ರಾಷ್ಟ್ರೀಯ

ದೇಶಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ| ‘ಭಾರತೀಯರ ಬಲದಿಂದ ದೇಶ ಪ್ರಗತಿಯತ್ತ‌ ಸಾಗುತ್ತಿದೆ’ – ಪ್ರಧಾನಿ ಮೋದಿ

ಸಮಗ್ರ ನ್ಯೂಸ್: 80ನೇ ಸ್ವಾತಂತ್ರ್ಯ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಿದರು. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಜನತೆಗೆ ಶುಭಾಶಯ ಕೋರಿದ ಪ್ರಧಾನಿ, 140 ಕೋಟಿ ಭಾರತೀಯರಿಂದ ಬಲ ಪಡೆದು ದೇಶವು ವಿವಿಧ ಕ್ಷೇತ್ರಗಳಲ್ಲಿ ಪ್ರಗತಿಯ ಹೊಸ ಎತ್ತರವನ್ನು ಏರುತ್ತಿದೆ ಎಂದು ಹೇಳಿದರು. ಹರ್‌ ಘರ್‌ ತಿರಂಗಾದ ಕುರಿತು ಮಾತನಾಡಿ, ಇಂದು ಪ್ರತಿಯೊಬ್ಬರ ಹೃದಯ ಬಡಿತವೂ ವಂದೇ ಮಾತರಂ ಘೋಷದಿಂದ ಪ್ರತಿಧ್ವನಿಸುತ್ತಿದೆ. ಇಂದು ಪ್ರತಿಯೊಂದು ಮನೆಯಲ್ಲೂ ಪ್ರತಿಯೊಂದು ಹೃದಯದಲ್ಲೂ ತ್ರಿವರ್ಣ […]

ದೇಶಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ| ‘ಭಾರತೀಯರ ಬಲದಿಂದ ದೇಶ ಪ್ರಗತಿಯತ್ತ‌ ಸಾಗುತ್ತಿದೆ’ – ಪ್ರಧಾನಿ ಮೋದಿ Read More »

ರಾಜ್ಯಾದ್ಯಂತ ಮುಂದಿನ ಎರಡು ದಿನ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಬಿಸಿಲು- ಮಳೆಯ ಆಟದ ಮಧ್ಯೆ ರಾಜ್ಯದಲ್ಲಿ ಮತ್ತೊಮ್ಮೆ ವರುಣದೇವನ ಆರ್ಭಟ ಜೋರಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಅಪ್ಡೇಟ್ ಪ್ರಕಾರ, ಆಗಸ್ಟ್ 13 ಹಾಗೂ 14 ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಆಗಸ್ಟ್ 13 ಮತ್ತು 14 ರಂದು ಗುಡುಗು, ಸಿಡಿಲು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು

ರಾಜ್ಯಾದ್ಯಂತ ಮುಂದಿನ ಎರಡು ದಿನ ಭಾರೀ ಮಳೆ ಮುನ್ಸೂಚನೆ Read More »

ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ‌ಮಸೂದೆ ಅಂಗೀಕಾರ

ಸಮಗ್ರ ನ್ಯೂಸ್: ಲೋಕಸಭೆಯಲ್ಲಿ ಬುಧವಾರ ತೀವ್ರ ಗದ್ದಲ ಮತ್ತು ವಾಕ್ಸಮರದ ನಡುವೆಯೇ ಸಾರ್ವಜನಿಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದ ಸಾರ್ವಜನಿಕ ಪರೀಕ್ಷೆಗಳು (ಅನ್ಯಾಯ ವಿಧಾನಗಳ ತಡೆ) ತಿದ್ದುಪಡಿ ಮಸೂದೆ-2026 ಧ್ವನಿಮತದ ಮೂಲಕ ಅಂಗೀಕಾರವಾಯಿತು. ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬಳಿಕ ದೇಶಾದ್ಯಂತ ಉಂಟಾದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ತಿದ್ದುಪಡಿ ಮಸೂದೆಯನ್ನು ಮಂಡಿಸಿತ್ತು.ಇದೇ ವೇಳೆ, ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಗೃಹ ಸಚಿವ ಅಮಿತ್

ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ‌ಮಸೂದೆ ಅಂಗೀಕಾರ Read More »

ರಾಜ್ಯಸಭೆಯಲ್ಲಿ ‘ವಂದೇ ಮಾತರಂ’ ತಿದ್ದುಪಡಿ ಮಸೂದೆ ಅಂಗೀಕಾರ

ಸಮಗ್ರ ನ್ಯೂಸ್: ‘ವಂದೇ ಮಾತರಂ’ ರಾಷ್ಟ್ರಗೀತೆಗೆ ಗೌರವ ಸೂಚಿಸದೆ ಅಪಮಾನಿಸುವುದನ್ನು ಅಪರಾಧವೆಂದು ಪರಿಗಣಿಸುವ ಮಹತ್ವದ ‘ರಾಷ್ಟ್ರೀಯ ಗೌರವಕ್ಕಾಗುವ ಅಪಮಾನ ತಡೆ (ತಿದ್ದುಪಡಿ) ಮಸೂದೆ – 2026’ ಅನ್ನು ಬುಧವಾರ ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು. ಸಂಸತ್ತಿನ ಕಾರ್ಯಕಲಾಪಗಳ ಪಟ್ಟಿಯಲ್ಲಿದ್ದಂತೆ ಪರಿಶೀಲನೆ ಮತ್ತು ಅಂಗೀಕಾರಕ್ಕಾಗಿ ಈ ಮಸೂದೆಯನ್ನು ಮೇಲ್ಮನೆಯಲ್ಲಿ ಚರ್ಚೆಗೆ ತೆಗೆದುಕೊಳ್ಳಲಾಗಿತ್ತು. ಈ ಮಹತ್ವದ ಮಸೂದೆಯ ಚರ್ಚೆಯ ವೇಳೆಯೂ ಪ್ರತಿಪಕ್ಷಗಳ ನಾಯಕರು ತೀವ್ರ ಪ್ರತಿಭಟನೆ ಹಾಗೂ ಘೋಷಣೆಗಳನ್ನು ಕೂಗಿದರು. ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ನಡೆದ ‘ನೀಟ್’ ಪರೀಕ್ಷಾ ಅಕ್ರಮದ ವಿರುದ್ಧದ ವಿದ್ಯಾರ್ಥಿ ಪ್ರತಿಭಟನೆಯ

ರಾಜ್ಯಸಭೆಯಲ್ಲಿ ‘ವಂದೇ ಮಾತರಂ’ ತಿದ್ದುಪಡಿ ಮಸೂದೆ ಅಂಗೀಕಾರ Read More »

ಸಿಜೆಪಿ ಪ್ರತಿಭಟನೆ ವೇಳೆ ಹಿಂಸಾಚಾರ| ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆದ ಬಿಹಾರ ಸರ್ಕಾರ

ಸಮಗ್ರ ನ್ಯೂಸ್: ರಾಜ್ಯದಲ್ಲಿ ನೀಟ್ ಪರೀಕ್ಷೆ ವಿಷಯದ ಕುರಿತು ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಬಂಧಿಸಲ್ಪಟ್ಟ ಪ್ರತಿಭಟನಾಕಾರರ ಬಿಡುಗಡೆ ಮತ್ತು ಅವರ ವಿರುದ್ಧದ ಎಫ್‌ಐಆರ್‌ಗಳನ್ನು ಹಿಂತೆಗೆದುಕೊಳ್ಳುವುದಾಗಿ ಬಿಹಾರ ಬಿಜೆಪಿ ಸರ್ಕಾರ ಸೋಮವಾರ(ಜು.27) ಪ್ರಕಟಿಸಿದೆ. ಈ ಕುರಿತು ಅಧಿಸೂಚನೆ ಹೊರಡಿಸಿರುವ ಬಿಹಾರ ಸರ್ಕಾರದ ಗೃಹ ಇಲಾಖೆ, ಜುಲೈ 26ರ ಸಂಜೆ 6 ಗಂಟೆಯವರೆಗೆ ದಾಖಲಾಗಿರುವ ಎಫ್​ಐಆರ್ ಮತ್ತು ಬಂಧಿಸಲ್ಪಟ್ಟ ಎಲ್ಲರನ್ನು ಬಿಡುಗಡೆ ಮಾಡಲಾಗುವುದು. ಯಾವುದೇ ಆರೋಪಿಗಳ ವಿರುದ್ಧ ಮುಂದಿನ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಹೇಳಿದೆ. ನೀಟ್ ಪತ್ರಿಕೆ

