ಕ್ರೈಂ

ಗಂಟಲಲ್ಲಿ ಮೀನು ಸಿಲುಕಿ ಯುವಕ ಸಾವು

ಸಮಗ್ರ ನ್ಯೂಸ್: ಯುವಕನ ಗಂಟಲಲ್ಲಿ ಮೀನು ಸಿಲುಕಿ ಸಾವನ್ನಪ್ಪಿದ ಘಟನೆ ಕೇರಳದ ಅಲಪ್ಪುಳ ಜಿಲ್ಲೆಯ ಕಾಯಕುಳಂನಲ್ಲಿ‌ ನಡೆದಿದೆ.. ಮೃತನನ್ನು ಪುತುಪ್ಪಳ್ಳಿಯ ಆದರ್ಶ್ ಅಲಿಯಾಸ್ ಉನ್ನಿ (25) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈತ ಭಾನುವಾರ ಸಂಜೆ 4.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಆದರ್ಶ್ ತನ್ನ ಸ್ನೇಹಿತರೊಂದಿಗೆ ಭತ್ತದ ಗದ್ದೆಯನ್ನು ಬರಿದು ಮಾಡಿ ಮೀನುಗಾರಿಕೆ ನಡೆಸುತ್ತಿದ್ದನು. ಈ ವೇಳೆ ಆತ ತನ್ನ ಬಾಯಿಯಲ್ಲಿ ಹಿಡಿದಿದ್ದ ಮೀನು ಜಾರಿ ಗಂಟಲಲ್ಲಿ ಸಿಲುಕಿಕೊಂಡಿದೆ. ಕೂಡಲೇ ಯುವಕನನ್ನು ಓಚಿರಾ ಬಳಿಯ […]

ಗಂಟಲಲ್ಲಿ ಮೀನು ಸಿಲುಕಿ ಯುವಕ ಸಾವು Read More »

ಸೂಟ್‌ಕೇಸ್‌ನಲ್ಲಿ ‘ಕೈ’ ಕಾರ್ಯಕರ್ತೆ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಹರಿಯಾಣ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಮೃತದೇಹ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ. ಈ ಹಿಂದೆ ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ (22) ಮೃತದೇಹ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಇನ್ನೂ ಈ ಸಾವಿನ ಬಗ್ಗೆ ಅನುಮಾನಗಳು ಭುಗಿಲೆದ್ದಿದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ನಾಯಕರು ಹಾಗೂ ಮುಖಂಡರು ಆಗ್ರಹಿಸಿದ್ದಾರೆ. ಸಂಪ್ಲಾ ಬಸ್ ನಿಲ್ದಾಣದ ಬಳಿ ದಾರಿಹೋಕರು ಸೂಟ್‌ಕೇಸ್ ಅನ್ನು ಪತ್ತೆಹಚ್ಚಿದ್ದು, ಅನುಮಾನಗೊಂಡು ಪೊಲೀಸರಿಗೆ

ಸೂಟ್‌ಕೇಸ್‌ನಲ್ಲಿ ‘ಕೈ’ ಕಾರ್ಯಕರ್ತೆ ಮೃತದೇಹ ಪತ್ತೆ Read More »

ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಅಪಘಾತ : ಇಬ್ಬರು ಯಾತ್ರಿಕರ ಸಾವು

