ಕ್ರೈಂ

ಉಡುಪಿ: ನಿಶ್ಚಿತಾರ್ಥ ಬಂದಿದ್ದ ತಾಯಿ ಮಗು ನಿಗೂಢ ನಾಪತ್ತೆ

ಉಡುಪಿ: ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಹೇರೂರು ಗ್ರಾಮದಲ್ಲಿರುವ ಚಿಕ್ಕಪ್ಪನ ಮನೆಗೆ ಬಂದಿದ್ದನಿಗೂಢವಾಗಿ ನಾಪತ್ತೆಯಾದ ಘಟನೆ ನಡೆದಿದೆ. ಮಂಗಳೂರಿನ ಉಳ್ಳಾಲ ಬಂಡಿಕೊಟ್ಯ ನಿವಾಸಿ ಪ್ರಥ್ವಿನಿ (32) ಎನ್ನುವ ಮಹಿಳೆ ತನ್ನ ನಾಲ್ಕೂವರೆ ವರ್ಷದ ಮಗಳು ಪುನರ್ವಿಯೊಂದಿಗೆ ಮೇ 13ರಿಂದ ನಾಪತ್ತೆಯಾಗಿದ್ದಾರೆ. 5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ದಪ್ಪ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್‌ ಠಾಣೆ (0820-2561044), ಪೊಲೀಸ್‌ ವೃತ್ತ

ಉಡುಪಿ: ನಿಶ್ಚಿತಾರ್ಥ ಬಂದಿದ್ದ ತಾಯಿ ಮಗು ನಿಗೂಢ ನಾಪತ್ತೆ Read More »

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರೋಪಿ‌ಎಜಿ ಪೆರಾರಿವಾಲನ್ ಬಿಡುಗಡೆಗೆ ಸುಪ್ರೀಂ ಸೂಚನೆ

ಸಮಗ್ರ ನ್ಯೂಸ್: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬರಾದ ಎಜಿ ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ. ‘ಅನುಚ್ಛೇದ 142 ಅನ್ನು ಚಲಾಯಿಸುವ ಮೂಲಕ ಅಪರಾಧಿಯನ್ನು ಬಿಡುಗಡೆ ಮಾಡುವುದು ಸೂಕ್ತವಾಗಿದೆ’ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ನಾಗೇಶ್ವರ ರಾವ್, ಬಿ.ಆರ್.ಬವಾಯಿ ಮತ್ತು ಎ.ಎಸ್.ಬೋಪಣ್ಣ ಸೇರಿದಂತೆ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠವು ಬುಧವಾರ ಈ ತೀರ್ಪನ್ನು ಪ್ರಕಟಿಸಿದೆ. ಮಾರ್ಚ್ 9, 2022 ರಂದು ಆದೇಶದ ಮೂಲಕ, ಸುಪ್ರೀಂ ಕೋರ್ಟ್ ಎಜಿ

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರೋಪಿ‌ಎಜಿ ಪೆರಾರಿವಾಲನ್ ಬಿಡುಗಡೆಗೆ ಸುಪ್ರೀಂ ಸೂಚನೆ Read More »

ವಿಟ್ಲ: ಹೃದಯಾಘಾತದಿಂದ ಹೈಸ್ಕೂಲ್ ವಿದ್ಯಾರ್ಥಿನಿ ಸಾವು

ಸಮಗ್ರ ನ್ಯೂಸ್: 9ನೇ ತರಗತಿಯ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಅಳಿಕೆ ಗ್ರಾಮದ ಚಂದಾಡಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಅನ್ವಿತ ಹೆಗ್ಡೆ ಎಂದು ಗುರುತಿಸಲಾಗಿದೆ. ಈಕೆ ಅಳಿಕೆ ಗ್ರಾಮದ ಚಂದಾಡಿ ನಿವಾಸಿಗಳಾದ ವಿನಯ್ ಹೆಗ್ಡೆ ಹಾಗೂ ಸಾಯಿಗೀತಾ ದಂಪತಿಗಳ ಪುತ್ರಿಯಾಗಿದ್ದು, ನಿನ್ನೆ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಇದ್ದ ಓರ್ವ ಮಗಳನ್ನು ಕಳೆದುಕೊಂಡ ಹೆತ್ತವರ ದುಃಖ ಮುಗಿಲುಮುಟ್ಟಿದೆ.

