ಕ್ರೈಂ

ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರಾ ನದಿಯಲ್ಲಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಆ.21 ರಂದು ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟದಲ್ಲಿ ಮುಳುಗಡೆಯಾಗಿದ್ದ ಮಂಡ್ಯದ ಯುವಕನ ಶವ ಸುಮಾರು ಒಂದೂವರೆ ಕಿ.ಮೀ. ದೂರದಲ್ಲಿ ಇಂದು(ಆ.24) ಸಂಜೆ ಸುಮಾರಿಗೆ ಪತ್ತೆಯಾಗಿದೆ. ಮಂಡ್ಯದ ಸ್ವಾಮಿ ಎಂಬ ಯುವಕ ಆ.21 ರಂದು ಕುಮಾರಧಾರ ಸ್ನಾನಘಟ್ಟದಲ್ಲಿ ಸ್ನಾನಕ್ಕಿಳಿದಿದ್ದ ವೇಳೆ ನಾಪತ್ತೆಯಾಗಿದ್ದ. ಮೂರು ದಿನಗಳಿಂದ ಅಗ್ನಿಶಾಮಕ ಹಾಗೂ ಈಜು ತಜ್ಞರ ತಂಡ ಹುಡುಕಾಟ ನಡೆಸಿದರೂ ಶವ ದೊರಕಿರಲಿಲ್ಲ. ಇದೀಗ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಮತ್ತು ರವಿ ಕಕ್ಕೆಪದವುರವರ ಸತತ ಪ್ರಯತ್ನದ ಫಲವಾಗಿ ಕುಮಾರಧಾರದಿಂದ ಒಂದೂವರೆ […]

ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರಾ ನದಿಯಲ್ಲಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ Read More »

8 ತಿಂಗಳ ಗರ್ಭಿಣಿ ಪತ್ನಿಯನ್ನು ಹೊಡೆದು ಕೊಲೆ ಮಾಡಿದ ಪೋಲಿಸ್ ಅಧಿಕಾರಿ

ಸಮಗ್ರ ನ್ಯೂಸ್ : ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ಅಧಿಕಾರಿ (ಎಸ್‌ಪಿಒ) ಮಂಗಳವಾರ ತನ್ನ ಗರ್ಭಿಣಿ ಪತ್ನಿಯನ್ನು ಹೊಡೆದು ಕೊಂದಿರುವ ಘಟನೆಯೊಂದು ನಡೆದಿದ್ದು, ಇದೀಗ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಕಥುವಾ ಜಿಲ್ಲಾ ಪೊಲೀಸ್ ಲೈನ್‌ನಲ್ಲಿ ನಿಯೋಜಿತರಾಗಿರುವ ಎಸ್‌ಪಿಒ ಮೋಹನ್ ಲಾಲ್ ಪತ್ನಿಯನ್ನು ಹತ್ಯೆಗೈದ ಆರೋಪಿಯಾಗಿದ್ದಾನೆ. ಮೃತ ಮಹಿಳೆಯನ್ನು ಆಶಾದೇವಿ (32) ಎಂದು ಗುರುತಿಸಲಾಗಿದೆ. ಇವರಿಗೆ ಇಬ್ಬರು ಹೆಣ್ಣು ಮಕ್ಕಳು ಸಹ ಇದ್ದು, ಬಿಲ್ಲವರ್ ಪ್ರದೇಶದ ಧರಾಲ್ಟಾ ಗ್ರಾಮದ ನಿವಾಸಿಯಾಗಿದ್ದಾರೆ.

8 ತಿಂಗಳ ಗರ್ಭಿಣಿ ಪತ್ನಿಯನ್ನು ಹೊಡೆದು ಕೊಲೆ ಮಾಡಿದ ಪೋಲಿಸ್ ಅಧಿಕಾರಿ Read More »

ಮಾಂಸದೂಟ ತಿನ್ನುವ ಆಸೆ| ಮೇಕೆ ಕತ್ತರಿಸುವ ಕನಸು ಕಂಡು ತನ್ನ ಮರ್ಮಾಂಗವನ್ನೇ ಕತ್ತರಿಸಿದ!!

