ರಾಷ್ಟ್ರೀಯ

ನೇಪಾಳದಲ್ಲಿ ಪ್ರಬಲ ಭೂಕಂಪ| ಮಲಗಿದ್ದಲ್ಲೇ ಅಸುನೀಗಿದ ಹಲವರು| ಸಾವಿನ‌ ಸಂಖ್ಯೆ 129ಕ್ಕೆ ಏರಿಕೆ

ಸಮಗ್ರ ನ್ಯೂಸ್: ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ನೇಪಾಳದಲ್ಲಿ ಈವರೆಗೆ 129 ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ. ಇದು ಒಂದು ತಿಂಗಳಲ್ಲಿ ನೇಪಾಳದಲ್ಲಿ ಸಂಭವಿಸಿದ ಮೂರನೇ ಪ್ರಬಲ ಭೂಕಂಪವಾಗಿದೆ. ಭೂಕಂಪದ ಕೇಂದ್ರ ಬಿಂದು ನೇಪಾಳದ ಜಜರ್ಕೋಟ್ ಜಿಲ್ಲೆಯ ಲಮಿದಂಡಾ ಪ್ರದೇಶದಲ್ಲಿತ್ತು. ಇಲ್ಲಿ 92 ಜನರು ಸಾವನ್ನಪ್ಪಿದ್ದಾರೆ. ಅದೇ ಸಮಯದಲ್ಲಿ, ರುಕುಮ್ ಜಿಲ್ಲೆಯಲ್ಲಿ 37 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ. ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ ಈವರೆಗೆ 129 ಜನರು ಪ್ರಾಣ […]

ನೇಪಾಳದಲ್ಲಿ ಪ್ರಬಲ ಭೂಕಂಪ| ಮಲಗಿದ್ದಲ್ಲೇ ಅಸುನೀಗಿದ ಹಲವರು| ಸಾವಿನ‌ ಸಂಖ್ಯೆ 129ಕ್ಕೆ ಏರಿಕೆ Read More »

ಉತ್ತರ ಭಾರತದಲ್ಲಿ ಪ್ರಬಲ ಭೂಕಂಪ| 69 ಮಂದಿ ಸಾವು, ಅಪಾರ ಹಾನಿ

ಸಮಗ್ರ ನ್ಯೂಸ್: ನೇಪಾಳ ಮತ್ತು ಉತ್ತರ ಭಾರತದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಸುಮಾರು 20 ರಿಂದ 40 ಸೆಕೆಂಡುಗಳ ಕಾಲ ಭೂಕಂಪನದ ಅನುಭವವಾಗಿದೆ. ಭೂಕಂಪದ ಕೇಂದ್ರಬಿಂದು ನೇಪಾಳದಲ್ಲಿ ಕಂಡು ಬಂದಿದೆ. ಭೂಮಿಯ ತೀವ್ರ ಕಂಪನದಿಂದಾಗಿ ಜನರಲ್ಲಿ ಭೀತಿ ಉಂಟಾಗಿದ್ದು, ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಬಹಳ ಸಮಯದವರೆಗೆ ನಡುಕ ಅನುಭವಿಸಿದ್ದೇವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.4 ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲ, ಪಶ್ಚಿಮ ನೇಪಾಳದಲ್ಲಿ ಸಂಭವಿಸಿದ

ಉತ್ತರ ಭಾರತದಲ್ಲಿ ಪ್ರಬಲ ಭೂಕಂಪ| 69 ಮಂದಿ ಸಾವು, ಅಪಾರ ಹಾನಿ Read More »

ಕೊಟ್ಟಿಗೆಹಾರ: ಕಾಫಿನಾಡಿನ ಅಂಧ ಯುವತಿಗೆ ಪ್ರಧಾನಿ ಮೋದಿ ಶ್ಲಾಘನೆ| ದೇಶದಲ್ಲೇ ಸಿಗದ 5500 ಮೌಲ್ಯದ ಉಡುಗೊರೆ ನೀಡಿದ ಅಂಧ ಯುವತಿ

