ಗನ್ ತೋರಿಸಿ ಗ್ರಾ.ಪಂ. ಸದಸ್ಯನಿಂದಲೇ ರೇಪ್ | ಈತನ ಮೇಲಿದೆ 10 ಹೆಣ್ಣುಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪ
ಆನೇಕಲ್: ಮಾಡೆಲಿಂಗ್ ಕೆಲಸದ ಆಮಿಷವೊಡ್ಡಿ ಯುವತಿಯನ್ನು ತನ್ನ ಮನೆಗೆ ಕರೆಸಿಕೊಂಡ ಗ್ರಾಮ ಪಂಚಾಯತ್ ಸದಸ್ಯನೊಬ್ಬ ಆಕೆಗೆ ಗನ್ ತೋರಿಸಿ ಅತ್ಯಾಚಾರವೆಸಗಿದ್ದಾನೆ.ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ಲವಾರದಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅಹಮದ್ ಪಾಷಾ ಅತ್ಯಾಚಾರ ಆರೋಪಿ. ಈತನಿಗೆ ಫೇಸ್‌ಬುಕ್ ನಲ್ಲಿ ಬೆಂಗಳೂರಿನ ಹೆಬ್ಬಾಳ ಮೂಲದ ಯವತಿಯೊಬ್ಬಳ ಪರಿಚಯವಾಗಿತ್ತು.ಆಕೆಗೆ ಮಾಡೆಲಿಂಗ್ ಕ್ಷೇತ್ರದಲ್ಲಿ ಕೆಲಸ ಕೂಡಿಸುವುದಾಗಿ ನಂಬಿಸಿ ಮೊಬೈಲ್ ನಂಬರ್ ಪಡೆದಿದ್ದ. ಅಲ್ಲದೆ ತಾನು ಬನ್ನೇರುಘಟ್ಟ ಕಾರ್ಪೋರೇಟರ್ ಎಂದೂ ಹೇಳಿಕೊಂಡಿದ್ದ. ಲಾಕ್‌ಡೌನ್ ಹಿನ್ನೆಲೆ ಬಡವರಿಗೆ ಆಹಾರ್ ಕಿಟ್ ವಿತರಣೆ ಮಾಡುತ್ತಿರುವ […]