ಕ್ರೈಂ

ಪುತ್ತೂರು|ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸ್ ದಾಳಿ| ಇಬ್ಬರ ಬಂಧನ

ಪುತ್ತೂರು: ಇಲ್ಲಿನ ಮನೆಯೊಂದರಲ್ಲಿ ಅಕ್ರಮವಾಗಿ ಕಸಾಯಿಖಾನೆ‌ ತೆರೆದಿದ್ದು, ಅದರಲ್ಲಿ ಗೋಮಾಂಸ ಶೇಖರಿಸಿಟ್ಟಿರುವ ಖಚಿತ ಮಾಹಿತಿ ಮೇರೆಗೆ ಪೋಲಿಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಆ.12ರಂದು ಪುತ್ತೂರು ನಗರದ ಸಾಲ್ಮರದ‌‌ ಸಮೀಪ ಈ ಘಟನೆ ‌ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸಾಲ್ಮರದಲ್ಲಿರುವ ಮೌಂಟೇನ್ ವ್ಯೂ ಶಾಲೆಗೆ ಸಮೀಪದಲ್ಲೇ ಇರುವ ಮನೆಯೊಂದರಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದು, ಅದರಲ್ಲಿ ಗೋಮಾಂಸವನ್ನು ಶೇಖರಿಸಿಡಲಾಗಿದೆ ಎಂದು ಹಿಂದೂ ಸಂಘಟನೆಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಮಾಹಿತಿ ಆಧರಿಸಿ ಪುತ್ತೂರಿನ ಪೋಲಿಸರು ದಾಳಿ […]

ಪುತ್ತೂರು|ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸ್ ದಾಳಿ| ಇಬ್ಬರ ಬಂಧನ Read More »

ಬಂಟ್ವಾಳ : ಸ್ಕೂಟರ್ ಲಾರಿ ಅಪಘಾತ – ಸವಾರ ಸ್ಥಳದಲ್ಲೇ ಸಾವು

ಬಂಟ್ವಾಳ: ಸ್ಕೂಟರ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪದ ಬೊಳ್ಳುಕಲ್ಲು ಸಮೀಪ ಇಂದು ಸಂಭವಿಸಿದೆ. ಕನ್ಯಾನ ಪರಕಜೆ ನಿವಾಸಿ ಮಂಜು ಬೆಳ್ಚಡ ಎಂಬವರ ಪುತ್ರ ಗಣೇಶ್ ಬಂಗೇರ (54) ಮೃತ ಸ್ಕೂಟರ್ ಸವಾರ. ಈತ ತನ್ನ ದ್ವಿಚಕ್ರ ವಾಹನದಲ್ಲಿ ಉಪ್ಪಿನಂಗಡಿ ಕಡೆಗೆ ಸಂಚರಿಸುತ್ತಿದ್ದ ವೇಳೆ ಬುಡೋಳಿ ಸಮೀಪ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ

ಬಂಟ್ವಾಳ : ಸ್ಕೂಟರ್ ಲಾರಿ ಅಪಘಾತ – ಸವಾರ ಸ್ಥಳದಲ್ಲೇ ಸಾವು Read More »

ಪುತ್ತೂರು: ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಹೆಸರಿನಲ್ಲಿ ನಕಲಿ ಪೇಸ್ಬುಕ್ ಖಾತೆ ತೆರೆದು ವಂಚನೆಗೆ ಯತ್ನ

ಪುತ್ತೂರು: ಪುತ್ತೂರಿನ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಣಕ್ಕಾಗಿ ಬೇಡಿಕೆ ಇಟ್ಟಿರುವ ಘಟನೆ ಬೆಳಕಿಕೆ ಬಂದಿದೆ. ಹಿಂದೂ ಸಂಘಟನೆಗಳ ಮುಂದಾಳು, ಖ್ಯಾತ ವೈದ್ಯ ಡಾ.ಎಂ.ಕೆ.ಪ್ರಸಾದ್ ಮತ್ತು ಅವರ ಪತ್ನಿ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಅವರ ಭಾವಚಿತ್ರವನ್ನು ಪ್ರೊಫೈಲ್ ಹಾಕಿರುವ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಲಾಗುತ್ತಿದೆ. ರಿಕ್ವೆಸ್ಟ್ ಆಕ್ಸೆಪ್ಟ್ ಮಾಡಿದವರಲ್ಲಿ ಹಣದ ಬೇಡಿಕೆ ಇಟ್ಟು ತುರ್ತಾಗಿ ಗೂಗಲ್ ಪೇ ಮಾಡುವಂತೆ ಕೇಳಲಾಗಿದೆ. ಇದೆ ರೀತಿ

