ಕ್ರೈಂ

ಬಾಲಕಿಯರ ‌ಮೇಲೆ ಲೈಂಗಿಕ ದೌರ್ಜನ್ಯ| ಪೋಕ್ಸೋ ಕಾಯ್ದೆಯಡಿ ಮುರುಘಾ ಮಠ‌ ಶಿವಮೂರ್ತಿ ಶರಣರು ಅರೆಸ್ಟ್

ಸಮಗ್ರ ನ್ಯೂಸ್: ಮುರುಘಾಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ ಗಂಭೀರ ಆರೋಪಕ್ಕೆ ಗುರಿಯಾಗಿದ್ದು, ಪೋಕ್ಸೋ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಶ್ರೀಮಠದ ಪೀಠಾಧ್ಯಕ್ಷರದ ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರ ಮೇಲೆ ಶನಿವಾರ ಮೈಸೂರಿನಲ್ಲಿ ಒಡನಾಡಿ ಸಂಸ್ಥೆ ಮೂಲಕ ದಾಖಲಾದ ಲೈಂಗಿಕ ಕಿರುಕುಳ ದೂರಿನ ಹಿನ್ನೆಲೆ ಪೋಕ್ಸೋ ಪ್ರಕರಣ‌ ದಾಖಲಾಗಿದೆ. ಶ್ರೀಗಳ ಬಂಧನದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿರುವ ಮುರುಘಾ ಮಠದ ಮುಂಬಾಗ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಶ್ರೀಗಳನ್ನು ಪೊಲೀಸ್ ಬಿಗಿ […]

ಬಾಲಕಿಯರ ‌ಮೇಲೆ ಲೈಂಗಿಕ ದೌರ್ಜನ್ಯ| ಪೋಕ್ಸೋ ಕಾಯ್ದೆಯಡಿ ಮುರುಘಾ ಮಠ‌ ಶಿವಮೂರ್ತಿ ಶರಣರು ಅರೆಸ್ಟ್ Read More »

ಗುಜರಾತ್ ನ ಖ್ಯಾತ ಗಾಯಕಿ ವೈಶಾಲಿ ಬಲ್ಸಾರಾ ಶವ ಕಾರಿನಲ್ಲಿ ಪತ್ತೆ

ಸಮಗ್ರ ನ್ಯೂಸ್: ಗುಜರಾತ್​ನ ಖ್ಯಾತ ಗಾಯಕಿ ವೈಶಾಲಿ ಬಲ್ಸಾರಾ ಮೃತದೇಹ ಕಾರಿನಲ್ಲಿ ಪತ್ತೆಯಾಗಿದೆ. ವಲ್ಸಾದ್ ಜಿಲ್ಲೆಯ ಪಾರ್ ನದಿಯ ದಡದಲ್ಲಿ ಕಾರು ನಿಂತಿದ್ದು ಪರಿಶೀಲನೆ ನಡೆಸಿದಾಗ ಅದರಲ್ಲಿ ಗಾಯಕಿ ಶವ ಸಿಕ್ಕಿದೆ. ಇದು ಹಲವು ಅನುಮಾನಗಳನ್ನು ಹುಟ್ಟುಹಾಕಿದ್ದು, ಕೊಲೆಯೇ ಅಥವಾ ಆತ್ಮಹತ್ಯೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ನದಿ ದಡದಲ್ಲಿ ಕಾರು ಹಲವು ಗಂಟೆಗಳಿಂದ ನಿಂತಿದ್ದನ್ನು ಕಂಡ ಸ್ಥಳೀಯರು ಅದರ ಮಾಲೀಕರನ್ನು ಹುಡುಕಾಡಿದ್ದಾರೆ. ಬಳಿಕ ಯಾರೂ ಪತ್ತೆಯಾಗದ ಕಾರಣ ಅನುಮಾನ ಬಂದು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ

ಗುಜರಾತ್ ನ ಖ್ಯಾತ ಗಾಯಕಿ ವೈಶಾಲಿ ಬಲ್ಸಾರಾ ಶವ ಕಾರಿನಲ್ಲಿ ಪತ್ತೆ Read More »

ಹಿಜಾಬ್ ವಿವಾದ ಮೇಲ್ಮನವಿ ವಿಚಾರಣೆ| ಸುಪ್ರೀಂ ಅಂಗಳದಲ್ಲಿ ಯಾರಿಗೆ ಸಿಗುತ್ತೆ ಗೆಲುವು?

