ಕಬ್ಬಿನ ಹಾಲು ತೆಗೆಯುವ ಯಂತ್ರಕ್ಕೆ ಬುರ್ಖಾ ಸಿಲುಕಿ ಮಹಿಳೆ ಸಾವು
ಸಮಗ್ರ ನ್ಯೂಸ್: ಕಬ್ಬಿನ ಹಾಲು ತೆಗೆಯುವ ಯಂತ್ರಕ್ಕೆ ತಾವು ಧರಿಸಿದ್ದ ಬಟ್ಟೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಆಕಸ್ಮಿಕ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ರಾಬರ್ಟ್ ಸನ್ ಪೇಟೆಯ ತಹಶೀಲ್ದಾರ್ ಕಚೇರಿ ಬಳಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಕೌಸರ್ (37) ಮೃತಪಟ್ಟ ಮಹಿಳೆ. ಕಬ್ಬಿನ ಹಾಲು ತೆಗೆಯುವ ವೇಳೆ ಮಹಿಳೆ ಧರಿಸಿದ್ದ ಬುರ್ಕಾ ಯಂತ್ರಕ್ಕೆ ಸಿಲುಕಿದ ಪರಿಣಾಮ ಕುತ್ತಿಗೆ ಬಿಗಿದು ಸಾವು ಸಂಭವಿಸಿದೆ. ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಬ್ಬಿನ ಹಾಲು ತೆಗೆಯುವ ಯಂತ್ರಕ್ಕೆ ಬುರ್ಖಾ ಸಿಲುಕಿ ಮಹಿಳೆ ಸಾವು Read More »









