ರಾಷ್ಟ್ರೀಯ

ಜ್ಞಾನವ್ಯಾಪಿ ಮಸೀದಿ ವಿವಾದ| ಹಿಂದೂಗಳ ಅರ್ಜಿ ವಿಚಾರಣೆಗೆ ಕೋರ್ಟ್ ಅಸ್ತು

ಸಮಗ್ರ ನ್ಯೂಸ್: ಜ್ಞಾನವ್ಯಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ಕೋರಿ ರಾಖಿಸಿಂಗ್ ಸೇರಿ ನಾಲ್ವರು ಮಹಿಳೆಯರು ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಕೋರ್ಟ್‌ ‘ಗ್ರೀನ್‌ ಸಿಗ್ನಲ್‌’ ನೀಡಿದೆ. ಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ನಗರದ ಜ್ಞಾನವಾಪಿ ಮಸೀದಿಯೊಳಗೆ ಪೂಜಿಸುವ ಹಕ್ಕನ್ನು ಕೋರಿ ಐವರು ಹಿಂದೂ ಮಹಿಳೆಯರು ದಾಖಲಿಸಿರುವ ಪ್ರಕರಣವನ್ನು ಆಲಿಸಬಹುದೇ ಅಥವಾ ಇಲ್ಲವೇ ಎಂಬುದನ್ನು ವಾರಣಾಸಿಯ ಹಿರಿಯ ನ್ಯಾಯಾಧೀಶರ ನ್ಯಾಯಾಲಯವು ಇಂದು ನಿರ್ಧರಿಸಿದ್ದಾರೆ. ಜಿಲ್ಲಾ […]

ಜ್ಞಾನವ್ಯಾಪಿ ಮಸೀದಿ ವಿವಾದ| ಹಿಂದೂಗಳ ಅರ್ಜಿ ವಿಚಾರಣೆಗೆ ಕೋರ್ಟ್ ಅಸ್ತು Read More »

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಮತ್ತೆ ಭಾರೀ ಮಳೆ ಸಾಧ್ಯತೆ; ಪ್ರವಾಹ ಭೀತಿಯಲ್ಲಿ ಹಲವು ರಾಜ್ಯಗಳು!!

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಹಲವು ರಾಜ್ಯಗಳಲ್ಲಿ ಮತ್ತೆ ಪ್ರವಾಹ ಭೀತಿಯನ್ನು ಉಂಟುಮಾಡಿದೆ. ಶನಿವಾರದಿಂದಲೇ ಒಡಿಶಾ, ಪಶ್ಚಿಮ ಬಂಗಾಲ, ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್‌ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಧಾರಾಕಾರ ಮಳೆ ಆರಂಭವಾಗಿದ್ದು, ಇನ್ನೂ 5 ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈಗಾಗಲೇ ಮಳೆ, ಪ್ರವಾಹ, ಭೂಕುಸಿತದಂತಹ ದುರಂತಗಳಿಂದ ಕಂಗಾಲಾಗಿದ್ದ ಜನರನ್ನು ಮತ್ತೆ ಆತಂಕಕ್ಕೆ ನೂಕಿದೆ. ಒಡಿಶಾದಲ್ಲಿ ಶನಿವಾರ ರಾತ್ರಿಯಿಂದೀಚೆಗೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಮತ್ತೆ ಭಾರೀ ಮಳೆ ಸಾಧ್ಯತೆ; ಪ್ರವಾಹ ಭೀತಿಯಲ್ಲಿ ಹಲವು ರಾಜ್ಯಗಳು!! Read More »

‘ರಾಷ್ಟ್ರೀಯ ಧರ್ಮಗ್ರಂಥ’ವಾಗಿ ‘ಶ್ರೀಮದ್ ಭಗವದ್ಗೀತೆ’! ಶೀಘ್ರದಲ್ಲೇ ಕೇಂದ್ರ ಸರ್ಕಾರ ಘೋಷಣೆ ಸಾಧ್ಯತೆ

