ರಾಷ್ಟ್ರೀಯ

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಗ್ರಹಗತಿಗಳ ಸ್ಥಾನದ ಆಧಾರದ ಮೇಲೆ ವೈದಿಕ ಶಾಸ್ತ್ರದಲ್ಲಿ ಭವಿಷ್ಯ ಹೇಳಲಾಗುವುದು. ಈ ವಾರ (ಡಿಸೆಂಬರ್ 15-23) ದ್ವಾದಶ ರಾಶಿಗಳ ಮೇಲೆ ಹೇಗೆ ಪ್ರಭಾವ ಬೀರಿದೆ ಎಂದು ನೋಡೋಣ: ಮೇಷ:ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಮುಂದುವರೆಯುವಿರಿ. ಕೌಟುಂಬಿಕ ವಿಚಾರಗಳಲ್ಲಿ ಯಶಸ್ಸು ಕಾಣುವಿರಿ. ಕುಟುಂಬದಲ್ಲಿ ಧನಾತ್ಮಕ ವಾತಾವರಣ ಉಂಟು ಮಾಡುವಿರಿ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ. ಉದ್ಯೋಗದಲ್ಲಿ ದುಡುಕಿನ ಮಾತಿನಿಂದ ಸಮಸ್ಯೆಯೊಂದು ಎದುರಾಗಬಹುದು. ವಿದ್ಯಾರ್ಥಿಗಳು ವ್ಯಾಸಂಗದ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಆರೋಗ್ಯದ ಬಗ್ಗೆ ಗಮನ ಇರಲಿ. ಭೂವ್ಯವಹಾರದಿಂದ ಧನ […]

ದ್ವಾದಶ ರಾಶಿಗಳ ವಾರಭವಿಷ್ಯ Read More »

ಬೆಂಗಳೂರಿನಿಂದ ಆಯೋಧ್ಯೆಗೆ ಸಾಗಲಿದೆ ಗಂಟೆ ಮತ್ತು ಪೂಜಾ ಸಾಮಾಗ್ರಿಗಳು

ಸಮಗ್ರ ನ್ಯೂಸ್: ರಾಮಮಂದಿರ ಉದ್ಘಾಟನೆಗೆ ಸಜ್ಜಾಗುತ್ತಿದ್ದು ಮನೆ ಮನೆಗಳಲ್ಲಿ ದೀಪ ಬೆಳಗಿಸಲು, ಗ್ರಾಮ ಗ್ರಾಮಗಳಲ್ಲಿ ಕಾರ್ಯಕ್ರಮ ಪೂಜೆ ಪುನಸ್ಕಾರ ಆಯೋಜಿಸಲು ಸಿದ್ಧತೆ ನಡೆಯುತ್ತಿದೆ. ಇದರ ಭಾಗವಾಗಿ ಬೆಂಗಳೂರಿನ ಬನಶಂಕರಿ ಒಂದನೇ ಹಂತದಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೆ 2.5 ಟನ್ ತೂಕದ ಘಂಟೆಗಳು, 30 ಸಣ್ಣ ಗಂಟೆಗಳು, 38 ಕೆಜಿ ತೂಕದ ಬೆಳ್ಳಿಯ ಸಾಮಾನುಗಳನ್ನು ಸಮರ್ಪಣೆ ಮಾಡಲಾಗಿದೆ. ಸಮರ್ಪಣೆ ಕಾರ್ಯಕ್ರಮದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಭಾಗಿಯಾಗಿದ್ದಾರೆ. ತಮಿಳುನಾಡಿನ ನಾಮಕ್ಕಲ್‍ನಲ್ಲಿ ಈ ಘಂಟೆಗಳನ್ನು ತಯಾರು ಮಾಡಲಾಗಿದ್ದು, 2.5

