ಬೆಳ್ತಂಗಡಿ: ಮಹಿಳೆಯಿಂದ ವಿದ್ಯಾರ್ಥಿಯನ್ನು ಹನಿಟ್ರ್ಯಾಪ್ ಗೆ ಕೆಡವಲು ಯತ್ನ| ಪೊಲೀಸರ ತನಿಖೆಯಿಂದ ಬಚಾವಾದ ವಿದ್ಯಾರ್ಥಿ
ಸಮಗ್ರ ನ್ಯೂಸ್: ಮಹಿಳೆಯೋರ್ವಳು ತನ್ನ ಫೇಸ್‌ಬುಕ್ ಫ್ರೆಂಡ್ಸ್ ಬಳಗದಲ್ಲಿದ್ದ ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಲೆತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಬೆಳಕಿಗೆ ಬಂದಿದೆ. ಆದರೆ ಪೊಲೀಸ್ ಇಲಾಖಾಧಿಕಾರಿಗಳು ಕಂಗೆಟ್ಟ ವಿದ್ಯಾರ್ಥಿಯನ್ನು ಸಕಾಲಿಕ ಕ್ರಮದಿಂದ ರಕ್ಷಿಸಿದ್ದಾರೆ. ಬೆಳ್ತಂಗಡಿ ನಿವಾಸಿಯಾಗಿರುವ ಕಾಲೇಜು ವಿದ್ಯಾರ್ಥಿಯೋರ್ವನ ಫೇಸ್‌ಬುಕ್ ಸಂಪರ್ಕದಲ್ಲಿದ್ದ ಮಹಿಳೆಯೋರ್ವಳು ಆತ್ಮೀಯತೆಯನ್ನು ಮೂಡಿಸಿ ವಿದ್ಯಾರ್ಥಿಗೆ ವೀಡಿಯೊ ಕರೆ ಮಾಡಿದ್ದಳು. ಕರೆ ಸ್ವೀಕರಿಸಿದ ವಿದ್ಯಾರ್ಥಿಗೆ ತನ್ನ ನಗ್ನ ದೇಹವನ್ನು ಕಾಣಿಸಿ ಆತನ ಭಾವನೆಯನ್ನು ಕೆರಳಿಸಲು ಯತ್ನಿಸಿದ್ದಾಳೆ. ಬಳಿಕ










