ಕ್ರೈಂ

ಪಹಲ್ಗಾಮ್ ಉಗ್ರ ದಾಳಿ ಪ್ರಕರಣ| ಮೃತರ ಸಂಖ್ಯೆ 27ಕ್ಕೆ ಏರಿಕೆ

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದ ಪಹಲ್ಗಮ್‌ ಬೈಸರನ್ ಕಣಿವೆಯ ಬಳಿ ಇಂದು ಉಗ್ರರು ದಾಳಿ ನಡೆಸಿದ್ದು, ಅಡಗಿ ಕುಳಿತಿರುವ ಉಗ್ರರು ಪ್ರವಾಸಿಗರ ಮೇಲೆ ಗುಂಡು ಹಾರಿಸಿದ್ದಾರೆ. ಈ ದಾಳಿಯಲ್ಲಿ ಶಿವಮ್ಮೊಗದ ಉದ್ಯಮಿ ಸೇರಿ 27ಕ್ಕೂ ಹೆಚ್ಚು ಪ್ರವಾಸಿಗರು ಸಾವನ್ನಪ್ಪಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಶಿವಮೊಗ್ಗದ ಮಂಜುನಾಥ್ ಎಂಬುವವರು, ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಆದರೆ ಇವರೊಂದಿಗೆ ಪ್ರವಾಸಕ್ಕೆ ತೆರಳಿದ ಇವರ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ. ಕಾಶ್ಮೀರಕ್ಕೆ ಭೇಟಿ ನೀಡಿದ್ದ 27ಕ್ಕೂ ಹೆಚ್ಚು ಪ್ರವಾಸಿಗರು ಸಾಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. […]

ಪಹಲ್ಗಾಮ್ ಉಗ್ರ ದಾಳಿ ಪ್ರಕರಣ| ಮೃತರ ಸಂಖ್ಯೆ 27ಕ್ಕೆ ಏರಿಕೆ Read More »

ಜಮ್ಮುವಿನಲ್ಲಿ ಪ್ರವಾಸಿಗರ ಮೇಲೆ ಉಗ್ರರಿಂದ ಗುಂಡಿನ ದಾಳಿ| ಕನ್ನಡಿಗ ಸೇರಿ ಇಬ್ಬರು ‌ಹತ; ಹಲವರಿಗೆ ಗಾಯ

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪಹಲ್ಗಾಮ್ ನಲ್ಲಿ ನಡೆದಿದೆ. ಕಾಲ್ನಡಿಗೆ ಮೂಲಕ ಪಹಲ್ಗಾಮ್ ಪ್ರದೇಶಕ್ಕೆ ತೆರಳುತ್ತಿದ್ದ ಪ್ರವಾಸಿಗರ ಮೇಲೆ ನಾಲ್ವರು ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಸೇನೆ ಸಮವಸ್ತ್ರದಲ್ಲಿ ಬಂದು ಈ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಉಗ್ರರ ದಾಳಿಯಲ್ಲಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ್ದಾರೆ. ೧೨ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಗ್ರರ ದಾಳಿ ಬೆನ್ನಲ್ಲೇ ಪಹಲ್ಗಾಮ್ ಪ್ರದೆಶವನ್ನು ಸೇನೆ ಸುತ್ತುವರೆದಿದ್ದು, ಉಗ್ರರ

ಜಮ್ಮುವಿನಲ್ಲಿ ಪ್ರವಾಸಿಗರ ಮೇಲೆ ಉಗ್ರರಿಂದ ಗುಂಡಿನ ದಾಳಿ| ಕನ್ನಡಿಗ ಸೇರಿ ಇಬ್ಬರು ‌ಹತ; ಹಲವರಿಗೆ ಗಾಯ Read More »

ಮದುವೆಯಾದ ಮೂರೇ ತಿಂಗಳಿಗೆ ಮಂಗಳಮುಖಿ ಹತ್ಯೆ..!

