ತುಮಕೂರು: ದೂರು ನೀಡಲು ಠಾಣೆಗೆ ಬಂದ ಮಹಿಳೆಯ ಜೊತೆ ಸರಸವಾಡಿದ ಡಿವೈಎಸ್ಪಿ| ವಿಡಿಯೋ ವೈರಲ್ ಬೆನ್ನಲ್ಲೇ ಪೋಲಿ ಪೊಲೀಸ್ ನಾಪತ್ತೆ
ಸಮಗ್ರ ನ್ಯೂಸ್: ಜಮೀನು ವಿಚಾರಕ್ಕೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ಪೊಲೀಸ್ ಠಾಣೆಯಲ್ಲಿಯೇ ರಾಸಲೀಲೆ ನಡೆಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದಾಗಿ ಇಡೀ ಪೊಲೀಸ್ ಇಲಾಖೆಯೇ ತಲೆ ತಗ್ಗಿಸಿ ನಿಲ್ಲುವಂತಾಗಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ಮಧುಗಿರಿ ಉಪವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗಿದ್ದು ಇದರ ಬೆನ್ನಲ್ಲೇ ಡಿವೈಎಸ್‌ಪಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಜಮೀನು ವ್ಯಾಜ್ಯದ ಬಗ್ಗೆ ಪಾವಗಡ ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ […]