ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಗೂಡ್ಸ್‌ಗಾಡಿ, ಸವಾರ ಸ್ಥಳದಲ್ಲೇ ಸಾವು, ಪೊಲೀಸ್ ಶೆಡ್ ಧ್ವಂಸ. ಆತೂರು ಉದ್ವಿಗ್ನ
ಉಪ್ಪಿನಂಗಡಿ: ವಾಹನ ತಪಾಸಣೆಯ ವೇಳೆ ಗೂಡ್ಸ್ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಆತೂರು ಎಂಬಲ್ಲಿ ಮಂಗಳವಾರದಂದು ನಡೆದಿದ್ದು, ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿ ಪ್ರತಿಭಟನೆ ನಡೆಸಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮೃತ ಸವಾರನನ್ನು ಆತೂರು ಬೈಲು ನಿವಾಸಿ ಹಾರಿಸ್(33) ಎಂದು ಗುರುತಿಸಲಾಗಿದೆ. ಮೃತರು ತನ್ನ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿದ್ದ ತೆರಳುತ್ತಿದ್ದ ವೇಳೆ ಆತೂರು ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಾಹನವನ್ನು ತಡೆದಿದ್ದಾರೆ. […]