ಬೆಂಗಳೂರಿನಿಂದ ಆಯೋಧ್ಯೆಗೆ ಸಾಗಲಿದೆ ಗಂಟೆ ಮತ್ತು ಪೂಜಾ ಸಾಮಾಗ್ರಿಗಳು Read More »

ವೆನೆಜುವಲಾದಿಂದ ಬರಲಿದೆ ಕಚ್ಚಾ ತೈಲ

ಸಮಗ್ರ ನ್ಯೂಸ್: ಮೂರು ವರ್ಷಗಳ ಬಳಿಕ ವೆನೆಜುವಲಾದಿಂದ ಕಚ್ಚಾ ತೈಲ ಖರೀದಿಸಲು ಭಾರತ ಮುಂದಾಗಿದೆ. ಇದಕ್ಕೆ ಪೂರಕವಾಗಿ, ವೆನೆಜುವೆಲಾ ಸೇರಿದಂತೆ ನಿಬರ್ಂಧ ಇಲ್ಲದ ಯಾವುದೇ ದೇಶದಿಂದ ತೈಲ ಆಮದು ಮಾಡಿಕೊಳ್ಳಲು ಭಾರತ ಸಿದ್ಧ ಎಂದು ಕೇಂದ್ರ ಪೆಟ್ರೋಲಿಯಂ ಖಾತೆಯ ಸಚಿವ ಹರ್ದೀಪ್ ಸಿಂಗ್ ಪುರಿ ಕೂಡಾ ಹೇಳಿಕೆ ನೀಡಿದ್ದಾರೆ, ರಿಲಯನ್ಸ್ ಇಂಡಸ್ಟ್ರೀಸ್, ಇಂಡಿಯನ್ ಆಯಿಲ್ ಹಾಗೂ ಎಚ್‍ಪಿಸಿಎಲ್-ಮಿತ್ತಲ್ ಎನರ್ಜಿ ವೆನೆಜುವೆಲಾದ ತೈಲ ಖರೀದಿಸಿದ್ದು, ಇದು ಮುಂದಿನ ಎರಡು ತಿಂಗಳುಗಳಲ್ಲಿ ಭಾರತಕ್ಕೆ ಬರುವ ಸಾಧ್ಯತೆಯಿದೆ.

ವೆನೆಜುವಲಾದಿಂದ ಬರಲಿದೆ ಕಚ್ಚಾ ತೈಲ Read More »

ಮತ್ತೆ ಶುರುವಾಯ್ತು ಕೊರೊನಾ ಟೆನ್ಷನ್…ಕೇರಳದಲ್ಲಿ ಒಂದೇ ವಾರಕ್ಕೆ 825 ಕೇಸ್ ದಾಖಲು..!

ಸಮಗ್ರ ನ್ಯೂಸ್: ಕೊರೊನಾ ಕಾಟ ಮುಗಿತು ಅಂತ ಇಷ್ಟು ದಿನ ಆರಾಮವಾಗಿ ಇದ್ದ ಜನರಿಗೆ ಈಗ ಮತ್ತೆ ರಾಜ್ಯದಲ್ಲಿ ಕೋವಿಡ್ ಆತಂಕ ಶುರುವಾಗಿದೆ. ಇಷ್ಟು ದಿನ ಸೈಲೆಂಟ್ ಇದ್ದ ಕೊರೊನಾ ಈಗ ಮತ್ತೆ ರೂಪ ಬದಲಿಸಿ ಆರ್ಭಟಿಸಲು ಶುರುವಾಗಿದೆ. ರಾಜ್ಯಕ್ಕೆ ಓಮಿಕ್ರಾನ್‍ನ ಉಪ ತಳಿಯಾದ ಜೆಎನ್.1 ಆತಂಕ ಹೆಚ್ಚಾಗಿದೆ. ಕೇರಳದಲ್ಲಿ ಕೊರೊನಾ ಹಾವಳಿ ಇದೀಗ ಶುರುವಾಗಿದೆ.ನಿನ್ನೆ ಒಂದು ದಿನ 237 ಪ್ರಕರಣ ದಾಖಲಾಗಿದೆ. ಈ ಮೊದಲ ವಾರವೆ 825 ಕೇಸ್ ದಾಖಲಾಗಿದ್ದು. ಒಟ್ಟು ಪ್ರಕರಣಗಳ ಪೈಕಿ 90%

