ಕ್ರೈಂ

ನೀಟ್​ ಆಕಾಂಕ್ಷಿ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್‌ ; ನೀಟ್​ ಆಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ನೀಟ್‌ಗೆ ತಯಾರಿ ನಡೆಸುತ್ತಿದ್ದ 20 ವರ್ಷದ ಉರುಜ್ ಖಾನ್ ಎಂಬಾತ ನಗರದ ಬಾಡಿಗೆ ಕೊಠಡಿಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. 2024ರಲ್ಲಿ ಇಂತಹ ಘಟನೆ ಅನೇಕ ಸಂಭವಿಸಿದ್ದು, ಇದೀಗ 7ನೇ ಘಟನೆ ಇದಾಗಿದೆ. ಕಳೆದ ವರ್ಷದಲ್ಲಿ ವಿದ್ಯಾರ್ಥಿಗಳ ಸಾವಿನ ಸಂಖ್ಯೆ 29 ರಷ್ಟಿತ್ತು. ಉತ್ತರ ಪ್ರದೇಶದ ಕನೌಜ್ ನಿವಾಸಿಯಾಗಿರುವ ಮೃತ ಉರುಜ್ ಖಾನ್, ವಿಜ್ಞಾನನಗರ ಪ್ರದೇಶದ ಬಾಡಿಗೆ ಫ್ಲಾಟ್‌ನಲ್ಲಿ […]

ನೀಟ್​ ಆಕಾಂಕ್ಷಿ ನೇಣು ಬಿಗಿದು ಆತ್ಮಹತ್ಯೆ Read More »

ಕೇರಳ: ರಥದ ಚಕ್ರಕ್ಕೆ ಸಿಲುಕಿ ಐದು ವರ್ಷದ ಮಗು ಸಾವು

ಸಮಗ್ರ ನ್ಯೂಸ್: ವಾರ್ಷಿಕ ಉತ್ಸವದ ವೇಳೆ ಕೊಲ್ಲಂ ಸಮೀಪದ ಕೊಟ್ಟನ್‌ಕುಳಂಗರ ದೇವಸ್ಥಾನದಲ್ಲಿ ಐದು ವರ್ಷದ ಮಗುವೊಂದು ರಥದ ಚಕ್ರದಡಿ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಭಕ್ತರು ಎಳೆಯುವ ರಥದ ದೊಡ್ಡ ಚಕ್ರಗಳ ಅಡಿಯಲ್ಲಿ ಆಕಸ್ಮಿಕವಾಗಿ ಮಗು ಬಿದ್ದು ಸಾವನ್ನಪ್ಪಿದೆ. ಚವರ ನಿವಾಸಿ ದಂಪತಿಯ ಪುತ್ರಿ ಕ್ಷೇತ್ರ ಸಾವನ್ನಪ್ಪಿದ ಮಗು. ಮಗುವನ್ನು ಪೋಷಕರು ಪೊಲೀಸರ ಸಹಾಯದೊಂದಿಗೆ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದದರೂ, ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇರಳ: ರಥದ ಚಕ್ರಕ್ಕೆ ಸಿಲುಕಿ ಐದು ವರ್ಷದ ಮಗು ಸಾವು Read More »

SSLC ಪರೀಕ್ಷೆ ಬರೆಯಬೇಕಾದ ಇಬ್ಬರು ವಿದ್ಯಾರ್ಥಿಗಳು ಮೃತ್ಯು

ಸಮಗ್ರ ನ್ಯೂಸ್‌ : ಇಂದು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ರಸ್ತೆ ಅಪಘಾತದಲ್ಲಿ, ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಹೋಗುತ್ತಿದ್ದ ವಿದ್ಯಾರ್ಥಿನಿ ರಸ್ತೆ ದಾಟುವ ವೇಳೆ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದ ರಭಸಕ್ಕೆ ಕೆಳಗೆ ಬಿದ್ದು,ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಟ್ಟಿರುವ ಘಟನೆ ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ನಡೆದಿದೆ. ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕೂಲ್ಸುಂ (14) ಮೃತ ದುರ್ದೈವಿ.

