ಶ್ರೀರಾಮ ಸೇನೆ ಜಿಲ್ಲಾ ಘಟಕ ಅಧ್ಯಕ್ಷನ ಮೇಲೆ ಗುಂಡಿನ ದಾಳಿ| ಚುರುಕುಗೊಂಡ ತನಿಖೆ; ಜಿಲ್ಲೆಯಲ್ಲಿ ಕಟ್ಟೆಚ್ಚರ
ಸಮಗ್ರ ನ್ಯೂಸ್: ಬೆಳಗಾವಿ ಸಮೀಪದ ಹಿಂಡಲಗಾ ಗ್ರಾಮದಲ್ಲಿ ಶನಿವಾರ ರಾತ್ರಿ ಶ್ರೀರಾಮ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ಮುಖಂಡನ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.ಶ್ರೀರಾಮ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕೋಕಿತ್ಕರ್ ಹಾಗೂ ಹಿಂದೂ ರಾಷ್ಟ್ರ ಸೇನಾ ಮುಖಂಡ ಮನೋಜ್ ದೇಸೂರಕರ್ ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಶ್ರೀರಾಮ ಸೇನೆ ಬೆಳಗಾವಿ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ಗುಂಡಿನ ದಾಳಿ ಪ್ರಕರಣದ ತನಿಖೆಗೆ 4 ಪ್ರತ್ಯೇಕ ತಂಡಗಳ ರಚನೆ ಮಾಡಲಾಗಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸುತ್ತೇವೆ