ಸಮಗ್ರ ನ್ಯೂಸ್: ಚೀನಾದ ಹಾಂಗೌಜ್ ನಲ್ಲಿ ನಡೆದಿದ್ದ ಪ್ಯಾರ ಒಲಂಪಿಕ್ ಕ್ರೀಡಾಕೂಟದಲ್ಲಿ 1500 ಮೀಟರ್ ಓಟವನ್ನು 5.21 ಸೆಕೆಂಡ್ ಗೆ ಓದಿದ್ದ ರಕ್ಷಿತಾ ರಾಜು ಅವರಿಗೆ ಪ್ರಧಾನಿ ಮೋದಿ ಶ್ಲಾಘನೆ. ಪ್ಯಾರ ಒಲಿಂಪಿಕ್ ನಲ್ಲಿ ಭಾಗವಹಿಸಿದ್ದ ಕ್ರೀಡಾ ಪಟುಗಳಿಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಪ್ಯಾರ ಒಲಿಂಪಿಕ್ ನಲ್ಲಿ ಚಿನ್ನ ಗೆದ್ದ ಮೂಡಿಗೆರೆ ತಾಲೂಕಿನ ಗುಡ್ನಳ್ಳಿ ಸಮೀಪದ ಅಂಧ ಯುವತಿ ರಕ್ಷಿತಾ ರಾಜು ಅವರು ನರೇಂದ್ರ ಮೋದಿ ಅವರಿಗೆ ಚೀನಾದಿಂದ ತಂದಿದ್ದ ಟಿಟ್ಟರ್ ಗಿಫ್ಟ್

ಕೊಟ್ಟಿಗೆಹಾರ: ಕಾಫಿನಾಡಿನ ಅಂಧ ಯುವತಿಗೆ ಪ್ರಧಾನಿ ಮೋದಿ ಶ್ಲಾಘನೆ| ದೇಶದಲ್ಲೇ ಸಿಗದ 5500 ಮೌಲ್ಯದ ಉಡುಗೊರೆ ನೀಡಿದ ಅಂಧ ಯುವತಿ Read More »

ಬಿಹಾರದ ಸರಯೂ ನದಿಯಲ್ಲಿ ದೋಣಿ ದುರಂತ| 15 ಮಂದಿ ನಾಪತ್ತೆ; 4 ಶವ ಪತ್ತೆ

ಸಮಗ್ರ ನ್ಯೂಸ್: ಬಿಹಾರದ ಛಪ್ರಾದಲ್ಲಿ ದೋಣಿ ಮಗುಚಿ ನಾಲ್ವರು ಸಾವನ್ನಪ್ಪಿದ್ದು 15 ಜನ ಕಾಣೆಯಾಗಿರುವ ಘಟನೆ ನಡೆದಿದೆ. ಇಲ್ಲಿಯ ಸರಯೂ ನದಿಯಲ್ಲಿ 15ಕ್ಕೂ ಹೆಚ್ಚಿನ ಪ್ರಯಾಣಿಕರು ತುಂಬಿದ್ದ ದೋಣಿ ಪಲ್ಟಿಯಾಗಿದೆ. ಘಟನೆಯಲ್ಲಿ ಇದುವರೆಗೆ ನಾಲ್ವರ ಮೃತದೇಹಗಳು ಪತ್ತೆಯಾಗಿವೆ. ಇನ್ನೂ 14 ಮಂದಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಕೆಲವರು ಈಜಿ ದಡ ಸೇರಿದ್ದಾರೆ. ಮಾಂಝಿ ಪೊಲೀಸ್ ಠಾಣೆ ವ್ಯಾಪ್ತಿಯ ಮಥಿಯಾರ್ ಎಂಬಲ್ಲಿ ಈ ಘಟನೆ ನಡೆದಿದೆ. ನಾಪತ್ತೆಯಾಗಿರುವವರ ಪತ್ತೆಗಾಗಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ರೈತರು ಹಾಗೂ ಕೂಲಿ ಕಾರ್ಮಿಕರು ಹೊಲದಲ್ಲಿ ಕೆಲಸ

