ಕ್ರೈಂ

ಪ್ರವೀಣ್ ಹತ್ಯೆ ಪ್ರಕರಣ| ಮತ್ತಿಬ್ಬರು ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಾಲ್(28) ಹಾಗೂ ಸುಳ್ಯ ನಾವೂರು ಮಹಾಮ್ಮಾಯಿ ದೇವಸ್ಥಾನದ ಬಳಿಯ ನಿವಾಸಿ ಆಬಿದ್(22) ಎಂದು ಗುರುತಿಸಲಾಗಿದೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ. ಎಲ್ಲಾ ಆರೋಪಿಗಳ ಮಾಹಿತಿ ಲಭ್ಯವಾಗಿದ್ದು, ಉಳಿದವರು ಸದ್ಯದಲ್ಲೇ ಬಂಧನವಾಗಲಿದ್ದಾರೆ ಎಂದು ಎಸ್.ಪಿ ಋಷಿಕೇಶ್ ಸೊನಾವಣೆ‌ ತಿಳಿಸಿದ್ದಾರೆ.

ಪ್ರವೀಣ್ ಹತ್ಯೆ ಪ್ರಕರಣ| ಮತ್ತಿಬ್ಬರು ಆರೋಪಿಗಳು ಅರೆಸ್ಟ್ Read More »

ಪ್ರವೀಣ್ ಹತ್ಯೆ ಪ್ರಕರಣ; ಆರೋಪಿ ಶಫೀಕ್ ಗೆ ಮತ್ತೆ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಶಫೀಕ್ ಬೆಳ್ಳಾರೆಯನ್ನು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಶಫೀಕ್ ಬೆಳ್ಳಾರೆಯನ್ನು ಆ.6 ಸಂಜೆ ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ವೇಳೆ ನ್ಯಾಯಾಧೀಶರು ಆರೋಪಿಗೆ 15 ದಿನಗಳ ವಿಚಾರಣಾ ಹಂತದ ನ್ಯಾಯಾಂಗ ವಿಧಿಸಿದ್ದಾರೆ. ಈ ಹಿಂದೆ ನ್ಯಾಯಾಂಗ ಬಂಧನದಲ್ಲಿದ್ದ ಶಫೀಕ್ ಬೆಳ್ಳಾರೆ ಮತ್ತು ಜಾಕೀರ್ ಸವಣೂರು ಅವರಿಬ್ಬರನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದರು. 5 ದಿನ

ಪ್ರವೀಣ್ ಹತ್ಯೆ ಪ್ರಕರಣ; ಆರೋಪಿ ಶಫೀಕ್ ಗೆ ಮತ್ತೆ ನ್ಯಾಯಾಂಗ ಬಂಧನ Read More »

ಬಂಟ್ವಾಳ; ಚರಂಡಿ ನೀರಿಗೆ ಬಿದ್ದು ವ್ಯಕ್ತಿ ಮೃತ್ಯು

ಬಂಟ್ವಾಳ : ಚರಂಡಿಯ ನೀರಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ವಿಟ್ಲ ಪೇಟೆಯಲ್ಲಿ ರವಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮೃತರನ್ನು ಚಂದಳಿಕೆ ನಿವಾಸಿ ಪಕ್ರು ಎಂದು ಗುರುತಿಸಲಾಗಿದೆ. ಅವರ ಮೃತದೇಹ ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ ಬಳಿ ವಿಟ್ಲ- ಕಾಸರಗೋಡು ಮುಖ್ಯ ರಸ್ತೆಯಲ್ಲಿನ ತೆರೆದ ಸ್ಥಿತಿಯಲ್ಲಿದ್ದ ಚರಂಡಿಗೆ ಕವುಚಿ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮದ್ಯಪಾನದ ಅಮಲಿನಲ್ಲಿ ನಿಯಂತ್ರಣ ಕಳೆದುಕೊಂಡ ಪಕ್ರು ಸ್ಲ್ಯಾಬ್ ತೆರೆದ ಸ್ಥಿತಿಯಲ್ಲಿದ್ದ ಚರಂಡಿಗೆ ಆಕಸ್ಮಿಕವಾಗಿ ಬಿದ್ದಿರಬಹುದೆಂದು ಶಂಕಿಸಲಾಗಿದೆ. ಚರಂಡಿಯಲ್ಲಿ ಮಳೆ ನೀರು ತುಂಬಿದ್ದು, ಕವುಚಿ

