ರಾಷ್ಟ್ರೀಯ

ಲೈಂಗಿಕ ಬಯಕೆಗಳಿಲ್ಲದೆ ಮಹಿಳೆಯನ್ನು ಅಪ್ಪಿಕೊಳ್ಳುವುದು ತಪ್ಪಲ್ಲ| ಕೋರ್ಟ್ ನಲ್ಲಿ ಬ್ರಿಜ್ ಭೂಷಣ್ ಸಮರ್ಥನೆ

ಸಮಗ್ರ ನ್ಯೂಸ್: ಒಲಿಂಪಿಕ್ಸ್ ವಿಜೇತ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯೂಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ನ್ಯಾಯಾಲಯದಲ್ಲಿ ತಮ್ಮನ್ನ ಸಮರ್ಥಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ಯಾವುದೇ ರೀತಿಯ ಲೈಂಗಿಕ ಉದ್ದೇಶವಿಲ್ಲದೇ ಮಹಿಳೆಯನ್ನ ಅಪ್ಪಿಕೊಳ್ಳುವುದು ಅಥವಾ ಸ್ಪರ್ಶಿಸುವುದು ಅಪರಾಧವಲ್ಲ ಎಂದು ಹೇಳಿದ್ದಾರೆ. ದೆಹಲಿಯ ರೋಸ್ ಅವೆನ್ಯೂ ಕೋರ್ಟ್ನಲ್ಲಿ ಬಿಜೆಪಿ ಸಂಸದನ ಪರ ಹಾಜರಾದ ವಕೀಲ ರಾಜೀವ್ ಮೋಹನ್, ಮಹಿಳಾ ಕುಸ್ತಿಪಟುಗಳು ಮಾಡಿರುವ ಆರೋಪಗಳು ಕಾಲಮಿತಿಯನ್ನು ಮೀರಿ ಹೋಗಿವೆ. ಕುಸ್ತಿಪಟುಗಳು 5 ವರ್ಷಗಳವರೆಗೂ […]

ಲೈಂಗಿಕ ಬಯಕೆಗಳಿಲ್ಲದೆ ಮಹಿಳೆಯನ್ನು ಅಪ್ಪಿಕೊಳ್ಳುವುದು ತಪ್ಪಲ್ಲ| ಕೋರ್ಟ್ ನಲ್ಲಿ ಬ್ರಿಜ್ ಭೂಷಣ್ ಸಮರ್ಥನೆ Read More »

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು| ಗೆದ್ದು ಬೀಗಿದ ಮೋದಿ‌ ಸರ್ಕಾರ

ಸಮಗ್ರ‌ ನ್ಯೂಸ್: ಲೋಕಸಭೆಯಲ್ಲಿ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ಗೊತ್ತುವಳಿಯಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ಸರಕಾರವು ನಿರೀಕ್ಷೆಯಂತೆಯೇ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ ವಿರುದ್ಧ ಗೆಲುವು ದಾಖಲಿಸಿದೆ. ಅವಿಶ್ವಾಸ ನಿರ್ಣಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಉತ್ತರಿಸುವಾಗ ವಿರೋಧ ಪಕ್ಷಗಳು ಲೋಕಸಭೆಯಿಂದ ಸಭಾತ್ಯಾಗ ಮಾಡಿವೆ. ಇದಕ್ಕೆ ಪ್ರತಿಯಾಗಿ, “ಅವರು ನಮ್ಮನ್ನು ತೆಗಳುತ್ತಾರೆ. ಆದರೆ, ಅವರಿಗೆ ನಮ್ಮ ಮಾತನ್ನು ಕೇಳಿಸಿಕೊಳ್ಳುವ ವ್ಯವಧಾನವಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. ಬುಧವಾರ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ, ದೇಶದ

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು| ಗೆದ್ದು ಬೀಗಿದ ಮೋದಿ‌ ಸರ್ಕಾರ Read More »

ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾದ ಆಕೆಯ ಹೊಟ್ಟೆಯಲ್ಲೇನಿತ್ತು ಗೊತ್ತಾ!? ಇಲ್ಲಿದೆ ಆಶ್ಚರ್ಯಕರ ಸ್ಟೋರಿ…

ಸಮಗ್ರ ನ್ಯೂಸ್: ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾದ ಮಹಿಳೆಯೊಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಸಿ, ಅವರ ಹೊಟ್ಟೆಯಿಂದ 15ಕೆಜಿ ತೂಕದ ಗೆಡ್ಡೆಯನ್ನು ಹೊರತೆಗೆಯುವಲ್ಲಿ ಮಧ್ಯಪ್ರದೇಶದ ಇಂದೋರ್‌ನ ವೈದ್ಯರು ಯಶಸ್ವಿಯಾಗಿದ್ದಾರೆ. ಇಂದೋರ್‌ ಇಂಡೆಕ್ಸ್ ಆಸ್ಪತ್ರೆಗೆ ದಾಖಲಾಗಿದ್ದ 41 ವರ್ಷದ ಮಹಿಳೆಗೆ 12 ವೈದ್ಯರು ಹಾಗೂ ಸಹಾಯಕ ಸಿಬ್ಬಂದಿಯನ್ನೊಳಗೊಂಡ ತಂಡ ಸತತ 2 ಗಂಟೆಗಳ ಅವಧಿಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿದೆ. ಮಹಿಳೆಯ ತೂಕ 49 ಕೆಜಿ ಇದ್ದು, ಅದರಲ್ಲಿ ಗೆಡ್ಡೆಯ ತೂಕವೇ 15 ಕೆಜಿ ಇತ್ತು. ಗೆಡ್ಡೆ ಮಾರಣಾಂತಿಕವಾಗಿ ಪರಿಣಮಿಸಿದ್ದ ಕಾರಣ ಶಸ್ತ್ರಚಿಕಿತ್ಸೆ ನಡೆಸಿ, ಯಶಸ್ವಿಯಾಗಿ

ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾದ ಆಕೆಯ ಹೊಟ್ಟೆಯಲ್ಲೇನಿತ್ತು ಗೊತ್ತಾ!? ಇಲ್ಲಿದೆ ಆಶ್ಚರ್ಯಕರ ಸ್ಟೋರಿ… Read More »

ಭಾರತ ವಿಶ್ವದ ಐದನೇ ಬಲಿಷ್ಠ ಆರ್ಥಿಕತೆಯಾಗಿ ಹೊರ ಹೊಮ್ಮಲು ನರೇಂದ್ರ ಮೋದಿ ಸರ್ಕಾರದ ನೀತಿಗಳೇ ಕಾರಣ: ನಿರ್ಮಲಾ ಸೀತಾರಾಮನ್

ಸಮಗ್ರ ನ್ಯೂಸ್: ‌ಕೊರೊನಾದಂತಹ ಸಂಕಷ್ಟದ ನಡುವೆಯೂ ಭಾರತ ವಿಶ್ವದ ಐದನೇ ಬಲಿಷ್ಠ ಆರ್ಥಿಕತೆಯಾಗಿ ಹೊರ ಹೊಮ್ಮಿಲು ನರೇಂದ್ರ ಮೋದಿ ಸರ್ಕಾರದ ನೀತಿಗಳೇ ಕಾರಣ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರದ ನೀತಿಗಳಿಂದಾಗಿ ಆರ್ಥಿಕತೆ ಏರಿಕೆಯಾಗಿ ಅಭಿವೃದ್ಧಿಯಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಯೋಜನೆಗಳನ್ನು ನೀಡಲಾಗುವುದು, ಮಾಡಲಾಗುವುದು ಎನ್ನಲಾಗುತ್ತಿತ್ತು. ನಮ್ಮ ಸರ್ಕಾರದ ಅವಧಿಯಲ್ಲಿ ಯೋಜನೆಗಳನ್ನು ನೀಡಿದೆ, ಮಾಡಿದೆ ಎನ್ನಲಾಗುತ್ತಿದೆ. ನೀವು ಜನರಿಗೆ ಕನಸುಗಳನ್ನು ತೋರಿಸುತ್ತೀರಿ. ನಾವು ಅವರ ಕನಸುಗಳನ್ನು ನನಸಾಗಿಸುತ್ತಿದ್ದೇವೆ