ಸಮಗ್ರ ನ್ಯೂಸ್: ಪ್ರಯಾಗ್ ರಾಜ್ ನಲ್ಲಿ ಕುಂಭ ಮೇಳ ನಡೆಯುತ್ತಿದ್ದು, ಅಲ್ಲಿಗೆ ತೆರಳುತ್ತಿದ್ದ ರಾಜ್ಯದ ಇಬ್ಬರು ಯಾತ್ರಿಗಳು ಗುಜರಾತ್​​ನ ಪೋರ್ ​ಬಂದರ್​​ ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ನಿವಾಸಿಗಳಾದ ವಿಶ್ವನಾಥ ಅವಜಿ (55), ಮಲ್ಲಿಕಾರ್ಜುನ ಸದ್ದಲಗಿ (40) ಮೃತ ದುರ್ದೈವಿಗಳು. ವಾಹನದಲ್ಲಿ ಒಟ್ಟು 17 ಜನ ಪ್ರಯಾಗ್​ರಾಜ್​ಗೆ ತೆರಳುತ್ತಿದ್ದರು. ಯಾತ್ರಾರ್ಥಿಗಳಿದ್ದ ವಾಹನ ಮಾರ್ಗ ಮಧ್ಯೆ ನಿಂತಿದ್ದ ಟಿಪ್ಪರ್​​ಗೆ ಡಿಕ್ಕಿಯಾಗಿದೆ. ವಾಹನದಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಪೋರಬಂದರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ

ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಅಪಘಾತ : ಇಬ್ಬರು ಯಾತ್ರಿಕರ ಸಾವು Read More »

ಕಡಬ: ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ| ಐತ್ತೂರು ಗ್ರಾ.ಪಂ ಸದಸ್ಯ ಮನಮೋಹನ ಗೋಳ್ಯಾಡಿ‌ ಗಂಭೀರ

ಸಮಗ್ರ ನ್ಯೂಸ್: ಬೈಕ್‌ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ, ಐತೂರು ಗ್ರಾಮ ಪಂಚಾಯತ್ ಸದಸ್ಯ ಮನಮೋಹನ್ ಗೋಲ್ಯಾಡಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಮಧ್ಯಾಹ್ನ ಪೆರಿಯಶಾಂತಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ‌ ಸಮೀಪದ‌ ಕಲ್ಲಾಜೆ ‌ಎಂಬಲ್ಲಿ ಸಂಭವಿಸಿದೆ. ಅಪಘಾತದಲ್ಲಿ ತೀವ್ರತರವಾದ ಗಾಯಗಳಾಗಿದ್ದು, ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ ಜೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕಡಬ: ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ| ಐತ್ತೂರು ಗ್ರಾ.ಪಂ ಸದಸ್ಯ ಮನಮೋಹನ ಗೋಳ್ಯಾಡಿ‌ ಗಂಭೀರ Read More »

ಗುಂಡ್ಯ: ಚಲಿಸುತ್ತಿದ್ದ ಲಾರಿಯಿಂದ ಏಕಾಏಕಿ ಹೊರಜಿಗಿದ ನಿರ್ವಾಹಕ| ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಲಾರಿಯಿಂದ ಜಿಗಿದು ಗಂಭೀರ ಗಾಯಗೊಂಡ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಫೆ.25ರಂದು ಮುಂಜಾನೆ ನಡೆದಿದೆ. ತಮಿಳುನಾಡು ಚಿನ್ನತೂಬುರ್ ನಾಗಪಟ್ಟಿನಮ್ ನಿವಾಸಿ ಲಕ್ಷ್ಮಣನ್ ಸೆಂಗುತ್ತುವನ್(46ವ.) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ತಮಿಳುನಾಡಿನ ಕೃಷ್ಣಗಿರಿಯಿಂದ ಕಲ್ಲಂಗಡಿಯನ್ನು ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದ ಲಾರಿಯು ಗುಂಡ್ಯ ಸಮೀಪದ ಅಡ್ಡಹೊಳೆ ತಲುಪುತಿದ್ದಂತೆ ಏಕಾಏಕಿಯಾಗಿ ನಿರ್ವಾಹಕ ಲಾರಿಯಿಂದ ಜಿಗಿದು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು

ಗುಂಡ್ಯ: ಚಲಿಸುತ್ತಿದ್ದ ಲಾರಿಯಿಂದ ಏಕಾಏಕಿ ಹೊರಜಿಗಿದ ನಿರ್ವಾಹಕ| ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವು Read More »