ಸಮಗ್ರ ನ್ಯೂಸ್: ರಾಷ್ಟ್ರಗೀತೆ, ರಾಷ್ಟ್ರಗೀತೆ, ರಾಷ್ಟ್ರ ಧ್ವಜದಂತೆಯೇ ಶೀಘ್ರದಲ್ಲೇ ರಾಷ್ಟ್ರ ಗ್ರಂಥ ಬರಲಿದೆ. ಭಾರತ ಸರ್ಕಾರವು ಶ್ರೀಮದ್ ಭಗವದ್ಗೀತೆಯನ್ನ ರಾಷ್ಟ್ರೀಯ ಗ್ರಂಥವೆಂದು ಘೋಷಿಸಬಹುದು. ಇದನ್ನು ಜಾರಿಗೆ ತರುವ ಪ್ರಯತ್ನವನ್ನ ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸುತ್ತಿದೆ. ಇದಕ್ಕಾಗಿ, ಭಾರತ ಸರ್ಕಾರವು ವಿವಿಧ ಸಚಿವಾಲಯಗಳಿಂದ ಅಭಿಪ್ರಾಯವನ್ನ ತೆಗೆದುಕೊಳ್ಳುತ್ತಿದೆ. ಗಮನಾರ್ಹವಾಗಿ, ಮಹಾರಾಷ್ಟ್ರದ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ ಅವರು ಕಳುಹಿಸಿದ ಪತ್ರದ ಆಧಾರದ ಮೇಲೆ ಸರ್ಕಾರವು ಈ ಅಭ್ಯಾಸ ನಡೆಸಿದೆ. ಮಹಾರಾಷ್ಟ್ರದ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ ಜುಲೈ 5ರಂದು ಕೇಂದ್ರ

‘ರಾಷ್ಟ್ರೀಯ ಧರ್ಮಗ್ರಂಥ’ವಾಗಿ ‘ಶ್ರೀಮದ್ ಭಗವದ್ಗೀತೆ’! ಶೀಘ್ರದಲ್ಲೇ ಕೇಂದ್ರ ಸರ್ಕಾರ ಘೋಷಣೆ ಸಾಧ್ಯತೆ Read More »

ನವೀಕೃತ ‘ಸೆಂಟ್ರಲ್ ವಿಸ್ತಾ’ ಇಂದು ಉದ್ಘಾಟನೆ| ಕರ್ತವ್ಯ ಪಥಕ್ಕೆ ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ನವೀಕೃತ ಸೆಂಟ್ರಲ್ ವಿಸ್ತಾದ ಕೆಲವು ಭಾಗ, ಕರ್ತವ್ಯ ಪಥ ಹಾಗೂ ಇಂಡಿಯಾ ಗೇಟ್ ಸನಿಹ ಪ್ರತಿಸ್ಠಾಪಿಸಲಾಗಿರುವ ನೇತಾಜಿ ಸಭಾಷ್ ಚಂದ್ರ ಬೋಸ್ ಪ್ರತಿಮೆಯನ್ನು, ಇಂದು ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಲಿದ್ದಾರೆ. ನವೀಕೃತ ಸೆಂಟ್ರಲ್ ವಿಸ್ತಾ ಬಹುತೇಕ ಸಿದ್ಧವಾಗಿದ್ದು, ಮೋದಿ ವಿಜಯ್ ಚೌಕ್ ನಿಂದ ಇಂಡಿಯಾ ಗೇಟ್ ವರೆಗಿನ ಭಾಗವನ್ನು ಇಂದು ಉದ್ಘಾಟಿಸಲಿದ್ದಾರೆ. ಈ ನವೀಕೃತ ಸೆಂಟ್ರಲ್ ವಿಸ್ತಾದಲ್ಲಿ ರಾಜ್ಯವಾರು ಆಹಾರ ಮಳಿಗೆಗಳು, ಕೆಂಪು ಗ್ರಾನೈಟ್ ಪಾದಚಾರಿ ಮಾರ್ಗಗಳು, ಸುತ್ತಲೂ ಹಸಿರು ಉದ್ಯಾನವನಗಳು ಪ್ರಮುಖ