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರವು ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ನಿಷೇಧಿಸಿದ ಆದೇಶವನ್ನು ಎತ್ತಿಹಿಡಿದ ಹೈಕೋರ್ಟ್‌ ತೀರ್ಪು ವಿರುದ್ಧ ಸಲ್ಲಿಸಲಾಗಿರುವ ಮೇಲ್ಮನವಿಗಳನ್ನು ನಾಳೆ ಸುಪ್ರೀಂ ಕೋರ್ಟ್‌ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಕಳೆದ ಕೆಲವು ದಿನಗಳಿಂದ ತಣ್ಣಗಾದಂತೆ ಕಂಡುಬಂದಿದ್ದ ಹಿಜಾಬ್‌ ವಿಷಯ ನಾಳೆ ಮತ್ತೆ ಮುನ್ನಲೆಗೆ ಬರಲಿದೆ. ವಿಚಾರಣೆಯ ಅಂತ್ಯದಲ್ಲಿ ಸುಪ್ರೀಂ ತೀರ್ಪು ಯಾರ ಪರವಾಗಿರಲಿದೆ? ರಾಜ್ಯ ಸರಕಾರಕ್ಕೆ ಹಿನ್ನಡೆಯಾಗಲಿದೆಯೇ? ಮೇಲ್ಮನವಿ ಸಲ್ಲಿಸಿದವರಿಗೆ ಹಿನ್ನಡೆಯಾಗಲಿದೆಯೇ? ಇತ್ಯಾದಿ ಪ್ರಶ್ನೆಗಳೂ ಮೂಡಿವೆ. ನ್ಯಾಯಮೂರ್ತಿ ಹೇಮಂತ್ ಗುಪ್ತಾ ನೇತೃತ್ವದ ದ್ವಿಸದಸ್ಯ ಪೀಠ ಮತ್ತು

ಹಿಜಾಬ್ ವಿವಾದ ಮೇಲ್ಮನವಿ ವಿಚಾರಣೆ| ಸುಪ್ರೀಂ ಅಂಗಳದಲ್ಲಿ ಯಾರಿಗೆ ಸಿಗುತ್ತೆ ಗೆಲುವು? Read More »

ಲೈಂಗಿಕ ದೌರ್ಜನ್ಯ ಆರೋಪ| ಮುರುಘಾ ಶರಣರಿಗೆ ಬಂಧನ ಭೀತಿ

ಸಮಗ್ರ ನ್ಯೂಸ್: ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶಿವಶರಣ ಸ್ವಾಮೀಜಿಗಳಿಗೆ ಬಂಧನದ ಭೀತಿ ಎದುರಾಗಿದೆ. ಶ್ರೀಗಳ ವಿರುದ್ಧ ಆರೋಪ ಮಾಡಿರುವ ಇಬ್ಬರು ಬಾಲಕಿಯರನ್ನು ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದೆ. ವಿಚಾರಣೆ ಸಂದರ್ಭದಲ್ಲಿ ಬಾಲಕಿಯರು ಶ್ರೀಗಳ ವಿರುದ್ಧ ಹೇಳಿಕೆ ನೀಡಿದರೆ ಮುರುಘಾ ಶ್ರೀಗಳನ್ನು ಬಂಧಿಸಬೇಕಾದ ಅನಿವಾರ್ಯತೆ ಪೊಲೀಸರಿಗೆ ಎದುರಾಗುವ ಸಾಧ್ಯತೆಗಳಿವೆ. ನಾಳೆ ಜಿಲ್ಲಾ ನ್ಯಾಯಾೀಧಿಶರ ಮುಂದೆ ಬಾಲಕಿಯರನ್ನು ಹಾಜರುಪಡಿಸುವ ಸಾಧ್ಯತೆಯಿದ್ದು, ನ್ಯಾಯಾೀಧಿಶರು ಅವರಿಂದ ಹೇಳಿಕೆ ಪಡೆಯಲಿದ್ದಾರೆ. ಒಂದು ವೇಳೆ ಮಠದಲ್ಲಿ ತಮಗೆ ಆರೋಪಿ

