ಕ್ರೈಂ

ಪೆನ್‌ಡ್ರೈವ್‌ ಪ್ರಕರಣ: ನಾಳೆ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ?

ಸಮಗ್ರ ನ್ಯೂಸ್: ಹಾಸನ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡು ವಿದೇಶಕ್ಕೆ ತೆರಳಿರುವ ಪ್ರಜ್ವಲ್ ರೇವಣ್ಣ ಯಾವಾಗ ಭಾರತಕ್ಕೆ ಬರುತ್ತಾರೆ ಎಂದು ಅಧಿಕಾರಿಗಳು ಕಾಯುತ್ತಿದ್ದಾರೆ. ಅಪ್ಪನಿಗೆ ಜಾಮೀನು ಸಿಕ್ಕಿದ ಮೇಲೆ ಬರಬಹುದು ಎಂಬ ಮಾತುಗಳು ಹೊರಬಿದ್ದಿತು. ಅದರಂತೆ ಈಗ ಬಿಗ್ ಅಪ್ಡೇಟ್ ಒಂದು ಲಭ್ಯವಾಗಿದೆ. ಜರ್ಮನಿಯಲ್ಲಿರುವ ಪ್ರಜ್ವಲ್‌, ಲುಫ್ತಾನ್ಸಾ ಏರ್‌ಲೈನ್ಸ್‌ ಮೂಲಕ ಭಾರತಕ್ಕೆ ಹಿಂತಿರುಗಲಿದ್ದಾರೆ. ಜರ್ಮನಿಯಲ್ಲಿ ನಾಳೆ (ಮೇ 15) ಬೆಳಗ್ಗೆ 11.20 ರಿಂದ 11.50ರೊಳಗೆ ಬೋರ್ಡಿಂಗ್‌ ಆಗಲಿದ್ದು, ಅವರಿಗಾಗಿ ಸೀಟ್‌ ನಂಬರ್‌ 6ಜಿ ಬುಕ್‌ ಮಾಡಲಾಗಿದೆ. […]

ಪೆನ್‌ಡ್ರೈವ್‌ ಪ್ರಕರಣ: ನಾಳೆ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ? Read More »

ಸುಳ್ಯ: ನೇಣಿಗೆ ಶರಣಾದ ಕಾಲೇಜು ವಿದ್ಯಾರ್ಥಿ

ಸಮಗ್ರ ನ್ಯೂಸ್: ಕಾಲೇಜು ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಾರಿನಲ್ಲಿ ವರದಿಯಾಗಿದೆ. ಮೃತನನ್ನು ನೆಟ್ಟಾರು ನಿವಾಸಿ ಚರಣ್‌ ಎಂದು ಗುರುತಿಸಲಾಗಿದೆ. ಈತ ಸುಳ್ಯದ ಶಿಕ್ಷಣ ಸಂಸ್ಥೆಯೊಂದರಲ್ಲಿ ಅಭ್ಯಾಸ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ತೆರಳಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸುಳ್ಯ: ನೇಣಿಗೆ ಶರಣಾದ ಕಾಲೇಜು ವಿದ್ಯಾರ್ಥಿ Read More »

ನಾಪತ್ತೆಯಾಗಿದ್ದ ಮೂವರು ಮಕ್ಕಳು ಚರಂಡಿಯಲ್ಲಿ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯ ಗಚ್ಚಿನಗಕಟ್ಟಿ ಕಾಲೋನಿಯಿಂದ ನಿನ್ನೆ ನಾಪತ್ತೆಯಾಗಿದ್ದ ಮೂವರು ಮಕ್ಕಳು ಇಂದು ಶವವಾಗಿ ಪತ್ತೆಯಾಗಿದ್ದಾರೆ. ಅನುಷ್ಕಾ, ವಿಜಯ ಹಾಗೂ ಮಿಹಿರ ಮೃತ ದುರ್ದೈವಿಗಳು. ಇವರೆಲ್ಲ ಮನೆ ಮುಂದೆ ಆಟವಾಡುತ್ತಿದ್ದಾಗ ಕಾಲೋನಿಯಲ್ಲಿ ಒಂಟೆ ಬಂದಿತ್ತು. ಮೂವರು ಖುಷಿಯಲ್ಲಿ ಅದರ ಹಿಂದೆ ಹೋಗಿದ್ದಾರೆ. ಹೀಗೆ ಹೋದವರು ಮನೆಗೆ ವಾಪಸ್‌ ಆಗಿರಲಿಲ್ಲ. ಪೋಷಕರು ಸಹ ಮನೆ ಸುತ್ತಮುತ್ತ ಹುಡುಕಾಟ ನಡೆಸಿದ್ದರು. ಆದರೆ ಮಕ್ಕಳ ಸುಳಿವು ಮಾತ್ರ ಸಿಕ್ಕಿರಲಿಲ್ಲ. ಮಕ್ಕಳು ಕಾಣಿಯಾಗಿದ್ದಕ್ಕೆ ಕಂಗಾಲಾದ ಪೋಷಕರು ಎಪಿಎಂಸಿ ಠಾಣೆ ಮೆಟ್ಟಿಲು ಹತ್ತಿದ್ದರು.

