಕಾರ್ಕಳದಿಂದ ಮಂಗಳೂರಿಗೆ ಹೋಗುವ ಖಾಸಗಿ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭ ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಎಸೆಯಲ್ಪಟ್ಟಿದ್ದಾನೆ. ಈ ಸಂದರ್ಭ ಆತನ ಮೈ ಮೇಲೆ ಬಸ್ಸಿನ ಹಿಂಬದಿಯ ಚಕ್ರ ಹರಿದ ಪರಿಣಾಮ ಗಂಭೀರ ಗಾಯಗೊಂಡಿದ್ದ

ಕಾರ್ಕಳ : ಬಸ್ಸಿನಿಂದ ಕೆಳಕ್ಕೆ ಎಸೆಯಲ್ಪಟ್ಟ ಕಾಲೇಜು ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು Read More »

ಹೀಲಿಯಂ ಗ್ಯಾಸ್ ಸೇವಿಸಿ ಸಕಲೇಶಪುರ ಮೂಲದ ಟೆಕ್ಕಿ ಬೆಂಗಳೂರಿನಲ್ಲಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ 22 ವರ್ಷದ ಟೆಕ್ಕಿ ಹೀಲಿಯಂ ಗ್ಯಾಸ್‌ (Helium Gas) ಬಳಸಿ ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಪ್ರತಿಷ್ಟಿತ ಸಾಫ್ಟ್‌ವೇರ್ ಕಂಪನಿಯ ಉದ್ಯೋಗಿಯಾಗಿರುವ ಈತ, ಬಲೂನ್‌ಗೆ ತುಂಬಲು ಬಳಸುವ ಹೀಲಿಯಂ ಗ್ಯಾಸ್ ಮೂಲಕ ಜೀವ ತೆಗೆದುಕೊಂಡಿದ್ದಾನೆ. ಸಕಲೇಶಪುರ ಮೂಲದ ಯಾಜ್ಙಿಕ್ (22) ಕಳೆದ ಕೆಲವು ತಿಂಗಳುಗಳಿಂದ ವರ್ಕ್ ಫ್ರಂ ಹೋಂನಲ್ಲಿದ್ದ ಟೆಕ್ಕಿ, ಎಂಟೆಕ್ ಎಕ್ಸಾಂ ಬರೆಯುವ ಸಲುವಾಗಿ ಬೆಂಗಳೂರಿಗೆ ಬಂದಿದ್ದ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದ ಹೋಟೆಲ್‌ನಲ್ಲಿ ಆಗಸ್ಟ್ 16ರಂದು

ಹೀಲಿಯಂ ಗ್ಯಾಸ್ ಸೇವಿಸಿ ಸಕಲೇಶಪುರ ಮೂಲದ ಟೆಕ್ಕಿ ಬೆಂಗಳೂರಿನಲ್ಲಿ ಆತ್ಮಹತ್ಯೆ Read More »

ವೈದ್ಯೆಯ ಕೊಲೆ ಮತ್ತು ಅತ್ಯಾಚಾರ ಪ್ರಕರಣ| ಪಶ್ಚಿಮ ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ

ಸಮಗ್ರ ನ್ಯೂಸ್: ಕೋಲ್ಕತ್ತಾದ ಸರ್ಕಾರಿ ಆರ್‌.ಜಿ. ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್, ಪಶ್ಚಿಮ ಬಂಗಾಳ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಹತ್ಯೆಗೀಡಾದ ಟ್ರೈನಿ ವೈದ್ಯೆಯ ಹೆಸರು, ಫೋಟೋಗಳು ಮತ್ತು ವೀಡಿಯೊಗಳನ್ನು ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ಗುರುತನ್ನು ಬಹಿರಂಗಪಡಿಸುವುದು ನಿಪುನ್ ಸಕ್ಸೇನಾ

ವೈದ್ಯೆಯ ಕೊಲೆ ಮತ್ತು ಅತ್ಯಾಚಾರ ಪ್ರಕರಣ| ಪಶ್ಚಿಮ ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ Read More »

