ರಾಷ್ಟ್ರೀಯ

ಜಿ-೨೦ ಶೃಂಗಸಭೆಯಲ್ಲಿ ಇಂಡಿಯಾ ಬದಲು ‘ಭಾರತ’ ದರ್ಶನ

ಸಮಗ್ರ ನ್ಯೂಸ್: ದೇಶದ ಹೆಸರು ಬದಲಾವಣೆ ವಿಚಾರ ಭಾರಿ ಚರ್ಚೆಯಲ್ಲಿದ್ದು, ಇದೀಗ ನವದೆಹಲಿಯಲ್ಲಿ ನಡೆಯುತ್ತಿರುವ ಶೃಂಗಸಭೆಯಲ್ಲಿ ಕೂಡ ‘ಭಾರತ್’ ಹೆಸರಿನ ಪ್ರಸ್ತಾಪ ಬಂದಿದೆ. ಇಂದು ನಡೆಯುತ್ತಿರುವ ಜಿ 20 ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದಾಗ ದೇಶದ ಹೆಸರನ್ನು ‘ಭಾರತ್’ ಎಂದು ಪ್ರದರ್ಶಿಸಲಾಯಿತು. ಮೈಕ್ ನ ನೇಮ್ ಬೋರ್ಡ್ ನಲ್ಲಿ ‘BHARAT’ ಎಂದು ಪ್ರದರ್ಶಿಸಲಾಯಿತು. ತಮ್ಮ ಉದ್ಘಾಟನಾ ಭಾಷಣಕ್ಕೆ ಮುಂಚಿತವಾಗಿ, ಪ್ರಧಾನಿ ಮೋದಿ ಜಿ 20 ಶೃಂಗಸಭೆಯ ಸ್ಥಳವಾದ ಭಾರತ್ ಮಂಟಪದಲ್ಲಿ ಯುಎಸ್ ಅಧ್ಯಕ್ಷ ಜೋ […]

ಜಿ-೨೦ ಶೃಂಗಸಭೆಯಲ್ಲಿ ಇಂಡಿಯಾ ಬದಲು ‘ಭಾರತ’ ದರ್ಶನ Read More »

ಬೆಳ್ಳಂಬೆಳಗ್ಗೆ ಆಂಧ್ರ‌ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅರೆಸ್ಟ್| ಭಾರಿ ಹೈಡ್ರಾಮಾ ಸೃಷ್ಟಿ

ಸಮಗ್ರ ನ್ಯೂಸ್: ಸಿಐಡಿ ಪೊಲೀಸರು ಬೆಳ್ಳಂ ಬೆಳಗ್ಗೆ ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡುರನ್ನು ಬಂಧಿಸಿದ್ದು, ಬಂಧನದ ವೇಳೆ ಭಾರಿ ಹೈಡ್ರಾಮಾ ನಡೆದಿದೆ. ಮಧ್ಯರಾತ್ರಿ 12 ಗಂಟೆಗೆ ಚಂದ್ರಬಾಬು ಬಂಧಿಸಲು ಪೊಲೀಸರು ಹೋಗಿದ್ದು, ಭಾರಿ ಹೈಡ್ರಾಮಾ ನಡೆದ ನಂತರ ಬೆಳಗ್ಗೆ 6 ಗಂಟೆಗೆ ಬಂಧಿಸಿದ್ದಾರೆ. ಬಂಧನದ ವೇಳೆ ವಾಗ್ಧಾಳಿ ನಡೆಸಿ ಚಂದ್ರಬಾಬು ನಾಯ್ಡು ‘ ಸಿಐಡಿ ಪೊಲೀಸರು ನನ್ನ ಹಕ್ಕನ್ನು ಕಸಿಯುವ ಕೆಲಸ ಮಾಡಿದ್ದಾರೆ.ಎಫ್ ಐ ಆರ್ ಮಾಡಿಲ್ಲ, ಯಾವುದೇ ನೋಟಿಸ್ ನೀಡಿಲ್ಲ. ಯಾಕೆ ನನ್ನನ್ನು ಬಂಧಿಸುತ್ತೀರಾ..?

