ಕ್ರೈಂ

ದಾಖಲೆಗಳಿಲ್ಲದೆ ಹಣ ಇಟ್ಟುಕೊಂಡಿದ್ದ ಮೂವರ ಬಂಧನ; 76 ಲಕ್ಷ ಹಣ, 3 ಮೊಬೈಲ್ ಸಿಸಿಬಿ ಪೋಲಿಸ್ ವಶ

ಬೆಂಗಳೂರು:  ದಾಖಲೆ ಇಲ್ಲದೆ ಹಣ ಇಟ್ಟುಕೊಂಡಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ 76 ಲಕ್ಷ ಹಣ ವಶಪಡಿಸಿಕೊಂಡಿದ್ದಾರೆ. ಇದು ಹವಾಲ ಹಣವಿರಬಹುದೆಂದು ಶಂಕಿಸಲಾಗಿದ್ದು, ಪೊಲೀಸರು ಈ ಬಗ್ಗೆ ಮುಂದಿನ ತನಿಖೆ ಕೈಗೊಂಡಿದ್ದಾರೆ. ಗುಜರಾತ್ ಮೂಲದ ರಾಬಿನ್ ಕುಮಾರ್(26), ರಾಜಸ್ಥಾನದ ಸುಂದರ್‍ಲಾಲ್(39) ಮತ್ತು ಬೆಂಗಳೂರಿನ ಸುದಾಮ ನಗರದ ಸಿಕೆಸಿ ಗಾರ್ಡನ್ ನಿವಾಸಿ ನೀರಜ್ ಮಿಶ್ರಾ(37) ಬಂಧಿತರು. ವಿಲ್ಸನ್‍ಗಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿ ನಗರದ ನಂಜಪ್ಪ ರಸ್ತೆ, ನಿರ್ಮಲ ಇಂಗ್ಲೀಷ್ ಶಾಲೆಯ ಹತ್ತಿರ ಮೂವರು ಹಣವನ್ನಿಟ್ಟುಕೊಂಡು ಒಬ್ಬರಿಗೊಬ್ಬರು ಸನ್ನೆ […]

ದಾಖಲೆಗಳಿಲ್ಲದೆ ಹಣ ಇಟ್ಟುಕೊಂಡಿದ್ದ ಮೂವರ ಬಂಧನ; 76 ಲಕ್ಷ ಹಣ, 3 ಮೊಬೈಲ್ ಸಿಸಿಬಿ ಪೋಲಿಸ್ ವಶ Read More »

25 ಲಕ್ಷ ರೂ. ಗೆ ಹುಲಿ ಮರಿಗಳ ಮಾರಾಟಕ್ಕೆ ಯತ್ನಿಸಿದ ವ್ಯಕ್ತಿಯ ಬಂಧನ

ಸಮಗ್ರ ನ್ಯೂಸ್:  ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ವ್ಯಾಟ್ಸಾಪ್ ಮೂಲಕ 25 ಲಕ್ಷ ರೂ.ಗೆ ಹುಲಿ ಮರಿಗಳನ್ನು ಮಾರಾಟ ಮಾಡಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಸರ್ಪನಮೇಡುವಿನ ವಾಸಿ ಪಥಿಬನ್ ಎಂದು ಗುರುತಿಸಲಾಗಿದ್ದು, ಈತ ತಿರುಪತಿಯಲ್ಲಿ ಕಾನೂನು ಅಧ್ಯಯನ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಟ್ಸಪ್ ಮೂಲಕ ಬುಕ್ಕಿಂಗ್ ಮಾಡಿದ 10 ದಿನಗಳ ನಂತರ ಮರಿಗಳನ್ನು ವಿತರಿಸುವುದಾಗಿ ಭರವಸೆ ನೀಡಿದ್ದ. ಈ ವಿಷಯ ತಿಳಿಯುತ್ತಿದ್ದಂತೆ  ಅಬಕಾರಿಗಳ ತಂಡ ಆತನ ಮನೆಗೆ ಭೇಟಿ ನೀಡಿ ಪರಿಶೀಲಿಸಿದಾಗ ಹುಲಿಮರಿಗಳು ಇರುವುದು

25 ಲಕ್ಷ ರೂ. ಗೆ ಹುಲಿ ಮರಿಗಳ ಮಾರಾಟಕ್ಕೆ ಯತ್ನಿಸಿದ ವ್ಯಕ್ತಿಯ ಬಂಧನ Read More »