ವಿಟ್ಲ: ಹೃದಯಾಘಾತದಿಂದ ಹೈಸ್ಕೂಲ್ ವಿದ್ಯಾರ್ಥಿನಿ ಸಾವು Read More »

ಪುತ್ತೂರು: ರೈಲು ಬಡಿದು ಯುವಕ ದುರ್ಮರಣ

ಸಮಗ್ರ ನ್ಯೂಸ್: ಪುತ್ತೂರು ಕಬಕ ಸಮೀಪದ ಮಿತ್ತೂರಿನಲ್ಲಿ ರೈಲು ಬಡಿದು ಆಲಂಕಾರು ಸಮೀಪದ ಕೊಯಿಲದ ಯುವಕ ಸಾವನ್ನಪ್ಪಿರುವ ಘಟನೆ ಮೇ 15ರಂದು ರಾತ್ರಿ ನಡೆದಿದೆ. ಕಡಬ ತಾಲೂಕಿನ ಕೊಯಿಲ ಗ್ರಾಮದ ಪುಣಿಕೆತ್ತಡಿ ನಿವಾಸಿ ಜಗದೀಶ ಹಾಗೂ ಹೇಮಾವತಿ ದಂಪತಿ ಪುತ್ರ ಕಾರ್ತಿಕ್(24ವ.)ಮೃತಪಟ್ಟ ದುರ್ದೈವಿ ಯುವಕ. ಮಿತ್ತೂರುನಲ್ಲಿ ಕಿರು ಸೇತುವೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಮುಂಭಾಗದಿಂದ ಬರುತ್ತಿದ್ದ ರೈಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪುತ್ತೂರು: ರೈಲು ಬಡಿದು ಯುವಕ ದುರ್ಮರಣ Read More »

ಪಿ.ಚಿದಂಬರಂ ಗೆ ಮತ್ತೆ‌ ಇ.ಡಿ ಸಂಕಷ್ಟ| ಏಳು ಕಡೆ ದಾಳಿ ನಡೆಸಿದ ತನಿಖಾ ದಳ

ಸಮಗ್ರ ನ್ಯೂಸ್: ಕಾಂಗ್ರೆಸ್‌ನ ಹಿರಿಯ ನಾಯಕ ಪಿ. ಚಿದಂಬರಂ ನಿವಾಸದ ಮೇಲೆ ಕೇಂದ್ರ ತನಿಖಾ ದಳ ಮಂಗಳವಾರ ಬೆಳಗ್ಗೆ ದೆಹಲಿ, ಹೈದರಾಬಾದ್ ಮತ್ತು ಚೆನ್ನೈನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ವರದಿಗಳ ಪ್ರಕಾರ, ಈ ದಾಳಿಗಳು ಮಗ ಕಾರ್ತಿ ಚಿದಂಬರಂ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿವೆ. ಹಿಂದೆಯೂ ಅವರ ಆಸ್ತಿಗಳ ಮೇಲೆ ಸಿಬಿಐ ದಾಳಿ ನಡೆಸಿತ್ತು. ಹೊಸದಾಗಿ ಪ್ರಕರಣ ದಾಖಲಿಸಿದ್ದ ಸಿಬಿಐ ಅಧಿಕಾರಿಗಳು ಇಂದು ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಮನೆ ಮೇಲೆ ದಾಳಿ ನಡೆಸಿದ್ದಾರೆ. ದೆಹಲಿ,

ಪಿ.ಚಿದಂಬರಂ ಗೆ ಮತ್ತೆ‌ ಇ.ಡಿ ಸಂಕಷ್ಟ| ಏಳು ಕಡೆ ದಾಳಿ ನಡೆಸಿದ ತನಿಖಾ ದಳ Read More »

ಅನ್ಯಧರ್ಮೀಯನೊಂದಿಗೆ ಅನೈತಿಕ ಸಂಬಂಧ| ಪ್ರಿಯಕರನಿಂದಲೇ ಕೊಲೆಯಾದಳಾ ಮಹಿಳೆ?

