ರಾಷ್ಟ್ರೀಯ

ಒಂದು ದೇಶ ಒಂದು ಚುನಾವಣೆ/ ಶೀಘ್ರದಲ್ಲಿ ವರದಿ ಸಲ್ಲಿಸಲಿರುವ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ

ಸಮಗ್ರ ನ್ಯೂಸ್: ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ಒಂದು ದೇಶ ಒಂದು ಚುನಾವಣೆ ಯೋಜನೆ ಜಾರಿಗೆ ಸಂಬಂಧಿಸಿದಂತೆ ತನ್ನ ವರದಿಯನ್ನು ತಯಾರಿಸಿದ್ದು, ಶೀಘ್ರದಲ್ಲೇ ಸರ್ಕಾರಕ್ಕೆ ಸಲ್ಲಿಸಲಿದೆ ಎಂಬ ಮಾಹಿತಿ ಲಭ್ಯವಿದೆ. ಪ್ರಮುಖವಾಗಿ ಲೋಕಸಭೆ, ವಿಧಾನಸಭೆ ಮತ್ತು ಸ್ಥಳೀಯ ಚುನಾವಣೆಗಳಿಗೆ ಒಂದೇ ಮತದಾರರ ಪಟ್ಟಿಯನ್ನು ತಯಾರಿಸುವುದು, ಸರ್ಕಾರ ಅಲ್ಪಮತಕ್ಕೆ ಕುಸಿದಾಗ ಏಕತಾ ಸರ್ಕಾರವನ್ನು ರಚಿಸುವುದು, ರಾಷ್ಟ್ರಪತಿ ಆಡಳಿತಕ್ಕೆ ಸಂಬಂಧಿಸಿದಂತೆ ಸಂವಿಧಾನದ ಐದು ವಿಧಿಗಳನ್ನು ತಿದ್ದುಪಡಿ ಮಾಡಬೇಕೆಂದು ವರದಿಯಲ್ಲಿ ಉಲ್ಲೇಖಿಸಿದೆ ಎಂಬುದಾಗಿ ತಿಳಿದುಬಂದಿದೆ. ಕೇಂದ್ರ ಕಾನೂನು ಆಯೋಗ

ಒಂದು ದೇಶ ಒಂದು ಚುನಾವಣೆ/ ಶೀಘ್ರದಲ್ಲಿ ವರದಿ ಸಲ್ಲಿಸಲಿರುವ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ Read More »

ಲೋಕಸಭಾ ಚುನಾವಣೆಗೆ ಗ್ಯಾರಂಟಿ ಘೋಷಿಸಿದ ರಾಹುಲ್

ಸಮಗ್ರ ನ್ಯೂಸ್ : ಲೋಕಸಭಾ ಚುನಾವಣೆಗೆ ತಯಾರಿ ನಡೆಯುತ್ತಿದ್ದು, ಈಗಾಗಲೇ ಕೆಲವು ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಸಮೀಕ್ಷೆಗಳೂ ಬಿಡುಗಡೆಯಾಗುತ್ತಿವೆ. ಈ ನಡುವೆ ಸಿಎಂ ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಅವರು 5 ಹೊಸ ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 30 ಲಕ್ಷ ಹುದ್ದೆಗಳ ಭರ್ತಿ, ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಾನೂನು, ಡಿಪ್ಲೊಮಾ ಪದವೀಧರರಿಗೆ ಶಿಷ್ಯವೇತನ ಗಿಗ್ ಕಾರ್ಮಿಕರ ಭದ್ರತೆಗೆ ಕಾನೂನು ಸೇರಿದಂತೆ ವಿವಿಧ ಗ್ಯಾರಂಟಿಗಳನ್ನು ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್

ಲೋಕಸಭಾ ಚುನಾವಣೆಗೆ ಗ್ಯಾರಂಟಿ ಘೋಷಿಸಿದ ರಾಹುಲ್ Read More »

ಭಕ್ತಾಧಿಗಳಿಗೆ ಸಿಹಿ ಸುದ್ದಿ/ ಮೇ 10 ರಂದು ಯಾತ್ರಾರ್ಥಿಗಳಿಗಾಗಿ ತೆರೆಯಲಿದೆ ಬದರಿನಾಥ್-ಕೇದಾರನಾಥ ದೇವಾಲಯ

ಸಮಗ್ರ ನ್ಯೂಸ್: ಹನ್ನೊಂದನೇ ಜ್ಯೋತಿಲಿರ್ಂಗ ಶ್ರೀ ಕೇದಾರನಾಥ ಧಾಮದ ಬಾಗಿಲು ಈ ವರ್ಷ ಮೇ 10 ರಂದು ಬೆಳಗ್ಗೆ 7 ಗಂಟೆಗೆ ಯಾತ್ರಾರ್ಥಿಗಳಿಗಾಗಿ ತೆರೆಯಲಿದೆ ಎಂದು ಬದರಿನಾಥ್-ಕೇದಾರನಾಥ ದೇವಾಲಯ ಸಮಿತಿ ಪ್ರಕಟಿಸಿದೆ. ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿರುವ ಬದರಿನಾಥ ಧಾಮದ ಬಾಗಿಲು 6 ತಿಂಗಳ ಕಾಲ ಮುಚ್ಚಿರುತ್ತದೆ ಮತ್ತು 6 ತಿಂಗಳ ನಂತರ ತೆಪ್ರಿ ರಾಜ್ ದರ್ಬಾರ್‍ನಲ್ಲಿ ಬಾಗಿಲು ತೆರೆಯುವ ದಿನಾಂಕವನ್ನು ಘೋಷಿಸಲಾಗುತ್ತದೆ. ಇದಕ್ಕಾಗಿ ಮೊದಲಿಗೆ ಡಿಮ್ಮಿ ಧಾರ್ಮಿಕ ಕೇಂದ್ರ ಪಂಚಾಯತ್ ವತಿಯಿಂದ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಿಂದ ಗಾನುಘಡ

ಭಕ್ತಾಧಿಗಳಿಗೆ ಸಿಹಿ ಸುದ್ದಿ/ ಮೇ 10 ರಂದು ಯಾತ್ರಾರ್ಥಿಗಳಿಗಾಗಿ ತೆರೆಯಲಿದೆ ಬದರಿನಾಥ್-ಕೇದಾರನಾಥ ದೇವಾಲಯ Read More »

ಸಂಕರ್ಷಣ ಶಾಲಗ್ರಾಮವು ಅಯೋಧ್ಯೆಯಿಂದ ಮಲ್ಪೆಯ ವಡಭಾಂಡೇಶ್ವರಕ್ಕೆ

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ಬಾಲರಾಮನ ಪ್ರತಿಷ್ಠೆಯಾಗಿ ಕೆಲವೇ ದಿನಗಳಲ್ಲಿ ಉಡುಪಿಯ ಮಲ್ಪೆ ವಡಭಾಂಡೇಶ್ವರದ ಇತಿಹಾಸ ಪ್ರಸಿದ್ಧ ಬಲರಾಮನ ಸನ್ನಿಧಿಯೂ ನವೀಕರಣಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಉಭಯ ಸನ್ನಿಧಿಗಳ ಬಾಂಧವ್ಯದ ದ್ಯೋತಕವಾಗಿ ಶ್ರೀ ಪೇಜಾವರ ಶ್ರೀಗಳು ಶುಕ್ರವಾರದಂದು ಅಯೋಧ್ಯೆಯ ರಾಮನ ಪಾದದಲ್ಲಿ ಸಂಕರ್ಷಣ ಶಾಲಗ್ರಾಮವೊಂದನ್ನಿಟ್ಟು ಪವಿತ್ರ ಕಲಶೋದಕದಿಂದ ಅಭಿಷೇಕ ಸಹಿತ ಪೂಜೆ ಮಾಡಿ ವಡಭಾಂಡೇಶ್ವರದ ಬಲರಾಮನ ದಿವ್ಯ ಸನ್ನಿಧಿಗೆ ಕಳುಹಿಸಿಕೊಟ್ಟರು.