ಬೆಳ್ಳಂಬೆಳಗ್ಗೆ ಆಂಧ್ರ‌ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅರೆಸ್ಟ್| ಭಾರಿ ಹೈಡ್ರಾಮಾ ಸೃಷ್ಟಿ Read More »

ಡಾ.ಬ್ರೋ ಈಗ “ಮ್ಯಾನ್ ಆಪ್ ಮಿಲಿಯನ್ಸ್”| 20 ಲಕ್ಷ SUBSCRIBERS ಪಡೆದ ಕನ್ನಡ ಹುಡುಗ

ಸಮಗ್ರ ನ್ಯೂಸ್: ‘ನಮಸ್ಕಾರ ದೇವ್ರು’ ಎನ್ನುತ್ತಲೇ ವಿಶ್ವಪರ್ಯಟನೆ ಮಾಡುತ್ತಿರುವ ಕನ್ನಡದ ಜಾಗತಿಕ ರಾಯಭಾರಿ ಡಾ. ಬ್ರೋ (ಗಗನ್ ಶ್ರೀನಿವಾಸ್​) ಈಗ ಮ್ಯಾನ್ ಆಫ್ ಮಿಲಿಯನ್ಸ್ ಆಗಿದ್ದಾರೆ. ಅರ್ಥಾತ್, ಯೂ-ಟ್ಯೂಬ್​ನಲ್ಲಿ ಅವರ ಸಬ್​ಸ್ಕ್ರೈಬರ್ಸ್​ ಸಂಖ್ಯೆ 2 ಮಿಲಿಯನ್ (20) ಲಕ್ಷ ಆಗಿದೆ. ಜೊತೆಗೆ ಅವರ ಫೇಸ್​ಬುಕ್​ ಹಾಗೂ ಇನ್​ಸ್ಟಾಗ್ರಾಮ್​ನಲ್ಲೂ ಫಾಲೋವರ್ಸ್ ಸಂಖ್ಯೆ ಈಗಾಗಲೇ ಮಿಲಿಯನ್ ದಾಟಿದೆ. ಇತ್ತೀಚೆಗಷ್ಟೇ ಯೂಟ್ಯೂಬ್​ನಲ್ಲಿ 2 ಮಿಲಿಯನ್ ಸಬ್​ಸ್ಕ್ರೈಬರ್ಸ್​ ಹೊಂದಿದ ಡಾ.ಬ್ರೋ, ಫೇಸ್​ಬುಕ್​ನಲ್ಲಿ 1.6 ಮಿಲಿಯನ್​ ಹಾಗೂ ಇನ್​ಸ್ಟಾಗ್ರಾಮ್​ನಲ್ಲಿ 1.3 ಮಿಲಿಯನ್​ ಫಾಲೋವರ್ಸ್ ಹೊಂದಿದ್ದಾರೆ.

ಡಾ.ಬ್ರೋ ಈಗ “ಮ್ಯಾನ್ ಆಪ್ ಮಿಲಿಯನ್ಸ್”| 20 ಲಕ್ಷ SUBSCRIBERS ಪಡೆದ ಕನ್ನಡ ಹುಡುಗ Read More »