ಸಮಗ್ರ ನ್ಯೂಸ್: ಗೃಹಿಣಿಯೊಬ್ಬಳು ಮನೆಯ ಮುಂದೆಯೇ ಬರ್ಬರವಾಗಿ ಕೊಲೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ವಡಗೆರೆ ಗ್ರಾಮದಲ್ಲಿ ನಡೆದಿದೆ. ಭಾಗ್ಯಶ್ರೀ(35) ಕೊಲೆಯಾದ ದುರ್ದೈವಿ. ಪತಿ ಚನ್ನಬಸವಪ್ಪ ಮತ್ತು ಇಬ್ಬರು ಮಕ್ಕಳೊಂದಿಗೆ ಜೀವನ ಸಾಗಿಸುತ್ತಿದ್ದ ಭಾಗ್ಯಶ್ರೀ ಇಂದು ಬೆಳ್ಳಂಬೆಳಗ್ಗೆ ಕೊಲೆಯಾಗಿದ್ದಾಳೆ. ಮೃತ ಭಾಗ್ಯಶ್ರೀ ಇದೇ ಗ್ರಾಮದ ಮುಸ್ಲಿಂ ಸಮುದಾಯದ ರಿಯಾಜ್ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದಳು ಎಂದು ಕೆಲವರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದೇ ಸಲುಗೆಯಲ್ಲಿ ದುಡ್ಡು ಕಾಸು ಕೊಟ್ಟು ತೆಗೆದುಕೊಳ್ಳುವ ವ್ಯವಹಾರ ನಡೆಸುತ್ತಿದ್ದರು. ಆದರೆ ಇತ್ತೀಚೆಗೆ

ಅನ್ಯಧರ್ಮೀಯನೊಂದಿಗೆ ಅನೈತಿಕ ಸಂಬಂಧ| ಪ್ರಿಯಕರನಿಂದಲೇ ಕೊಲೆಯಾದಳಾ ಮಹಿಳೆ? Read More »

‘ದೊರೆಸಾನಿ’, ‘ಗೀತಾ’ ಧಾರಾವಾಹಿ ನಟಿ ಚೇತನಾ ರಾಜ್ ದುರಂತ ಸಾವು

ಸಮಗ್ರ ನ್ಯೂಸ್: ದೊರೆಸಾನಿ, ಗೀತಾ ಧಾರಾವಾಹಿಗಳಲ್ಲಿ ಅಭಿನಯಿಸುತ್ತಿದ್ದ ಯುವ ಕಿರುತೆರೆ ನಟಿ ಚೇತನಾ ರಾಜ್​ (21) ನಗರದ ನವರಂಗ್ ಸರ್ಕಲ್​ನಲ್ಲಿರುವ ಡಾ.ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಫ್ಯಾಟ್ ಸರ್ಜರಿ ವೇಳೆ ನಟಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಚೇತನಾ ಕುಟುಂಬ ಬೆಂಗಳೂರು ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ ವಾಸವಿದೆ.ವೈದ್ಯರ ನಿರ್ಲಕ್ಷ್ಯದಿಂದ ಚೇತನಾ ಸಾವಿಗೀಡಾಗಿದ್ದಾಳೆಂದು ಕುಟುಂಬ ಆರೋಪ ಮಾಡಿದೆ. ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಅಗತ್ಯ ಸಲಕರಣೆ ಹಾಗೂ ಪೋಷಕರ ಒಪ್ಪಿಗೆ ಇಲ್ಲದೆ ಸರ್ಜರಿಗೆ

‘ದೊರೆಸಾನಿ’, ‘ಗೀತಾ’ ಧಾರಾವಾಹಿ ನಟಿ ಚೇತನಾ ರಾಜ್ ದುರಂತ ಸಾವು Read More »

ಮಂಗಳೂರು ರೈಲ್ವೆ ನಿಲ್ದಾಣದಲ್ಲಿ 3.37ಕೆಜಿ ಗಾಂಜಾ ಸಹಿತ ಇಬ್ಬರು ಅಂದರ್

ಸಮಗ್ರ ನ್ಯೂಸ್: ಮಂಗಳೂರು ನಗರದ ಸೆಂಟ್ರಲ್‌ ರೈಲ್ವೇ ನಿಲ್ದಾಣ ಬಳಿ 3. 375 ಕೆ.ಜಿ. ಗಾಂಜಾ ಸಹಿತ ಇಬ್ಬರನ್ನು ಮಂಗಳೂರು ದಕ್ಷಿಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮೇ 5ರಂದು ರಾತ್ರಿ 9 ಗಂಟೆಯ ಸುಮಾರಿಗೆ ಕಾರ್ಯಾಚರಣೆ ನಡೆಸಿದ ಪೊಲೀಸ್‌ ಉಪನಿರೀಕ್ಷಕ ಶೀತಲ್‌ ಅಲಗೂರ್‌ ಅವರ ನೇತೃತ್ವದ ತಂಡ ಸೆಂಟ್ರಲ್‌ ರೈಲ್ವೇ ಕಾಲನಿಯ 2ನೇ ಗೇಟ್‌ ಬಳಿ ಕೇರಳದ ಮಹಮ್ಮದ್‌ ಮುಸ್ತಾಫ‌ ಮತ್ತು ಮಹಮ್ಮದ್‌ ಜಜಿಲ್‌ನನ್ನು ಬಂಧಿಸಿದೆ.