ಬಿಹಾರದ ಸರಯೂ ನದಿಯಲ್ಲಿ ದೋಣಿ ದುರಂತ| 15 ಮಂದಿ ನಾಪತ್ತೆ; 4 ಶವ ಪತ್ತೆ Read More »

ಮಗುವಿನ ಚಿಕಿತ್ಸೆಗೆ ನೆರವಾಗುವಂತೆ ಪ್ರಧಾನಿಯವರಿಗೆ ಸಿಎಂ ಪತ್ರ

ಸಮಗ್ರ ಸಮಾಚಾರ: 15 ತಿಂಗಳ ಮಗು ಮೌರ್ಯ ಚಿಕಿತ್ಸೆಗೆ ನೆರವಾಗುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯಗೆ ಮಗುವಿನ ತಂದೆ ಮಲ್ಲಿಕಾರ್ಜುನ್​ ಧನ್ಯವಾದ ಸಲ್ಲಿಸಿದ್ದಾರೆ. ಸೂಕ್ತ ಚಿಕಿತ್ಸೆ ಕೊಡಿಸಲು ಸಹಾಯ ಕೋರಿ ಸಿಎಂ ಸಿದ್ದರಾಮಯ್ಯಗೆ ಮಗುವಿನ‌ ತಂದೆ ಮಲ್ಲಿಕಾರ್ಜುನ್​ ಈ ಮೊದಲು ಪತ್ರ ಬರೆದಿದ್ದರು. ಇದೀಗ ತಂದೆ ಮಲ್ಲಿಕಾರ್ಜುನ್ ಮನವಿ ಬಳಿಕ ಪ್ರಧಾನಿ ನರೇಂದ್ರ ಮೋದಿಗೆ ಸಿದ್ದರಾಮಯ್ಯ ಅವರು ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾರೆ. ಈ ವಿಷಯವಾಗಿ X ಮಾಡಿರುವ ಮಗುವಿನ‌ ತಂದೆ

ಮಗುವಿನ ಚಿಕಿತ್ಸೆಗೆ ನೆರವಾಗುವಂತೆ ಪ್ರಧಾನಿಯವರಿಗೆ ಸಿಎಂ ಪತ್ರ Read More »

ಭಾರತ – ಬಾಂಗ್ಲಾ ನಡುವೆ ರೈಲು ಸಂಚಾರ ಆರಂಭ/ ಉಭಯ ಪ್ರಧಾನಿಗಳ ಸಂತಸ

ಸಮಗ್ರ ನ್ಯೂಸ್: ತ್ರಿಪುರಾದ ನಿಶ್ಚಿಂತ್‍ಪುರ್ ಮತ್ತು ನೆರೆಯ ಬಾಂಗ್ಲಾದೇಶದ ಗಂಗಾಸಾಗರ್ ನಡುವೆ ನೂತನ ರೈಲು ಸಂಚಾರ ಆರಂಭವಾಗಿದ್ದು, ಇದನ್ನು ಎರಡು ದೇಶದ ಪ್ರಧಾನಿಗಳಾದ ನರೇಂದ್ರ ಮೋದಿ ಮತ್ತು ಶೇಖ್ ಹಸೀನಾ ಜಂಟಿಯಾಗಿ ವರ್ಚುವಲ್ ಆಗಿ ಉದ್ಘಾಟಿಸಿದರು. ಇದೊಂದು ಐತಿಹಾಸಿಕ ಕ್ಷಣವಾಗಿದ್ದು, ಈಶಾನ್ಯ ರಾಜ್ಯ ಮತ್ತು ಬಾಂಗ್ಲಾದೇಶದ ನಡುವಿನ ಮೊದಲ ರೈಲು ಸಂಪರ್ಕ ಆಗಿದೆ ಎಂದು ಮೋದಿ ಹೇಳಿದರು. ಇದರ ಜೊತೆಗೆ ಖುಲ್ನಾ – ಮೊಂಗ್ಲಾ ಬಂದರು ರೈಲು ಯೋಜನೆ ಮತ್ತು ಬಾಂಗ್ಲಾದೇಶದ ರಾಂಪಾಲ್‍ನಲ್ಲಿರುವ ಮೈತ್ರಿ ಸೂಪರ್ ಪವರ್