ನವದೆಹಲಿ: ಇಂದಿನಿಂದ 2 ದಿನ G20 ಶೃಂಗಸಭೆ| ಮೊದಲ ಬಾರಿಗೆ ಭಾರತದ ಅಧ್ಯಕ್ಷತೆ

ಸಮಗ್ರ ನ್ಯೂಸ್: ಇಂದಿನಿಂದ 2 ದಿನ ಭಾರತದ ನೆಲದಲ್ಲಿ ಐತಿಹಾಸಿಕ ಜಿ20 ಶೃಂಗಸಭೆ ನಡೆಯಲಿದ್ದು, ವಿಶ್ವದ ದಿಗ್ಗಜರು ದೆಹಲಿಗೆ ಆಗಮಿಸಿದ್ದಾರೆ. ಅಮೆರಿಕ ಅಧ್ಯಕ್ಷ ಬಿಡೆನ್ ಸೇರಿದಂತೆ ಹಲವು ನಾಯಕರು ದೆಹಲಿಗೆ ಆಗಮಿಸಿದ್ದು, ಇಂದಿನಿಂದ ಐತಿಹಾಸಿಕ ಜಿ20 ಶೃಂಗಸಭೆ ನಡೆಯಲಿದೆ. ಪ್ರಧಾನಿ ಮೋದಿ ಜತೆ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ. ದೆಹಲಿಯ ಪ್ರಗತಿ ಮೈದಾನದಲ್ಲಿಸಭೆ ನಡೆಯಲಿದ್ದು,ಉಕ್ರೇನ್ ಯುದ್ಧದ ಪರಿಣಾಮಗಳು, ಬಡ ದೇಶಗಳ ಸಂಕಷ್ಟಗಳು, ಆರ್ಥಿಕ ಹಿಂಜರಿತದ ಸನ್ನಿವೇಶ ಮತ್ತು ಇತರ ಜಾಗತಿಕ ಸವಾಲುಗಳ ನಡುವೆಯೇ ದೆಹಲಿಯಲ್ಲಿ ಆಯೋಜನೆಗೊಂಡಿರುವ 2 ದಿನಗಳ

ನವದೆಹಲಿ: ಇಂದಿನಿಂದ 2 ದಿನ G20 ಶೃಂಗಸಭೆ| ಮೊದಲ ಬಾರಿಗೆ ಭಾರತದ ಅಧ್ಯಕ್ಷತೆ Read More »

‘ಇಂಡಿಯಾ’ ಹೆಸರು ‘ಭಾರತ’ ಆದರೆ ವಿಶ್ವಸಂಸ್ಥೆ ಅಂಗೀಕರಿಸುತ್ತಾ? ವಕ್ತಾರರು ನೀಡಿದ ಪ್ರಮುಖ ಹೇಳಿಕೆ ಏನು?

ಸಮಗ್ರ ನ್ಯೂಸ್: ‘ಇಂಡಿಯಾ’ದ ಹೆಸರನ್ನು ಔಪಚಾರಿಕವಾಗಿ ‘ಭಾರತ್’ ಎಂದು ಬದಲಾಯಿಸಲು ವಿನಂತಿಸಿದರೆ, ವಿಶ್ವಸಂಸ್ಥೆಯು ಅದನ್ನು ಪರಿಗಣಿಸುತ್ತದೆ ಎಂದು ವಿಶ್ವಸಂಸ್ಥೆಯ ವಕ್ತಾರರು ಬುಧವಾರ ಹೇಳಿದ್ದಾರೆ. ಭಾರತ ಹೆಸರು ಬದಲಾವಣೆ ಬಗ್ಗೆ ನಿಮ್ಮ ಪ್ರಕ್ರಿಯೆ ಏನು ಎಂದು ಚೀನಾದ ಮಾಧ್ಯಮ ವರದಿಗಾರರ ಪ್ರಶ್ನೆಗೆ ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರಸ್ ಅವರ ಉಪ ವಕ್ತಾರ ಫರ್ಹಾನ್ ಹಕ್, ಟರ್ಕಿಯೇ, ಸರ್ಕಾರವು ನಮಗೆ ನೀಡಿದ ಔಪಚಾರಿಕ ಮನವಿಗೆ ನಾವು ಪ್ರತಿಕ್ರಿಯಿಸಿದ್ದೇವೆ. ನಿಸ್ಸಂಶಯವಾಗಿ, ನಾವು ಅಂತಹ ವಿನಂತಿಗಳನ್ನು ಭಾರತದಿಂದ ಅದರ ಹೆಸರನ್ನು ಬದಲಾಯಿಸಲು

‘ಇಂಡಿಯಾ’ ಹೆಸರು ‘ಭಾರತ’ ಆದರೆ ವಿಶ್ವಸಂಸ್ಥೆ ಅಂಗೀಕರಿಸುತ್ತಾ? ವಕ್ತಾರರು ನೀಡಿದ ಪ್ರಮುಖ ಹೇಳಿಕೆ ಏನು? Read More »