ಮಂಗಳೂರು ರೈಲ್ವೆ ನಿಲ್ದಾಣದಲ್ಲಿ 3.37ಕೆಜಿ ಗಾಂಜಾ ಸಹಿತ ಇಬ್ಬರು ಅಂದರ್ Read More »

ಕಡಬ: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಸ್ವಲ್ಪದರಲ್ಲೇ ಪಾರು

ಸಮಗ್ರ ನ್ಯೂಸ್: ಚಲಿಸುತ್ತಿರುವ ಕಾರಿಗೆ ಏಕಾಏಕಿ ಬೆಂಕಿ ಹತ್ತಿಕೊಂಡ ಕಾರಣ ಕಾರು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದಲ್ಲಿ ಮೇ.14 ರ ರಾತ್ರಿ ನಡೆದಿದೆ. ಕೊಂಬಾರು ಗ್ರಾಮದ ಪೆರುಂದೋಡಿ ಕಟ್ಟೆ ಎಂಬಲ್ಲಿ ಘಟನೆ ನಡೆದಿದ್ದು ಝೈಲೋ ಕಾರು ಬೆಂಕಿಗಾಹುತಿಯಾಗಿದೆ. ಪಟ್ರಮೆ ನಿವಾಸಿ ಆನಂದ ಗೌಡ ಎಂಬವರು ಕುಟುಂಬ ಸದಸ್ಯರ ಜತೆಗೆ ಸಂಬಂಧಿಕರಾದ ಕೊಂಬಾರು ಕಟ್ಟೆ ಸೋಮಪ್ಪ ಗೌಡ ಎಂಬವರ ಮನೆಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಕಾರು ಪೆರುಂದೋಡಿ ಕಟ್ಟೆ ತಲುಪುತ್ತಲೇ ಕಾರಿನಲ್ಲಿ

ಕಡಬ: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಸ್ವಲ್ಪದರಲ್ಲೇ ಪಾರು Read More »

ಪುತ್ತೂರು: ಅಪ್ರಾಪ್ತ ಬಾಲಕನನ್ನು ಅಪಹರಿಸಿ ಅತ್ಯಾಚಾರ ಮಾಡಿದ ಪ್ರಕರಣ| ಆರೋಪಿಯನ್ನು ಬಂಧಿಸಿದ ಸಂಪ್ಯ ಪೊಲೀಸರು

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಂಪ್ಯ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾಸರಗೋಡು ಜಿಲ್ಲೆಯ ನೆಕ್ರಾಜೆ ನಿವಾಸಿ ಶ್ರೀಜಿತ್(27) ಎಂದು ತಿಳಿದುಬಂದಿದೆ. ಏಪ್ರಿಲ್ 22 ರಂದು ಮನೆಯಿಂದ ಅಂಗಡಿಗೆ ತೆರಳಿ ವಾಪಾಸಾಗುತ್ತಿದ್ದ ಅಪ್ರಾಪ್ತ ಬಾಲಕನನ್ನು, ಬೈಕ್ ನಲ್ಲಿ ಬಂದ ಆರೋಪಿ, ನಿನ್ನನ್ನು ಅಜ್ಜಿ ಮನೆಗೆ ಬಿಡುತ್ತೇನೆ ಎಂದು ಒತ್ತಾಯಿಸಿ ಕರೆದುಕೊಂಡು ಹೋಗಿದ್ದ. ಬಾಲಕ ಬೈಕ್ ನಲ್ಲಿ ಕುಳಿತುಕೊಂಡ ನಂತರ ಬಾಲಕನನ್ನು ಈಶ್ವರಮಂಗಲ ಕಡೆ ಕರೆದುಕೊಂಡು ಹೋಗಿದ್ದು, ದಾರಿಮದ್ಯೆ ಕಾಡಿಗೆ

ಪುತ್ತೂರು: ಅಪ್ರಾಪ್ತ ಬಾಲಕನನ್ನು ಅಪಹರಿಸಿ ಅತ್ಯಾಚಾರ ಮಾಡಿದ ಪ್ರಕರಣ| ಆರೋಪಿಯನ್ನು ಬಂಧಿಸಿದ ಸಂಪ್ಯ ಪೊಲೀಸರು Read More »