ರಾಷ್ಟ್ರೀಯ

Bjp high command talked with shettar| ಬಿಜೆಪಿಯಲ್ಲಿ ರಾತ್ರೋರಾತ್ರಿ ಕ್ಷಿಪ್ರ ಬೆಳವಣಿಗೆ| ಶೆಟ್ಟರ್ ಜೊತೆಗೆ‌ ಮಾತನಾಡಿದ್ದಾರಂತೆ ಅಮಿತ್ ಶಾ!

ಸಮಗ್ರ ನ್ಯೂಸ್: ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾಗಿದೆ. ಆದರೆ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡದಂತೆ ಶೆಟ್ಟರ್ ಅವರ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ರಾಜ್ಯ ನಾಯಕರು ಮಾತ್ರವಲ್ಲ, ಬಿಜೆಪಿಯ ಪವರ್ ಫುಲ್ ಮ್ಯಾನ್ ಅಮಿತ್ ಶಾ ಖುದ್ದು ಕರೆ ಮಾಡಿ ಶೆಟ್ಟರ್ ಜೊತೆ ಮಾತನಾಡಿದ್ದಾರಂತೆ. ಜಗದೀಶ್ ಶೆಟ್ಟರ್ ರಾಜೀನಾಮೆ ಬಿಜೆಪಿಗೆ ವಿಧಾನಸಭೆ ಚುನಾವಣೆಯಲ್ಲಿ ದೊಡ್ಡ ಪೆಟ್ಟು ನೀಡುವುದು ಪಕ್ಕಾ ಎನ್ನಲಾಗುತ್ತಿದೆ. ಈ ನಡುವೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶೆಟ್ಟರ್ ಅವರನ್ನು ಹೇಗಾದರೂ ಮನವೊಲಿಸಿ, ಬಿಜೆಪಿಯಲ್ಲೇ […]

Bjp high command talked with shettar| ಬಿಜೆಪಿಯಲ್ಲಿ ರಾತ್ರೋರಾತ್ರಿ ಕ್ಷಿಪ್ರ ಬೆಳವಣಿಗೆ| ಶೆಟ್ಟರ್ ಜೊತೆಗೆ‌ ಮಾತನಾಡಿದ್ದಾರಂತೆ ಅಮಿತ್ ಶಾ! Read More »

ದುಬೈನ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ| ಭಾರತೀಯರು ಸೇರಿ 16 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ಯುಎಇ ರಾಜಧಾನಿ ದುಬೈನ ವಸತಿ ಕಟ್ಟಡ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಾಲ್ವರು ಭಾರತೀಯರು ಸೇರಿ 16 ಜನರು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ನಗರದ ಹಳೆಯ ಭಾಗದಲ್ಲಿರುವ ಅಲ್-ರಾಸ್ ನೆರೆಹೊರೆಯಲ್ಲಿರುವ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಶನಿವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನ ಏಳು ಎಮಿರೇಟ್‌ಗಳಲ್ಲಿ ಒಂದಾದ ದುಬೈ, ಸುಮಾರು 3.3 ಮಿಲಿಯನ್ ಜನಸಂಖ್ಯೆಯನ್ನು ಹೊಂದಿದೆ. ಅವರಲ್ಲಿ ಸುಮಾರು 90 ಪ್ರತಿಶತ ವಿದೇಶಿಯರು ಇದ್ದಾರೆ.

