ಕ್ರೈಂ

ಮಗಳ ಹುಟ್ಟುಹಬ್ಬದ ದಿನವೇ ದಂಪತಿಗಳಿಬ್ಬರು ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಮಗಳ ಹುಟ್ಟುಹಬ್ಬದ ದಿನವೇ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಆಂಧ್ರ ಪ್ರದೇಶದ ಅಲ್ಲೂರಿ ಸಿತಾರಾಮರಾಜು ಜಿಲ್ಲೆಯಲ್ಲಿ ನಡೆದಿದೆ. ಆನ್​ ಲೈನ್ ಲೋನ್ ಆಯಪ್ ಮಾಲೀಕನ ಕಿರುಕುಳಕ್ಕೆ ಬೇಸತ್ತು ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿತ್ತಿದೆ. ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್​ ಅಧಿಕಾರಿಗಳು, ಕೊಳ್ಳಿ ದುರ್ಗ ರಾವ್ ಹಾಗೂ ರಮ್ಯಾ ಲಕ್ಷ್ಮಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 6 ವರ್ಷದ ಹಿಂದೆ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು. ಇವರಿಗೆ ನಾಗ ಸಾಯಿ (4), ಲಿಖಿತಾ (2) […]

ಮಗಳ ಹುಟ್ಟುಹಬ್ಬದ ದಿನವೇ ದಂಪತಿಗಳಿಬ್ಬರು ಆತ್ಮಹತ್ಯೆಗೆ ಶರಣು Read More »

ಕರ್ತವ್ಯ ನಿರತ ಹೆಡ್ ಕಾನ್ಸ್ ಟೇಬಲ್ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್ : ಕರ್ತವ್ಯ ನಿರತ ಹೆಡ್‌ಕಾನ್ಸ್‌ಟೇಬಲ್ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆಯೊಂದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ನಡೆದಿದೆ. ನಗರದ ಲಾಡ್ಜ್ ಕೋಣೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಕಲ್ಯಾಣಿ ಗುಗ್ಗರಿ(45) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಲ್ಯಾಣಿ, ಕಲಬುರಗಿ ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನಸ್ಟೇಬಲ್ ಆಗಿದ್ದರು. ಅದಲ್ಲದೇ, ಕಳೆದ ರಾತ್ರಿ ಸುಸ್ತಾಗುತ್ತಿದ್ದರಿಂದ ಮಾತ್ರೆ ತೆಗೆದುಕೊಳ್ಳಲು ಲಾಡ್ಜ್ ನಲ್ಲಿದ್ದ ತಮ್ಮ ಕೋಣೆಗೆ ಹೋಗಿದ್ದರು. ಎದೆ ನೋವು ಕಾಣಿಸಿಕೊಂಡಿದ್ದರಿಂದ ಸ್ವಲ್ಪ ಹೊತ್ತು ವಿಶ್ರಾಂತಿ ಪಡೆದಿದ್ದರು. ಆದರೆ ನಸುಕಿನ

ಕರ್ತವ್ಯ ನಿರತ ಹೆಡ್ ಕಾನ್ಸ್ ಟೇಬಲ್ ಹೃದಯಾಘಾತದಿಂದ ಸಾವು Read More »

ನಿವೃತ್ತ ಶಿಕ್ಷಕಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿ ಪರಾರಿ

ಬೆಂಗಳೂರು: ನಿವೃತ್ತ ಶಿಕ್ಷಕಿಯನ್ನು ಉಸಿರುಗಟ್ಟಿಸಿ ಕೊಲೆಗೈದ ದುಷ್ಕರ್ಮಿಗಳು ಪರಾರಿಯಾದ ಘಟನೆಯೊಂದು ನಗರದ ವಿದ್ಯಾರಣ್ಯಪುರ ಅಂಬಾ ಭವಾನಿ ದೇವಸ್ಥಾನದ ಬಳಿ ನಡೆದಿದೆ. 60 ವರ್ಷದ ಪ್ರಸನ್ನ ಕುಮಾರಿ ಕೊಲೆಯಾದ ನಿವೃತ್ತ ಶಿಕ್ಷಕಿ. ನಿನ್ನೆ ತಡರಾತ್ರಿ‌ ಕೊಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಕೊಲೆ ಮಾಡಿ ಆಕೆಯ ಬಳಿಯಿದ್ದ ಚಿನ್ನಾಭರಣಗಳನ್ನು ದೋಚಿದ್ದಾರೆ. ಸದ್ಯ ಈ ಬಗ್ಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ನಿವೃತ್ತ ಶಿಕ್ಷಕಿ ಪ್ರಸನ್ನ ಕುಮಾರಿ ಅವರು ವಿಜಯವಾಡ ಮೂಲದವರು ಎಂದು ತಿಳಿದುಬಂದಿದೆ.