ಬಂಟ್ವಾಳ; ಚರಂಡಿ ನೀರಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಟಾಟಾ ಸುಮೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ ಗಾಯ

ಸಮಗ್ರ ನ್ಯೂಸ್ : ಜಿಲ್ಲೆಯ ನೆಲಮಂಗಲದ ಬಳಿಯಲ್ಲಿ ಟಾಟಾ ಸುಮೋ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಸ್ಥಳದಲ್ಲೇ ಓರ್ವ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕಂಬಳ ಬಳಿಯಲ್ಲಿ ಟಾಟಾ ಸುಮೋ ಪಲ್ಟಿಯಾದ ಪರಿಣಾಮ, ಕಾರಿನಲ್ಲಿದ್ದಂತ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ವ್ಯಕ್ತಿಯನ್ನು ವಿಜಯಪುರ ಜಿಲ್ಲೆಯ ತಾಳಿಕೋಟೆ ಮೂಲದ ಮೊಹಮ್ಮದ್ (73) ಎಂಬುದಾಗಿ ಗುರುತಿಸಲಾಗಿದೆ.

ಟಾಟಾ ಸುಮೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ ಗಾಯ Read More »

ದರ್ಗಾಕ್ಕೆ ಕಾರು ಡಿಕ್ಕಿ, ಸ್ಥಳದಲ್ಲೇ ಮೂವರು ಸಾವು

ಸಮಗ್ರ ನ್ಯೂಸ್ : ಧಾರವಾಡ ಜಿಲ್ಲೆಯ ಕುಂದಗೊಳದ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದರ್ಗಾಕ್ಕೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ಅ ನಡೆದಿದೆ. ಕುಂದಗೊಳದ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಜಿಗಳೂರು ಬಳಿಯಿರುವ ದರ್ಗಾವೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸಂಬಂಧಿಕರ ಮನೆಯ ಗೃಹಪ್ರವೇಶ ಮುಗಿಸಿ ಹುಬ್ಬಳ್ಳಿಯ ನವನಗರಕ್ಕೆ ವಾಪಸ್ ಬರುವ ವೇಳೆ ನಿಯಂತ್ರಣ ತಪ್ಪಿ ಪಕ್ಕದಲ್ಲಿದ್ದ ದರ್ಗಾಕ್ಕೆ ಕಾರು ಡಿಕ್ಕಿಯಾಗಿದೆ. ಈ ವೇಳೆ ಸ್ಥಳದಲ್ಲೇ

ದರ್ಗಾಕ್ಕೆ ಕಾರು ಡಿಕ್ಕಿ, ಸ್ಥಳದಲ್ಲೇ ಮೂವರು ಸಾವು Read More »

ಕೆಎಸ್ಆರ್ ಟಿಸಿ ಡಿಪೋ ವ್ಯವಸ್ಥಾಪಕ ಸಿಬ್ಬಂದಿ ತುಷಾರ್ ನಿಧನ

ದಾವಣಗೆರೆ : ಕೆಎಸ್‌ಆರ್‌ಟಿಸಿ ಬೆಂಗಳೂರು ಕೇಂದ್ರ ಘಟಕ ವ್ಯವಸ್ಥಾಪಕ ಎಚ್‌.ಸಿ. ತುಷಾರ್‌ (33) ಶುಕ್ರವಾರ ಬಸ್‌ ನಿಲ್ದಾಣದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಂಸ್ಥೆಯ ಸಿಬ್ಬಂದಿಯ ಹಳೆ ಪ್ರಕರಣವೊಂದರ ವಿಚಾರಣೆ ಸಂಬಂಧ ಶಿರಸಿಗೆ ಬಂದಿದ್ದ ಅವರು, ಬೆಂಗಳೂರಿಗೆ ವಾಪಸ್ಸಾಗುವಾಗ ಮಾರ್ಗ ಮಧ್ಯೆ ದಾವಣಗೆರೆಯ ಬಸ್‌ ನಿಲ್ದಾಣದಲ್ಲಿ ನಿಧನರಾಗಿದ್ದಾರೆ. ತಲೆ ಸುತ್ತು ಕಾಣಿಸಿಕೊಂಡು ಆಯಾಸಗೊಂಡಿದ್ದ ಅವರನ್ನು ಬಸ್‌ನ ನಿರ್ವಾಹಕರು ಆಸ್ಪತ್ರೆಗೆ ಕರೆದೊಯ್ಯಲು ಅಣಿಯಾಗುತ್ತಿದ್ದಂತೆಯೇ, ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ ಹಾಗೂ 4 ತಿಂಗಳ ಮಗು ಇದ್ದು, ಮೃತದೇಹವನ್ನು ಬೆಂಗಳೂರಿಗೆ ಕಳುಹಿಸಲಾಗಿದೆ.

