ಮಂಗಳೂರು: ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತ; ಯುವಕ ಸಾವು
ಸಮಗ್ರ ನ್ಯೂಸ್: ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಯುವಕನೋರ್ವ ಸಾವನ್ನಪ್ಪಿದ ಘಟನೆ ಮೂಡುಪೆರಾರ ಕಾಯರಾಣೆಯಲ್ಲಿ ಸೆಪ್ಟೆಂಬರ್ 1 ರಂದು ನಡೆದಿದೆ. ಮೂಡುಪೆರಾರ ಕಾಯರಾಣೆ ನಿವಾಸಿ ದಿ| ಆನಂದ ಪೂಜಾರಿ ಅವರ ಪುತ್ರ ಪ್ರದೀಪ್ ಪೂಜಾರಿ (31) ಮೃತ ದುರ್ದೈವಿ. ಭಾನುವಾರ ಸಂಜೆ ಮೂಡುಪೆರಾರ ಕಾಯಾರಣೆಯಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಪ್ರದೀಪ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಮೊದಲಿಗೆ ಕೈಕಂಬದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು, ನಂತರ ಬಜ್ಪೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕಚಿಕಿತ್ಸೆ ನೀಡಲಾಯಿತು. ನಂತರ ಅವರನ್ನು […]
ಮಂಗಳೂರು: ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತ; ಯುವಕ ಸಾವು Read More »