ಭಾರತ ವಿಶ್ವದ ಐದನೇ ಬಲಿಷ್ಠ ಆರ್ಥಿಕತೆಯಾಗಿ ಹೊರ ಹೊಮ್ಮಲು ನರೇಂದ್ರ ಮೋದಿ ಸರ್ಕಾರದ ನೀತಿಗಳೇ ಕಾರಣ: ನಿರ್ಮಲಾ ಸೀತಾರಾಮನ್ Read More »

ಮಹಿಳೆ ದೇಶದ ಮುಂದಿನ‌ ಪ್ರಧಾನಿ| ಸ್ಪೋಟಕ ಭವಿಷ್ಯ ನುಡಿದ ನೊಣವಿನಕೆರೆ ಯಶವಂತ ಗುರೂಜಿ

ಸಮಗ್ರ ನ್ಯೂಸ್: 2024 ರ ಲೋಕಸಭಾ ಚುನಾವಣೆ ಈಗಾಗಲೇ ರಾಜಕೀಯ ಪಕ್ಷಗಳು ಬರದ ಸಿದ್ದತೆ ನಡೆಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲ್ಲ, ರಾಷ್ಟ್ರ ರಾಜಕಾರಣದ ಚುಕ್ಕಾಣಿಯನ್ನು ಈ ಬಾರಿ ಮಹಿಳೆ ಹಿಡಿಯಲಿದ್ದಾಳೆ ಎಂದು ಯಶವಂತ ಗುರೂಜಿ ಭವಿಷ್ಯ ಅಚ್ಚರಿ ಭವಿಷ್ಯ ನುಡಿದಿದ್ದಾರೆ. ತುಮಕೂರಿನ ನೊಣವಿನಕೆರೆಯಲ್ಲಿ ಯಶವಂತ ಗುರೂಜಿ ಮಾತನಾಡಿ, ಮುಂದಿನ ಬಾರಿ ದೇಶದ ಚುಕ್ಕಾಣಿ ಮಹಿಳೆಯ ಕೈಗೆ ಹೋಗಲಿದೆ. ಮಹಿಳೆ ದೇಶವನ್ನು ಆಳ್ತಾಳೆ. ಮಾರ್ಚ್‌ ತಿಂಗಳ ಬಳಿಕ ಇದು ಶತಃಸಿದ್ಧ ಎಂದು ಕಾಲಜ್ಞಾನಿ ಡಾ ಯಶವಂತ

ಮಹಿಳೆ ದೇಶದ ಮುಂದಿನ‌ ಪ್ರಧಾನಿ| ಸ್ಪೋಟಕ ಭವಿಷ್ಯ ನುಡಿದ ನೊಣವಿನಕೆರೆ ಯಶವಂತ ಗುರೂಜಿ Read More »

ಕೇರಳ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸಲು ಕೇಂದ್ರಕ್ಕೆ ಒತ್ತಾಯ

ಸಮಗ್ರ ನ್ಯೂಸ್: ಕೇರಳ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಮರುನಾಮಕರಣ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಲಾಗಿದೆ. ಎಲ್ಲ ಭಾಷೆಗಳಲ್ಲೂ ‘ಕೇರಳಂ’ ಎಂದೇ ಮರುನಾಮಕರಣ ಮಾಡುವಂತೆ ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಇಂದು ಸರ್ವಾನುಮತದಿಂದ ಅಂಗೀಕರಿಸಿದೆ. ಭಾರತದ ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿರುವ ಎಲ್ಲಾ ಭಾಷೆಗಳಲ್ಲಿ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ನಿರ್ಣಯವನ್ನು ಮಂಡಿಸಿದರು. ಈ ನಿರ್ಣಯವನ್ನು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಪ್ರತಿಪಕ್ಷಗಳು ಅಂಗೀಕರಿಸಿದವು. ಸಿಎಂ