ಬೆಳ್ತಂಗಡಿ: ಮನೆಯಂಗಳದಲ್ಲೇ ಮಾರಕಾಸ್ತ್ರಗಳಿಂದ‌ ಕೊಚ್ಚಿ ನಿವೃತ್ತ ಶಿಕ್ಷಕನ ಬರ್ಬರ ಕೊಲೆ

ಸಮಗ್ರ ನ್ಯೂಸ್: ಮನೆಯ ಅಂಗಳದಲ್ಲಿಯೇ ವ್ಯಕ್ತಿಯನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್.ಪಿ.ಬಿ ಕಾಂಪೌಂಡಿನಲ್ಲಿ ನಡೆದಿದೆ. ಕೊಲೆಯಾದ ಎಸ್.ಪಿ.ಬಾಲಕೃಷ್ಣ ಭಟ್ (73) ಅವರು ನಿವೃತ್ತ ಶಿಕ್ಷಕ ಎನ್ನಲಾಗಿದೆ. ಅವರ ಮನೆಯ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ‌ ಮಾಡಲಾಗಿದೆ ಎನ್ನಲಾಗಿದ್ದು, ತಲೆಗೆ ಭಾರೀ ಹೊಡೆತ ಬಿದ್ದಿದೆ ಎಂದು ಪ್ರಕರಣ ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಧಾವಿಸಿದ್ದು ಪ್ರಕರಣದ ಕುರಿತು ತನಿಖೆ ಆರಂಭಿಸಿದ್ದಾರೆ. ಕೊಲೆಯನ್ನು ಯಾರು, ಯಾಕೆ

ಬೆಳ್ತಂಗಡಿ: ಮನೆಯಂಗಳದಲ್ಲೇ ಮಾರಕಾಸ್ತ್ರಗಳಿಂದ‌ ಕೊಚ್ಚಿ ನಿವೃತ್ತ ಶಿಕ್ಷಕನ ಬರ್ಬರ ಕೊಲೆ Read More »

ಪುತ್ತೂರು: ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ| ಗಾಯಾಳು ಆರೋಪವೇನು? ನಿಜಕ್ಕೂ ಅಲ್ಲಿ ನಡೆದದ್ದೇನು? ಇಲ್ಲಿದೆ ಇದುವರೆಗಿನ ಅಪ್ಡೇಟ್

ಸಮಗ್ರ ನ್ಯೂಸ್: ಮುಸ್ಲಿಂ ವಿದ್ಯಾರ್ಥಿನಿಯೋರ್ವಳು ತನಗೆ ಹಿಂದೂ ಯುವಕ ಚೂರಿ ಇರಿದಿದ್ದಾನೆ ಎಂದು ಆರೋಪಿಸಿ ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರಿನಲ್ಲಿ ‌ನಡೆದಿದ್ದು, ಪ್ರಕರಣ ಬೇರೆಯದೇ ತಿರುವು ಪಡೆದುಕೊಂಡಿದೆ. ಪುತ್ತೂರು ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಗೆ ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದಾಗಿ ಆರೋಪ ಮಾಡಿದ್ದು ಪೊಲೀಸರು ಸತ್ಯಾಸತ್ಯತೆಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಪುತ್ತೂರಿನ ಕೊಂಬೆಟ್ಟುವಿನಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ತನಗೆ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಚೂರಿಯಿಂದ ಇರಿದಿರುವುದಾಗಿ ಆರೋಪಿಸಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಳೆ. ಅವಳ ಕೈಯಲ್ಲಿ ಗೀರಿದ ಗುರುತು

ಪುತ್ತೂರು: ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ| ಗಾಯಾಳು ಆರೋಪವೇನು? ನಿಜಕ್ಕೂ ಅಲ್ಲಿ ನಡೆದದ್ದೇನು? ಇಲ್ಲಿದೆ ಇದುವರೆಗಿನ ಅಪ್ಡೇಟ್ Read More »

ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ಚೂರಿ ಇರಿದ ಸಹಪಾಠಿ ವಿದ್ಯಾರ್ಥಿ

ಸಮಗ್ರ ನ್ಯೂಸ್: ಮುಸ್ಲಿಂ ಯುವತಿಯೋರ್ವಳಿಗೆ ಹಿಂದೂ ಯುವಕ ಚೂರಿಯಿಂದ ಇರಿದ ಘಟನೆ ಆ 20 ರಂದು ನಡೆದಿದೆ. ಬನ್ನೂರು ಮೂಲದ ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗೆ,‌ ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದು, ಗಾಯಗೊಂಡ ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ಚೂರಿ ಇರಿದ ಸಹಪಾಠಿ ವಿದ್ಯಾರ್ಥಿ Read More »