ದುಬೈನ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ| ಭಾರತೀಯರು ಸೇರಿ 16 ಮಂದಿ ಸಜೀವ ದಹನ Read More »

ಪೊಲೀಸರನ್ನೇ ಕಾರಿನ ಬಾನೆಟ್​ ಮೇಲೆ 20 ಕಿ.ಮೀ ಎಳೆದೊಯ್ದ ಚಾಲಕ| ಇಲ್ಲಿದೆ ವಿಡಿಯೋ

ಮುಂಬೈ: ಟ್ರಾಫಿಕ್ ಸಿಗ್ನಲ್‌ ಜಂಪ್‌ ಮಾಡಲು ಯತ್ನಿಸಿದ ಕಾರು ಚಾಲಕನನ್ನು ಪ್ರಶ್ನಿಸಿದ ಪೊಲೀಸರನ್ನೇ ಕಾರಿನ ಬಾನೆಟ್​ ಮೇಲೆ 20 ಕಿ.ಮೀ ಎಳೆದೊಯ್ದಿರುವ ಘಟನೆಯೊಂದು ಮುಂಬೈ ನಗರದಲ್ಲಿ ನಡೆದಿದೆ. ಟ್ರಾಫಿಕ್ ಕಾನ್‌ಸ್ಟೆಬಲ್ ಸಿದ್ಧೇಶ್ವರ ಮಾಳಿ (37) ಎಂದು ಗುರುತಿಸಲಾಗಿದೆ .ಕಾನ್ಸ್‌ಟೇಬಲ್ ಸಿದ್ಧೇಶ್ವರ ಮಾಳಿ ಅವರು ಬ್ಲೂ ಡೈಮಂಡ್ ಜಂಕ್ಷನ್‌ನಲ್ಲಿ ಸಿಗ್ನಲ್ ಜಂಪ್ ಮಾಡಿ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಕಾರು ಚಾಲಕನನ್ನು ನಿಲ್ಲಿಸಲು ಪ್ರಯತ್ನಿಸಿದರು.ಈ ವೇಳೆ ಟ್ರಾಫಿಕ್​ ಪೊಲೀಸರನ್ನೇ ಕಾರಿನ ಬಾನೆಟ್​ ಮೇಲೆ 20 ಕಿ.ಮೀ ಕಾರು ಚಾಲಕ ಎಳೆದೊಯ್ದಿದ್ದಾನೆ.

ಪೊಲೀಸರನ್ನೇ ಕಾರಿನ ಬಾನೆಟ್​ ಮೇಲೆ 20 ಕಿ.ಮೀ ಎಳೆದೊಯ್ದ ಚಾಲಕ| ಇಲ್ಲಿದೆ ವಿಡಿಯೋ Read More »

ಲಕ್ನೋ: ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ರೌಡಿ ಅತಿಕ್‌ ಅಹ್ಮದ್‌, ಅಶ್ರಫ್‌ ಅಹ್ಮದ್‌ ಗೆ ಶೂಟ್‌ ಔಟ್| ಬೀದಿ‌ ಹೆಣವಾದ ಮಾಜಿ ಸಂಸದ

ಸಮಗ್ರ ನ್ಯೂಸ್: ಮಾಜಿ ಸಂಸದ, ಗ್ಯಾಂಗ್‌ ಸ್ಟಾರ್‌ ಅತಿಕ್‌ ಅಹ್ಮದ್ ಮತ್ತು ಸಹೋದರ ಅಶ್ರಫ್‌ ಅಹ್ಮದ್‌ ಗ್ಯಾಂಗ್‌ವಾರ್‌ಗೆ ಬಲಿಯಾಗಿದ್ದಾರೆ. 2005ರಲ್ಲಿ ಅಲಹಾಬಾದ್ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ನಾಯಕ ರಾಜು ಪಾಲ್ ಗೆದ್ದಿದ್ದರು. ಇದಾದ 1 ತಿಂಗಳಲ್ಲಿ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಉಮೇಶ್ ಪಾಲ್ ಪ್ರಮುಖ ಸಾಕ್ಷಿಯಾಗಿದ್ದರು. ಫೆ.24 ರಂದು ಉಮೇಶ್ ಪಾಲ್ ಅವರನ್ನು ಪ್ರಯಾಗ್‌ರಾಜ್‌ನಲ್ಲಿರುವ ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೆ 40 ಜನರನ್ನು ಆರೋಪಿಗಳೆಂದು ಪೊಲೀಸರು ಹೆಸರಿಸಿದ್ದಾರೆ. ಗ್ಯಾಂಗ್‌ಸ್ಟರ್