ಸಮಗ್ರ ನ್ಯೂಸ್: ಮಾಂಸದೂಟ ತಿನ್ನುವ ಆಸೆಯಾಗಿ ಮೇಕೆ ಕತ್ತರಿಸುವ ಕನಸು ಕಂಡ ವ್ಯಕ್ತಿ, ನಿಜವಾಗಿ ತನ್ನ ಮರ್ಮಾಂಗವನ್ನೇ ಕತ್ತರಿಸಿಕೊಂಡಿದ್ದಾನೆ. ಘಾನಾದ ಅಸ್ಸಿನ್ ಫೋಸು ಎಂಬಲ್ಲಿ ಈ ಘಟನೆ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೋಫಿ ಅಟ್ಟಾ ಎಂಬ ವ್ಯಕ್ತಿ ನಿದ್ರೆಯಿಂದ ಎಚ್ಚರವಾದಾಗ ತನ್ನ ಮರ್ಮಾಂಗ ಕತ್ತರಿಸಿಕೊಂಡಿರುವುದನ್ನು ನೋಡಿದ್ದಾನೆ. ತೀವ್ರ ರಕ್ತಸ್ರಾವ ಉಂಟಾಗಿದ್ದರಿಂದ ಮಧ್ಯಪ್ರದೇಶದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ವೈದ್ಯರು ಶಸ್ತ್ರಚಿಕಿತ್ಸೆಗೆ ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಗಾಯಾಳು ಕೋಫಿ ಅಟ್ಟಾ ಸಂಬಂಧಿಕರು ಹಣ ಸಂಗ್ರಹಿಸುತ್ತಿದ್ದಾರೆ. ನಾನು ನಿದ್ರಿಸಿದ್ದಾಗ

ಮಾಂಸದೂಟ ತಿನ್ನುವ ಆಸೆ| ಮೇಕೆ ಕತ್ತರಿಸುವ ಕನಸು ಕಂಡು ತನ್ನ ಮರ್ಮಾಂಗವನ್ನೇ ಕತ್ತರಿಸಿದ!! Read More »

ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಉರುಳಿ ಬಿದ್ದು, 30ಕ್ಕೂ ಹೆಚ್ಚು ಜನ ಸೇಫ್

ಹಂಸಭಾವಿ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್‌ ಉರುಳಿ ಬಿದ್ದು, ಶಾಲಾ ಮಕ್ಕಳನ್ನೊಳಗೊಂಡ 30ಕ್ಕೂ ಅಧಿಕ ಜನ ಪ್ರಾಣಾಪಾಯದಿಂದ ಪಾರಾದ ಘಟನೆಯೊಂದು ಕೋಡ ಗ್ರಾಮದ ಹೊರವಲಯದಲ್ಲಿ ಮಂಗಳವಾರ ನಡೆದಿದೆ. ಉರುಳಿ ಬಿದ್ದ ಬಸ್‌ ರಾಣೆಬೆನ್ನೂರಿನಿಂದ ಕೋಡ ಮಾರ್ಗವಾಗಿ ಹಿರೇಕೆರೂರಿಗೆ ಹೋಗುತ್ತಿದ್ದ ವೇಳೆ ಕೋಡ ಗ್ರಾಮದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡಬದಿಗೆ ಉರುಳಿಬಿದ್ದಿದೆ. ಬಸ್‌ ಬಿದ್ದ ಕೂಡಲೇ ಒಳಗಿದ್ದ ಪ್ರಯಾಣಿಕರು ಹೊರಬರಲು ಆಗದೇ ಪರದಾಡುತ್ತಿದ್ದರು. ತಕ್ಷಣ ಸ್ಥಳದಲ್ಲಿದ್ದ ಸ್ಥಳೀಯರು ಬಸ್ಸಿನ ಕಿಟಕಿ ಗಾಜುಗಳನ್ನು ಒಡೆದು ಪ್ರಯಾಣಿಕರನ್ನು ಹೊರಗೆ

ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಉರುಳಿ ಬಿದ್ದು, 30ಕ್ಕೂ ಹೆಚ್ಚು ಜನ ಸೇಫ್ Read More »

ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದವರು ಯಾರು ? ಫೋಟೊ ರಿವೀಲ್ ಮಾಡಿದ ಬಿಜೆಪಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮೊಟ್ಟೆ ಎಸೆದವ ಯಾರು ಎಂದು ಬಿಜೆಪಿ ಫೋಟೋ ರಿಲೀಸ್‌ ಮಾಡಿದೆ. ಸಿದ್ದರಾಮಯ್ಯನವರ ಕಾರಿನ ಮೇಲೆ ಸಂಪತ್ ಎನ್ನುವ ವ್ಯಕ್ತಿ ಮೊಟ್ಟೆ ಎಸೆದಿರುವುದು ಬೆಳಕಿಗೆ ಬಂದಿದೆ. ಆದ್ರೆ, ಆತ ಯಾವ ಪಕ್ಷದ ಕಾರ್ಯಕರ್ತರ ಎನ್ನುವುದು ಮಾತ್ರ ಚರ್ಚೆಗೆ ಗ್ರಾಸವಾಗಿದೆ. ಸ್ವತಃ ಸಂಪತ್‌ ನಾನು ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಿಕೆ ಕೊಟ್ಟಿದ್ದಾನೆ. ಅಲ್ಲದೇ ಇತ್ತ ಕಾಂಗ್ರೆಸ್ ಆ ಸಂಪತ್ ಬಿಜೆಪಿ ಕಾರ್ಯಕರ್ತ ಎನ್ನುವ ಫೋಟೋಗಳನ್ನ

ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದವರು ಯಾರು ? ಫೋಟೊ ರಿವೀಲ್ ಮಾಡಿದ ಬಿಜೆಪಿ Read More »

ಭೀಕರ ರಸ್ತೆ ಅಪಘಾತ; 15 ಮಂದಿ ಸಾವು, 20ಮಂದಿಗೆ ಗಾಯ

ಟರ್ಕಿ: ಕಾರಿನ ಅಪಘಾತ ನಡೆದ ವೇಳೆ ಅದಕ್ಕೆ ಪ್ರತಿಸ್ಪಂದಿಸುತ್ತಿದ್ದ ಜನರ ಮೇಲೆ ವೇಗವಾಗಿ ಬಂದ ಬಸ್ ನಿಯಂತ್ರಣಕ್ಕೆ ಬಾರದೇ ವಾಹನಗಳಿಗೆ ಡಿಕ್ಕಿ ಹೊಡೆದು ಜನರ ಮೇಲೆ ಹರಿದ ಘಟನೆಯೊಂದು ಆಗ್ನೇಯ ಟರ್ಕಿ ಗಾಜಿಯಾಂತೆಪ್ ನಗರದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಗಾಜಿಯಾಂತೆಪ್ ಮತ್ತು ನಿಜಿಪ್ ನಡುವಿನ ಹೆದ್ದಾರಿಯಲ್ಲಿ ಕಾರು ಪಲ್ಟಿಯಾಗಿ ನಾಲ್ವರು ಗಾಯಗೊಂಡಿದ್ದರು. ಪೊಲೀಸ್ ಮತ್ತು ವೈದ್ಯರ ತಂಡ ಗಾಯಗೊಂಡವರನ್ನು ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯುವ ಸಿದ್ದತೆಯಲ್ಲಿತ್ತು. ಘಟನೆಯ ವೇಳೆ ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದರು. ಈ ವೇಳೆ

ಭೀಕರ ರಸ್ತೆ ಅಪಘಾತ; 15 ಮಂದಿ ಸಾವು, 20ಮಂದಿಗೆ ಗಾಯ Read More »