SSLC ಪರೀಕ್ಷೆ ಬರೆಯಬೇಕಾದ ಇಬ್ಬರು ವಿದ್ಯಾರ್ಥಿಗಳು ಮೃತ್ಯು Read More »

ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

ಸಮಗ್ರ ನ್ಯೂಸ್: ದುಷ್ಕರ್ಮಿಗಳ ಗುಂಡಿಗೆ 11 ವರ್ಷದ ಕಾಡುಕೋಣ ಒಂದು ಬಲಿಯಾದ ಘಟನೆ ಪಿರಿಯಾಪಟ್ಟಣ ದಲ್ಲಿ ನಡೆದಿದೆ. ಮುಖ್ಯರಸ್ತೆಯಿಂದ ಪರದಕಟ್ಟೆ ಕಳ್ಳ ಬೇಟೆ ತಡೆ ಶಿಬಿರಕ್ಕೆ ಹೋಗುವ ರಸ್ತೆಯ ಮೈಸೂರು ಕೊಡಗು ಚೈನ್ ಗೇಟ್ ಅರಣ್ಯ ಪ್ರದೇಶದಲ್ಲಿ ನಡೆದಿದ್ದು ನಾಗರಹೊಳೆ ಹುಲಿ ಸುರಕ್ಷಿತ ಪ್ರದೇಶವಾಗಿದ್ದು ಇಂದು (ಮಾ.25) ಬೆಳಗ್ಗೆ ಕಾಡುಕೋಣಕ್ಕೆ ಗುಂಡು ಹೊಡೆದ ಶಬ್ದ ಕೇಳಿದೆ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬರುವ ಸಂದರ್ಭ ವನ್ಯಜೀವಿ ಬೇಟೆಗಾರರು ಪರರಿಯಾಗಿದ್ದಾರೆ. ದುಷ್ಕರ್ಮಿಗಳ ಪತ್ತೆಗಾಗಿ ಅರಣ್ಯ ಇಲಾಖೆ ವಿಶೇಷ ತಂಡ ರಚಿಸಿದೆ.

ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ Read More »

ಕಲಬೆರಕೆ ಮದ್ಯ ಸೇವನೆ|21 ಮಂದಿ ಮೃತ್ಯು, 40 ಮಂದಿ ಅಸ್ವಸ್ಥ

ಸಮಗ್ರ ನ್ಯೂಸ್: ಕಲಬೆರಕೆಯಾಗಿರುವ ಮದ್ಯವನ್ನು ಸೇವಿಸಿ 21 ಮಂದಿ ಸಾವನ್ನಪ್ಪಿರುವ ಘಟನೆ ಪಂಜಾಬ್ನ ಹಾಡಿ ಸಂಗ್ರೂರ್ನಲ್ಲಿ ನಡೆದಿದೆ. ಎಥೆನಾಲ್ ಇರುವ ಮದ್ಯ ಸೇವಿಸಿದ್ದರಿಂದ ಈ ದುಷ್ಕೃತ್ಯ ನಡೆದಿದೆ ಎಂಬ ಮಾಹಿತಿಯನ್ನು ನೀಡಿದರು. ಮದ್ಯ ಸೇವಿಸಿದ 40ಕ್ಕೂ ಅಧಿಕ ಮಂದಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಘಟನೆಯ ತನಿಖೆಗಾಗಿ ಪಂಜಾಬ್ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಆರು ಮಂದಿಯನ್ನು ಬಂಧಿಸಲಾಗಿದೆ. ಸಂಗ್ರೂರ್ ಮುಖ್ಯ ವೈದ್ಯಕೀಯ ಅಧಿಕಾರಿ (CMO)

ಕಲಬೆರಕೆ ಮದ್ಯ ಸೇವನೆ|21 ಮಂದಿ ಮೃತ್ಯು, 40 ಮಂದಿ ಅಸ್ವಸ್ಥ Read More »

ಕಾರಿಗೆ ಬೆಂಕಿ ಹಚ್ಚಿ‌ ಮೂವರನ್ನು ಕೊಂದ ಪ್ರಕರಣ| ಆರು ಮಂದಿ‌‌ ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿದಂತೆ ಒಟ್ಟು ಆರು ಮಂದಿಯನ್ನು ಕೋರಾ ಪೊಲೀಸರು ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56)

ಕಾರಿಗೆ ಬೆಂಕಿ ಹಚ್ಚಿ‌ ಮೂವರನ್ನು ಕೊಂದ ಪ್ರಕರಣ| ಆರು ಮಂದಿ‌‌ ಆರೋಪಿಗಳು ಅರೆಸ್ಟ್ Read More »

ಕೆರೆಯ ಬಳಿ ಸುಟ್ಟ ಸ್ಥಿತಿಯಲ್ಲಿ ಮೂರು ಅಪರಿಚಿತ ಶವಗಳು ಪತ್ತೆ

ಸಮಗ್ರ ನ್ಯೂಸ್: ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಸುಟ್ಟ ಸ್ಥಿತಿಯಲ್ಲಿ ಮೂರು ಅಪರಿಚಿತ ಶವಗಳು ಪತ್ತೆಯಾಗಿದ್ದು. ನಿನ್ನೆ ರಾತ್ರಿ ನಡೆದಿರುವ ಘಟನೆ ಇದಾಗಿದ್ದು, ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಕೆರೆಗೆ ಕಾರು ತಳ್ಳಿರುವ ಶಂಕೆ ವ್ಯಕ್ತವಾಗಿದೆ. ಇದು ದಕ್ಷಿಣ ಕನ್ನಡ ಮೂಲದ ರಫಿಕ್ ಎಂಬುವರಿಗೆ ಸೇರಿದ ಕಾರು ಎನ್ನಲಾಗಿದೆ. ಸ್ಥಳಕ್ಕೆ ತುಮಕೂರು ಎಸ್ ಪಿ ಅಶೋಕ್ಭೇಟಿ ನೀಡಿ ಪರಿಶೀಲನೆ ‌ನಡೆಸಿದ್ದಾರೆ. ತುಮಕೂರು ಎಸ್ ಪಿ ಅಶೋಕ್ ಕೆ.ವಿ, ಘಟನೆ ಕುರಿತು ಮಾಹಿತಿ ನೀಡಿದ್ದು, ಇವತ್ತು ಮಧ್ಯಾಹ್ನ

ಕೆರೆಯ ಬಳಿ ಸುಟ್ಟ ಸ್ಥಿತಿಯಲ್ಲಿ ಮೂರು ಅಪರಿಚಿತ ಶವಗಳು ಪತ್ತೆ Read More »

ಕಲಬುರಗಿಯಲ್ಲಿ ಬಡ್ಡಿ ಹಣ ನೀಡದಕ್ಕೆ ವ್ಯಕ್ತಿಯ ಮೇಲೆ ಆ್ಯಸಿಡ್ ಅಟ್ಯಾಕ್

ಸಮಗ್ರ ನ್ಯೂಸ್: ಬಡ್ಡಿ ಹಣಕ್ಕಾಗಿ ವ್ಯಕ್ತಿ ಮೇಲೆ ಆ್ಯಸಿಡ್ ಎರಚಿರುವ ಅಮಾನವೀಯ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜುಬೇರ್ ಅಹ್ಮದ್ ಎಂಬುವರ ಮೇಲೆ ಇಮ್ರಾನ್‌ ಖಾನ್ ಎಂಬ ವ್ಯಕ್ತಿ ಆ್ಯಸಿಡ್ ನಿಂದ ದಾಳಿ ನಡೆಸಿದ್ದಾನೆ. ಜುಬೇರ್ ಬಲಗೈ ಹಾಗೂ ಕಾಲಿನ ಮೇಲೆ ಆ್ಯಸಿಡ್ ಬಿದ್ದಿದ್ದು ಸುಟ್ಟ ಗಾಯಗಳಾಗಿವೆ. ಸದ್ಯ ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅರ್ಷದ್ ಮೀನು ವ್ಯಾಪಾರಕ್ಕಾಗಿ ಪರ್ವೇಜ್ ಬಳಿ ಜುಬೇರ್ 35 ಲಕ್ಷ ಹಣ ಪಡೆದುಕೊಂಡಿದ್ದ. ಅದಕ್ಕೆ ಬಡ್ಡಿ, ಚಕ್ರಬಡ್ಡಿ ಹಚ್ಚಿ 90

