ಕ್ರೈಂ

ಶೌಚಾಲಯದಲ್ಲಿ ವಿದ್ಯಾರ್ಥಿನಿ‌ ಹೆರಿಗೆಯಾದ ಪ್ರಕರಣ| ಪ್ರಮುಖ‌ ಆರೋಪಿ‌ ಅರೆಸ್ಟ್

ಸಮಗ್ರ ನ್ಯೂಸ್: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಯಾದಗಿರಿ ವಸತಿ ಶಾಲೆ ಹೆರಿಗೆ ಕೇಸ್ ಬಗ್ಗೆ ಇದೀಗ ಬಿಗ್ ಅಪ್ಡೇಟ್ ದೊರೆತಿದೆ. ಯಾದಗಿರಿಯ ಶಹಾಪುರ‌ದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಹೆರಿಗೆ ಪ್ರಕರಣ ಸಂಬಂಧ ಪ್ರಮುಖ A1 ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸ್ಟೆಲ್ ವಾರ್ಡನ್ ಸೇರಿ ಐವರ ವಿರುದ್ಧ ಕೇಸ್ ದಾಖಲಾಗಿತ್ತು. ಸುರಪುರ ತಾಲೂಕಿನ ಕಕ್ಕೇರ ಗ್ರಾಮದ ಪರಮಣ್ಣ(30) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಸದ್ಯ ಶಹಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಆರೋಪಿ ಪರಮಣ್ಣ, ಅಪ್ರಾಪ್ತ ಬಾಲಕಿ ಜೊತೆ […]

ಶೌಚಾಲಯದಲ್ಲಿ ವಿದ್ಯಾರ್ಥಿನಿ‌ ಹೆರಿಗೆಯಾದ ಪ್ರಕರಣ| ಪ್ರಮುಖ‌ ಆರೋಪಿ‌ ಅರೆಸ್ಟ್ Read More »

ಬಣಕಲ್: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ| ಓರ್ವ ಸಾವು, ಹಲವರು ಗಂಭೀರ

ಸಮಗ್ರ ನ್ಯೂಸ್: ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮೂಡಿಗೆರೆ ಬಣಕಲ್ ನಡುವೆ ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಗುರುವಾರ(ಆ.28) ಮಧ್ಯಾಹ್ನ ಸುಮಾರು 3 ಗಂಟೆಯ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು, ಓರ್ವ ಯುವಕ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದ್ದು, ನಾಲ್ಕು ಮಂದಿ ತೀವ್ರ ಗಾಯಗೊಂಡಿದ್ದಾರೆ. ಮೃತ ಯುವಕನನ್ನು ಮೂಡಿಗೆರೆ ತಾಲ್ಲೂಕು ಬಾಳೂರು ಹೋಬಳಿ ಹುಯಿಲುಮನೆ ಗ್ರಾಮದ ರಮೇಶ್ ಸುಮತಿ ದಂಪತಿಗಳ ಪುತ್ರ ಅಕ್ಷಯ್ (22

ಬಣಕಲ್: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ| ಓರ್ವ ಸಾವು, ಹಲವರು ಗಂಭೀರ Read More »

‘ತಾನು ಹೇಳಿದ್ದೆಲ್ಲಾ ಸುಳ್ಳು’| ಸತ್ಯ ಒಪ್ಪಿಕೊಂಡ ಸುಜಾತಾ ಭಟ್

ಸಮಗ್ರ ನ್ಯೂಸ್: ಅನನ್ಯ ಭಟ್ ನಾಪತ್ತೆ ಪ್ರಕರಣದಲ್ಲಿ ಎಸ್ಐಟಿ ಸುಜಾತಾ ಭಟ್ ಗೆ ನೋಟೀಸ್ ನೀಡಿರುವ ಬೆನ್ನಲ್ಲೇ ಸುಜಾತಾ‌ಭಟ್ ಪ್ರಕರಣದಲ್ಲಿ ಉಲ್ಟಾ ಹೊಡೆದಿದ್ದಾರೆ. Insightrush ಎಂಬ ಯೂಟ್ಯೂಬ್ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ‘ಅನನ್ಯ ಭಟ್ ಕುರಿತಂತೆ ನಾನು‌ ಹೇಳಿದ್ದೆಲ್ಲಾ ಸುಳ್ಳು. ಜಾಗದ ವಿಚಾರವಾಗಿ ನಾನು ಆ ರೀತಿ ಹೇಳಿದ್ದೆ. ಕೇಸನ್ನು ವಾಪಾಸು ಪಡೆಯುತ್ತೇನೆ’ ಎಂದು ಹೇಳಿಕೆ ನೀಡಿದ್ದಾರೆ. ನನ್ನ ಮಗಳು ಅನನ್ಯಾ ಭಟ್ ಧರ್ಮಸ್ಥಳಕ್ಕೆ ಹೋಗಿದ್ದ ವೇಳೆ ನಾಪತ್ತೆಯಾಗಿರುವುದಾಗಿ ಸುಜಾತಾ ಭಟ್ ದೂರು ನೀಡಿದ್ದರು. ತಮ್ಮ ಪುತ್ರಿಯ