ಸಂಕರ್ಷಣ ಶಾಲಗ್ರಾಮವು ಅಯೋಧ್ಯೆಯಿಂದ ಮಲ್ಪೆಯ ವಡಭಾಂಡೇಶ್ವರಕ್ಕೆ Read More »

ಕೇಂದ್ರ ಸರ್ಕಾರದ ಬಂಪರ್ ಕೊಡುಗೆ/ ನೌಕರರ ತುಟ್ಟಿ ಭತ್ಯೆ ಶೇ.4ರಷ್ಟು ಏರಿಕೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ನೌಕರರಿಗೆ ಬಂಪರ್ ಕೊಡುಗೆ ನೀಡಿದ್ದು, ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.4ರಷ್ಟು ಏರಿಕೆ ಮಾಡಿದೆ. ಈಗ ನೌಕರರಿಗೆ ನೀಡುತ್ತಿರುವ ತುಟ್ಟಿಭತ್ಯೆಯು ಶೇ.50ರಷ್ಟು ಆಗಿದೆ. ಇದರ ಜತೆಗೆ ಕೇಂದ್ರ ಸರ್ಕಾರವು ಮನೆ ಬಾಡಿಗೆ ಅಲೋವನ್ಸ್ ಹೆಚ್ಚಳದ ಜೊತೆಗೆ ಗ್ರಾಚುಟಿ ಮೊತ್ತವನ್ನು 25 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ. 2024ರ ಜನವರಿ 1ರಿಂದಲೇ ತುಟ್ಟಿಭತ್ಯೆ ಹೆಚ್ಚಳವು ಅನ್ವಯವಾಗಲಿದೆ. ಕೇಂದ್ರ ಸರ್ಕಾರಕ್ಕೆ ವಾರ್ಷಿಕ 12,868 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಖರ್ಚುವಾಗಲಿದೆ. ಏರುತ್ತಿರುವ ಬೆಲೆಗಳನ್ನು ಸರಿದೂಗಿಸಲು

ಕೇಂದ್ರ ಸರ್ಕಾರದ ಬಂಪರ್ ಕೊಡುಗೆ/ ನೌಕರರ ತುಟ್ಟಿ ಭತ್ಯೆ ಶೇ.4ರಷ್ಟು ಏರಿಕೆ Read More »

ಎಲ್​​ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ| ಪ್ರಧಾನಿ ಮೋದಿಯಿಂದ ಭರ್ಜರಿ ಗಿಫ್ಟ್

ಸಮಗ್ರ ನ್ಯೂಸ್: ಇಂದು ಅಂತರಾಷ್ಟ್ರೀಯ ಮಹಿಳಾ ದಿನ ಈ ದಿನವೇ ಪ್ರಧಾನಿ ಮೋದಿ ದೇಶದ ಜನತೆಗೆ ಉಡುಗೊರೆ ನೀಡಿದ್ದು, ಎಲ್​​ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ ಮಾಡಿ ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​ ಮೂಲಕ ಸಂದೇಶ ಪ್ರಕಟಿಸಿರುವ ಮೋದಿ, ದೇಶದ ಮಹಿಳೆಯರ ಸಬಲೀಕರಣದ ನಿಟ್ಟಿನಲ್ಲಿ ನಮ್ಮ ಬದ್ಧತೆಗೆ ಪೂರಕವಾಗಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ. ಒಂದು ಕಡೆ ಲೋಕ ಸಭಾ ಚುನಾವಣೆ ಮುಂದೆ ಬರುತ್ತಿದೆ. ಇದೆ ಸಮಯದಲ್ಲಿ ಸಿಲಿಂಡರ್ ಬೆಲೆ

