ಕ್ರೈಂ

ನಡುರಸ್ತೆಯಲ್ಲೇ ಅಜ್ಜಿಯನ್ನು ಭೀಕರವಾಗಿ ಕೊಲೆಗೈದ ಮೊಮ್ಮಗ

ಸಮಗ್ರ ನ್ಯೂಸ್: ನಡು ರಸ್ತೆಯಲ್ಲಿಯೇ ಮೊಮ್ಮಗನೋರ್ವ ಸ್ವಂತ ಅಜ್ಜಿಯ ತಲೆ ಮೇಲೆ ಸೈಜ್ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ, ಶಿವಮೊಗ್ಗ ನಗರದ ಮಿಳಘಟ್ಟ ಸಮೀಪದ ಆನಂದರಾವ್ ಬಡಾವಣೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಸುಶೀಲಮ್ಮ (65) ಕೊಲೆಗೀಡಾದವರು, ಕಿಶೋರ (28) ಕೊಲೆಗೈದ ಆರೋಪಿ ಎಂದು ತಿಳಿದು ಬಂದಿದೆ. ಆರೋಪಿ ಮೊಮ್ಮಗ ಗಾಂಜಾ ವ್ಯಸನಿಯಾಗಿದ್ದ. ಈ ಬಗ್ಗೆ ಅಜ್ಜಿ ಪೊಲೀಸರಿಗೆ ದೂರು ನೀಡಲು ತೆರಳುತ್ತಿದ್ದರು. ಇದರಿಂದ ಆಕ್ರೋಶಗೊಂಡ ಮೊಮ್ಮಗ ಕಿಶೋರ ರಸ್ತೆಯಲ್ಲಿಯೇ ಅಜ್ಜಿಯ ತಲೆ ಮೇಲೆ ಸೈಜ್

ನಡುರಸ್ತೆಯಲ್ಲೇ ಅಜ್ಜಿಯನ್ನು ಭೀಕರವಾಗಿ ಕೊಲೆಗೈದ ಮೊಮ್ಮಗ Read More »

ಮಂಗಳೂರು: ಮನೆಯ ಮೇಲ್ಛಾವಣಿ, ಗೋಡೆ ಕುಸಿದು ಮೂವರು ಸಾವು| ನಿದ್ದೆ ಮಾಡುತ್ತಿದ್ದವರು ಚಿರನಿದ್ರೆಗೆ!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಗೆ ಮಂಗಳೂರು ನಗರದ ಕಂಕನಾಡಿಯಲ್ಲಿ ಭೀಕರ ದುರಂತ ಸಂಭವಿಸಿದೆ. ಇಲ್ಲಿನ ಹಳೆಯ ಹಂಚಿನ ಮನೆಯೊಂದರ ಮೇಲ್ಚಾವಣಿ ಹಾಗೂ ಗೋಡೆ ಬುಧವಾರ ಮುಂಜಾನೆ ದಿಢೀರನೆ ಕುಸಿದು ಬಿದ್ದ ಪರಿಣಾಮ, ಮನೆಯೊಳಗೆ ನಿದ್ದೆಯ ಮಂಪರಿನಲ್ಲಿದ್ದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಒಬ್ಬ ಮಹಿಳೆ ಹಾಗೂ ಇಬ್ಬರು ಬಾಲಕಿಯರು ಎಂದು ಗುರುತಿಸಲಾಗಿದೆ. ಘಟನೆಯ ನಡೆದ ತಕ್ಷಣ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ

ಮಂಗಳೂರು: ಮನೆಯ ಮೇಲ್ಛಾವಣಿ, ಗೋಡೆ ಕುಸಿದು ಮೂವರು ಸಾವು| ನಿದ್ದೆ ಮಾಡುತ್ತಿದ್ದವರು ಚಿರನಿದ್ರೆಗೆ!! Read More »

ಬಗೆದಷ್ಟು ಹೊರಬರುತ್ತಿದೆ ರಾಮಮಂದಿರ ಹುಂಡಿಹಣ ಕಳವು ಸಾಕ್ಷ್ಯ| ದಾಖಲೆಗಳ ನಾಶಕ್ಕೆ ಪ್ರಯತ್ನಿಸಿದ ಆರೋಪಿಗಳು