ಕಲಬುರಗಿಯಲ್ಲಿ ಬಡ್ಡಿ ಹಣ ನೀಡದಕ್ಕೆ ವ್ಯಕ್ತಿಯ ಮೇಲೆ ಆ್ಯಸಿಡ್ ಅಟ್ಯಾಕ್ Read More »

ಕಾಸರಗೋಡಿನ ಮನೆಯೊಂದರಲ್ಲಿ ಸಿಕ್ತು 2000 ರೂಪಾಯಿ ನೋಟಿನ ಕಂತೆ ಕಂತೆ ಹಣ

ಸಮಗ್ರ ನ್ಯೂಸ್: ಕಾಸರಗೋಡು ಜಿಲ್ಲೆಯ ಗುರಪುರದ ಅಂಬಲತ್ತರ ಎಂಬಲ್ಲಿ ಮನೆಯೊಂದರಲ್ಲಿ 7 ಕೋಟಿ ರೂಪಾಯಿ ಮೌಲ್ಯದ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಪೊಲೀಸರು ನಿನ್ನೆ ಕಾರ್ಯಾಚರಣೆ ನಡೆಸಿದ್ದರು. ಈ 2000 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಕೇಂದ್ರ ಸರ್ಕಾರ ಕಳೆದ ವರ್ಷದ ಬ್ಯಾನ್ ಮಾಡಿತ್ತು. ನೋಟುಗಳು ಪತ್ತೆಯಾಗಿರುವುದು ಗಲ್ಫ್ ಉದ್ಯೋಗಿ ಕೆಪಿ ಬಾಬು ರಾಜ್ ಅವರ ಮಾಲೀಕತ್ವದ ಮನೆಯಲ್ಲಿ ಎಂದು ಪೊಲೀಸರು ತಿಳಿಸಿದ್ದಾರೆ. ಬಾಬು ರಾಜ್ ಅವರು

ಕಾಸರಗೋಡಿನ ಮನೆಯೊಂದರಲ್ಲಿ ಸಿಕ್ತು 2000 ರೂಪಾಯಿ ನೋಟಿನ ಕಂತೆ ಕಂತೆ ಹಣ Read More »

ಬೆಳ್ತಂಗಡಿ: ಅರಣ್ಯದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಸಮಗ್ರ ನ್ಯೂಸ್‌ : ಅರಣ್ಯ ಪರಿಸರದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸ್ಥಳದಲ್ಲಿ ದೊರೆತ ಆಧಾರ್ ಕಾರ್ಡ್ ಹಾಗೂ ಇತರ ಸೊತ್ತುಗಳ ಪತ್ತೆಯಾದ ಘಟನೆ ಬೆಳ್ತಂಗಡಿ ಪುದುವೆಟ್ಟು‌ಗ್ರಾಮದ ಬೋಳ್ಮಿನಾರು, ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕಳೆಂಜ ಗ್ರಾಮದ ಕಾಯರ್ತಡ್ಕದ ರಾಜು ಜೋಸೆಫ್ ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ ಅರಣ್ಯ ಪ್ರದೇಶದಿಂದ ಸೊಪ್ಪು ತರಲು ತೆರಳಿದ್ದ ಸ್ಥಳೀಯರು ರಸ್ತೆಯಿಂದ ಸುಮಾರು 100 ಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳದಲ್ಲಿ ಮದ್ಯದ

ಬೆಳ್ತಂಗಡಿ: ಅರಣ್ಯದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ Read More »