ಶಿಕ್ಷಣ

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ/ ನಾಳೆ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ಪ್ರಥಮ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2023-24ನೇ ಸಾಲಿನ ಮಾರ್ಚ್ 30 ರಂದು ಪ್ರಕಟಿಸಲಿದೆ. ಫಲಿತಾಂಶವನ್ನು ಮಾರ್ಚ್ 30 ರಂದು ಬೆಳಗ್ಗೆ 11:00 ಗಂಟೆಗೆ karresults.nic.in ನಲ್ಲಿ ಪ್ರಕಟಿಸಲಾಗುತ್ತದೆ. ಫಲಿತಾಂಶವನ್ನು ವಿಶ್ವವಿದ್ಯಾಲಯದಲ್ಲಿಯೇ ನಾಳೆ ನೋಡಬಹುದು. ಫೆಬ್ರವರಿ 12 ರಿಂದ 27 ರವರೆಗೆ ಪ್ರಥಮ ಪಿಯುಸಿ ಪರೀಕ್ಷೆ ನಡೆದಿದ್ದು, ನಾಳೆ ಫಲಿತಾಂಶ ಪ್ರಕಟವಾಗಲಿದ್ದು, ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಪೂರಕ ಪರೀಕ್ಷೆಯನ್ನು ಮೇ ತಿಂಗಳಲ್ಲಿ ನಡೆಸಲಾಗುವುದು. ಪೂರಕ ಪರೀಕ್ಷೆಗಳ ವೇಳಾಪಟ್ಟಿಯನ್ನು ಈಗಾಗಲೇ […]

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ/ ನಾಳೆ ಫಲಿತಾಂಶ ಪ್ರಕಟ Read More »

3, 6 ನೇ ತರಗತಿಗೆ ಮುಂಬರುವ ಶೈಕ್ಷಣಿಕ ವರ್ಷದಿಂದ ಹೊಸ ಪಠ್ಯಕ್ರಮ

ಸಮಗ್ರ ನ್ಯೂಸ್‌:: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನಾ ಮಂಡಳಿಯು 3 ಮತ್ತು 6 ನೇ ತರಗತಿಗಳಿಗೆ ಹೊಸ ಪಠ್ಯಕ್ರಮವನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದೆ.ಪಠ್ಯಕ್ರಮದ ಜೊತೆಗೆ, ಕೌನ್ಸಿಲ್ 6 ನೇ ತರಗತಿಗೆ ಪಠ್ಯಕ್ರಮ ಸೇತುವೆ ಕಾರ್ಯಕ್ರಮ ಮತ್ತು 3 ನೇ ತರಗತಿಯಿಂದ CBSE, ಕೇಂದ್ರೀಯ ವಿದ್ಯಾಲಯ ಸಂಘಟನೆಗೆ ಮಾರ್ಗಸೂಚಿಗಳನ್ನು ಸಹ ಒದಗಿಸುತ್ತದೆ. 3, 6 ನೇ ತರಗತಿಗಳ ವಿದ್ಯಾರ್ಥಿಗಳಿಗೆ ವೇಳಾಪಟ್ಟಿಯಲ್ಲಿನ ಪರಿಷ್ಕರಣೆ ಮತ್ತು ಸಮಯದ ಹಂಚಿಕೆಯಲ್ಲಿ ಬದಲಾವಣೆಯ ಬಗ್ಗೆ ಶಾಲಾ ಮುಖ್ಯಸ್ಥರು, ಶಿಕ್ಷಕರು ಮತ್ತು ಪೋಷಕರಿಗೆ ತಿಳಿಸಲು CBSE

3, 6 ನೇ ತರಗತಿಗೆ ಮುಂಬರುವ ಶೈಕ್ಷಣಿಕ ವರ್ಷದಿಂದ ಹೊಸ ಪಠ್ಯಕ್ರಮ Read More »

ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್/ ಪರೀಕ್ಷೆ ನಂತರ ಬಿಸಿಯೂಟ ಪೂರೈಕೆ