ಸಮಗ್ರ ನ್ಯೂಸ್: ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದ ಬಹುಕೋಟಿ ಮೌಲ್ಯದ ಕಳ್ಳತನ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಹೊಸ ಮತ್ತು ಆಘಾತಕಾರಿ ಸಾಕ್ಷ್ಯಗಳು ಬೆಳಕಿಗೆ ಬಂದಿವೆ. ತನಿಖಾ ಸಂಸ್ಥೆಗಳು ಮುಖ್ಯ ಆರೋಪಿಗಳು ಹಾಗೂ ಅವರ ನಿಕಟವರ್ತಿಗಳ ಬ್ಯಾಂಕ್ ಖಾತೆಗಳು ಮತ್ತು ಆಸ್ತಿಪಾಸ್ತಿಗಳನ್ನು ಪರಿಶೀಲಿಸಿದಾಗ, ಕಳ್ಳತನ ನಡೆದ ಕೆಲವೇ ದಿನಗಳಲ್ಲಿ ಅವರ ಆಸ್ತಿ ಹಾಗೂ ಬ್ಯಾಂಕ್ ಬ್ಯಾಲೆನ್ಸ್ ಸುಮಾರು 100 ಪಟ್ಟು ಹೆಚ್ಚಿರುವುದು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಅದೇ ವೇಳೆ, ಡಿಜಿಟಲ್ ಸಾಕ್ಷ್ಯಗಳನ್ನು ನಾಶಪಡಿಸಲು ಆರೋಪಿಗಳು ಸಂಚು ರೂಪಿಸಿದ್ದರೆಂಬ

ಬಗೆದಷ್ಟು ಹೊರಬರುತ್ತಿದೆ ರಾಮಮಂದಿರ ಹುಂಡಿಹಣ ಕಳವು ಸಾಕ್ಷ್ಯ| ದಾಖಲೆಗಳ ನಾಶಕ್ಕೆ ಪ್ರಯತ್ನಿಸಿದ ಆರೋಪಿಗಳು Read More »

ಅಯೋಧ್ಯೆ: ರಾಮಮಂದಿರದಲ್ಲಿ ಬರೋಬ್ಬರಿ 70 ಬಾರಿ‌ ಹುಂಡಿ ಕಳ್ಳತನ| 7.5 ಕೋಟಿ ಎಗರಿಸಿದ ಕಳ್ಳರ ಗ್ಯಾಂಗ್

ಸಮಗ್ರ ನ್ಯೂಸ್: ದೇಶದ ಕೋಟ್ಯಂತರ ಹಿಂದೂಗಳ ಭಕ್ತಿಯ ಕೇಂದ್ರವಾಗಿರುವ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬೆಚ್ಚಿಬೀಳಿಸುವ ಕಳ್ಳತನದ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಹಲವು ತಿಂಗಳುಗಳಿಂದ ಸಂಘಟಿತ ತಂಡವೊಂದು ( ಹಣ ಎಣಿಸುವ ಗ್ಯಾಂಗ್)‌ ರಾಮಮಂದಿರದ ಹುಂಡಿಯಿಂದ ಹಣ ಕಳವು ಮಾಡುತ್ತಿದ್ದು, ಸುಮಾರು ₹7.5 ಕೋಟಿ ಎಗರಿಸಿರುವ ಆರೋಪ ಎದುರಾಗಿದೆ. ಪ್ರಕರಣದ ತನಿಖೆ ವೇಳೆ ಆರೋಪಿಗಳು ಅತ್ಯಂತ ವ್ಯವಸ್ಥಿತವಾಗಿ ಕಳ್ಳತನ ನಡೆಸಿರುವುದು ಬಹಿರಂಗವಾಗಿದೆ. ದೇವಸ್ಥಾನದ ಭದ್ರತಾ ವ್ಯವಸ್ಥೆಯನ್ನು ಚಾಣಾಕ್ಷತನದಿಂದ ಬಳಸಿಕೊಂಡು, ಸಿಸಿಟಿವಿ ಕ್ಯಾಮೆರಾಗಳ ಕಣ್ತಪ್ಪಿಸಿ ಹಲವು ಬಾರಿ ಹಣ

ಅಯೋಧ್ಯೆ: ರಾಮಮಂದಿರದಲ್ಲಿ ಬರೋಬ್ಬರಿ 70 ಬಾರಿ‌ ಹುಂಡಿ ಕಳ್ಳತನ| 7.5 ಕೋಟಿ ಎಗರಿಸಿದ ಕಳ್ಳರ ಗ್ಯಾಂಗ್ Read More »