ಎಲ್​​ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ| ಪ್ರಧಾನಿ ಮೋದಿಯಿಂದ ಭರ್ಜರಿ ಗಿಫ್ಟ್ Read More »

ಲೋಕಸಭಾ ಚುನಾವಣೆ/ ಮತ್ತೆ ಗ್ಯಾರಂಟಿ ಅಸ್ತ್ರ ಪ್ರಯೋಗಿಸಿದ ರಾಹುಲ್

ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಯುವಕರಿಗೆ 30 ಲಕ್ಷ ಸರ್ಕಾರಿ ಉದ್ಯೋಗ ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ. ರೈತರು, ಯುವಕರು, ಅಸಂಘಟಿತ ವಲಯದವರು, ಯುವೋದ್ಯಮಿಗಳು ಹೀಗೆ ವಿವಿಧ ವಲಯದ ಜನರನ್ನು ಆಕರ್ಷಿಸುವಂತಹ ಗ್ಯಾರಂಟಿ ಭರವಸೆಗಳನ್ನು ಕಾಂಗ್ರೆಸ್ ನೀಡಿದ್ದು, ನರೇಂದ್ರ ಮೋದಿ ನೀಡುತ್ತಿರುವ ಗ್ಯಾರಂಟಿಗಳಿಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳ ಅಸ್ತ್ರ ಬಿಟ್ಟಿದೆ ಭಾರತದಲ್ಲಿ 30 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಇವುಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ತುಂಬಿಲ್ಲ.

ಲೋಕಸಭಾ ಚುನಾವಣೆ/ ಮತ್ತೆ ಗ್ಯಾರಂಟಿ ಅಸ್ತ್ರ ಪ್ರಯೋಗಿಸಿದ ರಾಹುಲ್ Read More »

ಕೇರಳ ಮಾಜಿ ಸಿಎಂ ದಿ. ಕೆ. ಕರುಣಾಕರನ್ ಪುತ್ರಿ ಪದ್ಮಜಾ ವೇಣುಗೋಪಾಲ್ ಬಿಜೆಪಿಗೆ ಸೇರ್ಪಡೆ

ಸಮಗ್ರ ನ್ಯೂಸ್: ಕೇರಳ ಮಾಜಿ ಸಿಎಂ, ಕಾಂಗ್ರೆಸ್ ದಿಗ್ಗಜ ದಿ. ಕೆ. ಕರುಣಾಕರನ್ ಅವರ ಪುತ್ರಿ ಪದ್ಮಜಾ ವೇಣುಗೋಪಾಲ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕೆಲವು ಸಮಯದ ಹಿಂದೆ ತಮ್ಮ ಪಕ್ಷಾಂತರದ ವರದಿಗಳನ್ನು ತಳ್ಳಿಹಾಕುವ ಫೇಸ್ ಬುಕ್ ಪೋಸ್ಟ್ ಅಳಿಸಿದ ಬಳಿಕ ಬಿಜೆಪಿಗೆ ಸೇರುತ್ತಾರೆ ಎಂಬುದು ಖಚಿತವಾಗಿತ್ತು.ಇದೀಗ ಪದ್ಮಜಾ ವೇಣುಗೋಪಾಲ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಕೇರಳ ಮಾಜಿ ಸಿಎಂ ದಿ. ಕೆ. ಕರುಣಾಕರನ್ ಪುತ್ರಿ ಪದ್ಮಜಾ ವೇಣುಗೋಪಾಲ್ ಬಿಜೆಪಿಗೆ ಸೇರ್ಪಡೆ Read More »

ಉಜ್ವಲ ಫಲಾನುಭವಿಗಳಿಗೆ 300 ರೂಪಾಯಿ ಸಬ್ಸಿಡಿ/ ಮತ್ತೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ

