ಕ್ರೈಂ

ಉಡುಪಿ: ರೈಲಿಗೆ ತಲೆಕೊಟ್ಟು 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಚಲಿಸುತ್ತಿದ್ದ ರೈಲಿಗೆ ತಲೆಗೊಟ್ಟು 10 ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಎಲ್ಲೂರು ಗ್ರಾಮದ ಕೊಳಚ್ಚೂರು ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಬೆಳ್ಮಣುವಿನ ಸದಾಶಿವ ಆಚಾರ್ಯ ಎಂಬವರ ಪುತ್ರ, 10ನೇ ತರಗತಿ ವಿದ್ಯಾರ್ಥಿ ಆದರ್ಶ (16) ಮೃತ ದುರ್ದೈವಿ. ಸೂಡ ಶಾಲೆಯ 10ನೆ ತರಗತಿಯ ವಿದ್ಯಾರ್ಥಿಯಾಗಿದ್ದ ಆದರ್ಶ ಮಾನಸಿಕ ಒತ್ತಡದಿಂದ ಬಳಲುತ್ತಿದ್ದ ಎನ್ನಲಾಗಿದೆ. ಆತ ಮುಂಬೈಯಿಂದ ಕೂಚುವೇಲಿಗೆ ಹೋಗುತ್ತಿದ್ದ ರೈಲಿಗೆ ತಲೆಕೊಟ್ಟಿದ್ದು, ಇದರಿಂದ ತಲೆ ಕೈಕಾಲು ಛಿದ್ರಗೊಂಡಿತ್ತು. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ […]

ಉಡುಪಿ: ರೈಲಿಗೆ ತಲೆಕೊಟ್ಟು 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ Read More »

ಲೈಂಗಿಕ ದೌರ್ಜನ್ಯ ಪ್ರಕರಣ| ಮುರುಘಾ ಶರಣರ ಮೂರನೇ ಎಪ್ಐಆರ್ ದಾಖಲು

ಸಮಗ್ರ ನ್ಯೂಸ್: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಬಾಲ ನ್ಯಾಯ ಕಾಯ್ದೆ 2015ನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ. ಗ್ರಾಮೀಣ ಪೊಲೀಸರು ಮಂಗಳವಾರ ಮಠಾಧೀಶರ ವಿರುದ್ಧ ಮೂರನೇ ಎಫ್‌ಐಆರ್ ದಾಖಲಿಸಿದ್ದಾರೆ. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ನೀಡಿದ ದೂರಿನ ಮೇರೆಗೆ, ಪೊಲೀಸರು ಮಠಾಧೀಶರು, ಅಂದಿನ ಕಾರ್ಯದರ್ಶಿ ಪರಮಶಿವಯ್ಯ, ಹಾಸ್ಟೆಲ್ ವಾರ್ಡನ್ ಮತ್ತು ಮಡಿಲು ದತ್ತು ಕೇಂದ್ರದ ವ್ಯವಸ್ಥಾಪಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಠವು ನಡೆಸುತ್ತಿರುವ ವಸತಿ ನಿಲಯದ ಆವರಣದಲ್ಲಿ ಪತ್ತೆಯಾದ

ಲೈಂಗಿಕ ದೌರ್ಜನ್ಯ ಪ್ರಕರಣ| ಮುರುಘಾ ಶರಣರ ಮೂರನೇ ಎಪ್ಐಆರ್ ದಾಖಲು Read More »

ಪರೇಶ್ ಮೇಸ್ತಾ ಶೆಟ್ಟಿಹಳ್ಳಿ‌ ಕೆರೆಗೆ ಜಾರಿ ಬಿದ್ದು ಸತ್ತಿದ್ದು!| ಸಿಬಿಐ ತನಿಖಾ ವರದಿಯಲ್ಲಿ ಬಹಿರಂಗ

ಸಮಗ್ರ ನ್ಯೂಸ್: ಪರೇಶ್ ಮೇಸ್ತ ಸಾವಿಗೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ಪರೇಶ್​​ ಮೇಸ್ತ ಗಲಭೆ ವೇಳೆ ಓಡುತ್ತಿದ್ದಾಗ ಶೆಟ್ಟಿಕೆರೆಯಲ್ಲಿ ಜಾರಿ ಬಿದ್ದು, ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಸಿಬಿಐ ತನಿಖಾ ವರದಿಯಲ್ಲಿ ಬಹಿರಂಗಗೊಂಡಿದೆ. ಸಿಬಿಐ ಅಧಿಕಾರಿಗಳು ಇಂದು ಹೊನ್ನಾವರದ ನ್ಯಾಯಾಲಯಕ್ಕೆ ಪ್ರಕರಣದ ವರದಿಯನ್ನು ಸಲ್ಲಿಸಿದ್ದು, ವರದಿಯಲ್ಲಿ ಮೇಸ್ತನನ್ನು ಹತ್ಯೆ ಮಾಡಲಾಗಿದೆ ಎಂಬ ಆರೋಪಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ಆರೋಪಿಗಳನ್ನು ದೋಷ ಮುಕ್ತಗೊಳಿಸಬಹುದು ತಿಳಿಸಿದೆ. ಕಳೆದ ಐದು ವರ್ಷಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ. ಆತನ ಸಾವಿಗೆ