ಸಮಗ್ರ ನ್ಯೂಸ್: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಪರೀಕ್ಷೆ ಬರೆಯುವ ಮಕ್ಕಳಿಗೆ ಬಿಸಿಯೂಟ ನೀಡಲು ನಿರ್ಧರಿಸಿದೆ. ರಾಜ್ಯಾದ್ಯಂತ ಮಾ.25 ರಿಂದ ಏಪ್ರಿಲ್ 10ರವರೆಗೆ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಅಡುಗೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಬಿಸಿಯೂಟ ಪೂರೈಕೆ ಮಾಡಬೇಕು ಎಂದು ಹೇಳಿದೆ. ಉತ್ತಮ ಆರೋಗ್ಯ, ಶುದ್ಧ ಕುಡಿಯುವ ನೀರು ಹಾಗೂ ನೈರ್ಮಲ್ಯದ ಕಡೆ ಗಮನ ಇಡುವಂತೆ ಸರ್ಕಾರ ಸೂಚನೆ ನೀಡಿದೆ.

ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್/ ಪರೀಕ್ಷೆ ನಂತರ ಬಿಸಿಯೂಟ ಪೂರೈಕೆ Read More »

ಮಾ.25ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಶುರು

ಸಮಗ್ರ ನ್ಯೂಸ್: 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ-1ಯು ಮಾ.25ರಿಂದ ಪ್ರಾರಂಭವಾಗುತ್ತಿದ್ದು, ರಾಜ್ಯಾದ್ಯಂತ 2,750 ಕೇಂದ್ರಗಳಲ್ಲಿ ಪರೀಕ್ಷೆಯು ನಡೆಯಲಿದೆ. ಒಟ್ಟು 8,69,968 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಶಾಲಾ ವಿದ್ಯಾರ್ಥಿಗಳು ಹಾಗೂ 18,225 ಖಾಸಗಿ ವಿದ್ಯಾರ್ಥಿಗಳಾಗಿದ್ದಾರೆ. 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. 4,41,910 ಬಾಲಕರು ಮತ್ತು 4,28,058 ಬಾಲಕಿಯರು ಪರೀಕ್ಷೆಯನ್ನು ಬರೆಯುತ್ತಿದ್ದು, ಈ ಬಾರಿ 5,424 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

ಮಾ.25ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಶುರು Read More »

17 ಶಾಲೆಗಳ ಮಾನ್ಯತೆ ರದ್ದು/ ಕಠಿಣ ಕ್ರಮ ಕೈಗೊಂಡ ಸಿಬಿಎಸ್‍ಇ

ಸಮಗ್ರ ನ್ಯೂಸ್: ಸಂಯೋಜಿತವಲ್ಲದ ಶಾಲೆಗಳು, ನಕಲಿ ವಿದ್ಯಾರ್ಥಿಗಳು, ಅನರ್ಹ ಅಭ್ಯರ್ಥಿಗಳನ್ನು ಪ್ರಸ್ತುತ ಪಡಿಸುತ್ತಿವೆ ಮತ್ತು ದಾಖಲೆಗಳನ್ನ ಸರಿಯಾಗಿ ನಿರ್ವಹಿಸುತ್ತಿಲ್ಲ ಎಂಬ ಉದ್ದೇಶದಿಂದ 17 ಶಾಲೆಗಳ ಮಾನ್ಯತೆಯನ್ನು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ರದ್ದುಗೊಳಿಸಿದೆ. ಇದರ ಜೊತೆಗೆ ಇನ್ನು 3 ಶಾಲೆಗಳನ್ನು ಕೆಳದರ್ಜೆಗೆ ಇಳಿಸಿದೆ. ‘ಈ ಶಾಲೆಗಳು ನಕಲಿ ವಿದ್ಯಾರ್ಥಿಗಳು, ಅನರ್ಹ ಅಭ್ಯರ್ಥಿಗಳನ್ನು ಪ್ರಸ್ತುತಪಡಿಸುವ ಮತ್ತು ದಾಖಲೆಗಳನ್ನ ಸರಿಯಾಗಿ ನಿರ್ವಹಿಸದ ವಿವಿಧ ದುಷ್ಕೃತ್ಯಗಳನ್ನು ಮಾಡುತ್ತಿರುವುದನ್ನು ಕಂಡುಕೊಂಡ ನಂತರ ಸಿಬಿಎಸ್‍ಇ 17 ಶಾಲೆಗಳನ್ನು ಅಮಾನತುಗೊಳಿಸಿದೆ, ಇನ್ನು 3 ಶಾಲೆಗಳನ್ನು