ಕೆಎಸ್ಆರ್ ಟಿಸಿ ಡಿಪೋ ವ್ಯವಸ್ಥಾಪಕ ಸಿಬ್ಬಂದಿ ತುಷಾರ್ ನಿಧನ Read More »

ಉಡುಪಿ: ಚಾಕಲೇಟ್ ನುಂಗಿ ಬಾಲಕಿ ಸಾವನ್ನಪ್ಪಿದ್ದಾಳೆನ್ನಲಾದ ಪ್ರಕರಣಕ್ಕೆ ಟ್ವಿಸ್ಟ್| ಆಕೆ ನಿಜವಾಗ್ಲೂ ಸತ್ತಿದ್ದು ಹೇಗೆ ಗೊತ್ತಾ?

ಸಮಗ್ರ ನ್ಯೂಸ್: ಬೈಂದೂರಿನಲ್ಲಿ ಚಾಕಲೇಟ್ ನುಂಗಿ ಬಾಲಕಿ ಸಾವನ್ನಪ್ಪಿದ್ದಾಳೆನ್ನಲಾದ ಪ್ರಕರಣದ ವೈದ್ಯಕೀಯ ವರದಿ ಇದೀಗ ಬಂದಿದ್ದು, ಇದರಲ್ಲಿ ಆಕೆಯ ಸಾವಿಗೆ ಚಾಕಲೇಟ್‌ ನುಂಗಿರುವುದು ಕಾರಣವಲ್ಲ, ಬದಲಾಗಿ ಆಕೆ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಉಪ್ಪುಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ, ಬೈಂದೂರು ಬಿಜೂರು ಗ್ರಾಮದ ಸುಪ್ರೀತಾ ಪೂಜಾರಿ ಅವರ ಪುತ್ರಿ ಸಮನ್ವಿ (6)ಮೃತ ಬಾಲಕಿ. ಈಕೆ ಜುಲೈ 20ರ ಬೆಳಗ್ಗೆ ಶಾಲೆಗೆ ಹೋಗಲು ನಿರಾಕರಿಸಿದ್ದಕ್ಕೆ ತಾಯಿ ಚಾಕಲೇಟ್ ನೀಡಿ ಶಾಲೆಗೆ ಹೋಗುವಂತೆ ಪ್ರೇರೇಪಿಸಿದ್ದರು. ಚಾಕಲೇಟ್

ಉಡುಪಿ: ಚಾಕಲೇಟ್ ನುಂಗಿ ಬಾಲಕಿ ಸಾವನ್ನಪ್ಪಿದ್ದಾಳೆನ್ನಲಾದ ಪ್ರಕರಣಕ್ಕೆ ಟ್ವಿಸ್ಟ್| ಆಕೆ ನಿಜವಾಗ್ಲೂ ಸತ್ತಿದ್ದು ಹೇಗೆ ಗೊತ್ತಾ? Read More »

ಮತ್ತೋರ್ವ ಹಿಂದೂ ಕಾರ್ಯಕರ್ತನಿಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್; ಆರ್ ಎಸ್ ಎಸ್ ಪ್ರಮುಖರೊಬ್ಬರ ಮುಖಕ್ಕೆ ಚಾಕುವಿನಿಂದ ಇರಿದ ಘಟನೆ ಕೋಲಾರ ಜಿಲ್ಲೆಯ ಮಾಲೂರಿನ ಮಾರಿಕಾಂಬ ರಸ್ತೆಯಲ್ಲಿ ನಡೆದಿದೆ. ಆರ್ ಎಸ್ ಎಸ್ ಪ್ರಮುಖ ರವಿ ಚಾಕು ಇರಿತದಿಂದ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಟಚ್ ಆಗಿದ್ದಕ್ಕೆ ಅಂಗಡಿಯ ಮುಂದೆ ಎರಡು ಗುಂಪುಗಳ ನಡುವೆ ಜಗಳ ಆರಂಭವಾಗಿದೆ. ಈ ವೇಳೆ ಜಗಳ ಬಿಡಿಸಲು ಮುಂದಾದ ರವಿ ಮೇಲೆ ಇಬ್ಬರು ವ್ಯಕ್ತಿಗಳು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ರವಿ ಅವರ ಮುಖಕ್ಕೆ ಚಾಕುವಿನಿಂದ ಇರಿಯಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ

ಮತ್ತೋರ್ವ ಹಿಂದೂ ಕಾರ್ಯಕರ್ತನಿಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು Read More »

ಪುತ್ತೂರು; ಮಹಡಿಯಿಂದ ಬಿದ್ದು 9ನೇ ತರಗತಿ ವಿದ್ಯಾರ್ಥಿ ಮೃತ್ಯು

ಪುತ್ತೂರು: ನಗರದ ಬೊಳುವಾರು ವಸತಿ ಸಮುಚ್ಚಾಯವೊಂದರ ಬಿ ಬ್ಲಾಕ್ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡು ವಿದ್ಯಾರ್ಥಿ  ಮೃತಪಟ್ಟ ಘಟನೆಯೊಂದು ನಡೆದಿದೆ. ಬೊಳುವಾರು ದುರ್ಗಾಪರಮೇಶ್ವರಿ ಮಲರಾಯ ಸಪರಿವಾರ ಕ್ಷೇತ್ರದ ವಿಶ್ವಸ್ಥ ಮಂಡಳಿ ಅಧ್ಯಕ್ಷ, ಸ್ಥಳೀಯ ನಿವಾಸಿ ಮನೋಹರ ರೈ ಅವರ ಪುತ್ರ, ಸುದಾನ ವಸತಿಯುತ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಶಾನ್ ರೈ (15) ಮೃತ ಬಾಲಕ. ಸುಶಾನ್ ರೈ ಶಾಲೆಯಿಂದ ಮನೆಗೆ ಹೋಗದೆ ಬೊಳುವಾರು ವಸತಿ ಸಮುಚ್ಚಾಯಕ್ಕೆ ತೆರಳಿದ್ದ. ಸಮುಚ್ಚಾಯದ ಕೆಳಗೆ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಆತ

ಪುತ್ತೂರು; ಮಹಡಿಯಿಂದ ಬಿದ್ದು 9ನೇ ತರಗತಿ ವಿದ್ಯಾರ್ಥಿ ಮೃತ್ಯು Read More »

ಉದ್ಯೋಗ ಸಿಗಲಿಲ್ಲವೆಂದು ಮನನೊಂದು ಯುವಕ ಆತ್ಮಹತ್ಯೆ

ಚಿಕ್ಕಬಳ್ಳಾಪುರ : ಕೆಲಸ ಸಿಗಲಿಲ್ಲ ಎಂದು ಮನನೊಂದು ಯುವಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಜಿಲ್ಲೆಯ ಚಿಂತಾಮಣಿ ತಾಲೂಕಿನ ಯಗವದೇವಪಲ್ಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಶ್ರೀಕಾಂತ್ (30) ನೇಣಿಗೆ ಶರಣಾದ ಯುವಕ ಎಂದು ತಿಳಿದು ಬಂದಿದೆ. ಮೃತ ಶ್ರೀಕಾಂತ್ ಬಿ.ಕಾಂ ವ್ಯಾಸಂಗ ಮಾಡಿದ್ದು, ಕೋವಿಡ್ ನಂತರ ಉದ್ಯೋಗಕ್ಕಾಗಿ ಸಾಕಷ್ಟು ಪ್ರಯತ್ನ ನಡೆಸಿದ್ದಾನೆ. ಆದರೆ, ವಿದ್ಯಾಭ್ಯಾಸಕ್ಕೆ ತಕ್ಕಂತೆ ಉದ್ಯೋಗ ಸಿಗದ ಹಿನ್ನಲೆ ಖಿನ್ನತೆಗೆ ಒಳಗಾಗಿದ್ದ ಎಂದು ತಿಳಿದು ಬಂದಿದೆ. ಕಳೆದ ದಿನ ಮನೆಯಿಂದ ಹೊರಟು ಎಲ್ಲಿಗೋ

ಉದ್ಯೋಗ ಸಿಗಲಿಲ್ಲವೆಂದು ಮನನೊಂದು ಯುವಕ ಆತ್ಮಹತ್ಯೆ Read More »