ಕ್ರೈಂ

ಗರ್ಭಿಣಿ ಹಸುವಿಗೆ ಢಿಕ್ಕಿ ಹೊಡೆದ ಸಾರಿಗೆ ಬಸ್| ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ ಗೋಮಾತೆ

ಕಾರವಾರ: ಗರ್ಭಿಣಿ ಹಸುವಿಗೆ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಮಟಾ ಬಸ್ ನಿಲ್ದಾಣದಲ್ಲಿ ನಡೆದಿದೆ. ಹುನಗುಂದದಿಂದ ಪುತ್ತೂರು ಮಾರ್ಗವಾಗಿ ಚಲಿಸುತ್ತಿದ್ದ ಬಸ್​ ತಡರಾತ್ರಿ ನಿಲ್ದಾಣದಲ್ಲಿ ನಿಂತ ಆಕಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಹಸು ಹಾಗೂ ಅದರ ಹೊಟ್ಟೆಯಲ್ಲಿದ್ದ ಕರು ಸ್ಥಳದಲ್ಲೇ ಮೃತಪಟ್ಟಿದೆ. ಕುಮಟಾದ ನಾಗಪ್ಪ ಬಲೀಂದ್ರ ಗೌಡ ಅವರಿಗೆ ಸೇರಿದ ಹಸು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪಶು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುಮಟಾ ನಗರ ಪೊಲೀಸ್ […]

ಗರ್ಭಿಣಿ ಹಸುವಿಗೆ ಢಿಕ್ಕಿ ಹೊಡೆದ ಸಾರಿಗೆ ಬಸ್| ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ ಗೋಮಾತೆ Read More »

ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣು

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿ ಎಸ್ ವೈ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ (30) ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೈಗ್ರೌಂಡ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ಅವರು ಎಂ.ಎಸ್.‌ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ. ಮೊಮ್ಮಗಳು ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆ ಬಿಎಸ್​​ ಯಡಿಯೂರಪ್ಪ ಮತ್ತು ಸಿಎಂ ಸೇರಿದಂತೆ

ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣು Read More »

ಸುಳ್ಯ: ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ‌ ಪ್ರಿಯಕರನೊಂದಿಗೆ ಪತ್ತೆ

ಸುಳ್ಯ: ನಾಪತ್ತೆಯಾಗಿದ್ದ ಅಸ್ಸಾಂ ಮೂಲದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆಯಾದ ಘಟನೆ ನಡೆದಿದೆ. ಈ ಮಹಿಳೆ ಜ. 25 ರಂದು ಪೈಚಾರು ಮನೆಯಿಂದ ಕಾಣೆಯಾಗಿ ಸಂಜೆಯಾದರೂ ಬಾರದ ಹಿನ್ನೆಲೆಯಲ್ಲಿ ಆಕೆಯ ಪತಿ ಪತಿ ಕೋಗನ್ ತಾತಿ ಅದೇ ದಿನ ಸಂಜೆ ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದರು. ಕಳೆದ ನಾಲ್ಕು ತಿಂಗಳಿಂದ ಸುಳ್ಯದ ಪೈಚಾರು ಸಂಸ್ಥೆ ಯೊಂದರಲ್ಲಿ ತೆಂಗಿನಕಾಯಿ ಸುಲಿಯುವ ಕೆಲಸವನ್ನು ಮಾಡುತ್ತಿದ್ದ ಮಹಿಳೆ ಮತ್ತು ಆಕೆಯ ಪತಿ, ಎರಡು ಮಕ್ಕಳೊಂದಿಗೆ ತಾನು ಕೆಲಸ ಮಾಡುತ್ತಿರುವ ಸಂಸ್ಥೆಯವರು ನೀಡಿದ

ಸುಳ್ಯ: ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ‌ ಪ್ರಿಯಕರನೊಂದಿಗೆ ಪತ್ತೆ Read More »