ಲೈಂಗಿಕ ದೌರ್ಜನ್ಯ ಆರೋಪ| ಮುರುಘಾ ಶರಣರಿಗೆ ಬಂಧನ ಭೀತಿ Read More »

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ; ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ರಚನಾ ಪೋಲಿಸರ ವಶ

ಸಮಗ್ರ ನ್ಯೂಸ್ : ಪಿಎಸ್​ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಸಿಐಡಿ ಅಧಿಕಾರಿಗಳು ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ರಚನಾ ಹನುಮಂತ ಅವರನ್ನು ಬಂಧಿಸಿದ್ದಾರೆ. 545 ಪಿಎಸ್​ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 17ನೇ ಆರೋಪಿಯಾಗಿರುವ ರಚನಾ ಹನುಮಂತಳನ್ನು ಸಿಐಡಿ (CID) ವಿಶೇಷ ತನಿಖಾ ತಂಡ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ವಶಕ್ಕೆ ಪಡೆದಿದೆ. ನೇಮಕಾತಿಯ ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ರಚನಾ ಹನುಮಂತ ಮೊದಲ ರ‍್ಯಾಂಕ್ ಪಡೆದಿದ್ದರು. ಅಕ್ರಮ ಪ್ರಕರಣ ತಿಳಿಯುತ್ತಿದ್ದಂತೆ ರಚನಾ ಮೂರು ತಿಂಗಳಿನಿಂದ

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ; ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ರಚನಾ ಪೋಲಿಸರ ವಶ Read More »

ವ್ಯಕ್ತಿಯ ರುಂಡ ಕತ್ತರಿಸಿ ಭೀಕರ ಹತ್ಯೆ

ಸಮಗ್ರ ನ್ಯೂಸ್: ವ್ಯಕ್ತಿಯೋರ್ವನ ರುಂಡವನ್ನು ಕತ್ತರಿಸಿ ಹತ್ಯೆ ಮಾಡಿದ ಘಟನೆ ಹಲಗಾ ಗ್ರಾಮದ ತಾರೀಹಾಳ ಕ್ರಾಸ್‌ನ ಜೈನ ಬಸದಿ ಬಳಿ ಶುಕ್ರವಾರ ನಡೆದಿದೆ. ಕೊಂಡಸಕೊಪ್ಪ ಗ್ರಾಮದ ಗದಗಯ್ಯ ಹಿರೇಮಠ(45) ಮೃತವ್ಯಕ್ತಿ. ದ್ವಿಚಕ್ರ ವಾಹನ ನಿಲ್ಲಿಸಿದ ಹಂತಕರು ಏಕಾಏಕಿ ಮಾರಕಾಸ್ತ್ರದಿಂದ ಹೊಡೆದಿದ್ದಾರೆ. ರುಂಡ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ನಂತರ ಅಲ್ಲಿಂದ ತೆರಲಿದ್ದಾರೆ. ಹಿರೇಬಾಗೇವಾಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಇನ್ಸಪೆಕ್ಟರ್ ವಿಜಯಕುಮಾರ ಸಿನ್ನೂರ, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವ್ಯಕ್ತಿಯ ರುಂಡ ಕತ್ತರಿಸಿ ಭೀಕರ ಹತ್ಯೆ Read More »