17 ಶಾಲೆಗಳ ಮಾನ್ಯತೆ ರದ್ದು/ ಕಠಿಣ ಕ್ರಮ ಕೈಗೊಂಡ ಸಿಬಿಎಸ್‍ಇ Read More »

ಪಬ್ಲಿಕ್ ಪರೀಕ್ಷೆಗೆ ಮತ್ತೆ ಕಂಟಕ ಎದುರಾಗುವ ಸಾಧ್ಯತೆ/ ಸುಪ್ರೀಂ ಮೆಟ್ಟಿಲೇರಲು ರುಪ್ಸಾ ನಿರ್ಧಾರ

ಸಮಗ್ರ ನ್ಯೂಸ್: 5,8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆಗೆ ಮತ್ತೆ ಸಮಸ್ಯೆ ಎದುರಾಗುವ ಸಾಧ್ಯತೆ ಕಾಣುತ್ತಿದೆ. ಪಬ್ಲಿಕ್ ಪರೀಕ್ಷೆ ನಡೆಸಲು ರಾಜ್ಯ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಆದರೆ ಈ ಆದೇಶದ ವಿರುದ್ಧ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ರುಪ್ಸಾ) ಸುಪ್ರೀಂಕೋರ್ಟ್ ಮೊರೆ ಹೋಗಲು ನಿರ್ಧರಿಸಿದೆ. ಹೀಗಾಗಿ ಮತ್ತೆ ಸುಪ್ರೀಂಕೋರ್ಟ್ ನಿರ್ಧಾರದ ಮೇಲೆ ಪರೀಕ್ಷೆ ಭವಿಷ್ಯ ನಿಂತಿದೆ. ನ್ಯಾ. ಸೋಮಶೇಖರ್ ಹಾಗೂ ನ್ಯಾ. ರಾಜೇಶ್ ರೈ ಅವರನ್ನು ಒಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಪಬ್ಲಿಕ್ ಪರೀಕ್ಷೆಗೆ

ಪಬ್ಲಿಕ್ ಪರೀಕ್ಷೆಗೆ ಮತ್ತೆ ಕಂಟಕ ಎದುರಾಗುವ ಸಾಧ್ಯತೆ/ ಸುಪ್ರೀಂ ಮೆಟ್ಟಿಲೇರಲು ರುಪ್ಸಾ ನಿರ್ಧಾರ Read More »

5,8,9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ| ಮಾ.25ರಿಂದ ಮತ್ತೆ ಪರೀಕ್ಷೆ ಪುನರಾರಂಭ

ಸಮಗ್ರ ನ್ಯೂಸ್: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ. ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ ಹೈಕೋರ್ಟ್‌ ಏಕ ಸದಸ್ಯ ಪೀಠದ ತೀರ್ಪು ರದ್ದುಪಡಿಸಿದ ವಿಭಾಗೀಯ ಪೀಠ, ರಾಜ್ಯ ಸರ್ಕಾರವು ಬೋರ್ಡ್ ಪರೀಕ್ಷೆಯನ್ನು ನಡೆಸಬಹುದು.‌ ಪರೀಕ್ಷೆ ಪ್ರಕ್ರಿಯೆ ಸ್ಥಗಿತಗೊಂಡ ಹಂತದಿಂದಲೇ ಮುಂದುವರಿಸಬೇಕು.

