ಧರ್ಮಸ್ಥಳ: ಕಾಡಿನಲ್ಲಿ ವಿಷಸೇವಿಸಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ| ಪೊಲೀಸರ ಸಮಯಪ್ರಜ್ಞೆಯಿಂದ ಬದುಕುಳಿದ ಜೀವ
ಸಮಗ್ರ ನ್ಯೂಸ್: ಹಾಸನ ಜಿಲ್ಲೆಯ ಅರಕಲಗೂಡಿನ ಯುವಕನೋರ್ವ ಧರ್ಮಸ್ಥಳ ಸಮೀಪದ ಕಾಡಿನಲ್ಲಿ ವೀಡಿಯೋ ಮಾಡಿ ವಿಷ ಸೇವಿಸಿದ್ದಲ್ಲದೆ ಅದನ್ನು ಕುಟುಂಬದವರಿಗೆ ಕಳುಹಿಸಿದ್ದು, ಘಟನೆ ಕುರಿತು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ತೆರಳಿದ ಅವರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಧರ್ಮಸ್ಥಳ ಗ್ರಾಮದ ಮಹಾತ್ಮ ಗಾಂಧಿ ವೃತ್ತದ ಪಕ್ಕದ ಗುಡ್ಡದಲ್ಲಿ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥಪುರದ ನಿವಾಸಿ ಸುನಿಲ್ (28) ಬೈಕಿನಲ್ಲಿ ಬುಧವಾರ ಬೆಳಗ್ಗೆ ಧರ್ಮಸ್ಥಳಕ್ಕೆ ಬಂದಿದ್ದರು. ದೇವರ