ನಿವೃತ್ತ ಶಿಕ್ಷಕಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿ ಪರಾರಿ Read More »

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ; ಓರ್ವನಿಗೆ ಚಾಕು ಇರಿದು ಕೊಲೆ

ಗದಗ : ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಗಲಾಟೆ ವೇಳೆ ಓರ್ವನಿಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ನಗರದ ತೋಂಟದಾರ್ಯ ಮಠದ ಬಳಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ 27 ವರ್ಷದ ಸುದೀಪ್ ಮುಂಡೆವಾಡಿ ಎಂಬ ಯುವಕ ತೀವ್ರ ರಕ್ತಸ್ರಾವದಿಂದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಮೃತ ಸುದೀಪ್ ಸ್ನೇಹಿತರಾಗಿದ್ದ ಆದಿತ್ಯ ಮುತಗಾರ ಹಾಗೂ ಐದಾರು ಜನರ ಸ್ನೇಹಿತರು ಸೇರಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ನಾಲ್ಕು ಜನ ಕೈ ಕಾಲು ಹಿಡಿದುಕೊಂಡು ಹೊಟ್ಟೆ

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ; ಓರ್ವನಿಗೆ ಚಾಕು ಇರಿದು ಕೊಲೆ Read More »

ಪಾದಚಾರಿಗೆ ಬೈಕ್ ಡಿಕ್ಕಿ; ಬೈಕ್ ಸವಾರ ಮೃತ್ಯು

ಕಾಪು: ಪಾದಚಾರಿಗೆ ಬೈಕ್‌ ಡಿಕ್ಕಿ ಹೊಡೆದು, ಬೈಕ್‌ ಸವಾರ ಮೃತಪಟ್ಟ ಘಟನೆ ಮೂಳೂರು ಬೊಬ್ಬರ್ಯ ದೈವಸ್ಥಾನದ ಬಳಿ ನಡೆದಿದೆ. ಸುರೇಶ ಎಲ್. ಪುತ್ರನ್ ಮೃತಪಟ್ಟವರು. ಸ್ನೇಹಿತನೊಂದಿಗೆ ಬೈಕ್ ನಲ್ಲಿ ಉಡುಪಿಯಿಂದ ಮೂಳೂರು ಕಡೆಗೆ ಹೊರಟಿದ್ದ ವೇಳೆ ಘಟನೆ ಸಂಭವಿಸಿದೆ. ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ ಪರಿಣಾಮ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಈರಣ್ಣ ರವರಿಗೆ ಬೈಕ್‌ ಡಿಕ್ಕಿ ಹೊಡೆದಿದೆ. ಇದರಿಂದ ಈರಣ್ಣ ರಸ್ತೆಯ ಬದಿಗೆ ಬಿದ್ದು ಗಾಯಗೊಂಡಿದ್ದರು. ಇದೇ ವೇಳೆ ಬೈಕ್‌ ಸಮೇತ ಸವಾರರಿಬ್ಬರು

ಪಾದಚಾರಿಗೆ ಬೈಕ್ ಡಿಕ್ಕಿ; ಬೈಕ್ ಸವಾರ ಮೃತ್ಯು Read More »

ಸಮವಸ್ತ್ರದಲ್ಲಿ ಮಲ‌ಮಾಡಿದ್ದಕ್ಕೆ ಬಿಸಿನೀರು ಎರಚಿ ವಿಕೃತಿ ಮೆರೆದ ಶಿಕ್ಷಕ

ಸಮಗ್ರ ನ್ಯೂಸ್: ಮಕ್ಕಳಿಗೆ ತಿದ್ದಿ ಬುದ್ದಿ ಹೇಳುವ ಶಿಕ್ಷಕರೇ ಈಗ ವಿಕೃತಿ ಮನಸ್ಥಿತಿಯಿಂದ ಮೆರೆಯುತ್ತಿದ್ದಾರೆ. ಇಂತಹ ಮತ್ತೊಂದು ವಿಲಕ್ಷಣ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಶಾಲೆಯ ಶಿಕ್ಷಕರೊಬ್ಬರು ಶಾಲಾ ಸಮವವಸ್ತ್ರದಲ್ಲೇ ಮಗು ಮಲ ವಿಸರ್ಜನೆ ಮಾಡಿದ್ದಕ್ಕೆ ಆಕೆಯ ಮೇಲೆ ಬಿಸಿ ನೀರು ಎರಚಿ ವಿಕೃತಿ ಮೆರೆದಿದ್ದಾರೆ. ರಾಯಚೂರು ಜಿಲ್ಲೆಯ ಸಂತೆಕೆಲ್ಲೂರು ಗ್ರಾಮದಲ್ಲಿ ಶಾಲಾ ಸಮವವಸ್ತ್ರದಲ್ಲೇ ಮಗು ಮಲ ವಿಸರ್ಜನೆ ಮಾಡಿಕೊಂಡಿದ್ದರು. ಈ ವೇಳೆ ಶಿಕ್ಷಿಕ ಹುಲಿಗೆಪ್ಪ ವಿದ್ಯಾರ್ಥಿನಿ ಮೇಲೆ ಬಿಸಿ ನೀರು ಹಾಕಿರುವ ಘಟನೆ ತಡವಾಗಿ