ಸಮಗ್ರ ನ್ಯೂಸ್: ಬೆಂಗಳೂರಿನ ಗಾಯತ್ರಿ ಲೇಔಟ್ ನಲ್ಲಿ ಮಂಗಳಮುಖಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೋಟಿ ಕೋಟಿ ರೂಪಾಯಿ ಹಣವನ್ನು ಸಂಪಾದಿಸಿ ಕೋಟ್ಯಾಧಿಪತಿ ಆಗಿದ್ದ ಹಾಗೂ ಕನ್ನಡಪರ ಸಂಘಟನೆಗಳ ಮೂಲಕ ನಾಡಿನ ಸೇವೆಗೆ ಹೋರಾಡುತ್ತಿದ್ದ ಮಂಗಳಮುಖಿ ತನುಶ್ರೀ, ಮದುವೆ ಮಾಡಿಕೊಂಡು ಮೂರು ತಿಂಗಳಿಗೆ ಕೊಲೆ ಆಗಿದ್ದಾರೆ. ಮೂರು ತಿಂಗಳ ಹಿಂದೆ ಜಗನ್ನಾಥ್ ಎಂಬುವರ ಜೊತೆ ತನುಶ್ರೀ ವಿವಾಹವಾಗಿದ್ದು, ಹಣ ಮತ್ತು ಚಿನ್ನಾಭರಣಕ್ಕಾಗಿ ತನುಶ್ರೀಯನ್ನು ಮೂರು ದಿನಗಳ ಹಿಂದೆ ಕೆ.ಆರ್.ಪುರದ ಬಸವೇಶ್ವರ ನಗರದ ಗಾಯಿತ್ರಿ

ಮದುವೆಯಾದ ಮೂರೇ ತಿಂಗಳಿಗೆ ಮಂಗಳಮುಖಿ ಹತ್ಯೆ..! Read More »

ಪತ್ನಿಯಿಂದಲೇ ಹತ್ಯೆಗೀಡಾದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್

ಸಮಗ್ರ ನ್ಯೂಸ್: ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ನಡೆದಿದೆ. ಮೊದಲಿಗೆ ಪತ್ನಿಯೇ ಓಂ ಪ್ರಕಾಶ್ ಸಾವಿನ ಕುರಿತು ಮಾಹಿತಿ ನೀಡಿದ್ದರು. ಆದರೆ ಇದೀಗ ಸ್ವತಃ ಓಂ ಪ್ರಕಾಶ್ ಅವರ ಪತ್ನಿಯೇ ಓಂ ಪ್ರಕಾಶ್ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಕೊಲೆಯಾದ ಬಳಿಕ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು, ಕೊಡಲೇ ಅವರ

ಪತ್ನಿಯಿಂದಲೇ ಹತ್ಯೆಗೀಡಾದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ Read More »

ಮುತ್ತಪ್ಪ‌ ರೈ ಪುತ್ರ‌ ರಿಕ್ಕಿ ರೈ ಮೇಲೆ‌ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಸಮಗ್ರ ನ್ಯೂಸ್: ಮಾಜಿ ಡಾನ್​​ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿರುವಂತಹ ಘಟನೆ ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿಯೇ ನಡೆದಿದೆ. ಬಿಡದಿಯಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ರಿಕ್ಕಿ ರೈ, ಪ್ರತಿ ಬಾರಿ ಅವರೇ ಕಾರು ಚಲಾಯಿಸುತ್ತಿದ್ದರು. ಇದೇ ಕಾರಣಕ್ಕೆ ಡ್ರೈವಿಂಗ್ ಸೀಟ್​ ಟಾರ್ಗೆಟ್ ಮಾಡಿದ ದುಷ್ಕರ್ಮಿಗಳು ಮನೆಯ ಕೂಗಳತೆ ದೂರದಲ್ಲೇ ರಾತ್ರಿ ಸುಮಾರು 11.30ಕ್ಕೆ ರಿಕ್ಕಿ ರೈ ಮೇಲೆ ಎರಡು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ.