5,8,9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ| ಮಾ.25ರಿಂದ ಮತ್ತೆ ಪರೀಕ್ಷೆ ಪುನರಾರಂಭ Read More »

ಲೋಕಸಭೆ ಚುನಾವಣೆ ಹಿನ್ನೆಲೆ ಮೇ 8 ಕ್ಕೆ ನಿಗದಿಯಾಗಿದ್ದ ಪಿಎಸ್ಐ ಪರೀಕ್ಷೆ ಮುಂದೂಡಿಕೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 8 ಕ್ಕೆ ನಿಗದಿಯಾಗಿದ್ದ ಪಿಎಸ್ಐ ಪರೀಕ್ಷೆಯನ್ನು ಮುಂದೂಡಲಾಗಿದೆ. ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಕಲ್ಯಾಣ ಕರ್ನಾಟಕದ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 402 ಖಾಲಿ ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ನಡೆಸಿತ್ತು. ಅದರಂತೆ ಮೇ. 8ಕ್ಕೆ ಪರೀಕ್ಷಾ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು. ಆದರೆ ಇದೀಗ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಕಾರಣದಿಂದ ಮೇ.8ಕ್ಕೆ ನಡೆಯಬೇಕಿದ್ದ ಎಲ್ಲ

ಲೋಕಸಭೆ ಚುನಾವಣೆ ಹಿನ್ನೆಲೆ ಮೇ 8 ಕ್ಕೆ ನಿಗದಿಯಾಗಿದ್ದ ಪಿಎಸ್ಐ ಪರೀಕ್ಷೆ ಮುಂದೂಡಿಕೆ Read More »

ಲೋಕಸಭಾ ಚುನಾವಣೆ ಹಿನ್ನಲೆ/ ಯುಪಿಎಸ್‍ಸಿ ಪರೀಕ್ಷೆ ಮುಂದೂಡಿಕೆ

ಸಮಗ್ರ ನ್ಯೂಸ್: ಕೇಂದ್ರ ಲೋಕಸೇವಾ ಆಯೋಗ ನಡೆಸುವ ದೇಶದ ಉನ್ನತ ಮಟ್ಟದ ಪರೀಕ್ಷೆಗಳ ಪೈಕಿ ಒಂದಾದ ನಾಗರಿಕ ಸೇವಾ ಪರೀಕ್ಷೆ (ಯುಪಿಎಸ್‍ಸಿ) ಪರೀಕ್ಷೆಯನ್ನು ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಹಿನ್ನಲೆಯಲ್ಲಿ ಮುಂದೂಡಲಾಗಿದೆ. ಯುಪಿಎಸ್‍ಸಿ ಪರೀಕ್ಷೆ ಮೇ 26ಕ್ಕೆ ನಿಗದಿಯಾಗಿತ್ತು. ಇದೀಗ ಪರೀಕ್ಷೆಯನ್ನು ಜೂ. 16ಕ್ಕೆ ಮುಂದೂಡಲಾಗಿದೆ.

ಲೋಕಸಭಾ ಚುನಾವಣೆ ಹಿನ್ನಲೆ/ ಯುಪಿಎಸ್‍ಸಿ ಪರೀಕ್ಷೆ ಮುಂದೂಡಿಕೆ Read More »

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಉಚಿತ ಪ್ರಯಾಣ/ ಕೆ ಎಸ್ ಆರ್ ಟಿ ಸಿ ಸುತ್ತೋಲೆ

ಸಮಗ್ರ ನ್ಯೂಸ್: ಕೆ ಎಸ್ ಆರ್ ಟಿಸಿ ಬಸ್ಸಿನಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯಂದು ಪರೀಕ್ಷಾ ಕೇಂದ್ರಕ್ಕೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಕೆ ಎಸ್ ಆರ್ ಟಿ ಸಿಯ ಮುಖ್ಯ ಸಂಚಾರ ವ್ಯವಸ್ಥಾಪಕು ಸುತ್ತೋಲೆ ಹೊರಡಿಸಿದ್ದಾರೆ. ಮಾರ್ಚ್ 25 ರಿಂದ ಏಪ್ರಿಲ್ 06 ರವರೆಗೆ, ಪರೀಕ್ಷೆಗೆ ಹಾಜರಾಗುವ ಎಸ್ ಎಸ್ ಎಲ್ ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಉಚಿತ ಪ್ರಯಾಣ/ ಕೆ ಎಸ್ ಆರ್ ಟಿ ಸಿ ಸುತ್ತೋಲೆ Read More »