ಪರೇಶ್ ಮೇಸ್ತಾ ಶೆಟ್ಟಿಹಳ್ಳಿ‌ ಕೆರೆಗೆ ಜಾರಿ ಬಿದ್ದು ಸತ್ತಿದ್ದು!| ಸಿಬಿಐ ತನಿಖಾ ವರದಿಯಲ್ಲಿ ಬಹಿರಂಗ Read More »

ಪ್ರಧಾನಿ ಮೋದಿ ಹತ್ಯೆಗೆ ಸಂಚು; ಗುಪ್ತಚರ ಇಲಾಖೆ ಮಾಹಿತಿ

ಸಮಗ್ರ ನ್ಯೂಸ್: ದೀಪಾವಳಿಗೆ ಸ್ವಲ್ಪ ಮೊದಲು ಪ್ರಧಾನಿ ನರೇಂದ್ರ ಮೋದಿ ಭದ್ರತೆಯ ಬಗ್ಗೆ ಗುಪ್ತಚರ ಸಂಸ್ಥೆಗಳು ದೊಡ್ಡ ಎಚ್ಚರಿಕೆಯನ್ನ ನೀಡಿವೆ. ಗುಪ್ತಚರ ಸಂಸ್ಥೆಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ಗುರಿಯಾಗಿಸಿಕೊಂಡಿದ್ದು, ಭಯೋತ್ಪಾದಕರು ಆತ್ಮಾಹುತಿ ದಾಳಿ ನಡೆಸಲು ಯೋಜಿಸಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳ ದಾಖಲೆಗಳು ಬಹಿರಂಗಪಡಿಸಿವೆ. ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ಪ್ರಧಾನಿ ಮೋದಿ ವಿರುದ್ಧ ದಾಳಿ ನಡೆಸಲು ಲಷ್ಕರ್ -ಎ- ತೊಯ್ಬಾಗೆ ಈ ಕೆಲಸ ವಹಿಸಿದೆ ಎಂದು ಹೇಳಲಾಗುತ್ತಿದೆ. ಈ

ಪ್ರಧಾನಿ ಮೋದಿ ಹತ್ಯೆಗೆ ಸಂಚು; ಗುಪ್ತಚರ ಇಲಾಖೆ ಮಾಹಿತಿ Read More »

ಮಡಿಕೇರಿ: ಇಬ್ಬರು ಕಡವೆ ಬೇಟೆಗಾರರ ಬಂಧನ| ಮಾಂಸ, ಆಯುಧಗಳು ವಶಕ್ಕೆ

ಸಮಗ್ರ ನ್ಯೂಸ್ : ಮಡಿಕೇರಿ ಉಪ ಅರಣ್ಯ ವಿಭಾಗದ ಸಂಪಾಜೆ ದಬ್ಬಡ್ಕ ವಲಯದ ರಕ್ಷಿತಾರಣ್ಯದಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿ ಮಾಂಸವನ್ನಾಗಿ ಪರಿವರ್ತಿಸುವ ಸಂದರ್ಭದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಾಧಿಕಾರಿಗಳಾದ ಎ.ಟಿ.ಪೂವಯ್ಯ ಹಾಗೂ ಸಂಪಾಜೆ ವಲಯ ಅರಣ್ಯ ಅಧಿಕಾರಿ ಮಧುಸೂದನ್ ಎಂ.ಕೆ ರವರ ನೇತೃತ್ವದಲ್ಲಿ ಶಾಖೆಯ ಉಪ ಅರಣ್ಯ ಅಧಿಕಾರಿಗಳಾದ ನಿಸಾರ್ ಅಹಮದ್, ಅರಣ್ಯ ರಕ್ಷಕರಾದ ಕಾರ್ತಿಕ್, ಅರಣ್ಯ ವೀಕ್ಷಕರಾದ ಕೂಸಪ್ಪ ಮತ್ತು ಮನೋಜ್ ಕುಮಾರ್ ಅವರ ತಂಡವು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು

ಮಡಿಕೇರಿ: ಇಬ್ಬರು ಕಡವೆ ಬೇಟೆಗಾರರ ಬಂಧನ| ಮಾಂಸ, ಆಯುಧಗಳು ವಶಕ್ಕೆ Read More »

ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ| ಆರು ಮಂದಿ ಸಾವು

ಸಮಗ್ರ ನ್ಯೂಸ್: ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನಗೊಂಡು 6 ಜನರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಕೇದಾರನಾಥದಲ್ಲಿ ಸಂಭವಿಸಿದೆ. ಕೇದಾರನಾಥದಿಂದ 2 ಕೀ.ಮೀ. ದೂರದಲ್ಲಿರುವ ಗರುಡಚಟ್ಟಿ ಬಳಿ ಹೆಲಿಕಾಪ್ಟರ್ ಪತನಗೊಂಡು ಈ ದುರಂತ ಸಂಭವಿಸಿದೆ. ಹೆಲಿಕಾಪ್ಟರ್ ನಲ್ಲಿದ್ದ 8 ಜನರ ಪೈಕಿ 6 ಜನರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಎಸ್ ಡಿ ಆರ್ ಎಫ್, ಪೊಲೀಸರು ದೌಡಾಯಿಸಿದ್ದು ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ಹವಾಮಾನ ವೈಪರಿತ್ಯದ ಪರಿಣಾಮ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.

ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ| ಆರು ಮಂದಿ ಸಾವು Read More »

ಆಪ್ತೆ ಶಶಿಕಲಾ ಅವರೇ ಜಯಲಲಿತಾ ಸಾವಿಗೆ ಕಾರಣ| ವರದಿ ಸಲ್ಲಿಸಿದ ತನಿಖಾ ಆಯೋಗ

ಸಮಗ್ರ ನ್ಯೂಸ್: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿದ್ದವು. ಈ ಹಿನ್ನೆಲೆಯಲ್ಲಿ ಈ ಬಗ್ಗೆ ತನಿಖೆಗೆ ಆಯೋಗ ಒಂದನ್ನು ತಮಿಳುನಾಡು ಸರ್ಕಾರ ರಚನೆ ಮಾಡಿತ್ತು. ಈಗ ಆಯೋಗ ವರದಿ ಸಿದ್ಧ ಮಾಡಿದ್ದು, ಸರ್ಕಾರಕ್ಕೆ ಸಲ್ಲಿಕೆ ಮಾಡಿದೆ. ಅದರಲ್ಲಿ ಜಯಲಲಿತಾ ಆಪ್ತೆ ಶಶಿಕಲಾ ಅವರೇ ಜಯಲಲಿತಾ ಸಾವಿಗೆ ಕಾರಣ ಎಂದು ನ್ಯಾ. ಆರುಮುಗಸ್ವಾಮಿ ಆಯೋಗ ಉಲ್ಲೇಖ ಮಾಡಿದೆ. ನ್ಯಾ. ಆರುಮುಗಸ್ವಾಮಿ ಆಯೋಗ ಸಲ್ಲಿಸಿದ 608 ಪುಟಗಳ ವರದಿಯನ್ನು ಇಂದು ತಮಿಳುನಾಡಿದ ವಿಧಾನಸಭೆಯಲ್ಲಿ ಮಂಡನೆ

ಆಪ್ತೆ ಶಶಿಕಲಾ ಅವರೇ ಜಯಲಲಿತಾ ಸಾವಿಗೆ ಕಾರಣ| ವರದಿ ಸಲ್ಲಿಸಿದ ತನಿಖಾ ಆಯೋಗ Read More »

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ತಡೆದ ಪ್ರಕರಣ| ಸರ್ಕಾರದಿಂದ ಸಿಐಡಿ ತನಿಖೆಗೆ ಆದೇಶ

ಸಮಗ್ರ ನ್ಯೂಸ್: ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅವರ ಕಾರನ್ನು ಬೆನ್ನತ್ತಿ ಅಡ್ಡಗಟ್ಟಿ ಮಾರಕಾಯುಧ ತೋರಿಸಿ ಬೆದರಿಕೆಯೊಡ್ಡಿರುವ ಪ್ರಕರಣವನ್ನು ಸರಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ಪ್ರಸ್ತುತ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ದೂರನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಪ್ರಸ್ತುತ ತನಿಖಾಧಿಕಾರಿಯಲ್ಲಿರುವ ದಾಖಲೆಗಳನ್ನು ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಸಿಐಡಿ ತನಿಖಾ ಕಚೇರಿಗೆ ಹಸ್ತಾಂತರಿಸಬೇಕು ಎಂದು ರಾಜ್ಯ ಡಿಜಿಪಿಯವರ ಪರವಾಗಿ ಆರ್‌. ಹಿತೇಂದ್ರ ಅವರು ಆದೇಶದಲ್ಲಿ ತಿಳಿಸಿದ್ದಾರೆ. ಹರೀಶ್‌ ಪೂಂಜಾ ಅವರು ಅ. 13ರಂದು ರಾತ್ರಿ ಬೆಂಗಳೂರಿನಿಂದ ಮಂಗಳೂರಿಗೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ತಡೆದ ಪ್ರಕರಣ| ಸರ್ಕಾರದಿಂದ ಸಿಐಡಿ ತನಿಖೆಗೆ ಆದೇಶ Read More »

