ಕ್ರೈಂ

ಮಂಗಳೂರು: ಮದುವೆಯಾದ ಹದಿನೈದು ದಿನದಲ್ಲಿ ನವವಿವಾಹಿತೆ ಆತ್ಮಹತ್ಯೆ

ಸಮಗ್ರ ನ್ಯೂಸ್: ಮದುವೆಯಾದ ಹದಿನೈದು ದಿನದಲ್ಲೇ ನವವಿವಾಹಿತೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಮಂಗಳೂರಿನ ಕೊಣಾಜೆಯಲ್ಲಿ ನಡೆದಿದೆ. ಅಂಬ್ಲಮೊಗರು ಗ್ರಾಮದ ಕೋಟ್ರಗುತ್ತುವಿನ ರಶ್ಮಿ ವಿಶ್ವಕರ್ಮ(24) ಎಂಬಾಕೆ ಆತ್ಮಹತ್ಯೆಗೈದ ಯುವತಿ. ಈಕೆ ಗಂಜಿಮಠ ಮೂಲದ ದುಬಾಯಿಯಲ್ಲಿ ಇಂಜಿನಿಯರ್ ಆಗಿರುವ ಸಂದೀಪ್ ಎಂಬಾತನ ಜೊತೆ ಆರು ತಿಂಗಳ ಹಿಂದೆ ನಿಶ್ಚಿತಾರ್ಥ ನಡೆದಿದ್ದು, ಕಳೆದ ಆಗಸ್ಡ್ 21 ರಂದು ವಿವಾಹ ನೆರವೇರಿತ್ತು. ಆದರೆ ಸೆ.3 ರಂದು ರಶ್ಮಿಯ ಅಕ್ಕನ ಮನೆಯಲ್ಲಿ ಔತನ ಕೂಟ ಏರ್ಪಡಿಸಲಾಗಿದ್ದು, ಅದೇ ದಿನ ರಶ್ಮಿ ಇಲಿಪಾಷಣ ಸೇವಿಸಿದ್ದಳು […]

ಮಂಗಳೂರು: ಮದುವೆಯಾದ ಹದಿನೈದು ದಿನದಲ್ಲಿ ನವವಿವಾಹಿತೆ ಆತ್ಮಹತ್ಯೆ Read More »

ರೀಲ್ಸ್ ಗಾಗಿ ಪ್ರಾಣ ಕಳೆದುಕೊಂಡ ಯುವಕ/ರೈಲು ಗುದ್ದಿದದ ವಿಡಿಯೋ ವೈರಲ್

ಹೈದರಾಬಾದ್: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕಲು ರೈಲ್ವೆ ಹಳಿ ಮೇಲೆ ವಿಡಿಯೋ ಶೂಟ್ ಮಾಡುತ್ತಿರುವ ಸಂದರ್ಭ ಯುವಕನಿಗೆ ರೈಲು ಡಿಕ್ಕಿ ಹೊಡೆದ ಘಟನೆ ತೆಲಂಗಾಣದ ಹನುಮಕೊಂಡ ಜಿಲ್ಲೆಯ ಕಾಜಿಪೇಟ್‍ನಲ್ಲಿ ನಡೆದಿದೆ. ಈ ಘಟನೆಯಲ್ಲಿ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಗೊಂಡ ಹುಡಗನನ್ನು ಅಕ್ಷಯ್ ರಾಜ್ (17) ಎಂದು ಗುರುತಿಸಲಾಗಿದೆ. ವೀಡಿಯೋದಲ್ಲಿ ರೈಲ್ವೆ ಹಳಿಯ ಬಳಿ ಹುಡುಗ ನಡೆದುಕೊಂಡು ಬರುತ್ತಿದ್ದಾಗ ಹಿಂದಿನಿಂದ ಬಂದ ರೈಲು ಆತನಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಹುಡುಗ ಒಂದು ಸುತ್ತು ತಿರುಗಿ ನೆಲದ ಮೇಲೆ