ನೀಟ್ ಯುಜಿ ಪರೀಕ್ಷೆ ಯಲ್ಲಿ ಫೇಲ್; ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್ : ಬಹುನಿರೀಕ್ಷಿತ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್​) ಫಲಿತಾಂಶ ಪ್ರಕಟಗೊಂಡಿದ್ದು, 9.93 ಲಕ್ಷ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಪರೀಕ್ಷೆಯಲ್ಲಿ ಫೇಲ್​ ಆದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆಯೊಂದು ತಮಿಳುನಾಡಿನ ತಿರುವಳ್ಳೂರ್​​​​ನ ಇಂದಿರಾ ನಗರದಲ್ಲಿ ನಡೆದಿದೆ. 19 ವರ್ಷದ ವಿದ್ಯಾರ್ಥಿನಿ ಫಲಿತಾಂಶದಿಂದ ನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತಳನ್ನು ಲಕ್ಷಣ ಸ್ವೇಧ ಎಂದು ಗುರುತಿಸಲಾಗಿದೆ. ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೈದ್ಯಕೀಯ ಕಾಲೇಜಿ​​ಗೆ ರವಾನಿಸಲಾಗಿದೆ.

ನೀಟ್ ಯುಜಿ ಪರೀಕ್ಷೆ ಯಲ್ಲಿ ಫೇಲ್; ನೇಣು ಬಿಗಿದು ಆತ್ಮಹತ್ಯೆಗೆ ಶರಣು Read More »

ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್ ಡಿಕ್ಕಿ; ಸ್ಥಳದಲ್ಲೇ ಮಹಿಳೆ ಮೃತ್ಯು

ಸಮಗ್ರ ನ್ಯೂಸ್ : ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಅಂಬಾಗಿಲು ಅಮೃತ ಗಾರ್ಡನ್ ಸಭಾಂಗಣದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬುಧವಾರ ಮಧ್ಯಾಹ್ನ ನಡೆದಿದೆ. ಹೆಬ್ರಿ ಮೂರಕೈ ನಿವಾಸಿ ವಸಂತಿ ಶೆಟ್ಟಿ(65) ಮೃತ ದುರ್ದೈವಿಯಾಗಿದ್ದಾರೆ. ಕುಂದಾಪುರದಿಂದ ಉಡುಪಿ ಕಡೆಗೆ ಬರುತ್ತಿದ್ದ ಬಸ್, ರಸ್ತೆ ದಾಟುತ್ತಿದ್ದ ವಸಂತಿ ಶೆಟ್ಟಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಉಡುಪಿ

ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್ ಡಿಕ್ಕಿ; ಸ್ಥಳದಲ್ಲೇ ಮಹಿಳೆ ಮೃತ್ಯು Read More »

ಮಂಡ್ಯದ ಮಾಜಿ ಶಾಸಕ ಕೆ.ಕೆಂಪೇಗೌಡ ನಿಧನ

ಮಂಡ್ಯ: ಪಾಂಡವಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಕೆಂಪೇಗೌಡ(96) ಅವರು ಬುಧವಾರ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬುಧವಾರ ಸಾವನ್ನಪ್ಪಿದರು. ಅವರಿಗೆ 96 ವರ್ಷ ವಯಸ್ಸಾಗಿತ್ತು. ಇಂದು ಮಧ್ಯಾಹ್ನ 3 ರಿಂದ 4 ಗಂಟೆಯೊಳಗೆ ಸ್ವಗ್ರಾಮ ಪಾಂಡವಪುರ ತಾಲೂಕು ಚಿನಕುರಳಿಯಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ನಾಲ್ವರು ಪುತ್ರರು, ಐದು ಮಂದಿ ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಕೆಂಪೇಗೌಡ ಅವರು ಮೂರು ಬಾರಿ ಶಾಸಕರಾಗಿ ಜನಮನ್ನಣೆ ಗಳಿಸಿದ್ದರು. ತಾಲೂಕು ಬೋರ್ಡ್ ಸದಸ್ಯರಾಗಿಯೂ ಸೇವೆ

ಮಂಡ್ಯದ ಮಾಜಿ ಶಾಸಕ ಕೆ.ಕೆಂಪೇಗೌಡ ನಿಧನ Read More »