ಸಮವಸ್ತ್ರದಲ್ಲಿ ಮಲ‌ಮಾಡಿದ್ದಕ್ಕೆ ಬಿಸಿನೀರು ಎರಚಿ ವಿಕೃತಿ ಮೆರೆದ ಶಿಕ್ಷಕ Read More »

ಮಂಗಳೂರು: ಹೋಂ ಸ್ಟೇ, ಮನೆಗಳಿಂದ ನಗ ನಗದು ದೋಚಿದ್ದ ಕಳ್ಳನ ಬಂಧನ

ಸಮಗ್ರ ನ್ಯೂಸ್: ಸೋಮೇಶ್ವರ ಬೀಚ್ ಬಳಿಯ ಹೋಂ ಸ್ಟೇ ಒಂದಕ್ಕೆ ಬುಧವಾರ‌ ಸಂಜೆ ಕನ್ನ ಹಾಕಿದ್ದ ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಉಳ್ಳಾಲ ಠಾಣೆ ವ್ಯಾಪ್ತಿಯ ಎರಡು ಮನೆಗಳಿಂದ ನಗ, ನಗದು ದೋಚಿದ್ದ ಕಳ್ಳನನ್ನ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಉಳ್ಳಾಲ ಮಾಸ್ತಿಕಟ್ಟೆ ನಿವಾಸಿ ಮೊವಾಝ್ (35) ಬಂಧಿತ . ಆರೋಪಿ ಮೊವಾಝ್ ಕೇರಳದ ಕಣ್ಣೂರಿನ ಪತ್ನಿ ಮನೆಯಲ್ಲೇ ನೆಲೆಸಿದ್ದು ಆಗಾಗ್ಗೆ ಮಂಗಳೂರಿಗೆ ಬಂದು ಕಳ್ಳತನ ನಡೆಸುತ್ತಿದ್ದ ಎನ್ನಲಾಗಿದೆ. ಸೋಮೇಶ್ವರ ಬಸ್ಸು ತಂಗುದಾಣದ ಬಳಿಯ

ಮಂಗಳೂರು: ಹೋಂ ಸ್ಟೇ, ಮನೆಗಳಿಂದ ನಗ ನಗದು ದೋಚಿದ್ದ ಕಳ್ಳನ ಬಂಧನ Read More »

ಗಣೇಶೋತ್ಸವ ಮೆರವಣಿಗೆ ವೇಳೆ ಯುವಕನಿಗೆ ಚೂರಿ ಇರಿದು ಕೊಲೆ

ಸಮಗ್ರ ನ್ಯೂಸ್: ಗಣೇಶೋತ್ಸವ ಮೆರವಣಿಗೆಯ ಸಂದರ್ಭದಲ್ಲಿ ಯುವಕನೊಬ್ಬನಿಗೆ ಚೂರಿ ಇರಿದು ಕೊಲೆ ಮಾಡಿರುವ ದಾರುಣ ಘಟನೆ ಜಿಲ್ಲೆಯ ತೋಟಂದಾರ್ಯ ಮಠದ ಬಳಿ ನಿನ್ನೆ(ಸೆ. 9) ತಡರಾತ್ರಿ ನಡೆದಿದೆ. ಕೊಲಯಾದ ಯುವಕನನ್ನು ಸುದೀಪ್ ಮುಡೆವಾಡಿ(22) ಎಂದು ಗುರುತಿಸಲಾಗಿದೆ. ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಸುದೀಪ್ ಸ್ನೇಹಿತರೇ ಚಾಕುವಿನಲ್ಲಿ ಇರಿದು ಕೊಲೆ ಮಾಡಿದ್ದು, ರಕ್ತದ ಮಡುವಿನಲ್ಲೇ ಬಿದ್ದು ಸುದೀಪ್ ಸಾವನ್ನಪ್ಪಿದ್ದಾನೆ. ಶಹರಾ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದು, ಕೊಲೆಗೆ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದೆ.