ನವೀಕೃತ ‘ಸೆಂಟ್ರಲ್ ವಿಸ್ತಾ’ ಇಂದು ಉದ್ಘಾಟನೆ| ಕರ್ತವ್ಯ ಪಥಕ್ಕೆ ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ Read More »

ಕನ್ನಡದಲ್ಲಿ ಬರೆದ ಚೆಕ್ ಅಮಾನ್ಯ ಮಾಡಿದ ಸ್ಟೇಟ್ ಬ್ಯಾಂಕ್| ಬರೋಬ್ಬರಿ 85 ಸಾವಿರ ದಂಡ ವಿಧಿಸಿದ ಗ್ರಾಹಕರ‌ ಆಯೋಗ

ಸಮಗ್ರ ನ್ಯೂಸ್: ಕನ್ನಡದಲ್ಲಿ ಬರೆದ ಚೆಕ್ಕನ್ನು ಅಮಾನ್ಯ ಮಾಡಿದ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ಶಾಖೆಗೆ 85,177 ರೂ.ದಂಡ ಪರಿಹಾರ ಪಾವತಿಸುವಂತೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶ ನೀಡಿದೆ. ವಾದಿರಾಜಾಚಾರ್ಯ ಇನಾಮದಾರ ಎಂಬುವರು ತಮ್ಮ ಉಳಿತಾಯ ಖಾತೆ(Account)ಯಲ್ಲಿದ್ದ ಹಣ ಹಿಂಪಡೆಯಲು ಕನ್ನಡದಲ್ಲಿ ಬರೆದ ಚೆಕ್ ಅನ್ನು ಬ್ಯಾಂಕ್ ಗೆ ನೀಡಿದ್ದು, ಈ ವೇಳೆಯಲ್ಲಿ, ಹಳಿಯಾಳದ ಎಸ್‌ಬಿಐ ಶಾಖೆ ತಿರಸ್ಕರಿಸಿತ್ತು. ಬ್ಯಾಂಕ್ ಕಾರ್ಯವೈಖರಿ ವಿರುದ್ದ ನ್ಯಾಯಕ್ಕಾಗಿ, ಜಿಲ್ಲಾ ಗ್ರಾಹಕರ

ಕನ್ನಡದಲ್ಲಿ ಬರೆದ ಚೆಕ್ ಅಮಾನ್ಯ ಮಾಡಿದ ಸ್ಟೇಟ್ ಬ್ಯಾಂಕ್| ಬರೋಬ್ಬರಿ 85 ಸಾವಿರ ದಂಡ ವಿಧಿಸಿದ ಗ್ರಾಹಕರ‌ ಆಯೋಗ Read More »

ಇಂದು(ಸೆ.7) NEET ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ವೈದ್ಯಕೀಯ ಮತ್ತು ದಂತ ವೈದ್ಯಕೀಯ, ಆಯುಷ್ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗಿದ್ದ ನೀಟ್ ಫಲಿತಾಂಶ ಇಂದು(ಸೆ.7) ಪ್ರಕಟವಾಗಲಿದೆ ವಿದ್ಯಾರ್ಥಿಗಳು ಫಲಿತಾಂಶವನ್ನು ವೆಬ್ ಸೈಟ್ ನಲ್ಲಿ ವೀಕ್ಷಿಸಬಹುದಾಗಿದ್ದು, ಇದಕ್ಕಾಗಿ neet.nta.nic.in ಗೆ ಭೇಟಿ ನೀಡಬೇಕಾಗುತ್ತದೆ. ತಮ್ಮ ಲಾಗಿನ್ ಐಡಿ, ಜನ್ಮ ದಿನಾಂಕ ಹಾಗೂ ನೋಂದಣಿ ಸಂಖ್ಯೆ ನಮೂದಿಸಿ ಫಲಿತಾಂಶ ಪಡೆಯಬಹುದಾಗಿದೆ ಎಂದು ತಿಳಿಸಲಾಗಿದೆ. ಜುಲೈ 17ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನು ಬರೆಯಲು 18 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿದ್ದರು. ಅದರ ಫಲಿತಾಂಶ ಇಂದು ಪ್ರಕಟವಾಗಲಿದೆ. ತಾತ್ಕಾಲಿಕ ಕೀ ಉತ್ತರಗಳನ್ನು