ಭಾರತ – ಬಾಂಗ್ಲಾ ನಡುವೆ ರೈಲು ಸಂಚಾರ ಆರಂಭ/ ಉಭಯ ಪ್ರಧಾನಿಗಳ ಸಂತಸ Read More »

ಕೌಶಲಾಭಿವೃದ್ಧಿ ಹಗರಣ/ ಕೊನೆಗೂ ಜೈಲಿನಿಂದ ಹೊರಬಂದ ಚಂದ್ರಬಾಬು ನಾಯ್ಡು

ಸಮಗ್ರ ನ್ಯೂಸ್: ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಆಂಧ್ರಪ್ರದೇಶ ಹೈಕೋರ್ಟ್‍ನಿಂದ ತಾತ್ಕಾಲಿಕ ಜಾಮೀನು ಪಡೆದಿರುವ ಚಂದ್ರಬಾಬು ನಾಯ್ಡು ಇಂದು ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡರು. ಚಂದ್ರಬಾಬು ನಾಯ್ಡು ಅನಾರೋಗ್ಯದ ಕಾರಣಕ್ಕಾಗಿ ಜಾಮೀನು ಪಡೆದುಕೊಂಡಿದ್ದಾರೆ. ನಾಯ್ಡು ಅವರಿಗೆ ಶಸ್ತ್ರಚಿಕಿತ್ಸೆ ಆಗಬೇಕಿರುವುದರಿಂದ ಜಾಮೀನು ಮಂಜೂರು ಮಾಡಬೇಕು ಎಂದು ಅವರ ಪರ ವಕೀಲರು ವಾದಿಸಿದ್ದರು. ಹೀಗಾಗಿ ನಾಲ್ಕು ವಾರಗಳ ತಾತ್ಕಾಲಿಕ ಜಾಮೀನು ನೀಡಲಾಗಿದೆ. 53 ದಿನಗಳ ಜೈಲುವಾಸದಿಂದ ಹೊರಬಂದ ನಾಯ್ಡು ಅವರನ್ನು ಬೆಂಬಲಿಗರು ಸಂಭ್ರಮದಿಂದ ಸ್ವಾಗತಿಸಿದ್ದಾರೆ.

ಕೌಶಲಾಭಿವೃದ್ಧಿ ಹಗರಣ/ ಕೊನೆಗೂ ಜೈಲಿನಿಂದ ಹೊರಬಂದ ಚಂದ್ರಬಾಬು ನಾಯ್ಡು Read More »

ಹಿಂಸಾಚಾರಕ್ಕೆ ತಿರುಗಿದ ಮರಾಠ ಮೀಸಲಾತಿ ಹೋರಾಟ/ ಕರ್ಪ್ಯೂ ಜಾರಿ

ಸಮಗ್ರ ನ್ಯೂಸ್: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಮರಾಠ ಮೀಸಲಾತಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು, ಧರಾಶಿವ್ ಮತ್ತು ಬೀಡ್ ಜಿಲ್ಲೆಗಳಲ್ಲಿ ಕರ್ಪ್ಯೂ ವಿಧಿಸಲಾಗಿದೆ. ಮುಂದಿನ ಆದೇಶದವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದ್ದು, ಐದಕ್ಕಿಂತ ಹೆಚ್ಚು ಜನ ಗುಂಪು ಸೇರುವಂತೆ ಇಲ್ಲ ಎಂದು ಸ್ಥಳೀಯ ಆಡಳಿತ ಆದೇಶ ನೀಡಿದೆ. ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು, ಅವಶ್ಯಕ ವಸ್ತುಗಳನ್ನು ಹೊರತುಪಡಿಸಿ ಇತರೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಸತ್ಯಾಗ್ರಹ ಮತ್ತು ಪ್ರತಿಭಟನೆಗಳು ನಡೆಯುತ್ತಿದ್ದು, ಪ್ರತಿಭಟನಾಕಾರರು ಎನ್‍ಸಿಪಿ ಶಾಸಕ