ಮುರುಘಾ ಮಠದ ಶರಣರ ಮೇಲಿನ ಆರೋಪಕ್ಕೆ ಪ್ರತಿದೂರು

ಸಮಗ್ರ ನ್ಯೂಸ್: ಚಿತ್ರದುರ್ಗದ ಮುರುಘಾ ಮಠದ ಶರಣರ ಮೇಲಿನ ಕೇಸ್​​ಗೆ ಬಿಗ್‌ ಟ್ವಿಸ್ಟ್ ಸಿಕ್ಕಿದ್ದು, ಮುರುಘಾ ಶರಣರು, ವಾರ್ಡನ್‌ ಮೇಲಿನ ಮೈಸೂರಿನಲ್ಲಿ ದಾಖಲಾದ ಎಫ್​ಐಆರ್​ ನ 2 ನೇ ಆರೋಪಿ ರಶ್ಮಿ ಅವರು ಬಸವರಾಜನ್ ದಂಪತಿ ಮೇಲೆ ಪ್ರತಿ ದೂರು ದಾಖಲು ಮಾಡಿದ್ದಾರೆ. ಬೃಹನ್ಮಠದ ಮಾಜಿ ಆಡಳಿತಾಧಿಕಾರಿಯಾಗಿರುವ ಹಾಗೂ ಮಾಜಿ ಶಾಸಕ ಎಸ್​.ಕೆ ಬಸವರಾಜನ್‌ ಹಾಗೂ ಅವರ ಪತ್ನಿ ಸೌಭಾಗ್ಯ ವಿರುದ್ಧ ಅತ್ಯಾಚಾರಕ್ಕೆ ಯತ್ನ ಪ್ರಕರಣವನ್ನು ರಶ್ಮಿ ದಾಖಲು ಮಾಡಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಬಸವರಾಜನ್‌ ಹಾಗೂ

ಮುರುಘಾ ಮಠದ ಶರಣರ ಮೇಲಿನ ಆರೋಪಕ್ಕೆ ಪ್ರತಿದೂರು Read More »

ಇಂಜಿನಿಯರ್ ಯುವತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಸಮಗ್ರ ನ್ಯೂಸ್ : ಇಂಜಿನಿಯರ್ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಭುವನೇಶ್ವರದಲ್ಲಿ ನಡೆದಿದೆ. ಸ್ಥಳದಲ್ಲಿ ಡೆತ್ ನೋಟು ಸಿಕ್ಕಿದ್ದು, ಪ್ರೇಮ ವೈಫಲ್ಯದ ಬಗ್ಗೆ ಬರೆಯಲಾಗಿದೆ‌. ಶ್ವೇತಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಸ್ವತಃ ಉಸಿರು ಕಟ್ಟಿಸಿಕೊಂಡು‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌. ಘಟನೆ ಬಗ್ಗೆ ಈಕೆಯ ಪ್ರಿಯಕರ‌ ಸೌಮ್ಯಜಿತ್ ಮೇಲೆ‌ ಕುಟುಂಬಸ್ಥರು ದೂರು‌ ದಾಖಲಿಸಿದ್ದಾರೆ. ಶ್ವೇತಾ ಭುವನೇಶ್ವರದ ಪ್ರತಿಷ್ಠಿತ ಕಂಪೆನಿಯಲ್ಲಿ ಕೆಲಸ‌ ಮಾಡುತ್ತಿದ್ದರು. ಸೌಮ್ಯಜಿತ್ ನನ್ನು ಪ್ರೀತಿಸುತ್ತಿದ್ದು, ಆತ ಇದನ್ನೇ‌ ಬಂಡವಾಳವಾಗಿ ಬಳಸಿ ಆಕೆಯ ಖಾಸಗಿ ಚಿತ್ರ ತೆಗೆದು ಹಣಕ್ಕಾಗಿ

ಇಂಜಿನಿಯರ್ ಯುವತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ Read More »

ಚಿತ್ರದುರ್ಗದ‌ ಮುರುಘಾ ಶರಣರ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ| ಎಫ್ಐಆರ್ ದಾಖಲು