ಇಂದು(ಸೆ.7) NEET ಫಲಿತಾಂಶ ಪ್ರಕಟ Read More »

ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ತೀವ್ರ ಹೃದಯಾಘಾತದಿಂದ ಮಂಗಳವಾರ ರಾತ್ರಿ ವಿಧಿವಶರಾಗಿದ್ದಾರೆ. ಮಂಗಳವಾರ ರಾತ್ರಿ ಡಾಲರ್ಸ್‌ ಕಾಲೋನಿ ನಿವಾಸದಲ್ಲಿ ಸಚಿವ ಉಮೇಶ್‌ ಕತ್ತಿ (61) ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಎಂ. ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಉಮೇಶ್ ಕತ್ತಿ ನಿಧನರಾದ ವಿಷಯ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ದಂಡು ಎಂ. ಎಸ್‌. ರಾಮಯ್ಯ ಆಸ್ಪತ್ರೆಯತ್ತ ದೌಡಾಯಿಸುತ್ತಿದ್ದಾರೆ. ಆರೋಗ್ಯ ಸಚಿವ

ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ಸಾವು Read More »

‘ಬಿಂದು’ ಮೇಲೆ ಕಣ್ಣುಹಾಕಿದ ಅಂಬಾನಿ| ಎಸ್ ಜಿ ಗ್ರೂಪ್ ಗೆ ಬಹುಕೋಟಿ ಆಫರ್ ನೀಡಿದ ರಿಲಯನ್ಸ್|

ಸಮಗ್ರ ನ್ಯೂಸ್: ಉದ್ಯಮ ಕ್ಷೇತ್ರದ ದೈತ್ಯ ರಿಲಯನ್ಸ್ ಕಂಪನಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ತಂಪು ಪಾನಿಯ ಸಂಸ್ಥೆಯ ಮೇಲೆ ಕಣ್ಣು ಹಾಕಿದೆ. ಪುತ್ತೂರಿನ ಸಣ್ಣ ಗ್ರಾಮದಲ್ಲಿ ಆರಂಭವಾದ ಸಣ್ಣ ಉದ್ಯಮ, ಏಷ್ಯಾದ ಅತೀ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿಯ ರಿಲಯನ್ಸ್ ಕಣ್ಣಿಗೆ ಬಿದ್ದಿದ್ದು,ಬಹುಕೋಟಿ ಆಫರ್ ಕೂಡಾ ಮಾಡಿದೆ. ಆದರೆ ಪುತ್ತೂರಿನ ಕಂಪನಿ ಮಾತ್ರ ಅಂಬಾನಿಯ ಆಫರ್ ಆನ್ನು ನಯವಾಗಿ ತಿರಸ್ಕರಿಸಿದ್ದು, ಕಂಪನಿ ಬೆಳೆಸುವ ಉದ್ದೇಶ ವ್ಯಕ್ತಪಡಿಸಿದೆ. ಮಾರಾಟ ಮಾಡುವ ಉದ್ದೇಶ ಖಂಡಿತಾ ಇಲ್ಲವೆಂದು ನೇರವಾಗಿ

‘ಬಿಂದು’ ಮೇಲೆ ಕಣ್ಣುಹಾಕಿದ ಅಂಬಾನಿ| ಎಸ್ ಜಿ ಗ್ರೂಪ್ ಗೆ ಬಹುಕೋಟಿ ಆಫರ್ ನೀಡಿದ ರಿಲಯನ್ಸ್| Read More »

ಆರ್ಥಿಕತೆಯಲ್ಲಿ ಅತಿ ದೊಡ್ಡ ಹೆಜ್ಜೆ ಇರಿಸಿದ ಇಂಡಿಯಾ| ವಿಶ್ವದ 5ನೇ ಸ್ಥಾನಕ್ಕೆ ಭಾರತದ ಆರ್ಥಿಕತೆ