ರೀಲ್ಸ್ ಗಾಗಿ ಪ್ರಾಣ ಕಳೆದುಕೊಂಡ ಯುವಕ/ರೈಲು ಗುದ್ದಿದದ ವಿಡಿಯೋ ವೈರಲ್ Read More »

ಕೊಟ್ಟಿಗೆಹಾರ: ವಾರದಲ್ಲಿ 30ಕ್ಕೂ ಹೆಚ್ಚು ಹಸುಗಳು ಅಪಘಾತಕ್ಕೆ ಬಲಿ

ಸಮಗ್ರ ನ್ಯೂಸ್: ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಹಸುಗಳು ಅಪಘಾತಕ್ಕೀಡಾಗಿ ಸಾವನ್ನಪ್ಪಿರುವ ದುರ್ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮೂಡಿಗೆರೆ-ಕೊಟ್ಟಿಗೆಹಾರ ಮಾರ್ಗದಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಚಕ್ಕಮಕ್ಕಿ ಬಳಿ ಸೆ.05ರಂದು ಕೂಡ ಅಪಘಾತದಿಂದ ಎರಡು ಜಾನುವಾರುಗಳು ಸಾವನ್ನಪ್ಪಿವೆ. ಮೂಡಿಗೆರೆಯಲ್ಲಿ ಹಾದುಹೋಗುವ ವಿಲ್ಲುಪುರಂ-ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅಪಘಾತದಿಂದ ಒಂದು-ಎರಡು ಜಾನುವಾರುಗಳು ಸಾವನ್ನಪ್ಪುತ್ತಿವೆ. ಕೈಮರದಿಂದ ಕೊಟ್ಟಿಗೆಹಾರದವರೆಗೆ ಹಾದುಹೋಗುವ ಹತ್ತಾರು ಹಳ್ಳಿಗಳಲ್ಲಿ ರಸ್ತೆ ಮಧ್ಯೆ ನಿಲ್ಲುವ ಅಥವ ರಸ್ತೆ ಬದಿ ಮೇಯುತ್ತಿದ್ದ ಹಸುಗಳು ಅಪಘಾತಕ್ಕೀಡಾಗಿ ಸಾವನ್ನಪ್ಪುತ್ತಿವೆ. ಹಸುಗಳು ರಸ್ತೆ ಮಧ್ಯೆ

ಕೊಟ್ಟಿಗೆಹಾರ: ವಾರದಲ್ಲಿ 30ಕ್ಕೂ ಹೆಚ್ಚು ಹಸುಗಳು ಅಪಘಾತಕ್ಕೆ ಬಲಿ Read More »

ಮುರುಘಾ ಸ್ವಾಮೀಜಿಯ ಲೈಂಗಿಕ ದೌರ್ಜನ್ಯ ಪ್ರಕರಣ| ಸೆ.14ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಸಮಗ್ರ ನ್ಯೂಸ್: ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಡಿಯಲ್ಲಿ ಬಂಧನವಾಗಿರುವ ಚಿತ್ರದುರ್ಗ ಮುರುಘಾ ಮಠದ ಡಾ.ಶ್ರೀ ಶಿವಮೂರ್ತಿ ಶರಣರನ್ನು ಸೆ. 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಶ್ರೀಗಳ ಪೊಲೀಸ್ ಕಸ್ಟಡಿ ಅವಧಿ ಸೋಮವಾರ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಅವರನ್ನು ಚಿತ್ರದುರ್ಗದ 2ನೇ ಅಪರ ಸತ್ರ ನ್ಯಾಯಾಲಯ ಮುಂದೆ ಹಾಜರುಪಡಿಸಲಾಯಿತು. ಬಳಿಕ ಶ್ರೀಗಳಿಗೆ ಸೆ.14 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ, ನ್ಯಾಯಾಧೀಶೆ ಕೋಮಲಾ ಅವರು ಆದೇಶಿಸಿದರು. ಕೋರ್ಟಿಗೆ ಹಾಜರು ಪಡಿಸುವ ಮುನ್ನ ಜಿಲ್ಲಾಸ್ಪತ್ರೆಗೆ ಕರೆದೊಯ್ದು

