ಪಾಣೆಮಂಗಳೂರು: ಸೇತುವೆ ಬಳಿ ಬೈಕ್ ಇಟ್ಟು ಸವಾರ ನಿಗೂಡ ನಾಪತ್ತೆ
ಬಂಟ್ವಾಳ: ಪಾಣೆಮಂಗಳೂರು ಹೊಸ ಸೇತುವೆ ಸಮೀಪ ಮಧ್ಯರಾತ್ರಿ ಬೈಕ್ ಚಾಲನೆಯಲ್ಲಿಟ್ಟು ಸವಾರ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾಗಿರು ಬೈಕ್ ಸವಾರನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ನಾಪತ್ತೆಯಾಗಿರುವ ಬೈಕ್ ಸವಾರನನ್ನು ಮೂಲತ ಬೆಂಗಳೂರು ದಾಸರಹಳ್ಳಿ ನಿವಾಸಿ ಸತ್ಯವೇಲು (29) ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸದಲ್ಲಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈತ 15ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಳ್ಳಲು ಬೆಂಗಳೂರಿನಿಂದ ಪಾಣೆಮಂಗಳೂರಿಗೆ ಆಗಮಿಸಿದ್ದ. ಆದರೆ ಸ್ಥಳೀಯರು ಆತನನ್ನು ರಕ್ಷಿಸಿ ಬಳಿಕ ಬಂಟ್ವಾಳ ನಗರ ಪೊಲೀಸರಿಗೆ ಒಪ್ಪಿಸಿದ್ದರು. ಬಳಿಕ […]
ಪಾಣೆಮಂಗಳೂರು: ಸೇತುವೆ ಬಳಿ ಬೈಕ್ ಇಟ್ಟು ಸವಾರ ನಿಗೂಡ ನಾಪತ್ತೆ Read More »