ಗಣೇಶೋತ್ಸವ ಮೆರವಣಿಗೆ ವೇಳೆ ಯುವಕನಿಗೆ ಚೂರಿ ಇರಿದು ಕೊಲೆ Read More »

ತಿರಂಗಾದಿಂದ ಸ್ಕೂಟರ್ ಒರೆಸಿ ಅಗೌರವ; ವಿಡಿಯೋ ವೈರಲ್

ಸಮಗ್ರ ನ್ಯೂಸ್: ರಾಷ್ಟ್ರಧ್ವಜವನ್ನು ಗೌರವಿಸುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯ. ಇದನ್ನು ಬಾಲ್ಯದಿಂದಲೇ ಕಲಿಸಲಾಗುತ್ತದೆ. ತ್ರಿವರ್ಣ ಧ್ವಜಕ್ಕೆ ಯಾವುದೇ ಅಗೌರವ ಅಥವಾ ತಿರಸ್ಕಾರ ತೋರಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆಯಾಗಬಹುದು. ಈಶಾನ್ಯ ದೆಹಲಿಯ ಭಜನ್ಪುರ ಪ್ರದೇಶದಲ್ಲಿ 52 ವರ್ಷದ ವ್ಯಕ್ತಿಯೊಬ್ಬ ರಾಷ್ಟ್ರಧ್ವಜಕ್ಕೆ ಅಗೌರವ ತೋರುವ ರೀತಿಯಲ್ಲಿ ವರ್ತಿಸಿದ್ದಾನೆ. ತನ್ನ ದ್ವಿಚಕ್ರ ವಾಹನವನ್ನು ಸ್ವಚ್ಛಗೊಳಿಸಲು ಈತ ರಾಷ್ಟ್ರಧ್ವಜವನ್ನು ಬಳಸಿದ್ದಾನೆ. ಈ ವ್ಯಕ್ತಿ ಉತ್ತರ ಘೋಂಡಾ ಪ್ರದೇಶದ ನಿವಾಸಿ. ವ್ಯಕ್ತಿ ಮಡಚಿಟ್ಟಿದ್ದ ಧ್ವಜದಿಂದ ತನ್ನ ಬಿಳಿ ಸ್ಕೂಟರ್ ಅನ್ನು ಸ್ವಚ್ಛಗೊಳಿಸುವ

ತಿರಂಗಾದಿಂದ ಸ್ಕೂಟರ್ ಒರೆಸಿ ಅಗೌರವ; ವಿಡಿಯೋ ವೈರಲ್ Read More »

ಕೊಟ್ಟಿಗೆಹಾರ: ಮಲೆನಾಡಿನಲ್ಲಿ ಹುಲಿದಾಳಿಗೆ ಹಸು ಬಲಿ

ಸಮಗ್ರ ನ್ಯೂಸ್: ಹುಲಿಯೊಂದು ಹಸುವನ್ನು ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ದೇವರುಮನೆ ಹೋಗುವ ದಾರಿಯಲ್ಲಿ ನಡೆದಿದೆ. ಮೂಡಿಗೆರೆ ತಾಲೂಕು ವ್ಯಾಪ್ತಿಯ ಹಲವು ಕಡೆಗಳಲ್ಲಿ ವಾರಕ್ಕೊಂದರಂತೆ ರಾಸುಗಳು ಹುಲಿ ದಾಳಿಗೆ ಬಲಿಯಾಗುತ್ತಿವೆ. ಒಂದೆಡೆ ಕಾಡಾನೆಗಳ ಉಪಟಳದಿಂದ ರೈತ ಬೆಳೆದ ಬೆಳೆ ನಷ್ಟವಾದರೆ, ಇನ್ನೊಂದೆಡೆ ಕೃಷಿ ಕಾರ್ಯ ನಿರ್ವಹಿಸುವ ರೈತರಿಗೆ ತೀವ್ರ ಆತಂಕ ಸೃಷ್ಟಯಾಗಿದೆ. ಅರಣ್ಯ ರಕ್ಷಕರಾದ ಅಭಿಜಿತ್ ಮತ್ತು ಮಂಜುನಾಥ್ ಘಟನಾ ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ.

ಕೊಟ್ಟಿಗೆಹಾರ: ಮಲೆನಾಡಿನಲ್ಲಿ ಹುಲಿದಾಳಿಗೆ ಹಸು ಬಲಿ Read More »