ಮುರುಘಾ ಸ್ವಾಮೀಜಿಯ ಲೈಂಗಿಕ ದೌರ್ಜನ್ಯ ಪ್ರಕರಣ| ಸೆ.14ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ Read More »

ಮುರುಘಾ ಮಠದ ಶ್ರೀ ಕುರಿತ ಮಹಿಳೆಯರ ನಡುವಿನ ಆಡಿಯೋ ವೈರಲ್| ಆತ್ಮಹತ್ಯೆ‌ ಮಾಡಿಕೊಂಡ ಮಡಿವಾಳೇಶ್ವರ ಸ್ವಾಮೀಜಿ

ಸಮಗ್ರ ನ್ಯೂಸ್: ಮಹಿಳೆಯೊಬ್ಬರ ಜೊತೆ ಮಾತನಾಡಿದ ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ನೊಂದ ಬೈಲಹೊಂಗಲ ತಾಲೂಕಿನ ನೆಗಿನಹಾಳದ ಗುರು ಮಡಿವಾಳೇಶ್ವರ ಮಠದ ಸ್ವಾಮೀಜಿ ಶಂಕಾಸ್ಪದವಾಗಿ ಸಾವಿಗೆ ಶರಣಾಗಿದ್ದಾರೆ. ಮುರುಘಾ ಮಠದ ಸ್ವಾಮೀಜಿಗಳ ಮೇಲೆ ಇರುವ ಆರೋಪದ ಬೆನ್ನಲ್ಲೇ ಇಬ್ಬರು ಮಹಿಳೆಯರು ಮಾತನಾಡಿರುವ ಆಡಿಯೋ ರಿಲೀಸ್ ಆಗಿರುವುದೇ ಈ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಮುರಘಾ ಶ್ರೀಗಳ ಲೈಂಗಿಕ ಪ್ರಕರಣ ಕುರಿತು ಇಬ್ಬರು ಮಹಿಳೆಯರು ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದಿಯಾಗುತ್ತಿದ್ದು, ಅದರ ಬೆನ್ನಲ್ಲೇ ನೇಗಿನಹಾಳದ ಬಸವಸಿದ್ದಲಿಂಗ ಸ್ವಾಮೀಜಿ

ಮುರುಘಾ ಮಠದ ಶ್ರೀ ಕುರಿತ ಮಹಿಳೆಯರ ನಡುವಿನ ಆಡಿಯೋ ವೈರಲ್| ಆತ್ಮಹತ್ಯೆ‌ ಮಾಡಿಕೊಂಡ ಮಡಿವಾಳೇಶ್ವರ ಸ್ವಾಮೀಜಿ Read More »

ಮಾರಕಾಸ್ತ್ರಗಳಿಂದ ಯುವಕನ ಕೊಚ್ಚಿ‌ ಕೊಲೆಗೈದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಇತ್ತೀಚೆಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದಿರುವ ಘಟನೆಯೊಂದು ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ವಿನಾಯಕ ಸೋಮಶೇಖರ ಹೋರಕೇರಿ (28) ಎಂದು ಗುರುತಿಸಲಾಗಿದೆ. ಯುವಕ ಬೈಕ್‌ನಲ್ಲಿ ಗ್ರಾಮಕ್ಕೆ ಮರಳುವಾಗ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಮನಬಂದಂತೆ ಹಲ್ಲೆ ಮಾಡಿದ್ದಾರೆ. ತೀವ್ರ ರಕ್ತಸ್ರಾವದಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶನಿವಾರವಷ್ಟೇ ಯುವಕ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಯಮಕನಮರಡಿ

ಮಾರಕಾಸ್ತ್ರಗಳಿಂದ ಯುವಕನ ಕೊಚ್ಚಿ‌ ಕೊಲೆಗೈದ ದುಷ್ಕರ್ಮಿಗಳು Read More »