ಪುಟ್ಟ ಮಗುವಿನೊಂದಿಗೆ ಬೈಕ್ ನಲ್ಲಿ ಉಮ್ಲಿಂಗ್ ಲಾ ಪ್ರವಾಸ| ದಾಖಲೆ ನಿರ್ಮಿಸಿದ ಸುಳ್ಯದ ದಂಪತಿ|

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಉದ್ಯಮಿಯೊಬ್ಬರು ಪತ್ನಿ ಮತ್ತು ತಮ್ಮ ಮೂರುವರೆ ವರ್ಷದ ಮಗನೊಂದಿಗೆ ಸುಮಾರು 19,024 ಅಡಿ ಎತ್ತರದ ಉಮ್ಲಿಂಗ್ ಲಾ ಪ್ರದೇಶವನ್ನು ಬೈಕ್‌ನಲ್ಲಿ ತಲುಪಿದ್ದು, ಇದೀಗ ಸುಳ್ಯಕ್ಕೆ ವಾಪಸಾಗುತ್ತಿದ್ದಾರೆ. ಸುಳ್ಯ ತಾಲೂಕಿನ ನಿವಾಸಿಯಾದ ಮತ್ತು ಇಲ್ಲಿನ ಹಳೆಗೇಟ್‌ ಎಂಬಲ್ಲಿರುವ ಹೋಮ್ ಗ್ಯಾಲರಿ ಮಾಲೀಕರಾದ ತೌಹೀದ್ ರೆಹ್ಮಾನ್ ಹಾಗೂ ಅವರ ಪತ್ನಿ ಜಶ್ಮಿಯಾ ಮತ್ತು ಮಗ ಜಝೀಲ್ ರೆಹ್ಮಾನ್ ಅವರು ತಮ್ಮ ಬುಲೆಟ್‌ ಬೈಕ್‌ನಲ್ಲಿ ಉಮ್ಮಿಂಗ್ ಲಾ ತಲುಪಿದ ದಂಪತಿ. ಮೌಂಟ್ ಎವರೆಸ್ಟ್

ಪುಟ್ಟ ಮಗುವಿನೊಂದಿಗೆ ಬೈಕ್ ನಲ್ಲಿ ಉಮ್ಲಿಂಗ್ ಲಾ ಪ್ರವಾಸ| ದಾಖಲೆ ನಿರ್ಮಿಸಿದ ಸುಳ್ಯದ ದಂಪತಿ| Read More »

ಚಂದ್ರಯಾನ-3ರ ಕೌಂಟ್‌ಡೌನ್‌ಗೆ ಧ್ವನಿಯಾಗಿದ್ದ ವಿಜ್ಞಾನಿ ಹೃದಯಾಘಾತದಿಂದ ನಿಧನ

ನವದೆಹಲಿ: ಶ್ರೀಹರಿಕೋಟಾದಲ್ಲಿ (Sriharikota) ರಾಕೆಟ್ ಉಡಾವಣೆಯ ಸಂದರ್ಭದಲ್ಲಿ ಕೌಂಟ್‌ಡೌನ್‌ಗೆ ಧ್ವನಿ ನೀಡುತ್ತಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ವಿಜ್ಞಾನಿ ವಲರ್ಮತಿಯರು ಹೃದಯಾಘಾತದಿಂದ ಭಾನುವಾರ ನಿಧನರಾಗಿದ್ದಾರೆ. ದೇಶದ ಮೂರನೇ ಚಂದ್ರಯಾನವಾದ ಚಂದ್ರಯಾನ-3 ರಾಕೆಟ್ ಉಡಾವಣೆಯ ಸಂದರ್ಭದಲ್ಲೂ ಸಹಾ ಕೌಂಟ್‌ಡೌನ್‌ಗೆ ಇವರು ಧ್ವನಿ ನೀಡಿದ್ದು, ಇಸ್ರೋದಲ್ಲಿ ಅದು ಅವರ ಕೊನೆಯ ಧ್ವನಿಯಾಗಿತ್ತು. ಅವರ ನಿಧನಕ್ಕೆ ಇಸ್ರೋದ ಮಾಜಿ ನಿರ್ದೇಶಕರಾದ ಡಾ.ಪಿ.ವಿ.ವೆಂಕಟಕೃಷ್ಣನ್ ಟ್ವಿಟ್ಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ಶ್ರೀಹರಿಕೋಟಾದಿಂದ ಇಸ್ರೋದ ಭವಿಷ್ಯದ ಮಿಷನ್‌ಗಳ ಕೌಂಟ್‌ಡೌನ್‌ಗಳಿಗೆ ವಲರ್ಮತಿ ಮೇಡಂ ಅವರ ಧ್ವನಿ ಇರುವುದಿಲ್ಲ. ಚಂದ್ರಯಾನ-3