‘ತಾನು ಹೇಳಿದ್ದೆಲ್ಲಾ ಸುಳ್ಳು’| ಸತ್ಯ ಒಪ್ಪಿಕೊಂಡ ಸುಜಾತಾ ಭಟ್ Read More »

ಮಕ್ಕಳ ‌ಅಪಹರಣ ಕೃತ್ಯ| ದ.ಕ ಜಿಲ್ಲೆಗೆ ನಾಲ್ಕನೇ ಸ್ಥಾನ

ಸಮಗ್ರ ನ್ಯೂಸ್: ಕಳೆದ ಐದು ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 14 ಸಾವಿರಕ್ಕಿಂತ ಹೆಚ್ಚು ಮಕ್ಕಳ ಅಪಹರಣವಾಗಿದ್ದು, ಈ ಪೈಕಿ 1,336 ಮಕ್ಕಳ ಅಪಹರಣ ಪ್ರಕರಣಗಳು ಇನ್ನೂ ನಿಗೂಢವಾಗಿ ಉಳಿದಿವೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಮಂಗಳವಾರ ವಿಧಾನ ಪರಿಷತ್‌ನಲ್ಲಿ ತಿಳಿಸಿದ್ದಾರೆ. ಕಿಡ್ನಾಪ್ ಹಾಗೂ ನಿಗೂಢವಾಗಿ ನಾಪತ್ತೆಯಾದವರ ಪೈಕಿ ಹೆಣ್ಣು ಮಕ್ಕಳೇ ಹೆಚ್ಚು. ಮಕ್ಕಳ ನಾಪತ್ತೆ ಪ್ರಕರಣದಲ್ಲಿ ಬೆಂಗಳೂರು ಅಗ್ರಸ್ಥಾನದಲ್ಲಿದ್ದರೆ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಕ್ರಮವಾಗಿ 3 ಮತ್ತು 4ನೇ ಸ್ಥಾನದಲ್ಲಿವೆ. ರಾಜ್ಯದಲ್ಲಿ ಮಕ್ಕಳ ಅಪಹರಣವು

ಮಕ್ಕಳ ‌ಅಪಹರಣ ಕೃತ್ಯ| ದ.ಕ ಜಿಲ್ಲೆಗೆ ನಾಲ್ಕನೇ ಸ್ಥಾನ Read More »

ಕೊಟ್ಟಿಗೆಹಾರ : ಡೆಮೋ ಕಾರಿನಿಂದ ಡೀಸೆಲ್ ಕದ್ದು ಮಾರಾಟ ಮಾಡಿದ ಶೋ ರೂಂ ಸಿಬ್ಬಂದಿ

ಸಮಗ್ರ ನ್ಯೂಸ್: ಶೋ ರೂಂ ಸಿಬ್ಬಂದಿಗಳೇ ಡೆಮೋ ಕಾರಿನಿಂದ ಡಿಸೇಲ್ ಕಳವು ಮಾಡಿರುವ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ-ಬಣಕಲ್ ರಸ್ತೆ ಮಧ್ಯೆ ಬೆಳಕಿಗೆ ಬಂದಿದೆ. ಮಂಗಳೂರಿನಿಂದ ಕಡೂರಿನತ್ತ ಹೊಸ ಟಾಟಾ ಯೋಧ ಕಾರನ್ನು ಶೋ ರೂಂಗೆ ತಲುಪಿಸಲು ಹೊರಟಿದ್ದ ಸಿಬ್ಬಂದಿಗಳು ಮಾರ್ಗ ಮಧ್ಯೆ ಕಾರಿನ ಇಂಜಿನ್ ಪಕ್ಕದ ಪಂಪ್ ಪೈಪ್ ಬಿಚ್ಚಿ ಸುಮಾರು 10 ಲೀಟರ್ ಡಿಸೇಲ್ ಇಳಿಸಿ ಸ್ಥಳೀಯ ಅಂಗಡಿಗಳಿಗೆ ಮಾರಾಟ ಮಾಡಿದ್ದಾರೆ. ಕಳ್ಳತನ ಮಾಡಿದ ಹಣದಿಂದ ಮದ್ಯ‌ ಸೇವಿಸಿ, ನಾನ್ ವೆಜ್ ಊಟ