ವೇಗವಾಗಿ ಬಂದ ಕಾರು ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ; ನಾಲ್ವರು ಸಾವು, 13 ಜನರ ಸ್ಥಿತಿ ಚಿಂತಾಜನಕ

ಲಖ್ನೋ – ವೇಗವಾಗಿ ಬಂದ ಕಾರು ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 13 ಜನರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಕಾರಿನಲ್ಲಿದ್ದ ಶಿವಾನಿ(18) ಮತ್ತು ಚಾಲಕ ಸಾರ್ಥಕ್ ಭಾರದ್ವಾಜ್(25) ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಟ್ರಾಕ್ಟರ್‍ನ ಟ್ರಾಲಿಯೊಳಗೆ ಸಿಲುಕಿದ್ದ ಪ್ರಯಾಣಿಕರಾದ ಸಾವಿತ್ರಿ ದೇವಿ(50) ಮತ್ತು ಜ್ಞಾನವತಿ( 47) ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾವನ್ನಪ್ಪಿದ್ದಾರೆ. ರಾಜಧಾನಿ ಲಕ್ನೋದಿಂದ ಸುಮಾರು 700 ಕಿಮೀ ದೂರದಲ್ಲಿರುವ ಸಹರಾನ್‍ಪುರ ಜಿಲ್ಲೆಯ ದಿಯೋಬಂದ್ ಪ್ರದೇಶದಲ್ಲಿರುವ ರೋಹನಾ ಟೋಲ್ ಪ್ಲಾಜಾ ಬಳಿಯ ಮುಜಾಫರ್‍ನಗರ-ಸಹಾರನ್‍ಪುರ

ವೇಗವಾಗಿ ಬಂದ ಕಾರು ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ; ನಾಲ್ವರು ಸಾವು, 13 ಜನರ ಸ್ಥಿತಿ ಚಿಂತಾಜನಕ Read More »

ಉಪ್ಪಿನಂಗಡಿ: ವಿದ್ಯಾರ್ಥಿನಿಗೆ ಇನ್ಸ್ಟಾಗ್ರಾಮ್ ನಲ್ಲಿ ಮೆಸೇಜ್ ಮಾಡಿದ ಯುವಕ ಪೊಲೀಸ್ ಠಾಣೆಗೆ| ರೀಚಾರ್ಜ್ ಮಾಡಿಸಿದ ಯುವತಿಯರಿಗೆ ಮೆಸೇಜ್..!

ಉಪ್ಪಿನಂಗಡಿ: ವಿದ್ಯಾರ್ಥಿನಿಯೋರ್ವಳಿಗೆ ಇನ್ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿದ ಆರೋಪದ ಮೇಲೆ ಯುವಕನೋರ್ವನನ್ನು ಪೊಲೀಸರು ಎಚ್ಚರಿಕೆ ನೀಡಿ ಕಳುಹಿಸಿ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಇಲ್ಲಿನ ಕರುವೇಲು ನಿವಾಸಿಯೊಬ್ಬ ಖಾಸಗಿ ಶಾಲೆಯ ವಿದ್ಯಾರ್ಥಿನಿಗೆ ಇನ್ ಸ್ಟ್ಯಾಗ್ರಾಂನಲ್ಲಿ ಮೆಸೇಜ್ ಮಾಡುತ್ತಿದ್ದು, ಇದನ್ನು ಈಕೆ ಹೆತ್ತವರಿಗೆ ತಿಳಿಸಿದ್ದಾಳೆ. ಈ ಬಗ್ಗೆ ಅವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು, ಆತನನ್ನು ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ. ಏನಿದು ಆರೋಪ..?ಉಪ್ಪಿನಂಗಡಿಯ ಹೊಸ ಬಸ್‌ ನಿಲ್ದಾಣದಲ್ಲಿನ ಝನ್ ಟೆಲಿಕಾಂ ಮೊಬೈಲ್ ಅಂಗಡಿನಲ್ಲಿ ಕೆಲಸ ಮಾಡುವ