ಚಂದ್ರಯಾನ-3ರ ಕೌಂಟ್‌ಡೌನ್‌ಗೆ ಧ್ವನಿಯಾಗಿದ್ದ ವಿಜ್ಞಾನಿ ಹೃದಯಾಘಾತದಿಂದ ನಿಧನ Read More »

ಉಚಿತ ಯೋಜನೆ ತಾತ್ಕಾಲಿಕವಾಗಿ ರಾಜಕೀಯ ಲಾಭ ತರಬಹುದು|ಆದರೆ ದೇಶಕ್ಕೆ ಹಾನಿ-ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಸರ್ಕಾರದ ನೀತಿಗಳಲ್ಲಿ ಹಣಕಾಸಿನ ಶಿಸ್ತು ಅತ್ಯವಶ್ಯಕ. ಆರ್ಥಿಕ ಶಿಸ್ತಿನ ತಿಳುವಳಿಕೆ ಹೊಂದಿರಬೇಕು. ಉಚಿತ ಯೋಜನೆ ತಾತ್ಕಾಲಿಕವಾಗಿ ರಾಜಕೀಯಕ್ಕೆ ಲಾಭ ತರಬಹುದು ಆದರೆ ಇದರಿಂದ ದೇಶಕ್ಕೆ ದೊಡ್ಡ ಹಾನಿ ಎಂದು ಪ್ರಧಾನಿ ಮೋದಿ ಯವರು ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ನೇರವಾಗಿ ಹಾಗೂ ಎಚ್ಚರಿಕೆ ನೀಡಿದ್ದಾರೆ. ಜಿ20 ಶೃಂಗಸಭೆ ಹಿನ್ನಲೆಯಲ್ಲಿ ಪಿಟಿಐ ಸುದ್ದಿಸಂಸ್ಥೆಗೆ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವಂತ ಅವರು, ಬೇಜವಾಬ್ದಾರಿತದನ ಹಣಕಾಸು ನೀತಿಗಳು ಹಾಗೂ ಜನಪ್ರಿಯ ಕಾರ್ಯಕ್ರಮಗಳು ಅಲ್ಪಾವಧಿಯಲ್ಲಿ ರಾಜಕೀಯ ಲಾಭವನ್ನು ತಂದುಕೊಡಬಲ್ಲದು. ಆದರೇ ಇಂತಹ ಕೊಡುಗೆಗಳಿಂದ

ಉಚಿತ ಯೋಜನೆ ತಾತ್ಕಾಲಿಕವಾಗಿ ರಾಜಕೀಯ ಲಾಭ ತರಬಹುದು|ಆದರೆ ದೇಶಕ್ಕೆ ಹಾನಿ-ಪ್ರಧಾನಿ ಮೋದಿ Read More »