ಮನೆ ಗೋಡೆ ಕುಸಿದು ಬಿದ್ದು, ಗಂಭೀರ ಗಾಯಗೊಂಡು ಯುವಕ ಮೃತ್ಯು

ಸಮಗ್ರ ನ್ಯೂಸ್: ಭಾರಿ ಮಳೆ ಹಾಗು ಸಿಡಿಲು ಬಡಿದ ಪರಿಣಾಮ ಮಲಗಿದ್ದ ಯುವಕನ ಮೇಲೆ ಮನೆಯ ಗೋಡೆ ಕುಸಿದು ಬಿದ್ದು, ಗಂಭೀರ ಗಾಯಗೊಂಡ ಯುವಕ ಮೃತಪಟ್ಟ ಘಟನೆಯೊಂದು ಚಾಮರಾಜನಗರದ ದಡದಹಳ್ಳಿಯಲ್ಲಿ ರಾತ್ರಿ ನಡೆದಿದೆ. ಮೃತರನ್ನು ದಡದಹಳ್ಳಿ ನಿವಾಸಿ ಮೂರ್ತಿ (33) ಎಂದು ಗುರುತಿಸಲಾಗಿದೆ. ಮೂರ್ತಿ ಅವರು ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಭಾರಿ ಮಳೆ ಹಾಗು ಸಿಡಿಲು ಬಡಿದ ಪರಿಣಾಮ ಮನೆಯ ಗೋಡೆ ಮೂರ್ತಿ ಅವರ ಮೈ ಮೇಲೆ ಬಿದ್ದಿದ್ದು, ಗಂಭೀರ ಗಾಯಗೊಂಡ ಅವರು ಮೃತಪಟ್ಟರು ಎಂದು

ಮನೆ ಗೋಡೆ ಕುಸಿದು ಬಿದ್ದು, ಗಂಭೀರ ಗಾಯಗೊಂಡು ಯುವಕ ಮೃತ್ಯು Read More »

ಅನೈತಿಕ ಅನುಮಾನಕ್ಕೆ ಕೊನೆ ಮೊಳೆ‌ ಹೊಡೆದ ಚಾಲಾಕಿ ಪತ್ನಿ| ಗಂಡನನ್ನೇ ಕೊಂದು ನಾಟಕವಾಡಿದಳು

ಸಮಗ್ರ ನ್ಯೂಸ್: ಅನೈತಿಕ ಸಂಬಂಧವಿದೆ ಎಂದು ಪದೇ ಪದೇ ಅನುಮಾನಿಸುತ್ತಿದ್ದ ಗಂಡನ ಕಥೆಯನ್ನು ಪತ್ನಿಯೇ ಮುಗಿಸಿದ್ದಾಳೆ. ಅಕ್ಕನ ಮಗನ ಸಹಾಯದಿಂದ ಬೆಂಗಳೂರಿನಲ್ಲಿ ಪತಿಯನ್ನು ಕೊಂದು ಶವವನ್ನು ಊರಿಗೆ ಕೊಂಡೊಯ್ದು ನಾಟಕವಾಡಿದ್ದ ಹೆಂಡತಿಯನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ. ಶಿಲ್ಪಾ ಬಂಧಿತ ಆರೋಪಿಯಾಗಿದ್ದು, ಮಹೇಶ್ ಕೊಲೆಯಾದ ದುರ್ದೈವಿ. ಮಂಡ್ಯ ಮೂಲದ ಮಹೇಶ್ ಮತ್ತು ಶಿಲ್ಪಾಗೆ 8 ವರ್ಷಗಳ ಹಿಂದೆ ಮದುವೆಯಾಗಿತ್ತು. ಈ ದಂಪತಿ ಬೆಂಗಳೂರಿನ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದರು. ಇತ್ತೀಚೆಗಷ್ಟೇ ಶಿಲ್ಪಾ ಬೆಂಗಳೂರಲ್ಲಿ ವಾಸವಿದ್ರೆ, ಕೆಲಸದ ನಿಮಿತ್ತ ಮಹೇಶ್ ಮಂಡ್ಯದಲ್ಲಿ

ಅನೈತಿಕ ಅನುಮಾನಕ್ಕೆ ಕೊನೆ ಮೊಳೆ‌ ಹೊಡೆದ ಚಾಲಾಕಿ ಪತ್ನಿ| ಗಂಡನನ್ನೇ ಕೊಂದು ನಾಟಕವಾಡಿದಳು Read More »