ಸಮಗ್ರ ನ್ಯೂಸ್: ಯುನೈಟೆಡ್ ಕಿಂಗ್ಡಮ್ ಹಿಂದಿಕ್ಕಿದ ಭಾರತ ವಿಶ್ವದ 5ನೇ ದೊಡ್ಡ ಆರ್ಥಿಕತೆಯನ್ನು ಹೊಂದಿದ ದೇಶವಾಗಿ ಹೊರಹೊಮ್ಮಿದೆ. 2021ರ ಹಣಕಾಸು ವರ್ಷದ ಕೊನೆಯ ಮೂರು ತೈಮಾಸಿಕದ ಜಿಡಿಪಿ ಬೆಳವಣಿಗೆಯಿಂದಾಗಿ ಭಾರತ ಯುಕೆಯನ್ನು ಹಿಂದಿಕ್ಕಿ ಐದನೇ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿದ ದೇಶವಾಗಿ ಹೊರ ಹೊಮ್ಮಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಹೇಳಿದೆ. ಈಗಾಗಲೇ ಕೋವಿಡ್ ನೀಡಿದ ಹೊಡೆತದಿಂದ ಪಾರಾಗಲು ಹೆಣಗಾಡುತ್ತಿರುವ ಇಂಗ್ಲೆಂಡ್ಗೆ ಈ ವರದಿ ಮತ್ತಷ್ಟು ಹೊಡೆತ ನೀಡಿದೆ. ಡಾಲರ್ ವಿನಿಮಯ ದರವನ್ನು ಲೆಕ್ಕ ಹಾಕಿದಾಗ ಭಾರತೀಯ ಆರ್ಥಿಕತೆಯ

ಆರ್ಥಿಕತೆಯಲ್ಲಿ ಅತಿ ದೊಡ್ಡ ಹೆಜ್ಜೆ ಇರಿಸಿದ ಇಂಡಿಯಾ| ವಿಶ್ವದ 5ನೇ ಸ್ಥಾನಕ್ಕೆ ಭಾರತದ ಆರ್ಥಿಕತೆ Read More »

ರಾಕೆಟ್‌ನಲ್ಲಿ ಇಂಧನ ಸೋರಿಕೆ| ಎರಡು ಗಂಟೆ ತಡವಾಗಿ ಉಡಾವಣೆ

ಕೇಪ್‌ ಕ್ಯಾನವೆರಲ್‌: ಚಂದಿರನ ಅಂಗಳಕ್ಕೆ ಮನುಷ್ಯನನ್ನು ಕಳುಹಿಸಿ ಮತ್ತೊಮ್ಮೆ ಇತಿಹಾಸ ಸೃಷ್ಟಿಸುವ ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (NASA) ಮಹತ್ವಾಕಾಂಕ್ಷೆ ಯೋಜನೆಗೆ ಶನಿವಾರ ಮತ್ತೊಮ್ಮೆ ಅಡ್ಡಿ ಎದುರಾಯಿತು. ಉಡಾವಣೆಗೆ ಸಜ್ಜಾಗಿದ್ದ 322 ಅಡಿ ಉದ್ದದ ರಾಕೆಟ್‌ನಲ್ಲಿ ಇಂಧನ ಸೋರಿಕೆಯಾಗುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ವಿಜ್ಞಾನಿಗಳ ತಂಡ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತು. ಇಂಧನ ಸೋರಿಕೆಯಿಂದ ಯಾವುದೇ ಹಾನಿಯಾಗಿಲ್ಲ ಎಂದು ನಾಸಾ ತಿಳಿಸಿದೆ. ಎಂಜಿನಿಯರ್‌ಗಳು ದೋಷವನ್ನು ಸರಿಪಡಿಸಿದ ನಂತರ, ಎರಡು ಗಂಟೆ ತಡವಾಗಿ ರಾಕೆಟ್‌ ಅನ್ನು ಉಡಾವಣೆ ಮಾಡಲಾಯಿತು.

ರಾಕೆಟ್‌ನಲ್ಲಿ ಇಂಧನ ಸೋರಿಕೆ| ಎರಡು ಗಂಟೆ ತಡವಾಗಿ ಉಡಾವಣೆ Read More »