ಟಿಪ್ಪರ್ ಚಾಲಕನ ನಿರ್ಲಕ್ಷ್ಯ: ಚಕ್ರಕ್ಕೆ ಸಿಲುಕಿ ಯುವಕ ದಾರುಣ ಸಾವು!
ವಿಜಯಪುರ: ಟಿಪ್ಪರ್ ಚಾಲಕನೊಬ್ಬನ ನಿರ್ಲಕ್ಷ್ಯದಿಂದಾಗಿ ಯುವಕನೊಬ್ಬ ಪ್ರಾಣ ಕಳೆದುಕೊಂಡ ಘಟನೆ ವಿಜಯಪುರ ಜಿಲ್ಲೆ ಇಂಡಿ ರಸ್ತೆಯ ಹೊರವಲಯದಲ್ಲಿ ನಡೆದಿದೆ. ನಗರದ ನಿವಾಸಿ ರೆಹಮಾನ್ ಮೃತಪಟ್ಟ ವ್ಯಕ್ತಿ. ಟಿಪ್ಪರ್ ಚಾಲಕ ಅಜಾಗರೂಕತೆಯಿಂದ ವಾಹನ ಚಲಾಯಿಸಿಕೊಂಡು ಬಂದಿದ್ದರಿಂದಾಗಿ ಯುವಕ ರೆಹಮಾನ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಮುಂದಿನ ಚಕ್ರದಡಿ ಆತನ ದೇಹ ಸಿಲುಕಿಕೊಂಡಿದ್ದರಿಂದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತವಾದ ಸ್ಥಳಕ್ಕೆ ಎಪಿಎಂಸಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಕೊಂಡಿದ್ದಾರೆ.
ಟಿಪ್ಪರ್ ಚಾಲಕನ ನಿರ್ಲಕ್ಷ್ಯ: ಚಕ್ರಕ್ಕೆ ಸಿಲುಕಿ ಯುವಕ ದಾರುಣ ಸಾವು! Read More »