ಸಮಗ್ರ ನ್ಯೂಸ್: ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಶ್ರೀಗಳು ವಿರುದ್ಧ ಮಠದ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿರುವ ಇಬ್ಬರು ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ವಿದ್ಯಾರ್ಥಿನಿಯರ ಮೇಲೆ ಕಳೆದ ಕೆಲವು ವರ್ಷಗಳಿಂದ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಮೈಸೂರಿನ ನಜರ್‍ಬಾದ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಮೈಸೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರ ದೂರಿನನ್ವಯ ಎಫ್‍ಐಆರ್ ದಾಖಲಿಸಲಾಗಿದೆ. ಕೋರ್ಟ್‍ನ ಮಾರ್ಗದರ್ಶನದಂತೆ ಇದೀಗ ಎಫ್‍ಐಆರ್ ಪ್ರತಿಯನ್ನು ಚಿತ್ರದುರ್ಗದ ಎಸ್ಪಿಗೆ ಕಳುಹಿಸಲಾಗಿದೆ.

ಚಿತ್ರದುರ್ಗದ‌ ಮುರುಘಾ ಶರಣರ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ| ಎಫ್ಐಆರ್ ದಾಖಲು Read More »

ಕೆಟ್ಟ ದೃಷ್ಟಿಯಿಂದ ಚಿಕ್ಕ ಮಕ್ಕಳ ಖಾಸಗಿ ಅಂಗಗಳನ್ನು ಮುಟ್ಟುವುದು ತಪ್ಪು- ಬಾಂಬೆ ಹೈಕೋರ್ಟ್ ತೀರ್ಪು

ಸಮಗ್ರ ನ್ಯೂಸ್: ಲೈಂಗಿಕ ಬಯಕೆಯಿಂದ ಚಿಕ್ಕ ಮಕ್ಕಳ ಖಾಸಗಿ ಅಂಗಗಳನ್ನ ಸ್ಪರ್ಶಿಸುವುದು ಅಪರಾಧ ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇನ್ನು ಅನಗತ್ಯವಾಗಿ ಮಗುವನ್ನ ಸ್ಪರ್ಶಿಸುವುದು ಸಹ ಅಪರಾಧವೆಂದು ಪರಿಗಣಿಸಲ್ಪಡುತ್ತದೆ. ಮುಂಬೈ ಹೈಕೋರ್ಟ್ ಪೋಕ್ಸೋ ಕಾಯ್ದೆಯಡಿ ಲೈಂಗಿಕ ದೌರ್ಜನ್ಯ ಪ್ರಕರಣ ಎಂದು ಪರಿಗಣಿಸಿದೆ. ಈ ಪ್ರಕರಣದಲ್ಲಿ ನ್ಯಾಯಾಲಯವು ಪೋಕ್ಸೊ ಕಾಯ್ದೆಯ ಸೆಕ್ಷನ್ 7ನ್ನ ಉಲ್ಲೇಖಿಸಿದೆ. ಮಗುವಿಗೆ ಯಾವುದೇ ರೀತಿಯ ಗಾಯವಿಲ್ಲದಿದ್ದರೆ ಮತ್ತು ಯಾವುದೇ ಕಾರಣವಿಲ್ಲದೇ ಯಾರಾದರೂ ಲೈಂಗಿಕ ಬಯಕೆಯಿಂದ ಅವರ ಖಾಸಗಿ ಅಂಗಗಳನ್ನ ಸ್ಪರ್ಶಿಸಿದರೆ ಅದು

ಕೆಟ್ಟ ದೃಷ್ಟಿಯಿಂದ ಚಿಕ್ಕ ಮಕ್ಕಳ ಖಾಸಗಿ ಅಂಗಗಳನ್ನು ಮುಟ್ಟುವುದು ತಪ್ಪು- ಬಾಂಬೆ ಹೈಕೋರ್ಟ್ ತೀರ್ಪು Read More »