ಹಾಕಿ ದಂತಕಥೆ ಚರಂಜಿತ್‌ಸಿಂಗ್ ಇನ್ನಿಲ್ಲ

ನವದೆಹಲಿ: ಭಾರತದ 1964 ರ ಟೋಕಿಯೊ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಹಾಕಿ ತಂಡದ ನಾಯಕ ಚರಂಜಿತ್ ಸಿಂಗ್ ಅವರು ಹೃದಯಾಘಾತದಿಂದ ಹಿಮಾಚಲ ಪ್ರದೇಶದ ಉನಾದಲ್ಲಿನ ತಮ್ಮ ಮನೆಯಲ್ಲಿ ಇಂದು ನಿಧನರಾದರು. ಅವರು ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ಚರಂಜಿತ್ ಐದು ವರ್ಷಗಳ ಹಿಂದೆ ಪಾರ್ಶ್ವವಾಯುವಿಗೆ ಒಳಗಾದರು . ‘ಅಪ್ಪ ಐದು ವರ್ಷಗಳ ಹಿಂದೆ ಪಾರ್ಶ್ವವಾಯುವಿಗೆ ಒಳಗಾದ ನಂತರ ಅವರು ಕೋಲನ್ನು ಆಧರಿಸಿ ನಡೆಯುತ್ತಿದ್ದರು. ಆದರೆ ಕಳೆದ ಎರಡು ತಿಂಗಳಿನಿಂದ ಅವರ ಆರೋಗ್ಯ ಹದಗೆಟ್ಟಿತು

ಹಾಕಿ ದಂತಕಥೆ ಚರಂಜಿತ್‌ಸಿಂಗ್ ಇನ್ನಿಲ್ಲ Read More »

ಸಭಾಪತಿ ಹೊರಟ್ಟಿ ಸೇರಿದಂತೆ 6 ಮಂದಿ‌ ಮೇಲೆ ಎಫ್ಐಆರ್

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಆರು ಜನರ ವಿರುದ್ಧ ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಕರ್ನಾಟಕ ವಾಲ್ಮೀಕಿ ಮಹಾಸಭಾ ಧಾರವಾಡ ಜಿಲ್ಲಾಧ್ಯಕ್ಷ ಮೋಹನ್ ಗುಡಿಸಲಮನಿ ಅವರು ದೂರು ಆಧರಿಸಿ ಎಫ್ ಐಆರ್ ದಾಖಲಿಸಲಾಗಿದೆ. ಮುಗದ ಗ್ರಾಮದ ಸರ್ವೋದಯ ಶಿಕ್ಷಣ ಸಂಸ್ಥೆಯನ್ನು ಬಸವರಾಜ ಹೊರಟ್ಟಿ ದುರ್ಬಳಕೆ ಮಾಡಿಕೊಂಡಿದ್ದು, ಇದನ್ನು ಪ್ರಶ್ನಿಸಿದಕ್ಕೆ ಹಲ್ಲೆ ಮಾಡಿಸಿರುವುದಾಗಿ ಆರೋಪಿಸಿ ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ಬಸವರಾಜ ಹೊರಟ್ಟಿ ಸೇರಿ ಆರು ಜನರ ವಿರುದ್ಧ ದೂರು ನೀಡಲಾಗಿದೆ.

ಸಭಾಪತಿ ಹೊರಟ್ಟಿ ಸೇರಿದಂತೆ 6 ಮಂದಿ‌ ಮೇಲೆ ಎಫ್ಐಆರ್ Read More »

ಶಾಸಕ‌ ಶರಣು ಸಲಗ ವಿರುದ್ದ ಎಫ್ಐಆರ್| ಕೋವಿಡ್ ನಿಯಮ ಮೀರಿ ಪಾದಯಾತ್ರೆ ಮಾಡಿದ್ದ ಬಿಜೆಪಿ ಶಾಸಕ

ಬೀದರ್: ಕೊರೋನಾ ಸೋಂಕಿನ ಈ ಸಂದರ್ಭದಲ್ಲಿ, ಹೆಚ್ಚು ಜನರು ಸೇರುವಂತ ಯಾವುದೇ ಕಾರ್ಯಕ್ರಮ ನಿಷಿದ್ಧವಾಗಿದ್ದರೂ ಮೂರು ದಿನಗಳ ಹಿಂದೆ ಈ ನಿಯಮ ಮೀರಿ ಬಸವಕಲ್ಯಾಣದಿಂದ ಗೋಕುಳ ಗ್ರಾಮದವರೆಗೆ ಪಾದಯಾತ್ರೆಯಲ್ಲಿ ಭಾಗಿಯಾದ ಶಾಸಕ ಶರಣು ಸಲಗ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಳೆದ ಮೂರು ದಿನಗಳ ಹಿಂದೆ ಬೀದರ್ ಜಿಲ್ಲೆಯ ಬಸವಕಲ್ಯಾಣದಿಂದ ಗೋಕುಳ ಗ್ರಾಮದವರೆಗೆ ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗ ಅವರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಈ ಪಾದಯಾತ್ರೆಯಲ್ಲಿ ಮಾಸ್ಕ್, ದೈಹಿಕ ಅಂತರ ಕೂಡ ಕಾಪಾಡಿರಲಿಲ್ಲ. ಈ ಕಾರಣದಿಂದಾಗಿ ಕಾಂಗ್ರೆಸ್