ಕೊಟ್ಟಿಗೆಹಾರ : ಡೆಮೋ ಕಾರಿನಿಂದ ಡೀಸೆಲ್ ಕದ್ದು ಮಾರಾಟ ಮಾಡಿದ ಶೋ ರೂಂ ಸಿಬ್ಬಂದಿ Read More »

ಬೆಂಗಳೂರಿನಲ್ಲಿ ನಿಗೂಢ ಸ್ಫೋಟ| ಹಲವು ಮನೆಗಳು ಜಖಂ

ಸಮಗ್ರ ನ್ಯೂಸ್: ಬೆಂಗಳೂರಿನ ಮನೆಯೊಂದರಲ್ಲಿ ಅನುಮಾನಾಸ್ಪದ ಸ್ಪೋಟ ಸಂಭವಿಸಿದ್ದು, 10 ಕ್ಕೂ ಹೆಚ್ಚು ಮನೆಗಳು ಧ್ವಂಸವಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ವಿಲ್ಸನ್ ಗಾರ್ಡನ್ ನ ಚಿನ್ನಯ್ಯನ ಪಾಳ್ಯದಲ್ಲಿ ಈ ದುರ್ಘಟನೆ ನಡೆದಿದ್ದು, 10 ಕ್ಕೂ ಹೆಚ್ಚು ಮನೆಗಳು ಧ್ವಂಸವಾಗಿದ್ದು, 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 9 ವರ್ಷದ ಬಾಲಕಿ ಸಂಪೂರ್ಣ ಸುಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರಿನಲ್ಲಿ ನಿಗೂಢ ಸ್ಫೋಟ| ಹಲವು ಮನೆಗಳು ಜಖಂ Read More »

ಹೆಣ ಸಿಕ್ಕಿಲ್ಲ ಎಂದ ಮಾತ್ರಕ್ಕೆ ನಾನೇನು ಮಾಡಕ್ಕಾಗುತ್ತೆ? ಖಾಸಗಿ ವಾಹಿನಿ ಜೊತೆ ಮಾತನಾಡಿದ ಮಾಸ್ಕ್ ಮ್ಯಾನ್ ಹೇಳಿದ್ದೇನು?

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣದಲ್ಲಿ ಇದುವರೆಗೂ ಯಾವುದೇ ಗಟ್ಟಿಯಾದ ಸಾಕ್ಷಿ ಸಿಕ್ಕಿಲ್ಲ. ಅನಾಮಿಕ ಮಾತ್ರ ದಿನಕ್ಕೊಂದು ಜಾಗಗಳನ್ನ ತೋರಿಸುತ್ತಿದ್ದಾನೆ. ಆದರೆ ಇದೀಗ ಮಾಸ್ಕ್‌ಮ್ಯಾನ್‌ ಸುದ್ದಿ ಸಂಸ್ಥೆ ಇಂಡಿಯಾ ಟುಡೆಗೆ ನಾನು ಶವಗಳನ್ನ ಹೂತಿದ್ದು ಸತ್ಯ, ಆದರೆ ಕಳೇಬರಹ ಸಿಗಲಿಲ್ಲ ಎಂದು ಹೇಳಿಕೆ ನೀಡಿದ್ದಾನೆ. ಸುದ್ದಿ ಸಂಸ್ಥೆಗೆ ಸಂದರ್ಶನ ನೀಡಿದ ಮಾಸ್ಕ್‌ಮ್ಯಾನ್‌ಇಂಡಿಯಾ ಟುಡೇ ಸುದ್ದಿ ವಾಹಿನಿಗೆ ಮಾಸ್ಕ್‌ಮ್ಯಾನ್‌ ಸಂದರ್ಶನದಲ್ಲಿ ನೀಡಿದ್ದು, ಅದರಲ್ಲಿ ಇಷ್ಟು ವರ್ಷ ಯಾಕೆ ಹೊರಗೆ ಬರಲಿಲ್ಲ ಎನ್ನುವ ಪ್ರಶ್ನೆಗೆ ಉತ್ತರ ನೀಡಿದ್ದಾನೆ. ನನಗೆ

