ಕೆಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ಅಪಘಾತ; ಬೈಕ್ ಸವಾರ ಸಾವು
ಬೆಳಗಾವಿ: ಬೈಕ್ ಹಾಗೂ ಸಾರಿಗೆ ಬಸ್ ವಾಹನ ಮುಖಾಮುಖಿ ಡಿಕ್ಕಿ, ಈ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆಯೊಂದು ಗೋಕಾಕ ತಾಲೂಕಿನ ಚಿಕ್ಕನಂದಿ ಕ್ರಾಸ್ ಬಳಿ ನಡೆದಿದೆ. ಈ ಅಪಘಾತದಲ್ಲಿ ಬೈಕ್ ಸವಾರ ರೇವಣ್ಣ ಬಣವಿ (36) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬಸ್ ಉಡುಪಿಯಿಂದ ಗೋಕಾಕ್ ಗೆ ಹೊರಟಿತ್ತು. ಬೈಕ್ ಸವಾರ ಚಿಕ್ಕನಂದಿ ಗ್ರಾಮಕ್ಕೆ ಹೋಗುತ್ತಿದ್ದನು. ಈ ವೇಳೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಬಗ್ಗೆ ಗೋಕಾಕ್ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ಅಪಘಾತ; ಬೈಕ್ ಸವಾರ ಸಾವು Read More »