ಮತ್ತೆ ಶುರುವಾಯ್ತು ಕೊರೊನಾ ಟೆನ್ಷನ್…ಕೇರಳದಲ್ಲಿ ಒಂದೇ ವಾರಕ್ಕೆ 825 ಕೇಸ್ ದಾಖಲು..! Read More »

“ಸ್ತ್ರೀ ಶಕ್ತಿ ಸಂಘಮಮ್”/ ಎರಡು ಲಕ್ಷ ಮಹಿಳೆಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮೋದಿ

ಸಮಗ್ರ ನ್ಯೂಸ್: ಸಂಸತ್ತಿನ ಉಭಯ ಸದನಗಳಲ್ಲಿ ಮಹಿಳಾ ಮೀಸಲಾತಿ ಮಸೂದೆಯು ಅಂಗೀಕಾರಗೊಂಡಿರುವ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಲು ಜ.2ರಂದು ಕೇರಳ ಬಿಜೆಪಿ ಘಟಕವು ‘ಸ್ತ್ರೀ ಶಕ್ತಿ ಸಂಘಮಮ್’ ಎನ್ನುವ ಬೃಹತ್ ಸಮಾವೇಶವನ್ನು ಆಯೋಜಿಸಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ಲಕ್ಷ ಮಹಿಳೆಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಪಕ್ಷದ ಕೇರಳ ರಾಜ್ಯ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್, ಅಂಗನವಾಡಿ ಶಿಕ್ಷಕಿಯರು, ಆಶಾ ಕಾರ್ಯಕರ್ತೆಯರು, ಉದ್ಯಮಿಗಳು, ಮನರೇಗಾ ಕಾರ್ಮಿಕರು ಮತ್ತು

“ಸ್ತ್ರೀ ಶಕ್ತಿ ಸಂಘಮಮ್”/ ಎರಡು ಲಕ್ಷ ಮಹಿಳೆಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮೋದಿ Read More »

ವಿಮಾನ ನಿಲ್ದಾಣಗಳಿಗೆ ಪ್ರಮುಖ ವ್ಯಕ್ತಿಗಳ ಹೆಸರು/ ಕೇಂದ್ರಕ್ಕೆ ಶಿಫಾರಸು

ಸಮಗ್ರ ನ್ಯೂಸ್: ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳ ಹೆಸರನ್ನು ಬದಲಾಯಿಸಿ, ಪ್ರಮುಖ ವ್ಯಕ್ತಿಗಳ ಹೆಸರಿಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಈ ನಿರ್ಣಯ ಸರ್ವಾನುಮತದಿಂದ ಅಂಗೀಕಾರವಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಡಾ.ಕೆ.ವಿ.ಪುಟ್ಟಪ್ಪ (ಕುವೆಂಪು) ಹಾಗೂ ವಿಜಯಪುರ ವಿಮಾನ ನಿಲ್ದಾಣಕ್ಕೆ ಶ್ರೀ ಜಗಜ್ಯೋತಿ ಬಸವೇಶ್ವರ ಹೆಸರಿಡಲು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮಂಡಿಸಿದ ನಿರ್ಣಯಕ್ಕೆ ಆಡಳಿತ

ವಿಮಾನ ನಿಲ್ದಾಣಗಳಿಗೆ ಪ್ರಮುಖ ವ್ಯಕ್ತಿಗಳ ಹೆಸರು/ ಕೇಂದ್ರಕ್ಕೆ ಶಿಫಾರಸು Read More »

ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ/ ಅಮೇರಿಕಾದಲ್ಲೂ ಸಂಭ್ರಮ

ಅಯೋಧ್ಯೆಯ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಗೆ ಭರದ ಸಿದ್ದತೆಗಳು ನಡೆಯುತ್ತಿದ್ದು, ರಾಮಮಂದಿರದ ಉದ್ಘಾಟನೆಯ ಸಂಭ್ರಮಾಚರಣೆಗಾಗಿ ಅಮೆರಿಕದಲ್ಲಿನ ಹಿಂದುಗಳು ನಿರ್ಧರಿಸಿ ಪ್ರತಿ ಮನೆಯಲ್ಲೂ ಐದು ದೀಪಗಳನ್ನು ಬೆಳಗಿಸಲಿದ್ದಾರೆ. ಇದರ ಜೊತೆಗೆ ಜ. 22 2024 ರಂದು ಪ್ರಾಣ ಪ್ರತಿಷ್ಠಾಪನೆಯ ಉದ್ಘಾಟನಾ ಸಮಾರಂಭವನ್ನು ದೊಡ್ಡ ಪರದೆಗಳಲ್ಲಿ ನೇರಪ್ರಸಾರ ಮಾಡುವುದು, ಸಮುದಾಯ ಸಭೆ ಮತ್ತು ಪಾರ್ಟಿಗಳನ್ನು ಏರ್ಪಡಿಸುವುದು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಿದ್ದು, ಮಹೋತ್ಸವದಲ್ಲಿ ಒಂದು ಸಾವಿರಕ್ಕೂ ಹೆಚ್ಚು ದೇಗುಲಗಳು, ವ್ಯಕ್ತಿಗಳ ಪಾಲ್ಗೊಳ್ಳುವಿಕೆಯನ್ನು ಖಾತ್ರಿಪಡಿಸಲಾಗುತ್ತಿದೆ. ಜನರ ಅನುಕೂಲಕ್ಕಾಗಿ https//rammandir2024.org ಪ್ರಾರಂಭಿಸಲಾಗಿದೆ ಎಂದು

ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ/ ಅಮೇರಿಕಾದಲ್ಲೂ ಸಂಭ್ರಮ Read More »

9‌ ತಿಂಗಳು ಮೇಲ್ಪಟ್ಟ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ| ಸುರಕ್ಷತಾ ನಿಯಮ ಕುರಿತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್

ಸಮಗ್ರ ನ್ಯೂಸ್: 9 ತಿಂಗಳು ಮೇಲ್ಪಟ್ಟ ಎಲ್ಲ ಮಕ್ಕಳಿಗೆ ಹೆಲ್ಮೆಟ್ ಹಾಗೂ ಮಕ್ಕಳ ಸುರಕ್ಷತಾ ಕ್ರಮಗಳ ಕುರಿತಂತೆ ನಿರ್ದೇಶಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಮಕ್ಕಳಿಗೆ ಹೆಲ್ಮೆಟ್‌ ಹಾಗೂ ಸುರಕ್ಷತಾ ಸಾಧನಗಳು ಲಭ್ಯವಾಗುವಂತೆ ಮಾಡಲು ತುರ್ತು ಕ್ರಮ ಕೈಗೊಳ್ಳಲು ನಿರ್ದೇಶಿಸುವಂತೆ ಕೋರಿದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ನೀಡಿದೆ. ಮಕ್ಕಳ ಹೆಲ್ಮೆಟ್‌ ಹಾಗೂ ಸುರಕ್ಷತಾ ಸಾಧನಗಳ ಕುರಿತು ಡಾ.ಕೆ. ಅರ್ಚನಾಭಟ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.