ನಿದ್ರೆಗೆ ಜಾರಿದ ಪ್ರಗ್ಯಾನ್| ಇಸ್ರೋದಿಂದ ಮಹತ್ವದ ಮಾಹಿತಿ ಬಿಡುಗಡೆ

ಸಮಗ್ರ ನ್ಯೂಸ್: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಕೈಗೊಂಡಿರುವ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಮಿಷನ್​ ಸಾಫ್ಟ್​ ಲ್ಯಾಂಡಿಂಗ್ ಮೂಲಕ ಈಗಾಗಲೇ ಯಶಸ್ವಿಯಾಗಿದ್ದು, ಇದೀಗ ಅದಕ್ಕೆ ಸಂಬಂಧಿಸಿದಂತೆ ಇಸ್ರೋದಿಂದ ಮಹತ್ವದ ಅಪ್​ಡೇಟ್​ವೊಂದು ಹೊರಬಿದ್ದಿದೆ. ಚಂದ್ರಯಾನ-3 ಮಿಷನ್​ನ ರೋವರ್​​ನ ಅಸೈನ್​ಮೆಂಟ್​ಗಳು ಮುಗಿದಿದ್ದು, ಅದೀಗ ಸುರಕ್ಷಿತವಾಗಿ ನಿಲುಗಡೆ ಹೊಂದಿದ್ದು, ಸ್ಲೀಪ್​ ಮೋಡ್​ನಲ್ಲಿ ಇದೆ. ಎಪಿಎಕ್ಸ್​ಎಸ್​ ಮತ್ತು ಎಲ್​ಐಬಿಎಸ್​ ಪೇಲೋಡ್​ಗಳು ಕೂಡ ಟರ್ನ್​ ಆಫ್​ ಆಗಿದ್ದು, ಅಲ್ಲಿನ ಡೇಟಾ ಲ್ಯಾಂಡರ್​ ಮೂಲಕ ಭೂಮಿಗೆ ರವಾನೆ ಆಗಲಿದೆ ಎಂದು ಇಸ್ರೋ ತಿಳಿಸಿದೆ. ಸದ್ಯ ಬ್ಯಾಟರಿ

ನಿದ್ರೆಗೆ ಜಾರಿದ ಪ್ರಗ್ಯಾನ್| ಇಸ್ರೋದಿಂದ ಮಹತ್ವದ ಮಾಹಿತಿ ಬಿಡುಗಡೆ Read More »

ಇಸ್ರೋ ಸೂರ್ಯಶಿಕಾರಿ ಸಕ್ಸಸ್| ಆದಿತ್ಯ‌ L-1 ಯಾಕೆ ಇಂಪಾರ್ಟೆಂಟ್ ಗೊತ್ತಾ?

ಸಮಗ್ರ ನ್ಯೂಸ್: ಭಾರತದ ಮಹತ್ವಾಕಾಂಕ್ಷೆಯ ಸೂರ್ಯಯಾನ ಯೋಜನೆಯ ಅಡಿಯಲ್ಲಿ ಆದಿತ್ಯ ಎಲ್‌-1 ಬಾಹ್ಯಾಕಾಶ ನೌಕೆಯನ್ನು ಶನಿವಾರ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಉಡಾವಣಾ ಕೇಂದ್ರದಿಂದ ಆದಿತ್ಯ L1 ಹೊತ್ತ ಪಿಎಸ್‌ಎಲ್‌ವಿ ರಾಕೆಟ್​​ನ (PSLV-XLC57) ಉಡಾವಣೆ ಯಶಸ್ವಿಯಾಗಿದೆ ಎಂದು ಭಾರಾತೀಯ ಬಾಹ್ಯಾಕಾಶ ವಿಜ್ಞಾನ ಸಂಶೋಧನಾ ಸಂಸ್ಥೆ ಇಸ್ರೋ (ISRO) ತಿಳಿಸಿದೆ. ಆ ಮೂಲಕ ಭಾರತವು ಬಾಹ್ಯಕಾಶ ಸಂಶೋಧನಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದಂತಾಗಿದೆ. ಈ ಕ್ಷಣಕ್ಕೆ ಶ್ರೀಹರಿಕೋಟಾದಲ್ಲಿ ಸೇರಿದ್ದ ಸಾವಿರಾರು

ಇಸ್ರೋ ಸೂರ್ಯಶಿಕಾರಿ ಸಕ್ಸಸ್| ಆದಿತ್ಯ‌ L-1 ಯಾಕೆ ಇಂಪಾರ್ಟೆಂಟ್ ಗೊತ್ತಾ? Read More »