ಸಿಜೆಪಿ ಪ್ರತಿಭಟನೆ ವೇಳೆ ಹಿಂಸಾಚಾರ| ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆದ ಬಿಹಾರ ಸರ್ಕಾರ Read More »

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ| ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಸಮಗ್ರ ನ್ಯೂಸ್: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನೆ, ಆಕ್ರೋಶಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮಣಿದಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನೀಟ್ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ, ಆಕ್ರೋಶಗಳು ವ್ಯಕ್ತವಾಗಿತ್ತು. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಒತ್ತಾಯಿಸಿದ್ದವು. ಅಲ್ಲದೇ ದೆಹಲಿಯ ಜಂತರ್-ಮಂತರ್ ನಲ್ಲಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ| ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ Read More »

ಮಧ್ಯರಾತ್ರಿ ಮತ್ತೊಂದು ವಿಡಿಯೋ ಹರಿಬಿಟ್ಟ ಪ್ರಧಾನಿ ಮೋದಿ| ಈ ಬಾರಿ ಹೇಳಿದ್ದೇನು?

ಸಮಗ್ರ ನ್ಯೂಸ್: ನೀಟ್(ಯುಜಿ) ಪರೀಕ್ಷೆಯಲ್ಲಿ ಅಕ್ರಮಗಳ ಕುರಿತು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನಡೆಸಿದ ನಿರಂತರ ಪ್ರತಿಭಟನೆಗಳ ನಡುವೆಯೇ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ತ್ವರಿತಗೊಳಿಸುವುದಾಗಿ ಭರವಸೆ ನೀಡಿದ ನಂತರ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಡರಾತ್ರಿಯ ವೀಡಿಯೊವನ್ನು ಹಂಚಿಕೊಂಡರು ಮತ್ತು ಅವರ ‘ಒಳನೋಟವುಳ್ಳ ಸಲಹೆಗಳಿಗಾಗಿ’ ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ. “ಧನ್ಯವಾದ ಸ್ನೇಹಿತರೇ! ನಿನ್ನೆ ರಾತ್ರಿ ನಿಮ್ಮೆಲ್ಲರನ್ನು ಭೇಟಿ ಮಾಡಲು ನನಗೆ ಅವಕಾಶ ಸಿಕ್ಕಿತು. ನಾನು ಪೋಸ್ಟ್ ಮಾಡಿದ ವೀಡಿಯೊಗೆ ಪ್ರತಿಕ್ರಿಯೆ ಅಪಾರವಾಗಿತ್ತು. ತಮ್ಮ ಒಳನೋಟವುಳ್ಳ ಸಲಹೆಗಳನ್ನು ಒದಗಿಸಿದ್ದಕ್ಕಾಗಿ

ಮಧ್ಯರಾತ್ರಿ ಮತ್ತೊಂದು ವಿಡಿಯೋ ಹರಿಬಿಟ್ಟ ಪ್ರಧಾನಿ ಮೋದಿ| ಈ ಬಾರಿ ಹೇಳಿದ್ದೇನು? Read More »