9‌ ತಿಂಗಳು ಮೇಲ್ಪಟ್ಟ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ| ಸುರಕ್ಷತಾ ನಿಯಮ ಕುರಿತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್ Read More »

ಕೃಷ್ಣ ಜನ್ಮಭೂಮಿ ಸರ್ವೇ/ ಅಲಹಾಬಾದ್ ಹೈಕೋರ್ಟ್ ಅನುಮತಿ

ಸಮಗ್ರ ನ್ಯೂಸ್: ಮಥುರಾದ ಶ್ರೀಕೃಷ್ಣ ಜನ್ಮಭೂಮಿಯ ದೇವಸ್ಥಾನದ ಪಕ್ಕದಲ್ಲಿರುವ ಶಾಹಿ ಈದ್ದಾ ಸಂಕೀರ್ಣದ ಸಮೀಕ್ಷೆಗೆ ಅಲಹಾಬಾದ್‌ ಹೈಕೋರ್ಟ್ ಅನುಮತಿ ನೀಡಿಜಸ್ಟೀಸ್ ಮಯಾಂಕ್ ಕುಮಾರ್ ಜೈನ್ ಮಹತ್ವದ ಆದೇಶ ನೀಡಿದ್ದಾರೆ. ಹಿಂದೂ ದೇವಸ್ಥಾನವನ್ನು ಬೀಳಿಸಿ ಮಥುರಾದ ಶಾಹಿ ಈದ್ದಾ ಮಸೀದಿ ಕಟ್ಟಲಾಗಿದೆ. ಶಾಹಿ ಈದ್ದಾ ಮಸೀದಿಯಲ್ಲಿ ಹಿಂದೂ ದೇವಸ್ಥಾನದ ಕುರುಹುಗಳಿವೆ. ಕಮಲದಳದ ಆಕಾರದಲ್ಲಿ ಕಂಬಗಳು ಹಿಂದೂ ದೇವಸ್ಥಾನ ಶೈಲಿಯಾಗಿದೆ. ಇದೇ ಕಂಬದಲ್ಲಿ ಹಿಂದೂ ದೇವಸ್ಥಾನ ಚಿಹ್ನೆಗಳು ಕಾಣುತ್ತಿದೆ. ಹೀಗಾಗಿ ಈದ್ದಾ ಮಸೀದಿಯನ್ನು ಸಮೀಕ್ಷೆಗೆ ಒಳಪಡಿಸಬೇಕು ಎಂದು ಭಗವಾನ್ ಶ್ರೀಕೃಷ್ಣ

ಕೃಷ್ಣ ಜನ್ಮಭೂಮಿ ಸರ್ವೇ/ ಅಲಹಾಬಾದ್ ಹೈಕೋರ್ಟ್ ಅನುಮತಿ Read More »

ಪ್ರತಾಪ್ ಸಿಂಹ ಫೋಟೋಗೆ ಬೆಂಕಿ

ಸಮಗ್ರ ನ್ಯೂಸ್: ಸಂಸತ್ ಭವನದಲ್ಲಿ ಸ್ಮೋಕ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಪ್ರತಾಪ್ ಸಿಂಹ ಫೋಟೋಗೆ ಬೆಂಕಿ ಹಚ್ಚಿದ್ದಾರೆ. ರೇಸ್‌ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಪ್ರತಾಪ್ ಸಿಂಹ ಹಾಗೂ ಬಿಜೆಪಿ ವಿರುದ್ಧ ಧಿಕ್ಕಾರ ಕೂಗುತ್ತಿದ್ದಾರೆ.ಬಂಧನಕ್ಕೆ ಆಗ್ರಹಿಸಿ ಕಾರ್ಯಕರ್ತರು ಪ್ರತಾಪ್ ಸಿಂಹ ಫೋಟೋಗೆ ಬೆಂಕಿ ಹಚ್ಚಿದ್ದು, ಅವರ ಪ್ಲೇ ಕಾರ್ಡ್‌ಗೆ ಚಪ್ಪಲಿಯಿಂದ ಹೊಡೆದು

ಪ್ರತಾಪ್ ಸಿಂಹ ಫೋಟೋಗೆ ಬೆಂಕಿ Read More »