ಎಸ್ಡಿಪಿಐ ನಾಯಕ ರಿಯಾಝ್ ಫರಂಗಿಪೇಟೆ ಮನೆ ಮೇಲೆ NIA ದಾಳಿ

ಸಮಗ್ರ ನ್ಯೂಸ್: ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು‌ ಹತ್ಯೆಗೆ ಸಂಬಂಧಿಸಿದಂತೆ ಕರಾವಳಿಯಲ್ಲಿ ರಾಷ್ಟ್ರೀಯ ತನಿಖಾ ದಳ ತನ್ನ ಕಾರ್ಯವೈಖರಿಯನ್ನು ಚುರುಕುಗೊಳಿಸಿದ್ದು, ಗುರುವಾರ ಮುಂಜಾನೆ ಎಸ್ಡಿಪಿಐ ನಾಯಕ ರಿಯಾಝ್ ಫರಂಗಿಪೇಟೆ ಮನೆ ಮೇಲೆ ದಾಳಿ ನಡೆಸಿದೆ. ಪೊಲೀಸ್ ತನಿಖಾ ವರದಿ ಹೊರಬಿದ್ದ ಮೇಲೂ ಪ್ರವೀಣ್ ನೆಟ್ಟಾರು ಪ್ರಕರಣವನ್ನು ರಾಜ್ಯ ಸರಕಾರ NIA ಗೆ ವಹಿಸಿದೆ‌. ದ.ಕ ಜಿಲ್ಲೆಯಲ್ಲಿ NIA ತನಿಖೆ ಮುಂದುವರಿದಿದ್ದು ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ NIA ಸಪ್ಟೆಂಬರ್ 7 ರಂದು SDPI ಹಾಗೂ PFI

ಎಸ್ಡಿಪಿಐ ನಾಯಕ ರಿಯಾಝ್ ಫರಂಗಿಪೇಟೆ ಮನೆ ಮೇಲೆ NIA ದಾಳಿ Read More »

ಪುತ್ತೂರು: ಪ್ರಯಾಣಿಕನನ್ನು ಒದ್ದು ಕೆಳತಳ್ಳಿದ ಕೆಎಸ್ಆರ್ ಟಿಸಿ ಕಂಡಕ್ಟರ್| ವಿಡಿಯೋ ವೈರಲ್

ಸಮಗ್ರ ನ್ಯೂಸ್: ಕ.ರಾ.ರ. ಸಾರಿಗೆ ಬಸ್ ನಿರ್ವಾಹಕನೊಬ್ಬ ಪ್ರಯಾಣಿಕನಿಗೆ ಕಾಲಿನಿಂದ ಒದ್ದು ಕೆಳಕ್ಕೆ ದೂಡಿ ಅಮಾನವೀಯತೆ ಮೆರೆದ ಘಟನೆ ಪುತ್ತೂರು ತಾಲೂಕಿನ ಈಶ್ವರಮಂಗಲದಲ್ಲಿ ನಡೆದಿದೆ. ಈ ಕುರಿತು ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಕೆಎ 21 ಎಫ್ 0002 ನಂಬರ್‌ನ ಬಸ್ ನಿರ್ವಾಹಕ ಪ್ರಯಾಣಿಕನೊಬ್ಬನನ್ನು ಕಾಲಿನಿಂದ ತುಳಿದು ಹೊರಹಾಕಿದ್ದು ಗಾಯಗೊಂಡ ಅವನನ್ನು ರಸ್ತೆಯಲ್ಲೇ ಬಿಟ್ಟು ಹೋಗಿದ್ದಾರೆ.ಹೊರ ಎಸೆಯಲ್ಪಟ್ಟ ಪ್ರಯಾಣಿಕ ಮೇಲ್ನೋಟಕ್ಕೆ ಪಾನಮತ್ತನಂತೆ ಕಂಡು ಬರುತ್ತಿದ್ದು ಈಶ್ವರಮಂಗಲ ಪೇಟೆಯ ಜಂಕ್ಷನ್ ಬಳಿ

ಪುತ್ತೂರು: ಪ್ರಯಾಣಿಕನನ್ನು ಒದ್ದು ಕೆಳತಳ್ಳಿದ ಕೆಎಸ್ಆರ್ ಟಿಸಿ ಕಂಡಕ್ಟರ್| ವಿಡಿಯೋ ವೈರಲ್ Read More »