ಬೆಳ್ತಂಗಡಿ: ನದಿಗೆ ಬಿದ್ದು ಬಾಲಕ‌ ಸಾವು

ಸಮಗ್ರ ನ್ಯೂಸ್: ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಮೃತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ರವಿವಾರ ಸಂಜೆ ಸಂಭವಿಸಿದೆ. ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ವಸಂತ ಮತ್ತು ವಿಜಯ ದಂಪತಿಯ ಪುತ್ರ ಪವನ್‌ (16) ಮೃತ ಬಾಲಕ. ಈತ ಆರಂಬೋಡಿ ಗ್ರಾಮದಲ್ಲಿರುವ ಸೂರಂಟೆ ಮನೆಯ ಅಜ್ಜಿಯ ಮನೆಯಲ್ಲಿದ್ದು ಸಿದ್ಧಕಟ್ಟೆ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ. ಈತ ತನ್ನ ಅಜ್ಜಿ ಮನೆಗೆಂದು ಬಂದವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು ಈ ಮೂಲಕ ದುರಂತ ಅಂತ್ಯ ಕಂಡಿದ್ದಾನೆ. ವೇಣೂರು ಪೊಲೀಸ್‌ ಠಾಣೆಯಲ್ಲಿ

ಬೆಳ್ತಂಗಡಿ: ನದಿಗೆ ಬಿದ್ದು ಬಾಲಕ‌ ಸಾವು Read More »

ಜಿಮ್ಸ್ ಆಸ್ಪತ್ರೆ ವೈದ್ಯರ ಎಡವಟ್ಟು| ಬಾಣಂತಿ ಹೊಟ್ಟೆಯಲ್ಲಿ ಸಿಕ್ತು ಹತ್ತಿ, ಬಟ್ಟೆ ಉಂಡೆ

ಸಮಗ್ರ ನ್ಯೂಸ್: ಕಲಬುರಗಿಯ ಜಿಮ್ಸ್‌ ಆಸ್ಪತ್ರೆಯ ವೈದ್ಯರು ಮಹಿಳೆಯೊಬ್ಬರಿಗೆ ಸಿಸೇರಿಯನ್‌ ಮಾಡುವ ವೇಳೆ ಹೊಟ್ಟೆಯಲ್ಲೇ ಬಟ್ಟೆ ಉಂಡೆ ಹಾಗೂ ಹತ್ತಿ ಬಿಟ್ಟು ಹೊಲಿಗೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಫೆ. 5ರಂದು ಭಾಗ್ಯಶ್ರೀ ಎಂಬ ಮಹಿಳೆಗೆ ಸಿಸೇರಿಯನ್‌ ಆಗಿತ್ತು. ಈ ವೇಳೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು ಹೊಟೆಯಲ್ಲೇ ಬಟ್ಟೆ ಉಂಡೆ ಹಾಗೂ ಹತ್ತಿ ಬಿಟ್ಟು ಹೊಲಿಗೆ ಹಾಕಿದ್ದಾರೆ. ತಕ್ಷಣಕ್ಕೆ ಇದು ಮಹಿಳೆಯ ಅರಿವಿಗೆ ಬಂದಿಲ್ಲ. ಒಂದು ವಾರದ ಬಳಿಕ ಹೊಟ್ಟೆನೋವು ಕಾಣಿಸಿಕೊಂಡಿದೆ. ಈ ವೇಳೆ ಸ್ಕ್ಯಾನಿಂಗ್‌ಗೆ

ಜಿಮ್ಸ್ ಆಸ್ಪತ್ರೆ ವೈದ್ಯರ ಎಡವಟ್ಟು| ಬಾಣಂತಿ ಹೊಟ್ಟೆಯಲ್ಲಿ ಸಿಕ್ತು ಹತ್ತಿ, ಬಟ್ಟೆ ಉಂಡೆ Read More »

