ಹುಬ್ಬಳ್ಳಿ: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ಕಂದಮ್ಮನ ಅಪಹರಿಸಿ ಅತ್ಯಾಚಾರ ನಡೆಸಿ ಕೊಲೆ| ಪೊಲೀಸರ ಗುಂಡೇಟಿಗೆ ಆರೋಪಿ ಬಲಿ
ಸಮಗ್ರ ನ್ಯೂಸ್: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಲಾಗಿದೆ. ಕೃತ್ಯ ಎಸಗಿದ ಆರೋಪಿ ಬಿಹಾರ ಮೂಲದ ರಿತೇಶ ಕುಮಾರ್ (35) ಎಂಬಾತ ಭಾನುವಾರ ಸಂಜೆ ನಗರದ ತಾರಿಹಾಳ ಸೇತುವೆ ಬಳಿ ಪೊಲೀಸರ ಗುಂಡೇಟಿಗೆ ಮೃತಪಟ್ಟಿದ್ದಾನೆ. ‘ತಾರಿಹಾಳ ಬಳಿ ಸ್ಥಳ ಪರಿಶೀಲನೆಗೆ ಕರೆದೊಯ್ದಾಗ ಪೊಲೀಸ್ ವಾಹನದ ಮೇಲೆ ಕಲ್ಲು ತೂರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಅಶೋಕನಗರದ ಪಿಎಸ್‌ಐ ಅನ್ನಪೂರ್ಣ ಅವರು ಗಾಳಿಯಲ್ಲಿ ಗುಂಡು ಹಾರಿಸಿದರೂ ಆರೋಪಿ ತಪ್ಪಿಸಿಕೊಂಡು ಓಡಲು ಯತ್ನಿಸಿದ. […]