ಶಾಸಕ‌ ಶರಣು ಸಲಗ ವಿರುದ್ದ ಎಫ್ಐಆರ್| ಕೋವಿಡ್ ನಿಯಮ ಮೀರಿ ಪಾದಯಾತ್ರೆ ಮಾಡಿದ್ದ ಬಿಜೆಪಿ ಶಾಸಕ Read More »

ಬೆಂಗಳೂರು: ಪತ್ನಿಯ ಐಶಾರಾಮಿ ಜೀವನಕ್ಕೆ ಬೇಸತ್ತು ಪತಿ ಆತ್ಮಹತ್ಯೆ

ಬೆಂಗಳೂರು: ಪತ್ನಿಯ ಐಶಾರಾಮಿ ಜೀವನಕ್ಕೆ ಬೇಸತ್ತು ಪತಿ ನೇಣಿಗೆ ಶರಣಾಗಿರುವ ಘಟನೆ ಬಸವೇಶ್ವರನಗರ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ನಡೆದಿದೆ. ಮೆಕಾನಿಕ್‌ ಕೆಲಸ ಮಾಡುತ್ತಿದ್ದ ಚಾಂದ್‌ಪಾಷಾ (31) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಕೌಟುಂಬಿಕ ಕಲಹ ದಿಂದ ಮೊದಲ ಪತ್ನಿಯಿಂದ ದೂರವಾಗಿದ್ದರು. ಆ ಹಿನ್ನೆಲೆ ಚಾಂದ್‌ ಪಾಷಾ ಕಳೆದ 4 ತಿಂಗಳ ಹಿಂದಷ್ಟೇ ಉಸ್ಮಾ (26) ಎಂಬಾಕೆಯನ್ನು ಮದುವೆಯಾಗಿದ್ದ. ಚಾಂದ್‌ ಪಾಷಾ ಪತ್ನಿ ಉಸ್ಮಾಗೆ ಐಷಾರಾಮಿ ಜೀವನದ ಗೀಳಿತ್ತು. ಆ ಹಿನ್ನೆಲೆ ಯಲ್ಲಿಯೇ ದುಬಾರಿ ಬಟ್ಟೆ ಧರಿಸುವುದು. ಚಿನ್ನಾಭರಣ

ಬೆಂಗಳೂರು: ಪತ್ನಿಯ ಐಶಾರಾಮಿ ಜೀವನಕ್ಕೆ ಬೇಸತ್ತು ಪತಿ ಆತ್ಮಹತ್ಯೆ Read More »

ಅಸಹಜ ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಬಾಲಕನ ಇರಿದು ಕೊಂದ ಯುವಕ

ರಾಯ್‍ಪುರ: ಅಸಹಜ ಲೈಂಗಿಕ ಸಂಭೋಗಕ್ಕೆ ನಿರಾಕರಿಸಿದ್ದಕ್ಕೆ ಅಪ್ರಾಪ್ತ ಬಾಲಕನನ್ನು ಯುವಕನೊರ್ವ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಛತ್ತೀಸ್‍ಗಢದ ಬೆಮೆತಾರಾ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಪಂಕಜ್ ವಿಶ್ವಕರ್ಮ(20) ಎಂದು ಗುರುತಿಸಲಾಗಿದೆ. ಬಿಜಭಟ ಮುರುಮ್ ಗಣಿ ಸಮೀಪದ ಪ್ರತ್ಯೇಕ ಸ್ಥಳಕ್ಕೆ ಸೋಮವಾರ ಬಾಲಕನನ್ನು ಕರೆದೊಯ್ದು ಹರಿತವಾದ ಆಯುಧದಿಂದ ಕೊಂದಿದ್ದಾನೆ. ಕೃತ್ಯ ವೆಸಗಿದ ಕೂಡಲೇ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಬೆಮೆತಾರಾ ಪೊಲೀಸ್ ಠಾಣೆಯ ಅಧಿಕಾರಿ ಪ್ರೇಮ್ ಪ್ರಕಾಶ್ ಅವಧಿಯಾ ತಿಳಿಸಿದ್ದಾರೆ. ಬಾಲಕ ಕಾಣೆಯಾಗಿರುವುದಾಗಿ ಬಾಲಕನ ಪೋಷಕರು ದೂರು ದಾಖಲಿಸಿದ

