ಅಫ್ಘಾನ್ ಕೇಂದ್ರ ಸರ್ಕಾರಕ್ಕೆ ಪಾಠವಾಗಬೇಕು| ನಮ್ಮನ್ನು ಪರೀಕ್ಷಿಸಿದರೆ ತೊಂದರೆಯಾದೀತು- ಉಗ್ರರಿಗೆ ಪರೋಕ್ಷ ಬೆಂಬಲ ನೀಡಿದ ಮೆಹಬೂಬ ಮುಫ್ತಿ|
ಶ್ರೀನಗರ: ತಾಲಿಬಾನ್ ಅಧಿಕಾರ ವಶಪಡಿಸಿಕೊಂಡು, ಅಮೆರಿಕವನ್ನು ಅಫ್ಘಾನಿಸ್ತಾನದಿಂದ ಪಲಾಯನ ಮಾಡುವಂತೆ ಮಾಡಿದೆ. ಕೇಂದ್ರ ಸರ್ಕಾರ ಅಫ್ಘಾನಿಸ್ತಾನದಿಂದ ಪಾಠ ಕಲಿಯಲಿ. ಅಲ್ಲದೆ 2019ರಲ್ಲಿ ರದ್ದು ಮಾಡಿರುವ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಮರು ಸ್ಥಾಪಿಸಲಿ ಎಂದು ಹೇಳಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಮ್ನಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರ ವಶಪಡಿಸಿಕೊಂಡಿರುವುದನ್ನು ಉಲ್ಲೇಖಿಸಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ, ನಮ್ಮನ್ನು ಪರೀಕ್ಷಿಸಬೇಡಿ. ಸರ್ಕಾರ ಮಾರ್ಗಗಳನ್ನು ಸರಿಪಡಿಸಿಕೊಂಡು, ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕಿದೆ. ನಿಮ್ಮ ಪಕ್ಕದಲ್ಲಿ ಏನಾಗುತ್ತಿದೆ ಎಂಬುದನ್ನು ನೋಡಿ ಎಂದು […]