ದಿನಕ್ಕೆ ಮೂರ್ನಾಲ್ಕು ಬಾಟಲಿ‌ ಸ್ಟಿಂಗ್ ಕುಡಿಯುತ್ತಿದ್ದ ಯುವಕ ಕಿಡ್ನಿ ವೈಫಲ್ಯದಿಂದ ಸಾವು

ಸಮಗ್ರ ನ್ಯೂಸ್: ದಿನಕ್ಕೆ ಮೂರರಿಂದ ನಾಲ್ಕು ಬಾಟಲಿ ಸ್ಟಿಂಗ್ ಜ್ಯೂಸ್ ಕುಡಿಯುತ್ತಿದ್ದ ಯುವಕನೊಬ್ಬ ಕಿಡ್ನಿ ಫೇಲ್ ಆಗಿ ಮೃತಪಟ್ಟಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ವ್ಯಾಸಂಗ ಮಾಡುತ್ತಿದ್ದ 19 ವರ್ಷದ ಬಾಲು ದೇಸಾಯಿ ಮೃತಪಟ್ಟ ದುರ್ದೈವಿ ಯುವಕ. ಮೃತ ಯುವಕ ಬಾಲು ದೇಸಾಯಿ ಕಳೆದ ಕೆಲವು ದಿನಗಳಿಂದ ಪ್ರತಿದಿನ ಸತತವಾಗಿ 3 ರಿಂದ 4 ಬಾಟಲಿ ಸ್ಟಿಂಗ್ ಜ್ಯೂಸ್ ಅನ್ನು ಅತಿಯಾಗಿ ಸೇವಿಸುತ್ತಿದ್ದ ಎಂದು ಹೇಳಲಾಗಿದೆ.ಅಷ್ಟೊಂದು ಪ್ರಮಾಣದಲ್ಲಿ

ದಿನಕ್ಕೆ ಮೂರ್ನಾಲ್ಕು ಬಾಟಲಿ‌ ಸ್ಟಿಂಗ್ ಕುಡಿಯುತ್ತಿದ್ದ ಯುವಕ ಕಿಡ್ನಿ ವೈಫಲ್ಯದಿಂದ ಸಾವು Read More »

ಪುತ್ತೂರು: ಪ್ರೊಫೆಸರ್‌ ‌ಕೆ.ಎಸ್ ಭಗವಾನ್ ವಿರುದ್ಧ ದೂರು ದಾಖಲು

ಸಮಗ್ರ ನ್ಯೂಸ್: ಶ್ರೀರಾಮನ ಕುರಿತು ನಿರಂತರವಾಗಿ ಅವಹೇಳನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಹಿಂದೂ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಸಾಹಿತಿ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಸಂವರ್ಧನಾ ಸಮಿತಿಯ ನೇತೃತ್ವದಲ್ಲಿ ಈ ಕಾನೂನು ಹೋರಾಟ ಆರಂಭವಾಗಿದೆ.ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ದೂರು: ಶನಿವಾರ ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಮಿತಿಯ ಪದಾಧಿಕಾರಿಗಳು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮೆರವಣಿಗೆಯ ಮೂಲಕ ಠಾಣೆಗೆ

ಪುತ್ತೂರು: ಪ್ರೊಫೆಸರ್‌ ‌ಕೆ.ಎಸ್ ಭಗವಾನ್ ವಿರುದ್ಧ ದೂರು ದಾಖಲು Read More »

ಧರ್ಮಸ್ಥಳ ಬುರುಡೆ ಪ್ರಕರಣ| ಎಸ್ಐಟಿ ಅಧಿಕಾರಿಗಳಿಂದ ಗೃಹಸಚಿವರ‌ ಭೇಟಿ

ಸಮಗ್ರ ನ್ಯೂಸ್: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ವರದಿ ಕೇಳಿರುವ ಬೆನ್ನಲ್ಲೇ ತನಿಖಾ ಪ್ರಕ್ರಿಯೆ ತೀವ್ರಗೊಂಡಿದೆ. ಈ ಮಹತ್ವದ ಬೆಳವಣಿಗೆಯ ಬೆನ್ನಲ್ಲೇ, ವಿಶೇಷ ತನಿಖಾ ದಳದ (SIT) ಮುಖ್ಯಸ್ಥರಾದ ಪ್ರಣಬ್ ಮೊಹಂತಿ ಅವರು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿರುವುದು ಈಗ ತನಿಖಾ ವಲಯದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನಲ್ಲಿ ನಡೆದ ಈ ಉನ್ನತ ಮಟ್ಟದ ಸಭೆಯು ಸುಮಾರು 20 ನಿಮಿಷಗಳ ಕಾಲ ಜರುಗಿತು. ಈ ವೇಳೆ ಎಸ್‌ಐಟಿ ಮುಖ್ಯಸ್ಥ