ಕೇರಳದಲ್ಲಿ ಕರೆಂಟ್ ಶಾಕ್ ಹೊಡೆದು ಬಂಟ್ವಾಳದ ಯುವಕ ಮೃತ್ಯು

ಸಮಗ್ರ ನ್ಯೂಸ್: ಕೆಲಸ ಮಾಡುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ಬಂಟ್ವಾಳ ಮೂಲದ ವ್ಯಕ್ತಿಯೋರ್ವರು ಕೇರಳದ ಕಂಪೆನಿಯೊದರಲ್ಲಿ ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ಮರ್ತಾಜೆ ನಿವಾಸಿ ವಿದ್ಯಾಧರ ಕುಲಾಲ್ (35) ಮೃತಪಟ್ಟ ವ್ಯಕ್ತಿ. ಅವರು ಕೇರಳದ ಖಾಸಗಿ ಎಲೆಕ್ಟ್ರಾನಿಕ್ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸೆ. 5ರಂದು ಸೋಮವಾರ ಕರ್ತವ್ಯ ದಲ್ಲಿರುವಾಗ ವಿದ್ಯುತ್ ಹರಿದು ಅವರು ಮೃತಪಟ್ಟ ಘಟನೆ ನಡೆದಿದೆ. ಮೂಲತ ಬೆಳ್ಳಾರೆ ನಿವಾಸಿಯಾಗಿದ್ದ ಇವರು ಇತ್ತೀಚೆಗೆ ಸಜೀಪ ಮುನ್ನೂರು

ಕೇರಳದಲ್ಲಿ ಕರೆಂಟ್ ಶಾಕ್ ಹೊಡೆದು ಬಂಟ್ವಾಳದ ಯುವಕ ಮೃತ್ಯು Read More »

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಮೃತ್ಯು

ಸಮಗ್ರ ನ್ಯೂಸ್: ತೀವ್ರ ಜ್ವರದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಲೋಕೇಶ್ ಅವರ ಪುತ್ರಿ ಕವಿತಾ ( 20) ಮೃತಪಟ್ಟ ವಿದ್ಯಾರ್ಥಿನಿ. ಕವಿತಾ ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಸೆ. 6ರ ಮಂಗಳವಾರ ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ತುಂಬೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಕರೆದೊಯ್ಯಲಾಯಿತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕವಿತಾ

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಮೃತ್ಯು Read More »

ಬುದ್ದಿಮಾಂದ್ಯೆ ಮೇಲೆ ಅತ್ಯಾಚಾರಕ್ಕೆ ಯತ್ನ; ವೃದ್ಧನ ಬಂಧನ

ಸಮಗ್ರ ನ್ಯೂಸ್: ಬುದ್ದಿಮಾಂದ್ಯ ಯುವತಿಯ ಮೇಲೆ‌ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ವೃದ್ಧರೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಎನ್.ಆರ್ ಪುರದಲ್ಲಿ ನಡೆದಿದೆ. ಇಲ್ಲಿನ ಖಾಸಗಿ ಶಾಲೆಯ ಬಸ್ ಚಾಲಕ ತಾಲ್ಲೂಕಿನ ಮಲ್ಲಂದೂರು ಗ್ರಾಮ ನಿವಾಸಿ ಸದಾಶಿವ ಶೆಟ್ಟಿ(66) ಬಂಧಿತ ಆರೋಪಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಸದಾಶಿವಶೆಟ್ಟಿ ಪಟ್ಟಣದ ವ್ಯಾಪ್ತಿಯ 20 ವರ್ಷದ ಬುದ್ಧಿಮಾಂದ್ಯ ಯುವತಿ ಮೇಲೆ ಮಂಗಳವಾರ ರಾತ್ರಿ ಅತ್ಯಾಚಾರಕ್ಕೆ ಯತ್ನಿಸಿದ್ದು, ಯುವತಿ ಸಹೋದರಿ ನೀಡಿದ ದೂರಿನನ್ವಯ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬುದ್ದಿಮಾಂದ್ಯೆ ಮೇಲೆ ಅತ್ಯಾಚಾರಕ್ಕೆ ಯತ್ನ; ವೃದ್ಧನ ಬಂಧನ Read More »