ಭೀಕರ ರಸ್ತೆ ಅಪಘಾತ| 10 ಮಂದಿ ಸಾವು, 20 ಮಂದಿಗೆ ಗಂಭೀರ ಗಾಯ
ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಬುಲಂದ್ಶಹರ್‌ನ ಸೆಲಾಂಪುರ್‌ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ನಡೆದಿದೆ. ಖಾಸಗಿ ಬಸ್ ಮತ್ತು ಟೆಂಪೊ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಖಾಸಗಿ ಬಸ್‌ನಲ್ಲಿ ಸುಮಾರು 25 ಮಂದಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಅಪಘಾತದಲ್ಲಿ ವಾಹನಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿವೆ. ಅಪಘಾತದಿಂದ ಕುಪಿತರಾದ ಸ್ಥಳೀಯರು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಭೀಕರ ರಸ್ತೆ ಅಪಘಾತ| 10 ಮಂದಿ ಸಾವು, 20 ಮಂದಿಗೆ ಗಂಭೀರ ಗಾಯ Read More »