ORS ಚಿಕಿತ್ಸಾ ಸಂಶೋಧಕ ಡಾ. ದಿಲೀಪ್ ಮಹಲ್ ಇನ್ನಿಲ್ಲ

ಸಮಗ್ರ ನ್ಯೂಸ್: ಅತಿಸಾರ ಅಥವಾ ಇತರೆ ಯಾವುದೇ ಕಾರಣದಿಂದ ದೇಹ ನಿರ್ಜಲೀಕರಣಗೊಂಡಾಗ ನೀಡುವ ಓಆರ್‌ಎಸ್‌ (ORS) ಚಿಕಿತ್ಸೆ ಸಂಶೋಧಿಸುವ ಮೂಲಕ ವಿಶ್ವದಾದ್ಯಂತ ಕೋಟ್ಯಂತರ ಜೀವಗಳನ್ನು ಕಾಪಾಡಿದ್ದ ಖ್ಯಾತ ವೈದ್ಯ ಡಾ.ದಿಲೀಪ್‌ ಮಹಲ್‌ ನಬೀಸ್‌ (87) ಭಾನುವಾರ ಕೋಲ್ಕತ್ತದಲ್ಲಿ (Kolkata) ನಿಧನರಾದರು. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ದಿಲೀಪ್‌ ಅವರನ್ನು 2 ವಾರಗಳ ಹಿಂದೆ ಪಶ್ಚಿಮ ಬಂಗಾಳ ರಾಜಧಾನಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಭಾನುವಾರ ರಾತ್ರಿ ಅವರು ಕೊನೆಯುಸಿರೆಳೆದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಪ್ರತಿಷ್ಠಿತ

ORS ಚಿಕಿತ್ಸಾ ಸಂಶೋಧಕ ಡಾ. ದಿಲೀಪ್ ಮಹಲ್ ಇನ್ನಿಲ್ಲ Read More »

ಅಸ್ವಸ್ಥ ವೃದ್ದೆಯನ್ನು ಜೀವಂತ ತಿಂದ ನಾಯಿಗಳು| ವೃದ್ದೆಯ ಗುರುತು ಪತ್ತೆಗಾಗಿ ಪೋಲೀಸರ ಶೋದ|

ಸಮಗ್ರ ನ್ಯೂಸ್: ಅಸ್ವಸ್ಥಗೊಂಡಿದ್ದ ವೃದ್ಧೆಯನ್ನು ಬೀದಿನಾಯಿಗಳು ತಿಂದ ಬೀಭತ್ಸ ಘಟನೆ ಕಲಬುರ್ಗಿ ಜಿಲ್ಲೆಯ ಅಫ್ಜಲಪುರ ತಾಲೂಕಿನ ದೇವಲ ಗಾಣಗಾಪುರ ಗ್ರಾಮದಲ್ಲಿ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ಅಪರಿಚಿತ ವಾಹನವೊಂದು ವೃದ್ಧೆಯನ್ನು ಡಿಕ್ಕಿ ಹೊಡೆದಿತ್ತು. ಈ ವೇಳೆ ವಾಹನ ಚಾಲಕ ವೃದ್ಧೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಮತ್ತೆ ರಸ್ತೆ ಪಕ್ಕದಲ್ಲಿ ಬಿಸಾಡಿ ಪರಾರಿಯಾಗಿದ್ದಾನೆ. ಅಸ್ವಸ್ಥಗೊಂಡ ವೃದ್ದೆಯನ್ನು 4 5 ಬೀದಿನಾಯಿಗಳು ಸೇರಿಕೊಂಡು ಸಂಪೂರ್ಣವಾಗಿ ತಿಂದುಹಾಕಿ ಅಸ್ತಿಪಂಜರ ರೂಪದಲ್ಲಿ ವೃದ್ದೆಯ ಶವ ಪತ್ತೆಯಾಗಿದೆ. ವೃದ್ಧೆಯ ಶವವನ್ನು

ಅಸ್ವಸ್ಥ ವೃದ್ದೆಯನ್ನು ಜೀವಂತ ತಿಂದ ನಾಯಿಗಳು| ವೃದ್ದೆಯ ಗುರುತು ಪತ್ತೆಗಾಗಿ ಪೋಲೀಸರ ಶೋದ| Read More »