ಅಸಹಜ ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಬಾಲಕನ ಇರಿದು ಕೊಂದ ಯುವಕ Read More »

ಕಳ್ಳತನ ಮಾಡಬೇಡ ಎಂದ ತಂದೆಯನ್ನೇ ಕೊಲೆ ಮಾಡಿದ ಮಗ

ಚಳ್ಳಕೆರೆ: ಕಳ್ಳತನ ಮಾಡಬೇಡ ಎಂದದ್ದಕ್ಕೆ ತಂದೆಯನ್ನೇ ಮಗ ಕೊಲೆ ಮಾಡಿದ ಘಟನೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ನಾಯಕನಹಟ್ಟಿ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಮಲ್ಲೂರಹಳ್ಳಿ ಗ್ರಾಮದ ಬರಮಸಾಗರ ಕೊಪ್ಲೆಯ ಗುಡ್ಲು ಮಲ್ಲಯ್ಯ(65) ಎಂಬವರು ತನ್ನ ಪುತ್ರ ಲೋಕೇಶ್(35) ಎಂಬಾತನನ್ನು ಕೊಲೆ ಮಾಡಿರುವುದು. ಇವರು ಕಳ್ಳತನ, ಜಗಳ ಮಾಡಬೇಡ. ಬರೀ ನಿನ್ನ ಮೇಲೆ ಆರೋಪಗಳು ಬರುತ್ತಿವೆ ಎಂದು ಬುದ್ದಿ ಮಾತು ಹೇಳಿದ್ದರು. ಇದರಿಂದ ಕೋಪಗೊಂಡ ಮಗ ರಾತ್ರಿ 12 ಗಂಟೆ ವೇಳೆಗೆ ಹೊಡೆದು ತಂದೆಯನ್ನು ಕೊಲೆ ಮಾಡಿದ್ದಾನೆ. ಲೋಕೇಶ್ ಮೇಲೆ

ಕಳ್ಳತನ ಮಾಡಬೇಡ ಎಂದ ತಂದೆಯನ್ನೇ ಕೊಲೆ ಮಾಡಿದ ಮಗ Read More »

ಮಂಗಳೂರು: ಅಪಘಾತದಲ್ಲಿ ಗಾಯಗೊಂಡ ಯುವತಿ ಚಿಕಿತ್ಸೆ ಫಲಿಸದೆ ಸಾವು

ಮಂಗಳೂರು: ಮಂಗಳೂರು ನಗರ ಹೊರವಲಯದ ಅಡ್ಡೂರು ಸಮೀಪದ ಕಾಜಿಲ ಎಂಬಲ್ಲಿ ನಿನ್ನೆ ನಡೆದ ರಿಕ್ಷಾ ಮತ್ತು ಟಿಪ್ಪರ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಾಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾಳೆ ಮೃತಪಟ್ಟ ಯುವತಿಯನ್ನು ಕರಿಯಂಗಳ ಗ್ರಾಮದ ಪಳ್ಳಿಪಾಡಿಯ ಆಸ್ನಾ (18) ಎಂದು ಗುರುತಿಸಲಾಗಿದೆ. ಈಕೆ ನಿನ್ನೆ ತನ್ನ ತಾಯಿ ರೆಹನಾರೊಂದಿಗೆ ರಿಕ್ಷಾದಲ್ಲಿ ಗುರುಪುರ ಕೈಕಂಬದತ್ತದಲ್ಲಿ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ವೇಳೆ ಪೊಳಲಿ ದ್ವಾರದಿಂದ ಅಡ್ಡೂರಿನತ್ತ ಅತಿ ವೇಗದಿಂದ ಚಲಿಸುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ.

ಮಂಗಳೂರು: ಅಪಘಾತದಲ್ಲಿ ಗಾಯಗೊಂಡ ಯುವತಿ ಚಿಕಿತ್ಸೆ ಫಲಿಸದೆ ಸಾವು Read More »