ಶಿರಾಡಿ ಘಾಟ್ ಸುರಂಗ ಮಾರ್ಗ ಹೆದ್ದಾರಿ ನಿರ್ಮಾಣ ಸಾಧ್ಯವಿಲ್ಲ| ಕೇಂದ್ರ ಸಾರಿಗೆ ಸಚಿವ ನಿತಿನ್ ಘಡ್ಕರಿ ಅಭಿಮತ
ಸಮಗ್ರ ನ್ಯೂಸ್: ದಶಕದಿಂದಲೇ ಪ್ರಸ್ತಾವದಲ್ಲಿದ್ದ ಶಿರಾಡಿ ಘಾಟಿ ಸುರಂಗ ಮಾರ್ಗ ಹೆದ್ದಾರಿ ಯೋಜನೆಯನ್ನು ಕೇಂದ್ರ ಸರಕಾರ ಕೈಬಿಡುವ ಸೂಚನೆಗಳು ಕಾಣುತ್ತಿವೆ. ಈ ಯೋಜನೆಯು ದೊಡ್ಡ ಮೊತ್ತದ್ದಾಗಿದೆ ಹಾಗೂ ಅನೇಕ ಸವಾಲುಗಳಿಂದ ಕೂಡಿರುವ ಕಾರಣ ಇದು ಕಾರ್ಯಸಾಧುವಲ್ಲ ಎಂದು ಕೇಂದ್ರ ಅಭಿಪ್ರಾಯಪಟ್ಟಿದೆ. ಲೋಕಸಭೆಯಲ್ಲಿ ಗುರುವಾರ ಸಂಸದ ನಳಿನ್ ಕುಮಾರ್ ಕಟೀಲು ಅವರ ಪ್ರಶ್ನೆಗೆ, ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿಯವರು ನೀಡಿರುವ ಉತ್ತರದಲ್ಲಿ ಈ ಅಂಶವನ್ನು ಸ್ಪಷ್ಟಪಡಿಸಲಾಗಿದೆ. ಮಂಗಳೂರಿಗೆ ಫೆಬ್ರವರಿಯಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ, […]