ಪುತ್ತೂರು: ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಹೆಸರಿನಲ್ಲಿ ನಕಲಿ ಪೇಸ್ಬುಕ್ ಖಾತೆ ತೆರೆದು ವಂಚನೆಗೆ ಯತ್ನ Read More »

ತಲೆ ಮೇಲೆ ಕಲ್ಲು ಹಾಕಿ ಯುವಕನ ಕೊಲೆ|

ಹಾಸನ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ಸಮೀಪದಲ್ಲಿ ನಡೆದಿದೆ. ಅರಸೀಕೆರೆ ನಿವಾಸಿ ನವಾಜ್(೨೭) ಕೊಲೆಯಾದ ದುರ್ದೈವಿ. ದುಷ್ಕರ್ಮಿಗಳು ನಿನ್ನೆ ತಡರಾತ್ರಿ ನವಾಜ್ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೊಲೆಯ ಹಿಂದಿನ ಕಾರಣ ಈವರೆಗೂ ತಿಳಿದು ಬಂದಿಲ್ಲ ಎನ್ನಲಾಗಿದೆ.

ತಲೆ ಮೇಲೆ ಕಲ್ಲು ಹಾಕಿ ಯುವಕನ ಕೊಲೆ| Read More »

ಚಿಕ್ಕಪ್ಪನಿಂದಲೇ ಅತ್ಯಾಚಾರ| ದೂರು‌ ದಾಖಲು

ಮೂಡುಬಿದಿರೆ, ಆ.10: ಬಾಲಕಿಯ ಅತ್ಯಾಚಾರವೆಸಗಿದ ಆರೋಪದಡಿ ಆಕೆಯ ಚಿಕ್ಕಪ್ಪನನ್ನು ಪೊಕ್ಸೊ ಕಾಯ್ದೆಯಡಿ ಮೂಡುಬಿದಿರೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕುಮಾರ್ (30) ಎಂದು ಗುರುತಿಸಲಾಗಿದೆ. ಬಾಲಕಿ ಸೋಮವಾರ ಶಾಲೆಯಿಂದ ಸ್ನೇಹಿತೆಯೊಂದಿಗೆ ಮನೆಗೆ ತೆರಳುತ್ತಿದ್ದ ಸಂದರ್ಭ ಗುಡ್ಡ ಪ್ರದೇಶದಲ್ಲಿ ಆಕೆಯ ಚಿಕ್ಕಪ್ಪ ಅಡ್ಡಗಟ್ಟಿ ವಿದ್ಯಾರ್ಥಿನಿಯರನ್ನು ಹೆದರಿಸಿದ್ದು ಆಗ ಜೊತೆಗಿದ್ದ ವಿದ್ಯಾರ್ಥಿನಿ ಹೆದರಿ ಓಡಿದ್ದಾಳೆ. ಈ ವೇಳೆ ಆರೋಪಿ ತನ್ನ ಅಣ್ಣನ ಮಗಳನ್ನೆ ಅತ್ಯಾಚಾರ ನಡೆಸಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ಚಿಕ್ಕಪ್ಪನಿಂದಲೇ ಅತ್ಯಾಚಾರ| ದೂರು‌ ದಾಖಲು Read More »