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ| NTAನ 47 ಅಧಿಕಾರಿಗಳು ವಜಾ

ಸಮಗ್ರ ನ್ಯೂಸ್: ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಮತ್ತು ಭಾರಿ ಸಾರ್ವಜನಿಕ ಆಕ್ರೋಶದ ಬೆನ್ನಲ್ಲೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಇತಿಹಾಸದಲ್ಲೇ ಅತಿದೊಡ್ಡ ಸಾಂಸ್ಥಿಕ ಬದಲಾವಣೆಗೆ ಕೇಂದ್ರ ಸರ್ಕಾರ ಮುನ್ನುಡಿ ಬರೆದಿದೆ. ಈ ಬೃಹತ್ ಸುಧಾರಣಾ ಕಾರ್ಯಾಚರಣೆಯ ಭಾಗವಾಗಿ ಈಗಾಗಲೇ ಸಂಸ್ಥೆಯ ಸುಮಾರು 47 ಸಿಬ್ಬಂದಿಗಳನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ನೀಟ್-ಯುಜಿ, ಜೆಇಇ ಮೇನ್ (JEE Main) ಹಾಗೂ ಸಿಯುಇಟಿ (CUET) ಸೇರಿದಂತೆ ದೇಶದ 15 ರಿಂದ 20 ಪ್ರಮುಖ ರಾಷ್ಟ್ರೀಯ ಮಟ್ಟದ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ| NTAನ 47 ಅಧಿಕಾರಿಗಳು ವಜಾ Read More »

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ| ಸಚಿವ ಧರ್ಮೇಂದ್ರ ಪ್ರಧಾನ್ ತಲೆದಂಡ ಫಿಕ್ಸ್

ಸಮಗ್ರ ನ್ಯೂಸ್: ದೇಶಾದ್ಯಂತ ಸಂಚಲನ ಮೂಡಿಸಿರುವ ಎನ್‌ಇಇಟಿ-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಪ್ರಕರಣದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಮತ್ತು ಸಿಜೆಪಿ (CJP) ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಕೇಂದ್ರ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರಿಗೆ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ| ಸಚಿವ ಧರ್ಮೇಂದ್ರ ಪ್ರಧಾನ್ ತಲೆದಂಡ ಫಿಕ್ಸ್ Read More »

23ದಿನಗಳ ಬಳಿಕ ಉಪವಾಸ ಕೈ ಬಿಟ್ಟ ಸೋನಂ ವಾಂಗ್ಚುಕ್| ಪೊಲೀಸ್ ದೌರ್ಜನ್ಯ ಖಂಡಿಸಿ ಇಂದು ದೇಶಾದ್ಯಂತ ಪ್ರತಿಭಟನೆಗೆ ಕಾಕ್ರೊಚ್ ಕರೆ

ಸಮಗ್ರ ನ್ಯೂಸ್: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅವ್ಯವಹಾರಗಳನ್ನು ವಿರೋಧಿಸಿ ಜೂ.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ಸಾಮಾಜಿಕ ಹೋರಾಟಗಾರ ಸೋನಮ್‌ ವಾಂಗ್ಚುಕ್‌ ನಿನ್ನೆ (ಜು.23) ರಾತ್ರಿ ತಮ್ಮ ಉಪವಾಸ ಸತ್ಯಾಗ್ರಹ ಕೈಬಿಟ್ಟಿದ್ದಾರೆ. ಪ್ರಮುಖ ಶಿಕ್ಷಣ ತಜ್ಞ ಮತ್ತು ಸಾಮಾಜಿಕ ಕಾರ್ಯಕರ್ತೆ ಸೋನಮ್ ವಾಂಗ್ಚುಕ್ ಗುರುವಾರ ಮಧ್ಯರಾತ್ರಿಯ ತಮ್ಮ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ರು. ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ, ಡಾ. ಜಿತೇಂದ್ರ ಸಿಂಗ್ ಮತ್ತು ಲಡಾಖ್

23ದಿನಗಳ ಬಳಿಕ ಉಪವಾಸ ಕೈ ಬಿಟ್ಟ ಸೋನಂ ವಾಂಗ್ಚುಕ್| ಪೊಲೀಸ್ ದೌರ್ಜನ್ಯ ಖಂಡಿಸಿ ಇಂದು ದೇಶಾದ್ಯಂತ ಪ್ರತಿಭಟನೆಗೆ ಕಾಕ್ರೊಚ್ ಕರೆ Read More »