ಉಪ್ಪಿನಂಗಡಿ: ವಿದ್ಯಾರ್ಥಿನಿಗೆ ಇನ್ಸ್ಟಾಗ್ರಾಮ್ ನಲ್ಲಿ ಮೆಸೇಜ್ ಮಾಡಿದ ಯುವಕ ಪೊಲೀಸ್ ಠಾಣೆಗೆ| ರೀಚಾರ್ಜ್ ಮಾಡಿಸಿದ ಯುವತಿಯರಿಗೆ ಮೆಸೇಜ್..! Read More »

4 ವರ್ಷದ ಮಗುವನ್ನು ನೀರಿನ ಟಬ್ ನಲ್ಲಿ ಮುಳುಗಿಸಿ ತಾಯಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಎಚ್‌ಎಎಲ್‌ ಸಮೀಪದ ದೊಡ್ಡನೆಕ್ಕುಂದಿಯಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಗೃಹಿಣಿ ತನ್ನ ನಾಲ್ಕು ವರ್ಷದ ಮಗುವನ್ನು ನೀರಿನ ಟಬ್‌ನಲ್ಲಿ ಮುಳುಗಿಸಿ ಕೊಲೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು ನಡೆದಿದೆ. ಮೃತ ಮಗುವನ್ನು ಸಂಯುಕ್ತಾ (4) ಎಂದು ಗುರುತಿಸಲಾಗಿದ್ದು, ಕೊಲೆಗೈದು ನೇಣು ಬಿಗಿದುಕೊಂಡಿದ್ದ ಗಾಯತ್ರಿ ದೇವಿ (23) ಬದುಕುಳಿದಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಯುಕ್ತ ಜೊತೆ ದೊಡ್ಡನೆಕ್ಕುಂದಿಯ ಅಪಾರ್ಟ್‌ಮೆಂಟ್‌ನಲ್ಲಿ ತಮಿಳುನಾಡು ಮೂಲದ ನರೇಂದ್ರ ಹಾಗೂ ಗಾಯತ್ರಿ ದೇವಿ ದಂಪತಿ, ಮಗು ವಾಸವಾಗಿದ್ದು, ಕೆಲಸದ ನಿಮಿತ್ತ ಪತಿ ನರೇಂದ್ರ ಭಾನುವಾರ

4 ವರ್ಷದ ಮಗುವನ್ನು ನೀರಿನ ಟಬ್ ನಲ್ಲಿ ಮುಳುಗಿಸಿ ತಾಯಿ ಆತ್ಮಹತ್ಯೆಗೆ ಯತ್ನ Read More »

ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ! ಇಲ್ಲಿದೆ ಸಂಪೂರ್ಣ ವಿವರ

ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ. ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಮಾದರಿಯಲ್ಲೇ ಕೆಪಿಟಿಸಿಎಲ್ ಪರೀಕ್ಷೆಯಲ್ಲೂ ಅಕ್ರಮ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಅಪ್ಪ ಮಗ ಸೇರಿದಂತೆ 9 ಜನರನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್, ಹುಕ್ಕೇರಿ, ಅಥಣಿ, ಗದಗ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದೆ. ಸ್ಮಾರ್ಟ್‌ವಾಚ್‌ ಹಾಗೂ ಬ್ಲೂ ಟೂತ್ ಡಿವೈಸ್ ಬಳಸಿ ಪರೀಕ್ಷೆಯಲ್ಲಿ ಅಕ್ರಮವೆಸಗಿದ್ದಾರೆ. ಉಪಪ್ರಾಚಾರ್ಯ ಹಾಗೂ ಪರೀಕ್ಷಾ ಮೇಲ್ವಿಚಾರಕರೂ ಆಗಿದ್ದ ಮಾರುತಿ ಸೋನವಣಿ ಅವರ ಪುತ್ರ

ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ! ಇಲ್ಲಿದೆ ಸಂಪೂರ್ಣ ವಿವರ Read More »