ಭೀಕರ ರಸ್ತೆ ಅಪಘಾತ-ಸ್ಕೂಟರ್ ಸವಾರ ಸಾವು

ಮಂಗಳೂರು: ಭೀಕರ ರಸ್ತೆ ಅಪಘಾತವೊಂದರಲ್ಲಿ ಸ್ಕೂಟರ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ನಂತೂರು ಸಮೀಪದ ಬಿಕರ್ನಕಟ್ಟೆ ಸಮೀಪ ಇಂದು ರಾತ್ರಿ ಸಂಭವಿಸಿದೆ. ಉಳಾಯಿಬೆಟ್ಟು ನಿವಾಸಿ ದಯಾನಂದ ಮೃತ ದುರ್ದೈವಿಯಾಗಿದ್ದಾರೆ. ಬಿಕರ್ನಕಟ್ಟೆ ಸಮೀಪ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸ್ಕೂಟರ್ ಸವಾರ ಲಾರಿಯಡಿಗೆ ಬಿದ್ದಿದ್ದಾರೆ. ಇದರಿಂದಾಗಿ ಸ್ಕೂಟರ್ ಸವಾರನ ದೇಹ ಛಿದ್ರವಾಗಿದೆ. ಸ್ಥಳಕ್ಕೆ ಕದ್ರಿ ಠಾಣಾ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ಭೀಕರ ರಸ್ತೆ ಅಪಘಾತ-ಸ್ಕೂಟರ್ ಸವಾರ ಸಾವು Read More »

ಹೆತ್ತಮ್ಮನನ್ನೇ ಉಸಿರುಗಟ್ಟಿಸಿ ಕೊಲೆಗೈದಳಾ ಬಾಲೆ 15ರ ಬಾಲಕಿ ಕೊಲೆಗಾತಿಯಾಗಿದ್ಯಾಕೆ ಗೊತ್ತಾ?

ಮುಂಬೈ: ಅಪ್ರಾಪ್ತೆ ಬಾಲಕಿಯೋರ್ವಳು ಕರಾಟೆ ಬೆಲ್ಟ್ ನಿಂದ ಹೆತ್ತ ತಾಯಿಯ ಕುತ್ತಿಗೆಯನ್ನು ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬಂದಿದೆ.ಆ ತಾಯಿಗೆ ತನ್ನ ಮಗಳು ವೈದ್ಯಕೀಯ ಶಿಕ್ಷಣ ಅಭ್ಯಾಸ ಮಾಡ ಬೇಕು ಎಂದು ಆಸೆ ಹೊತ್ತಿದ್ದಳು. ಹಾಗಾಗಿ ಈ ವಿಚಾರವನ್ನು ಮಗಳ ಜೊತೆ ಚರ್ಚೆ ಮಾಡುತ್ತಿದ್ದಳು. ಆದರೆ ಮಗಳಿಗೆ ಇದು ಇಷ್ಟವಿರಲಿಲ್ಲ. ಇದೇ ವಿಚಾರಕ್ಕೆ ಅಮ್ಮ-ಮಗಳ ನಡುವೆ ಪದೇಪದೆ ಜಗಳ ಆಗುತ್ತಲೇ ಇತ್ತು. ಹಾಗಾಗಿ ಇದೇ ವಿಚಾರಕ್ಕೆ ಅಮ್ಮನ ವಿರುದ್ಧ ಕಳೆದ ತಿಂಗಳು ಈಕೆ ಪೊಲೀಸರಿಗೆ ದೂರನ್ನೂ

ಹೆತ್ತಮ್ಮನನ್ನೇ ಉಸಿರುಗಟ್ಟಿಸಿ ಕೊಲೆಗೈದಳಾ ಬಾಲೆ 15ರ ಬಾಲಕಿ ಕೊಲೆಗಾತಿಯಾಗಿದ್ಯಾಕೆ ಗೊತ್ತಾ? Read More »

ಕಾಸರಗೋಡು: ಕೊಲೆ ಕೃತ್ಯಕ್ಕೆ ಬಳಸಿದ್ದ ಬೈಕ್ ಠಾಣೆಯಿಂದ ನಾಪತ್ತೆ – ತನಿಖೆಯ ಹಾದಿ ತಪ್ಪಿಸಲು ಯತ್ನಿಸಿದರೇ ಖದೀಮರು?