ಮುತ್ತಪ್ಪ‌ ರೈ ಪುತ್ರ‌ ರಿಕ್ಕಿ ರೈ ಮೇಲೆ‌ ದುಷ್ಕರ್ಮಿಗಳಿಂದ ಗುಂಡಿನ ದಾಳಿ Read More »

ಮಂಗಳೂರು: ಯುವತಿಯ ಮೇಲೆ ಗ್ಯಾಂಗ್ ರೇಪ್| ರಿಕ್ಷಾ ಚಾಲಕ ಮತ್ತು ಸ್ನೇಹಿತರಿಂದ ದುಷ್ಕೃತ್ಯ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದಲ್ಲಿರುವ ನೇತ್ರಾವತಿ ನದಿ ಕಿನಾರೆ ಗ್ರಾಮವೊಂದರಲ್ಲಿ ರಿಕ್ಷಾ ಚಾಲಕ ಸೇರಿ ಮೂವರು ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬುಧವಾರ (ಏ.16) ತಡರಾತ್ರಿ ನಡೆದಿದೆ. ಮುನ್ನೂರು ಗ್ರಾಮ ಮತ್ತು ಉಳ್ಳಾಲ ನಗರಸಭೆ ಗಡಿಯಲ್ಲಿರುವ ನೇತ್ರಾವತಿ ನದಿ ಸಮೀಪದ ಬೊಳ್ಳ ಹೌಸ್‌ ಬಳಿ ಘಟನೆ ನಡೆದಿದೆ. ಕುಂಪಲ ಬಗಂಬಿಲ ಮೂಲದ ರಿಕ್ಷಾ ಚಾಲಕ ಸೇರಿ ಮೂವರು ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದ್ದು, ರಿಕ್ಷಾ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ.ಬಂಗಾಳ ಮೂಲದ ಯುವತಿ

ಮಂಗಳೂರು: ಯುವತಿಯ ಮೇಲೆ ಗ್ಯಾಂಗ್ ರೇಪ್| ರಿಕ್ಷಾ ಚಾಲಕ ಮತ್ತು ಸ್ನೇಹಿತರಿಂದ ದುಷ್ಕೃತ್ಯ Read More »

ಮತ್ತೆ ಅರೆಸ್ಟ್ ಆದ ರಜತ್ ಕಿಶನ್| ಇತ್ತ ವಿನಯ್ ಗೌಡಗೂ ಸಂಕಷ್ಟ

ಸಮಗ್ರ ನ್ಯೂಸ್: ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲಿಗೆ ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ನನ್ನು ಪೊಲೀಸರು ಮತ್ತೆ ಬಂಧಿಸಿರುವ ಬೆನ್ನಲ್ಲೇ ವಿನಯ್ ಗೌಡಗೂ ಸಂಕಷ್ಟ ಎದುರಾಗಿದೆ. ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದಲ್ಲಿ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರೂ ವಿನಯ್ ಗೌಡ ಕೂಡ ಕೋರ್ಟ್ ಗೆ ಹಾಜರಾಗದೇ ಗೈರಾಗಿದ್ದಾರೆ. ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲು ಸೇರಿದ್ದ ವಿನಯ್ ಗೌಡ ಹಾಗೂ ರಜತ್ ಜಾಮೀನು ಮೇಲೆ ಬಿಡುಗಡೆಯಾಗಿದ್ದರು. ಜಾಮೀನು

ಮತ್ತೆ ಅರೆಸ್ಟ್ ಆದ ರಜತ್ ಕಿಶನ್| ಇತ್ತ ವಿನಯ್ ಗೌಡಗೂ ಸಂಕಷ್ಟ Read More »