ಬೆಳ್ತಂಗಡಿ: ಆ ಮಹಿಳೆಯದ್ದು ಬರೀ ಸಾವಲ್ಲ, ಅದೊಂದು ಕೊಲೆ| ಪತಿಯೇ ಕೊಲೆ ಆರೋಪಿ

ಸಮಗ್ರ ನ್ಯೂಸ್: ಕೊಕ್ಕಡ ಗ್ರಾಮದ ಅಗರ್ತ ಎಂಬಲ್ಲಿ ನಡೆದ ಮಹಿಳೆಯೋರ್ವರ ಸಂಶಯಾಸ್ಪದ ಸಾವಿನ ಪ್ರಕರಣ ಕೊಲೆ ಎಂದು ಇದೀಗ ವೈದ್ಯಕೀಯ ವರದಿಗಳಿಂದ ದೃಢಪಟ್ಟಿದ್ದು, ಕೊಲೆ ಆರೋಪದಲ್ಲಿ ಮಹಿಳೆಯ ಪತಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಕೊಕ್ಕಡ ಗ್ರಾಮದ ಅಗರ್ತ ನಿವಾಸಿ ಮೋಹಿನಿ(36) ಮೃತಪಟ್ಟವರಾಗಿದ್ದು, ಕೊಲೆ ಆರೋಪದಲ್ಲಿ ಆಕೆಯ ಪತಿ ಗಣೇಶ್‌(48)ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಶನಿವಾರಸಂತೆ ನಿವಾಸಿಯಾಗಿರುವ ಗಣೇಶ್‌ ಸುಳ್ಯ ತಾಲೂಕು ಕೊಲ್ಲಮೊಗ್ರುವಿನ ಮೋಹಿನಿ ಅವರನ್ನು 8 ವರ್ಷಗಳ ಹಿಂದೆ ಮದುವೆಯಾಗಿದ್ದು, ಬಳಿಕ ಪತಿ, ಪತ್ನಿ ಬೆಳ್ತಂಗಡಿ ತಾಲೂಕಿನ

ಬೆಳ್ತಂಗಡಿ: ಆ ಮಹಿಳೆಯದ್ದು ಬರೀ ಸಾವಲ್ಲ, ಅದೊಂದು ಕೊಲೆ| ಪತಿಯೇ ಕೊಲೆ ಆರೋಪಿ Read More »

ಶಿಕ್ಷಣ ಇಲಾಖೆಯಲ್ಲೂ ಲಂಚಾವತಾರ| ಸರಣಿ ಟ್ವೀಟ್ ಮೂಲಕ ಸಿದ್ದು ಆಕ್ರೋಶ| ಮಾಧ್ಯಮ ವರದಿ ಕುರಿತು ಪ್ರಸ್ತಾಪ

ಸಮಗ್ರ ನ್ಯೂಸ್: ಖಾಸಗಿ ಶಾಲೆಗಳ ಪರವಾನಿಗೆಯಿಂದ ಹಿಡಿದು ನಿವೃತ್ತ ಶಿಕ್ಷಕರ ಪಿಂಚಣಿವರೆಗೆ ಶಿಕ್ಷಣ ಇಲಾಖೆಯಲ್ಲಿ ಲಂಚ ನೀಡದೇ ಯಾವ ಕೆಲಸವು ಆಗದ ವಾತಾವರಣ ಇದೆ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಭಾನುವಾರ ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸರ್ಕಾರದ ವಿರುದ್ಧ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಭಾನುವಾರ ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸರ್ಕಾರದ ವಿರುದ್ಧ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ವಾಗ್ದಾಳಿ

ಶಿಕ್ಷಣ ಇಲಾಖೆಯಲ್ಲೂ ಲಂಚಾವತಾರ| ಸರಣಿ ಟ್ವೀಟ್ ಮೂಲಕ ಸಿದ್ದು ಆಕ್ರೋಶ| ಮಾಧ್ಯಮ ವರದಿ ಕುರಿತು ಪ್ರಸ್ತಾಪ Read More »