ಧರ್ಮಸ್ಥಳ ಬುರುಡೆ ಪ್ರಕರಣ| ಎಸ್ಐಟಿ ಅಧಿಕಾರಿಗಳಿಂದ ಗೃಹಸಚಿವರ‌ ಭೇಟಿ Read More »

ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಆರೋಪ| ಅಂಚೆವಿತರಕ ಸುರೇಶ್ ಬಂಧನ

ಸಮಗ್ರ ನ್ಯೂಸ್: ವಿವಾಹಿತ ಮಹಿಳೆಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುತ್ತೋಡಿ ನಿವಾಸಿ ಪ್ರಸ್ತುತ ಅರಸಿಮಕ್ಕಿ ಗ್ರಾಮೀಣ ಅಂಚೆ ವಿತರಕ ಸುರೇಶ್ (35) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯ ವಿವಾಹಿತ ಮಹಿಳೆಯನ್ನು 2023ರ ಡಿಸೆಂಬರ್ ನಲ್ಲಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ.7 ರಂದು ದೂರು ನೀಡಿದ್ದರು. ಪ್ರಕರಣದ ಬಗ್ಗೆ

ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಆರೋಪ| ಅಂಚೆವಿತರಕ ಸುರೇಶ್ ಬಂಧನ Read More »

ಮಾಣಿ: ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು| ಚಾಲಕ ಸಾವು; ಮೂವರು ಗಂಭೀರ

ಸಮಗ್ರ ನ್ಯೂಸ್: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಬುಧವಾರ ಮಧ್ಯಾಹ್ನ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ (ಡಿವೈಡರ್) ಢಿಕ್ಕಿ ಹೊಡೆದು ಪಲ್ಟಿಯಾದ ಭೀಕರ ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಚಾಲಕ ಜಾಗದಲ್ಲೇ ಮೃತಪಟ್ಟಿದ್ದು, ಮೂವರು ಸಹಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಹಾಸನ ಮೂಲದ ಲಕ್ಷ್ಮೀಕಾಂತ್ ಮೃತಪಟ್ಟ ದುರ್ದೈವಿ ಚಾಲಕ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಸಹಪ್ರಯಾಣಿಕರಾದ ರಂಜಿತ್, ದರ್ಶನ್ ಮತ್ತು ಶೋಭಾ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ

ಮಾಣಿ: ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು| ಚಾಲಕ ಸಾವು; ಮೂವರು ಗಂಭೀರ Read More »

ಪುತ್ತೂರು: ಲವ್, ಸೆಕ್ಸ್ ಮತ್ತು ದೋಖಾ| ಆರೋಪಿ ಕೃಷ್ಣ ಜೆ.ರಾವ್ ಹಾಗೂ ಪೋಷಕರಿಗೆ ಹೈಕೋರ್ಟ್ ‌ತರಾಟೆ

ಸಮಗ್ರ ನ್ಯೂಸ್: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಪುತ್ತೂರಿನ ಬಿಜೆಪಿ ಮಾಜಿ ನಾಯಕನ ಪುತ್ರ, ಆರೋಪಿ ಕೃಷ್ಣ ಜೆ. ರಾವ್ ಹಾಗೂ ಆತನ ಪೋಷಕರನ್ನು ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಸಂತ್ರಸ್ತೆ ಹಾಗೂ ಆಕೆಯ 10 ತಿಂಗಳ ಮಗುವಿನ ಜೀವನ ನಿರ್ವಹಣೆಗೆ ಹಣ ಠೇವಣಿ ಇಡಬೇಕೆಂಬ ನ್ಯಾಯಾಲಯದ ಹಿಂದಿನ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ಕೃಷ್ಣ

ಪುತ್ತೂರು: ಲವ್, ಸೆಕ್ಸ್ ಮತ್ತು ದೋಖಾ| ಆರೋಪಿ ಕೃಷ್ಣ ಜೆ.ರಾವ್ ಹಾಗೂ ಪೋಷಕರಿಗೆ ಹೈಕೋರ್ಟ್ ‌ತರಾಟೆ Read More »