ಹೆಣ ಸಿಕ್ಕಿಲ್ಲ ಎಂದ ಮಾತ್ರಕ್ಕೆ ನಾನೇನು ಮಾಡಕ್ಕಾಗುತ್ತೆ? ಖಾಸಗಿ ವಾಹಿನಿ ಜೊತೆ ಮಾತನಾಡಿದ ಮಾಸ್ಕ್ ಮ್ಯಾನ್ ಹೇಳಿದ್ದೇನು? Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ| ನಟ ದರ್ಶನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್| ಮತ್ತೆ ಜೈಲುವಾಸದ ಭೀತಿಯಲ್ಲಿ ದಾಸ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್​ಗೆ ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ, ಆರ್. ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ.ದರ್ಶನ್ ವೃತ್ತಿ ಜೀವನದ ಮೇಲೆ ಈ ತೀರ್ಪು ತುಂಬಾನೇ ಪ್ರಭಾವ ಬೀರಲಿದೆ. ದರ್ಶನ್ ಗೆ ಹೈಕೋರ್ಟ್ ನೀಡಿದ ಜಾಮೀನು ರದ್ದುಪಡಿಸುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್

ರೇಣುಕಾಸ್ವಾಮಿ ಕೊಲೆ ಪ್ರಕರಣ| ನಟ ದರ್ಶನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್| ಮತ್ತೆ ಜೈಲುವಾಸದ ಭೀತಿಯಲ್ಲಿ ದಾಸ Read More »

ಧರ್ಮಸ್ಥಳ: ಪದ್ಮಲತಾ ಕೊಲೆ‌ ಪ್ರಕರಣ| ಮರು ತನಿಖೆಗೆ ಒತ್ತಾಯಿಸಿ ಸಹೋದರಿಯಿಂದ ಎಸ್ಐಟಿ ಗೆ ದೂರು

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ 39 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿರುವ ಪದ್ಮಲತಾ ಅವರ ಕಳೇಬರವನ್ನು ಹೊರತೆಗೆದು ಮರು ತನಿಖೆ ಮಾಡಿ, ಅಪರಾಧಿಗಳನ್ನು ಪತ್ತೆ ಹಚ್ಚುವಂತೆ ಕೋರಿ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಪದ್ಮಲತಾ ಅವರ ಅಕ್ಕ ಇಂದ್ರಾವತಿ ದೂರು ನೀಡಿದ್ದಾರೆ. ಸೋಮವಾರ (ಆ.11) ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಆಗಮಿಸಿದ ಇಂದ್ರಾವತಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಏನಿದೆ?“ನಾನು ಪ್ರಸ್ತುತ ನೆಲ್ಯಾಡಿ ನಿವಾಸಿಯಾಗಿದ್ದು, ದಿವಂಗತ ದೇವಾನಂದ ಅವರ ಮಗಳು. ಕೊಲೆಗೀಡಾದ ಪದ್ಮಲತಾಳ ಅಕ್ಕನಾಗಿರುತ್ತೇನೆ. 38 ವರ್ಷಗಳ ಹಿಂದೆ ಎಸ್‌ಡಿಎಂ

ಧರ್ಮಸ್ಥಳ: ಪದ್ಮಲತಾ ಕೊಲೆ‌ ಪ್ರಕರಣ| ಮರು ತನಿಖೆಗೆ ಒತ್ತಾಯಿಸಿ ಸಹೋದರಿಯಿಂದ ಎಸ್ಐಟಿ ಗೆ ದೂರು Read More »

ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ನಾಗರಹೊಳೆ ಅರಣ್ಯಕ್ಕೆ ಅಕ್ರಮ ಪ್ರವೇಶ ಆರೋಪದಡಿ ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊನ್ನಂಪೇಟೆ ತಾಲೂಕಿನ ಕೆ.ಬಾಡಗ ಗ್ರಾಮ ಪಂಚಾಯಿತಿಗೆ ಒಳಪಡುವ ಕರಡಿಕಲ್ಲು ಅತ್ತೂರು ಕೊಲ್ಲಿ ಹಾಡಿಯಲ್ಲಿ ಆ.8 ರಂದು ಅರಣ್ಯ ಹಕ್ಕು ಕಾಯ್ದೆಯಡಿ ವೈಯಕ್ತಿಕ ಹಕ್ಕು ಮತ್ತು ಸಮುದಾಯದ ಹಕ್ಕಿಗಾಗಿ ಒತ್ತಾಯಿಸಿ ಪ್ರತಿಭಟನೆಗೆ ಬೆಂಬಲ ನೀಡಿದ ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಚೇತನ್ ಅಹಿಂಸಾ, ನ್ಯಾಷನಲ್ ಆದಿವಾಸಿ ಸಂಘಟನೆ ಮುಖ್ಯಸ್ಥ ರಾಯ್ ಡೇವಿಡ್,

ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ ಎಫ್ಐಆರ್ Read More »