ಸಮಗ್ರ ನ್ಯೂಸ್: ಉಜ್ವಲ ಯೋಜನೆಯ ಫಲಾನುಭವಿಗಳಿಗೆ 300 ರೂಪಾಯಿ ಸಬ್ಸಿಡಿಯನ್ನು ಮುಂದಿನ ವರ್ಷ ಮಾರ್ಚ್ ತಿಂಗಳ ವರೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಕಳೆದ ಅಕ್ಟೋಬರ್‍ನಲ್ಲಿ ಉಜ್ವಲ ಯೋಜನೆ ಫಲಾನುಭವಿಗಳಿಗೆ ನೀಡುತ್ತಿದ್ದ 200 ರೂಪಾಯಿ ಸಬ್ಸಿಡಿಯನ್ನು 300 ರೂಪಾಯಿಗೆ ಏರಿಕೆ ಮಾಡಲಾಗಿತ್ತು. ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಸಚಿವ ಪಿಯೂಷ್ ಗೋಯೆಲ್, 14.2 ಕೆಜಿ ಎಲ್‍ಪಿಜಿ ಸಿಲಿಂಡರ್‍ಗೆ ನೀಡುತ್ತಿದ್ದ 300 ರೂಪಾಯಿ ಸಬ್ಸಿಡಿ ಯೋಜನೆ ಲಾಭವನ್ನು ಮತ್ತೆ ಒಂದು ವರ್ಷಕ್ಕೆ ವಿಸ್ತರಣೆಯಾಗಿದೆ. ಪ್ರತಿ

ಉಜ್ವಲ ಫಲಾನುಭವಿಗಳಿಗೆ 300 ರೂಪಾಯಿ ಸಬ್ಸಿಡಿ/ ಮತ್ತೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ Read More »

ಖೇಲೋ ಇಂಡಿಯಾ ಪದಕ ವಿಜೇತರಿಗೆ ಸರ್ಕಾರಿ ಉದ್ಯೋಗ/ ಕೇಂದ್ರ ಕ್ರೀಡಾಸಚಿವ ಅನುರಾಗ್ ಠಾಕೂರ್ ಮಾಹಿತಿ

ಸಮಗ್ರ ನ್ಯೂಸ್: ಖೇಲೋ ಇಂಡಿಯಾ ಕ್ರೀಡಾ ಸ್ಪರ್ಧೆಯಲ್ಲಿ ಪದಕ ವಿಜೇತರಾದವರು ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿರುತ್ತಾರೆ ಎಂದು ಕೇಂದ್ರ ಕ್ರೀಡಾಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಫಲವಾಗಿ, ಕ್ರೀಡಾ ವಾತಾವರಣವನ್ನು ಮತ್ತಷ್ಟು ದೃಢಪಡಿಸುವ ನಿಟ್ಟಿನಲ್ಲಿ, ಬೇರು ಹಂತದಲ್ಲೇ ಯುವ ಕ್ರೀಡಾಪಟುಗಳನ್ನು ಬೆಳೆಸಲು ಹಾಗೂ ಆ ಮೂಲಕ ಬದುಕು ಕಟ್ಟಿಕೊಳ್ಳುವಂತೆ ಮಾಡಲು ಇದು ನೆರವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಸಿಬ್ಬಂದಿ ಹಾಗೂ ತರಬೇತಿ ಇಲಾಖೆಯು ಕ್ರೀಡಾ ಸಚಿವಾಲಯದೊಂದಿಗೆ ಸಮಾಲೋಚಿಸಿ ಕ್ರೀಡಾಪಟುಗಳು ಸರ್ಕಾರಿ ಉದ್ಯೋಗ ಪಡೆಯಲು

ಖೇಲೋ ಇಂಡಿಯಾ ಪದಕ ವಿಜೇತರಿಗೆ ಸರ್ಕಾರಿ ಉದ್ಯೋಗ/ ಕೇಂದ್ರ ಕ್ರೀಡಾಸಚಿವ ಅನುರಾಗ್ ಠಾಕೂರ್ ಮಾಹಿತಿ Read More »