ಹಿಂಸಾಚಾರಕ್ಕೆ ತಿರುಗಿದ ಮರಾಠ ಮೀಸಲಾತಿ ಹೋರಾಟ/ ಕರ್ಪ್ಯೂ ಜಾರಿ Read More »

ಮಲಯಾಳಂ ನಟಿ ರೆಂಜುಷಾ ಮೆನನ್ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಮಾಲಿವುಡ್ ನಟಿರೆಂಜೂಷಾ ಮೆನನ್ (35) ಶವವಾಗಿ ಪತ್ತೆಯಾಗಿದ್ದಾರೆ. ಕೇರಳದ ತಿರುವನಂತಪುರಂನ ಕರಿಯಂನಲ್ಲಿರುವ ತನ್ನ ಫ್ಲ್ಯಾಟ್‌ನಲ್ಲಿ ನಟಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಸಿನಿಮಾರಂಗ ಮಾತ್ರವಲ್ಲದೆ ಕಿರುತೆರೆಯಲ್ಲೂ ಅವರು ಬಣ್ಣ ಹಚ್ಚಿದ್ದರು. ಧಾರಾವಾಹಿಗಳಲ್ಲಿ ಲೈನ್ ಪ್ರೊಡ್ಯೂಸರ್ ಆಗಿಯೂ ಕೆಲಸ ಮಾಡಿದ್ದಾರೆ. ಸದ್ಯ ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ತನಿಖೆ ಬಳಿಕವಷ್ಟೇ ನಿಖರ ಕಾರಣ ತಿಳಿದು ಬರಬೇಕಿದೆ. ಕಿರುತೆರೆ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದ ಅವರು, ‘ಸ್ತ್ರೀ’, ‘ನಿಜಾಲಟ್ಟಂ’, ‘ಮಗಳುದೆ ಅಮ್ಮ’ ಮತ್ತು

ಮಲಯಾಳಂ ನಟಿ ರೆಂಜುಷಾ ಮೆನನ್ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ Read More »

ಆಂದ್ರಪ್ರದೇಶ ರೈಲು ದುರಂತ ಪ್ರಕರಣ| ಸಾವಿನ ಸಂಖ್ಯೆ14ಕ್ಕೆ ಏರಿಕೆ

ಸಮಗ್ರ ನ್ಯೂಸ್: ಆಂಧ್ರಪ್ರದೇಶದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚುತ್ತಿದೆ. ಕಾಂತಕಪಲ್ಲಿ ರೈಲ್ವೆ ನಿಲ್ದಾಣದ ಬಳಿ ಎರಡು ರೈಲುಗಳು ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ 14 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲು ವಿಜಯನಗರಂ ಜಿಲ್ಲೆಯ ಕೊಥವಲಸ ಮಂಡಲದ ಕಾಂತಕಪಲ್ಲಿ ರೈಲ್ವೆ ನಿಲ್ದಾಣದ ಬಳಿ ಸಿಗ್ನಲ್ ಗಾಗಿ ನಿಂತಿತು. ಅದೇ ಟ್ರ್ಯಾಕ್ನಲ್ಲಿ ಬಂದ ಪಲಾಸಾ ಎಕ್ಸ್ಪ್ರೆಸ್ ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲಿನ ಮೂರು ಬೋಗಿಗಳು ಹಳಿ

ಆಂದ್ರಪ್ರದೇಶ ರೈಲು ದುರಂತ ಪ್ರಕರಣ| ಸಾವಿನ ಸಂಖ್ಯೆ14ಕ್ಕೆ ಏರಿಕೆ Read More »