ಹಿರಿಯ ನಟ ಬ್ಯಾಂಕ್‌ ಜನಾರ್ಧನ್‌ ಇನ್ನಿಲ್ಲ| ಕಂಬನಿ ಮಿಡಿದ ಚಿತ್ರರಂಗ

ಸಮಗ್ರ ನ್ಯೂಸ್: ಕನ್ನಡ ಚಿತ್ರರಂಗದ ಹಿರಿಯ ನಟ, ಸುಮಾರು 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಕ್ಕು-ನಲಿಸಿದ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ (76) ನಿಧನರಾಗಿದ್ದಾರೆ. ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್‌ ಜನಾರ್ಧನ್‌ ಕೊನೆಯುಸಿರೆಳೆದಿದ್ದಾರೆ. ಸುಲ್ತಾನ್‌ ಪಾಳ್ಯದ ನಿವಾಸದಲ್ಲಿ ಅವರ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 – 4 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. 1948ರಲ್ಲಿ ಬ್ಯಾಂಕ್

ಹಿರಿಯ ನಟ ಬ್ಯಾಂಕ್‌ ಜನಾರ್ಧನ್‌ ಇನ್ನಿಲ್ಲ| ಕಂಬನಿ ಮಿಡಿದ ಚಿತ್ರರಂಗ Read More »

ಹುಬ್ಬಳ್ಳಿ: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ಕಂದಮ್ಮನ ಅಪಹರಿಸಿ ಅತ್ಯಾಚಾರ ನಡೆಸಿ ಕೊಲೆ| ಪೊಲೀಸರ ಗುಂಡೇಟಿಗೆ ಆರೋಪಿ ಬಲಿ

ಸಮಗ್ರ ನ್ಯೂಸ್: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಲಾಗಿದೆ. ಕೃತ್ಯ ಎಸಗಿದ ಆರೋಪಿ ಬಿಹಾರ ಮೂಲದ ರಿತೇಶ ಕುಮಾರ್ (35) ಎಂಬಾತ ಭಾನುವಾರ ಸಂಜೆ ನಗರದ ತಾರಿಹಾಳ ಸೇತುವೆ ಬಳಿ ಪೊಲೀಸರ ಗುಂಡೇಟಿಗೆ ಮೃತಪಟ್ಟಿದ್ದಾನೆ. ‘ತಾರಿಹಾಳ ಬಳಿ ಸ್ಥಳ ಪರಿಶೀಲನೆಗೆ ಕರೆದೊಯ್ದಾಗ ಪೊಲೀಸ್ ವಾಹನದ ಮೇಲೆ ಕಲ್ಲು ತೂರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಅಶೋಕನಗರದ ಪಿಎಸ್‌ಐ ಅನ್ನಪೂರ್ಣ ಅವರು ಗಾಳಿಯಲ್ಲಿ ಗುಂಡು ಹಾರಿಸಿದರೂ ಆರೋಪಿ ತಪ್ಪಿಸಿಕೊಂಡು ಓಡಲು ಯತ್ನಿಸಿದ.

ಹುಬ್ಬಳ್ಳಿ: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ಕಂದಮ್ಮನ ಅಪಹರಿಸಿ ಅತ್ಯಾಚಾರ ನಡೆಸಿ ಕೊಲೆ| ಪೊಲೀಸರ ಗುಂಡೇಟಿಗೆ ಆರೋಪಿ ಬಲಿ Read More »

ಬೆಳ್ತಂಗಡಿ: ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

ಸಮಗ್ರ ನ್ಯೂಸ್: ಭೀಕರ ಅಪಘಾತದಲ್ಲಿ ಮತ್ತೆ ಇಬ್ಬರು ಬಲಿಯಾಗಿದ್ದು, ಮರಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ನಡೆದಿದೆ. ಕುತ್ಲೂರು ಪುರುಷ ಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ ಬೈಕ್ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು ಪರಿಣಾಮ ಇಬ್ಬರು ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರನ್ನು ಪ್ರಶಾಂತ್ ಹಾಗೂ ದಿನೇಶ್ ಎಂದು ಗುರುತಿಸಲಾಗಿದೆ. ರಾತ್ರಿಯ ವೇಳೆ ಯಾವುದೋ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ವೇಳೆ ರಾತ್ರಿ

ಬೆಳ್ತಂಗಡಿ: ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು Read More »