ನಾಪತ್ತೆಯಾಗಿದ್ದ ಮೂವರು ಮಕ್ಕಳು ಚರಂಡಿಯಲ್ಲಿ ಶವವಾಗಿ ಪತ್ತೆ Read More »

ಮೈಸೂರು : ನೀರಿನಲ್ಲಿ ಮುಳುಗಿ ಯುವತಿ ಮೃತ್ಯು

ಸಮಗ್ರ ನ್ಯೂಸ್‌ : ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಮೃತಪಟ್ಟಿ ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ. ಮೆಹನಾಜ್ (17) ಮೃತ ದುರ್ದೈವಿ.ಬೆಂಗಳೂರಿನ ಬನ್ನೇರುಘಟ್ಟ ನಿವಾಸಿಯಾದ ಮೆಹನಾಜ್‌ ತಲಕಾಡಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ದುರ್ಘಟನೆ ನಡೆದಿದೆ. ಈಜು ಬಾರದೆ ಇದ್ದರೂ, ನೀರಿನಲ್ಲಿ ಆಟವಾಡುಲು ನದಿಗೆ ಇಳಿದಿದ್ದಾಳೆ. ಆದರೆ ನೀರಿನ ಸೆಳತಕ್ಕೆ ಸಿಲುಕಿ ಮೃತಪಟ್ಟಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಲಕಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೀರಿನಲ್ಲಿ ಮುಳುಗಿದ್ದ ಮೃತದೇಹವನ್ನು ಮೇಲೆತ್ತಿ ಮರಣೋತ್ತರ

ಮೈಸೂರು : ನೀರಿನಲ್ಲಿ ಮುಳುಗಿ ಯುವತಿ ಮೃತ್ಯು Read More »

ನೇಹಾ ಹಿರೇಮಠ ಹತ್ಯೆ ಪ್ರಕರಣ: ಚಾರ್ಚ್‌ಶೀಟ್ ಸಲ್ಲಿಸಲು ಸಿಐಡಿ ಅಧಿಕಾರಿಗಳಿಂದ ಸಿದ್ಧತೆ

ಸಮಗ್ರ ನ್ಯೂಸ್: ಏ.18 ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ ಹಿರಮೇಠ ಪುತ್ರಿ ನೇಹಾ ಕೊಲೆ ನಡೆದಿತ್ತು. ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು. ಇದೀಗ ಪ್ರಕರಣದ ಕುರಿತು ಚಾರ್ಚ್‌ಶೀಟ್ ಸಲ್ಲಿಸಲು ಸಿಐಡಿ ತಯಾರಿ ನಡೆಸಿದೆ. ಆರೋಪಿ ಫಯಾಜ್‌ನನ್ನು ಆರು ದಿನಗಳ ಕಾಲ ವಶಕ್ಕೆ ಪಡೆದು ಸಿಐಡಿ ವಿಚಾರಣೆ ನಡೆಸಿತ್ತು. ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಫಯಾಜ್ ತಂದೆ-ತಾಯಿ ಸೇರಿ 10 ಕ್ಕೂ ಹೆಚ್ಚು ಜನರ ವಿಚಾರಣೆ ಮಾಡಿರುವ ಸಿಐಡಿ ಇನ್ನೊಂದು ವಾರದಲ್ಲಿ ಚಾರ್ಚ್‌ಶೀಟ್ ಸಲ್ಲಿಸುವ

ನೇಹಾ ಹಿರೇಮಠ ಹತ್ಯೆ ಪ್ರಕರಣ: ಚಾರ್ಚ್‌ಶೀಟ್ ಸಲ್ಲಿಸಲು ಸಿಐಡಿ ಅಧಿಕಾರಿಗಳಿಂದ ಸಿದ್ಧತೆ Read More »

