“ಬೇಕಾಬಿಟ್ಟಿ ರಸ್ತೆ ಅಗೆದ್ರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ”
-ಗೇಲ್ ಅಧಿಕಾರಿಗೆ ಶಾಸಕ ಭರತ್ ಶೆಟ್ಟಿ ಎಚ್ಚರಿಕೆ
ಸಮಗ್ರ ನ್ಯೂಸ್: “ಪೈಪ್ ಲೈನ್ ಗಾಗಿ ಎಲ್ಲೆಂದರಲ್ಲಿ ಬೇಕಾಬಿಟ್ಟಿ ರಸ್ತೆ ಅಗೆದು ಜನರಿಗೆ ತೊಂದರೆ ಉಂಟುಮಾಡಿದರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ” ಹೀಗೆಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಗೇಲ್ ಕಂಪೆನಿಯ ಅಧಿಕಾರಿಗಳಿಗೆ ಬಹಿರಂಗ ಎಚ್ಚರಿಕೆ ನೀಡಿದ ಘಟನೆ ಬುಧವಾರ ನಡೆಯಿತು. ದೇರೆಬೈಲ್ ಕೊಂಚಾಡಿ ಬಳಿ ರಸ್ತೆ ಕಾಮಗಾರಿಯ ಗುದ್ದಲಿಪೂಜೆಗೆ ಬಂದಿದ್ದ ಶಾಸಕರಲ್ಲಿ ಸ್ಥಳೀಯರು ಗೇಲ್ ಕಂಪೆನಿ ಅಧಿಕಾರಿಗಳು ಎಲ್ಲೆಂದರಲ್ಲಿ ರಸ್ತೆಯನ್ನು ಅಗೆಯುತ್ತಿದ್ದು ಇದರಿಂದ ನೀರಿನ ಪೈಪ್ ಒಡೆದು