ಕಾಸರಗೋಡು: ಯುವ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಕೃಪೇಶ್ ಮತ್ತು ಶರತ್ ಲಾಲ್ ಕೊಲೆ ಪ್ರಕರಣದ ಎಂಟನೇ ಆರೋಪಿ ಜೊತೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದ ಬೈಕ್ ಪೊಲೀಸ್ ಠಾಣೆಯಿಂದ ನಾಪತ್ತೆಯಾಗಿದೆ. ಎಂಟನೇ ಆರೋಪಿ ಪನಯಾಲ್‌‌ನ ಸುಬೀಶ್ (29) ಕೃತ್ಯ ನಡಿಸಿದ ದಿನ ಸಂಚರಿಸಿದ್ದ ಬೈಕ್ ಬೇಕಲ ಪೊಲೀಸ್ ಠಾಣೆಯಿಂದ ಕಾಣೆಯಾಗಿರುವುದು ಬೆಳಕಿಗೆ ಬಂದಿದ್ದು ತನಿಖೆಯ ಹಾದಿ ತಪ್ಪಿಸಲು ಈ ಕೃತ್ಯ ನಡೆಸಿರುವುದಾಗಿ ಆರೋಪ ಕೇಳಿ ಬರುತ್ತಿದೆ. ಸಿಬಿಐ ಈಗ ತನಿಖೆ ನಡೆಸುತ್ತಿದ್ದು, ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾರಕಾಸ್ತ್ರ, ವಾಹನ ಮೊದಲಾದವುಗಳ

ಕಾಸರಗೋಡು: ಕೊಲೆ ಕೃತ್ಯಕ್ಕೆ ಬಳಸಿದ್ದ ಬೈಕ್ ಠಾಣೆಯಿಂದ ನಾಪತ್ತೆ – ತನಿಖೆಯ ಹಾದಿ ತಪ್ಪಿಸಲು ಯತ್ನಿಸಿದರೇ ಖದೀಮರು? Read More »

ಜಾರಕಿಹೊಳಿ ವಿರುದ್ಧ ವಜಾಗೊಂಡಿದ್ದ ಪ್ರಕರಣವೊಂದಕ್ಕೆ ಮರುಜೀವ

ಬೆಂಗಳೂರು: ಜಾರಕಿಹೊಳಿ ವಿರುದ್ಧ ವಜಾಗೊಂಡಿದ್ದ ಪ್ರಕರಣವೊಂದಕ್ಕೆ ಮರುಜೀವ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ರಮೇಶ್ ಜಾರಕಿಹೊಳಿ ವಿರುದ್ಧ ಸಹಕಾರಿ ಬ್ಯಾಂಕ್ ಗೆ ನೀಡಿದ್ದ 5.2ಕೋಟಿ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಸಹಕಾರಿ ಬ್ಯಾಂಕ್ ಖಾಸಗಿ ದೂರು ದಾಖಲಿಸಿತ್ತು. ಆದರೆ ಬ್ಯಾಂಕ್ ಪರ ವಕೀಲರು ಕೋರ್ಟ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ಚಿಕ್ಕೋಡಿ ನ್ಯಾಯಾಲಯ ಪ್ರಕರಣ ವಜಾಗೊಳಿಸಿ ಆದೇಶ ನೀಡಿತ್ತು. ಈ ಆದೇಶ

ಜಾರಕಿಹೊಳಿ ವಿರುದ್ಧ ವಜಾಗೊಂಡಿದ್ದ ಪ್ರಕರಣವೊಂದಕ್ಕೆ ಮರುಜೀವ Read More »

‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ದುರಂತ: ಐವರ ಮೇಲೆ FIR

ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಸಂಭವಿಸಿದ ಘಟನೆ ಸಂಬಂಧ ಇದೀಗ ಐವರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲು ಮಾಡಲಾಗಿದೆ. ನಿರ್ದೇಶಕ ಶಂಕರ್ ರಾಜ್, ಫೈಟ್ ಮಾಸ್ಟರ್ ವಿನೋದ್ ಹಾಗೂ ಜೆಸಿಬಿ ಡ್ರೈವರ್ ಸೇರಿ ಐವರ ಮೇಲೆ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಸ್ಯಾಂಡಲ್‍ವುಡ್‍ನಲ್ಲಿ ಮತ್ತೊಂದು ದೊಡ್ಡ ಅವಘಡ ಸಂಭವಿಸಿದೆ. 2016ರಲ್ಲಿ ‘ಮಾಸ್ತಿ ಗುಡಿ’ ಸಿನಿಮಾದ ವೇಳೆ ಫೈಟರ್ ಅನಿಲ್, ಉದಯ್ ಸಾವನ್ನಪ್ಪಿದ್ದರು. ಇದೀಗ ಅಂತದ್ದೇ ಇನ್ನೊಂದು ದುರ್ಘಟನೆ ಸಂಭವಿಸಿದೆ.‘ಲವ್

‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ದುರಂತ: ಐವರ ಮೇಲೆ FIR Read More »