ಲಕ್ನೋ: ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ರೌಡಿ ಅತಿಕ್‌ ಅಹ್ಮದ್‌, ಅಶ್ರಫ್‌ ಅಹ್ಮದ್‌ ಗೆ ಶೂಟ್‌ ಔಟ್| ಬೀದಿ‌ ಹೆಣವಾದ ಮಾಜಿ ಸಂಸದ Read More »

ಅಪರೂಪದ ಸೂರ್ಯಗ್ರಹಣಕ್ಕೆ ಸಾಕ್ಷಿಯಾಗಲಿದೆ ಜಗತ್ತು| ಎ.20ರಂದು ಖಗೋಳದಲ್ಲಿ ನೆರಳು ಬೆಳಕಿನಾಟ

ಸಮಗ್ರ ನ್ಯೂಸ್: ಏ.20 ರಂದು ದೇಶದಲ್ಲಿ ಅಪರೂಪದ ಸೂರ್ಯಗ್ರಹಣ ಸಂಭವಿಸಲಿದೆ. ಭಾರತೀಯ ಕಾಲಮಾನದ ಸೂರ್ಯಗ್ರಹಣವು ಬೆಳಗ್ಗೆ 7:04 ಕ್ಕೆ ಪ್ರಾರಂಭವಾಗಿ ಮಧ್ಯಾಹ್ನ 12:29 ಕ್ಕೆ ಕೊನೆಗೊಳ್ಳುತ್ತದೆ. ಒಟ್ಟು ಸಮಯವು ಐದು ಗಂಟೆಗಳಿಗಿಂತ ಹೆಚ್ಚು ಇರುತ್ತದೆ. ಗ್ರಹಣವು ಆಸ್ಟ್ರೇಲಿಯಾ, ಪೂರ್ವ ಮತ್ತು ದಕ್ಷಿಣ ಏಷ್ಯಾ, ಪೆಸಿಫಿಕ್ ಮಹಾಸಾಗರ, ಅಂಟಾರ್ಟಿಕಾ ಮತ್ತು ಹಿಂದೂ ಮಹಾಸಾಗರದಿಂದ ಗೋಚರಿಸುತ್ತದೆ. ಆದರೆ ಭಾರತದಲ್ಲಿ ಗೋಚರಿಸುವುದಿಲ್ಲ. ‘ವಾರ್ಷಿಕ ರಿಂಗ್ ಆಫ್ ಫೈರ್’ಸಮಯದಲ್ಲಿ ಇದು ಭಾರತೀಯ ಮತ್ತು ಪೆಸಿಫಿಕ್ ಸಾಗರಗಳಲ್ಲಿ ಕೆಲವು ಸೆಕೆಂಡುಗಳ ಕಾಲ ಗೋಚರಿಸುತ್ತದೆ. ಸ್ಪೇಸ್

ಅಪರೂಪದ ಸೂರ್ಯಗ್ರಹಣಕ್ಕೆ ಸಾಕ್ಷಿಯಾಗಲಿದೆ ಜಗತ್ತು| ಎ.20ರಂದು ಖಗೋಳದಲ್ಲಿ ನೆರಳು ಬೆಳಕಿನಾಟ Read More »