ಹಾಸನ: ಖಾಸಗಿ ಬಸ್ ಹರಿದು ಸ್ಥಳದಲ್ಲೇ ಇಬ್ಬರು ಸಾವು

ಸಮಗ್ರ ನ್ಯೂಸ್: ಧರ್ಮಸ್ಥಳಕ್ಕೆ ಹೋಗುತ್ತಿದ್ದ ಪಾದಚಾರಿಗಳ ಮೇಲೆ ಖಾಸಗಿ ಬಸ್ ಒಂದು ಹರಿದು ಪಾದಯತ್ರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಮೃತರು ಸುರೇಶ್ (60) ಮತ್ತು ಕುಮಾರ್ (55) ಎಂದು ತಿಳಿದುಬಂದಿದೆ. ಅಲ್ಲದೇ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಆನಗೋಳ ಗ್ರಾಮದವರು,ಇನ್ನೂ ಗಂಭೀರವಾಗಿ ಗಾಯಗೊಂಡ ದಿನೇಶ್ ಗೆ ಹಾಸನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತು ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನ: ಖಾಸಗಿ ಬಸ್ ಹರಿದು ಸ್ಥಳದಲ್ಲೇ ಇಬ್ಬರು ಸಾವು Read More »

ಪ್ರಯಾಗ್ ರಾಜ್: ಭೀಕರ ಅಪಘಾತದಲ್ಲಿ ಕುಂಭಮೇಳಕ್ಕೆ ತೆರಳುತ್ತಿದ್ದ 6 ಮಂದಿ‌ ಸಾವು

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ರಾಜ್ಯದ ಬೀದರ್ ಜಿಲ್ಲೆಯ 6 ಮಂದಿ ಭಕ್ತರು ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಬೀದರ್ ಜಿಲ್ಲೆಯ ಐವರು ತೆರಳಿದ್ದರು. ಈ ವೇಳೆ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ 5 ಜನರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕುಂಭಮೇಳ ಮುಗಿಸಿ

ಪ್ರಯಾಗ್ ರಾಜ್: ಭೀಕರ ಅಪಘಾತದಲ್ಲಿ ಕುಂಭಮೇಳಕ್ಕೆ ತೆರಳುತ್ತಿದ್ದ 6 ಮಂದಿ‌ ಸಾವು Read More »

ರೀಲ್ಸ್ ಮಾಡುವಾಗ ರೈಲು ಡಿಕ್ಕಿಯಾಗಿ ಮೂವರು ಸಾವು

ಸಮಗ್ರ ನ್ಯೂಸ್: ರೀಲ್ಸ್ ಮಾಡುವಾಗ ರೈಲು ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಸಿದ್ದನಾಯಕನಹಳ್ಳಿ ರೈಲ್ವೇ ಹಳಿ ಬಳಿ ನಡೆದಿದೆ. ಮೃತರನ್ನು ರಾಹುಲ್ (18) ಬಿಕೇಶ್ (20) ಲಲನ್ (24) ಎಂದು ಗುರುತಿಸಲಾಗಿದೆ.ಉತ್ತರ ಪ್ರದೇಶ ಮೂಲದ ಮೂವರು ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದರು. ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದಾಗ ರೀಲ್ಸ್ ಮಾಡಲು ಮುಂದಾಗಿದ್ದಾರೆ. ರೈಲು ಡಿಕ್ಕಿಯಾದ ರಭಸಕ್ಕೆ ಮೃತದೇಹಗಳು ಛಿದ್ರ ಛಿದ್ರ ಆಗಿ ಬಿದ್ದಿದೆ. ಸತ್ಯಸಾಯಿ ಪ್ಯಾಸೆಂಜರ್ ರೈಲು ಡಿಕ್ಕಿ

ರೀಲ್ಸ್ ಮಾಡುವಾಗ ರೈಲು ಡಿಕ್ಕಿಯಾಗಿ ಮೂವರು ಸಾವು Read More »