ಸ್ನೇಹಿತರ ಜೊತೆ ಚಾಲೆಂಜ್ ಗೆ ಟೆಕ್ಕಿ ಬಲಿ: ಕೆರೆಯಿಂದ ಮೃತದೇಹ ತೆಗೆದ ಪೊಲೀಸರು

ಸಮಗ್ರ ನ್ಯೂಸ್: ಚಿಕ್ಕಬಳ್ಳಾಪುರದ ವಾಟದಹೊಸಳ್ಳಿ ಕೆರೆಯಲ್ಲಿ ಈಜಲು ಹೋದ ಟೆಕ್ಕಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ನಿನ್ನೆ ನಡೆದಿದೆ. ವಿನಯ್ ರಮೇಶ್ (42) ಮೃತ ಪಟ್ಟವರು. ಅಗ್ನಿಶಾಮಕ ಸಿಬ್ಬಂದಿಯ ಕಾರ್ಯಾಚರಣೆಯಿಂದ ಇಂದು ಟೆಕ್ಕಿ ಮೃತದೇಹವು ಪತ್ತೆಯಾಗಿದೆ. ಬೆಂಗಳೂರಿನ ಇಂದಿರಾನಗರ ನಿವಾಸಿಯಾದ ವಿನಯ್ ರಮೇಶ್, ಐದು ಜನ ಸ್ನೇಹಿತರೊಟ್ಟಿಗೆ ಕೆರೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಕೆಲವರು ಈ ದಡದಿಂದ ಆ ದಡಕ್ಕೆ ಯಾರು ಮೊದಲು ಈಜಿಕೊಂಡು ಬರುತ್ತಾರೆ ನೋಡೋಣಾ ಎಂದು ಸವಾಲು ಹಾಕಿಕೊಂಡಿದ್ದಾರೆ. ಈ ಚಾಲೆಂಜ್‌ ಅನ್ನು

ಸ್ನೇಹಿತರ ಜೊತೆ ಚಾಲೆಂಜ್ ಗೆ ಟೆಕ್ಕಿ ಬಲಿ: ಕೆರೆಯಿಂದ ಮೃತದೇಹ ತೆಗೆದ ಪೊಲೀಸರು Read More »

15 ವರ್ಷದ ಬಾಲಕನ ನಿರ್ಲಕ್ಷ್ಯಕ್ಕೆ 5 ವರ್ಷದ ಮಗು ಸಾವು

ಸಮಗ್ರ ನ್ಯೂಸ್: ಒಂದು ಸಣ್ಣ ನಿರ್ಲಕ್ಷ್ಯದಿಂದ 5 ವರ್ಷದ ಮಗುವೊಂದು ಕಾರು ಅಪಘಾತದಲ್ಲಿ ಮೃತ ಪಟ್ಟಿದೆ.. ಆರವ್ ಮೃತ ದುರ್ದೈವಿ. ಈ ಘಟನೆ ಬೆಂಗಳೂರಿನ ಓಲ್ಡ್ ಏರ್ ಪೋರ್ಟ್ ರಸ್ತೆ ಮುರುಗೇಶಪಾಳ್ಯ ರಸ್ತೆಯಲ್ಲಿ ನಡೆದಿದೆ. ತಂದೆ ಜತೆಗೆ ಕಾರು ವಾಶ್‌ ಮಾಡುವಾಗ 15 ವರ್ಷದ ಬಾಲಕ ಏಕಾಏಕಿ ಎಕ್ಸಿಲೇಟರ್‌ ತುಳಿದಿದ್ದಾನೆ. ಇದರಿಂದ ಕಾರಿನ ಬಳಿ ಆಟವಾಡುತ್ತಿದ್ದ ಮಗುವಿಗೆ ಗುದ್ದಿದೆ. ಘಟನೆಯಲ್ಲಿ ಐದು ವರ್ಷ ಮಗು ಆರವ್ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಆರವ್ ಸಹೋದರ ಧನರಾಜ್, ತಾಯಿ ಲಲಿತಾಗೆ ಮಣಿಪಾಲ್

15 ವರ್ಷದ ಬಾಲಕನ ನಿರ್ಲಕ್ಷ್ಯಕ್ಕೆ 5 ವರ್ಷದ ಮಗು ಸಾವು Read More »

ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಕೆರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆನೇಕಲ್ ತಾಲೂಕಿನ ಜಿಗಣಿ ಬಳಿ ನಡೆದಿದೆ. ಅಮೃತೇಶ್ ಪಾಂಡೆ ಆತ್ಮಹತ್ಯೆ ಮಾಡಿಕೊಂಡಿದ್ದು, ಈತ ಬಿಹಾರ ಮೂಲದವನು ಜಿಗಣಿ ಕೆರೆಗೆ ಹಾರಿ ಪ್ರಾಣಬಿಟ್ಟಿದ್ದಾನೆ ಅಮೃತೇಶ್ ಕೆಲ ವರ್ಷಗಳ ಹಿಂದೆ ಜಿಗಣಿಗೆ ಬಂದು ನೆಲೆಸಿದ್ದ. ಒಳ್ಳೆಯ ವಿದ್ಯಾಭ್ಯಾಸಕ್ಕಾಗಿ ಪೋಷಕರು ಮೈಸೂರು ರಸ್ತೆಯ ಆರ್.ವಿ ಕಾಲೇಜಿಗೆ ಸೇರಿಸಿದ್ರು. ಅಮೃತೇಶ್, R​.V.ಕಾಲೇಜಿನಲ್ಲಿ 3ನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ. ಹಾಸ್ಟೆಲ್​ನಿಂದ ಕಾಲೇಜಿಗೆ ಹೋಗಿ ಬರುತ್ತಿದ್ದ. ಅಮೃತೇಶ್

ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಕೆರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ Read More »

ಕಿರುತೆರೆ ನಟಿ ಪವಿತ್ರ ಜಯರಾಂ ಅಪಘಾತದಲ್ಲಿ ಸಾವು

ಸಮಗ್ರ ನ್ಯೂಸ್: ಕನ್ನಡ ಮತ್ತು ತೆಲುಗು ಧಾರವಾಹಿಗಳಲ್ಲಿ ನಟಿಸಿ ಜನಪ್ರಿಯರಾಗಿರುವ ಕನ್ನಡತಿ ಪವಿತ್ರ ಜಯರಾಂ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ಕರ್ನೂಲು ಸಮೀಪದಲ್ಲಿ ಇಂದು ಮುಂಜಾನೆ ಅಪಘಾತವಾಗಿದೆ ಎಂದು ವರದಿಯಾಗಿದೆ. ಇವರು ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು. ಇವರು ಹೆಚ್ಚು ಫೇಮಸ್‌ ಆದದ್ದು ತೆಲುಗಿನ

ಕಿರುತೆರೆ ನಟಿ ಪವಿತ್ರ ಜಯರಾಂ ಅಪಘಾತದಲ್ಲಿ ಸಾವು Read More »

ಕಡಬ: ಕುಮಾರಧಾರ ಒಡಲಲ್ಲಿ ಅಕ್ರಮ ಮರಳುಗಾರಿಕೆ| ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು ಸೇರಿ‌ ಇಬ್ಬರ ಮೇಲೆ ಎಫ್ಐಆರ್| ಉದ್ದೇಶ ಪೂರ್ವಕ ಕೇಸು ದಾಖಲು ಎಂದ ಮರಳು ವ್ಯಾಪಾರಸ್ಥರ ಸಂಘ

ಸಮಗ್ರ ನ್ಯೂಸ್: ಕುಮಾರಧಾರ ನದಿಯಲ್ಲಿ ಮರಳು ಕಳ್ಳತನ ನಡೆಸುತ್ತಿದ್ದ ಬೃಹತ್ ಜಾಲವೊಂದನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಮೇ 7 ರಂದು ಬೇಧಿಸಿದ್ದಾರೆ. ಜಿಲ್ಲೆಯ ಪ್ರತಿಷ್ಟಿತ ಜನ ಪ್ರತಿನಿಧಿಯೊಬ್ಬರ ಕೃಪಕಟಾಕ್ಷದಲ್ಲಿ ಬಿಜೆಪಿಯ ಪ್ರಭಾವಿ ನಾಯಕರೊಬ್ಬರ ನೇತೃತ್ವದಲ್ಲಿ ಕಡಬದ ಕುದ್ಮಾರಿನಲ್ಲಿ ಈ ಬೃಹತ್ ಮರಳು ದಂಧೆ ಕಳೆದ ಹಲವಾರು ಸಮಯದಿಂದ ಎಗ್ಗಿಲ್ಲದೆ ನಡೆಯುತಿತ್ತು. ಈ ಬಗ್ಗೆ ಹಲವು ಬಾರಿ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರೂ, ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಪುತ್ತೂರು ಎಪಿಎಂಸಿಯ ಮಾಜಿ ಅಧ್ಯಕ್ಷ ಜಿಲ್ಲೆಯ ಪ್ರಭಾವಿ ಬಿಜೆಪಿ

ಕಡಬ: ಕುಮಾರಧಾರ ಒಡಲಲ್ಲಿ ಅಕ್ರಮ ಮರಳುಗಾರಿಕೆ| ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು ಸೇರಿ‌ ಇಬ್ಬರ ಮೇಲೆ ಎಫ್ಐಆರ್| ಉದ್ದೇಶ ಪೂರ್ವಕ ಕೇಸು ದಾಖಲು ಎಂದ ಮರಳು ವ್ಯಾಪಾರಸ್ಥರ ಸಂಘ Read More »