Breaking: ಜಪಾನ್ ಪ್ರಧಾನಿ ಮೇಲೆ ಸ್ಮೋಕ್ ಬಾಂಬ್ ದಾಳಿ

ಸಮಗ್ರ ನ್ಯೂಸ್: ಜಪಾನ್ ಪ್ರಧಾನಿ ಕಿಶಿಡಾ ರ್ಯಾಲಿ ವೇಳೆ ದುಷ್ಕರ್ಮಿಗಳು ಸ್ಮೋಕ್ ಬಾಂಬ್ ದಾಳಿ ನಡೆದಿದ್ದು, ಪ್ರಾಣಪಾಯದಿಂದ ಕಿಶಿಡಾ ಅವರು ಪಾರಾಗಿರುವ ಘಟನೆ ನಡೆದಿದೆ. ಏಪ್ರಿಲ್ 15 ರ ಇಂದು ವಕಾಯಾಮಾ ನಗರದಲ್ಲಿ ಹೊರಾಂಗಣದಲ್ಲಿ ಭಾಷಣದ ಸಮಯದಲ್ಲಿ ಜಪಾನಿನ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರ ಬಳಿ ಪೈಪ್ ತರಹದ ವಸ್ತುವನ್ನು ಎಸೆಯಲಾಗಿದೆ ಎಂದು ಜಪಾನಿನ ಮಾಧ್ಯಮವನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ. ಜಪಾನಿನ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರು ಏಪ್ರಿಲ್ 15 ರಂದು ವಾಕಾಯಾಮಾ ನಗರದಲ್ಲಿ ಹೊರಾಂಗಣ

Breaking: ಜಪಾನ್ ಪ್ರಧಾನಿ ಮೇಲೆ ಸ್ಮೋಕ್ ಬಾಂಬ್ ದಾಳಿ Read More »

ಇಂದು ಭಾರತದ ಅತೀ ಎತ್ತರದ ಅಂಬೇಡ್ಕರ್ ಪ್ರತಿಮೆ ಉದ್ಘಾಟನೆ

ಸಮಗ್ರ ನ್ಯೂಸ್: ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಇಂದು ಏಪ್ರಿಲ್ 14 ರ ಶುಕ್ರವಾರದಂದು ಸಂವಿಧಾನ ಶಿಲ್ಪಿ ಬಿಆರ್ ಅಂಬೇಡ್ಕರ್ ಅವರ 125 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ಹೆಲಿಕಾಪ್ಟರ್‌ನಿಂದ ಪುಷ್ಪವೃಷ್ಟಿ ಮಾಡುವ ಮೂಲಕ ಅಂಬೇಡ್ಕರ್ ಅವರಿಗೆ ಪುಷ್ಪ ನಮನ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಅವರನ್ನು ಕಾರ್ಯಕ್ರಮಕ್ಕೆ ಏಕೈಕ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗುವುದು ಎಂದು ಪಿಟಿಐ ವರದಿ ಮಾಡಿದೆ.

ಇಂದು ಭಾರತದ ಅತೀ ಎತ್ತರದ ಅಂಬೇಡ್ಕರ್ ಪ್ರತಿಮೆ ಉದ್ಘಾಟನೆ Read More »

ಉತ್ತರಪ್ರದೇಶ: ಅತೀಕ್ ಅಹ್ಮದ್ ಪುತ್ರನ ಎನ್ ಕೌಂಟರ್ ಮಾಡಿದ ಯುಪಿ ಪೊಲೀಸ್

ಸಮಗ್ರ ನ್ಯೂಸ್: ಬಿಎಸ್‌ಪಿ ನಾಯಕ ರಾಜ್‌ಪಾಲ್‌ ಹತ್ಯೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್‌ ಪಾಲ್‌ ಹತ್ಯೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದ ಪ್ರಮುಖ ಆರೋಪಿ ಅತೀಕ್‌ ಅಹ್ಮದ್‌ನ ಮಗ ಸೇರಿದಂತೆ ಇಬ್ಬರು ಆರೋಪಿಗಳನ್ನ ಯುಪಿ ಪೊಲೀಸರು ಅಲ್ಲಿನ ಝಾನ್ಸಿಯಲ್ಲಿ ಎನ್‌ಕೌಂಟರ್‌ ಮಾಡಿದ್ದಾರೆ. ಅಸಾದ್‌ ಅಹ್ಮದ್‌ ಹಾಗೂ ಗುಲಾಮ್‌ ಅನ್ನೊ ಆರೋಪಿಗಳು ಮೃತಪಟ್ಟಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಈವರೆಗೆ ಒಟ್ಟು 4 ಆರೋಪಿಗಳನ್ನ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದಂತಾಗಿದೆ. ಇತ್ತ ಇದೇ ಪ್ರಕರಣದಲ್ಲಿ ಅತೀಕ್‌ ಅಹ್ಮದ್‌ನನ್ನ ಪ್ರಯಾಗ್‌ರಾಜ್‌ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಉತ್ತರಪ್ರದೇಶ: ಅತೀಕ್ ಅಹ್ಮದ್ ಪುತ್ರನ ಎನ್ ಕೌಂಟರ್ ಮಾಡಿದ ಯುಪಿ ಪೊಲೀಸ್ Read More »

ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ| ಮೀಸಲಾತಿ ರದ್ದತಿಗೆ ಆಕ್ಷೇಪ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯಕ್ಕೆ ಮೂರು ದಶಕಗಳಿಂದ ನೀಡಲಾಗುತ್ತಿದ್ದ ಶೇ. 4 ಮೀಸಲು ವ್ಯವಸ್ಥೆ ರದ್ದು ಮಾಡಿ, ಒಕ್ಕಲಿಗ ಮತ್ತು ಲಿಂಗಾಯತರಿಗೆ ತಲಾ ಶೇ.2ರಷ್ಟು ಹಂಚಿಕೆ ಮಾಡಿರುವುದರ ಬಗ್ಗೆ ಸುಪ್ರೀಂ ಕೋರ್ಟ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಕಾರದ ಈ ತೀರ್ಮಾನ ದೋಷಪೂರಿತವಾಗಿದೆ ಮತ್ತು ಸೂಕ್ತವಾದ ಕ್ರಮ ಅಲ್ಲ ಎಂದೂ ಹೇಳಿದೆ. ಆದರೆ, ಕರ್ನಾಟಕ ಸರಕಾರದ ನಿರ್ಧಾರಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಮೇ 10ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಪೂರಕವಾಗಿ

ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ| ಮೀಸಲಾತಿ ರದ್ದತಿಗೆ ಆಕ್ಷೇಪ Read More »

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ| ಹುಲಿ ಕಾಣದ್ದಕ್ಕೆ ಸಫಾರಿ ವಾಹನ ಚಾಲಕನ ಮೇಲೆ ಕ್ರಮಕ್ಕೆ ಒತ್ತಡ

ಸಮಗ್ರ ನ್ಯೂಸ್: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಸಫಾರಿ ನಡೆಸಿದರು. ಈ ವೇಳೆ ಅವರಿಗೆ ಹುಲಿಗಳೇ ಕಾಣದಿರುವುದಕ್ಕೆ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು ಆತನ ವಾಹನದ ನೋಂದಣಿ ರದ್ದುಪಡಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಬಿಜೆಪಿಯ ಕೆಲವು ಮುಖಂಡರು ಒತ್ತಡ ಹೇರುತ್ತಿದ್ದಾರೆ. ಆದರೆ ಪ್ರಧಾನಿ ಮತ್ತು ಅರಣ್ಯ ಅಧಿಕಾರಿಗಳು ಭದ್ರತಾ ತಂಡಗಳನ್ನು ದೂಷಿಸುತ್ತಿದ್ದಾರೆ. ಪ್ರಧಾನಿ ಮೋದಿ ಅವರು 22 ಕಿಲೋಮೀಟರ್ ಸಫಾರಿ ನಡೆಸಿದರೂ ಒಂದೇ ಒಂದು ಹುಲಿ

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ| ಹುಲಿ ಕಾಣದ್ದಕ್ಕೆ ಸಫಾರಿ ವಾಹನ ಚಾಲಕನ ಮೇಲೆ ಕ್ರಮಕ್ಕೆ ಒತ್ತಡ Read More »