ಕೇರಳ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸಲು ಕೇಂದ್ರಕ್ಕೆ ಒತ್ತಾಯ Read More »

ರಾಷ್ಟ್ರೀಯ ಪ್ರಾಣಿಯಾಗಿ ಹಸುವನ್ನು ಘೋಷಿಸಲು ಸಾಧ್ಯವಿಲ್ಲ – ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಭಾರತದ ರಾಷ್ಟ್ರೀಯ ಪ್ರಾಣಿ ಹುಲಿಯಾಗಿದ್ದು, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಗುರುತಿಸಲು ಸರ್ಕಾರ ಉದ್ದೇಶಿಸಿಲ್ಲ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ ಸೋಮವಾರ ಸಂಸತ್ತಿನಲ್ಲಿ ತಿಳಿಸಿದ್ದಾರೆ. ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾದ ಹಸುವನ್ನು ರಾಷ್ಟ್ರೀಯ ಪ್ರಾಣಿ ಎಂದು ಗುರುತಿಸಲು ಸರ್ಕಾರ ಉದ್ದೇಶಿಸಿದೆಯೇ ಎಂದು ಸಂಸ್ಕೃತಿ ಸಚಿವಾಲಯಕ್ಕೆ ಬಿಜೆಪಿ ಸಂಸತ್ ಸದಸ್ಯ ಭಗೀರಥ ಚೌಧರಿ ಕೇಳಿದ್ದ ಪ್ರಶ್ನೆಗಳಿಗೆ ಸಚಿವ ರೆಡ್ಡಿ ಉತ್ತರಿಸಿದರು. ರಾಷ್ಟ್ರೀಯ ಪ್ರಾಣಿಯಾಗಿ, ಸಂಸತ್ತಿನಲ್ಲಿ ಶಾಸನವನ್ನು ತರುವ ಮೂಲಕ ಭಾರತೀಯ ಮತ್ತು

ರಾಷ್ಟ್ರೀಯ ಪ್ರಾಣಿಯಾಗಿ ಹಸುವನ್ನು ಘೋಷಿಸಲು ಸಾಧ್ಯವಿಲ್ಲ – ಕೇಂದ್ರ ಸರ್ಕಾರ Read More »

ಹಳಿ ತಪ್ಪಿದ ಪ್ಯಾಸೆಂಜರ್ ರೈಲು| 15 ಜನ ಸಾವು; ಹಲವರು ಗಂಭೀರ

ಸಮಗ್ರ ನ್ಯೂಸ್: ಹತ್ತು ರೈಲು ಬೋಗಿಗಳು ಹಳಿ ತಪ್ಪಿದ ಪರಿಣಾಮ ಪಾಕಿಸ್ತಾನದಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು 50 ಜನರು ಗಾಯಗೊಂಡ ಘಟನೆ ಪಾಕಿಸ್ತಾನದಲ್ಲಿ ‌ನಡೆದಿದೆ. ಪಾಕಿಸ್ತಾನದ ರಾವಲ್ಪಿಂಡು ಸಮೀಪ ಘಟನೆ ನಡೆದಿದ್ದು, ಗಾಯಗೊಂಡ ಪ್ರಯಾಣಿಕರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ರೈಲು ಹಳಿ ತಪ್ಪಲು ಕಾರಣ ಇನ್ನೂ ತಿಳಿದುಬಂದಿಲ್ಲ. ಈ ವಿಷಯ ತಿಳಿದು ರಕ್ಷಣಾ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಕಾರ್ಯಾಚರಣೆ ನಡೆಸುತ್ತಿದ್ದಾರೆ. ನೆರೆಯ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಅಪಘಾತದ ಸ್ಥಳಕ್ಕೆ ಪರಿಹಾರ ರೈಲು ಹೊರಟಿದೆ

ಹಳಿ ತಪ್ಪಿದ ಪ್ಯಾಸೆಂಜರ್ ರೈಲು| 15 ಜನ ಸಾವು; ಹಲವರು ಗಂಭೀರ Read More »

ಚಂದ್ರಯಾನ – 3; ಚಂದ್ರನ ಮೊದಲ ಚಿತ್ರ ಬಿಡುಗಡೆ ಮಾಡಿದ ಇಸ್ರೋ

ಸಮಗ್ರ ನ್ಯೂಸ್: ಚಂದ್ರಯಾನ -3 ಸೆರೆಹಿಡಿದ ಚಂದ್ರನ ಮೊದಲ ನೋಟವನ್ನು ಭಾನುವಾರ ಬಿಡುಗಡೆ ಮಾಡಲಾಗಿದೆ. ಬಾಹ್ಯಾಕಾಶ ನೌಕೆ ಚಂದ್ರನ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದ ಒಂದು ದಿನದ ನಂತರ ಈ ವಿಡಿಯೋವನ್ನು ಇಸ್ರೋ ಬಿಡುಗಡೆ ಮಾಡಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಭಾರತದ ಮೂರನೇ ಮಾನವರಹಿತ ಚಂದ್ರಯಾನ ಮಿಷನ್ ಚಂದ್ರಯಾನ 3 ವೀಕ್ಷಿಸಿದ ಚಂದ್ರನ ಮೊದಲ ಚಿತ್ರಗಳನ್ನು ಬಿಡುಗಡೆ ಮಾಡಿದೆ. ಚಂದ್ರಯಾನ -3 ಶನಿವಾರ ಚಂದ್ರನ ಕಕ್ಷೆಯನ್ನು ಪ್ರವೇಶಿಸಿದ ನಂತರ ಚಿತ್ರಗಳನ್ನು ಸೆರೆಹಿಡಿದಿದೆ.“ಆಗಸ್ಟ್ 5, 2023 ರಂದು

ಚಂದ್ರಯಾನ – 3; ಚಂದ್ರನ ಮೊದಲ ಚಿತ್ರ ಬಿಡುಗಡೆ ಮಾಡಿದ ಇಸ್ರೋ Read More »

ಮಣಿಪುರ ಹಿಂಸಾಚಾರ| ಬಿಜೆಪಿ ಸಖ್ಯ ತೊರೆದ ಮಿತ್ರಪಕ್ಷ

ಸಮಗ್ರ ನ್ಯೂಸ್: ಕಳೆದ ಮೂರು ತಿಂಗಳಿನಿಂದ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಸರಕಾರಕ್ಕೆ ಹಿನ್ನಡೆಯಾಗಿದೆ. ಬಿಜೆಪಿ ಮಿತ್ರ ಪಕ್ಷವೊಂದು ಸರಕಾರಕ್ಕೆ ತಾನು ನೀಡಿರುವ ಬೆಂಬಲವನ್ನು ರವಿವಾರ ವಾಪಸ್ ಪಡೆದು ಮುಖ್ಯಮಂತ್ರಿ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಕೇವಲ ಇಬ್ಬರು ಶಾಸಕರನ್ನು ಹೊಂದಿರುವ ‘ಕುಕಿ ಪೀಪಲ್ಸ್ ಅಲಿಯನ್ಸ್’ ಪಕ್ಷ ಸರಕಾರಕ್ಕೆ ತಾನು ನೀಡಿರುವ ಬೆಂಬಲವನ್ನು ವಾಪಸ್ ಪಡೆದಿರುವುದಾಗಿ ರಾಜ್ಯಪಾಲೆ ಅನುಸೂಯ ಉಯಿಕೆ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದೆ.

ಮಣಿಪುರ ಹಿಂಸಾಚಾರ| ಬಿಜೆಪಿ ಸಖ್ಯ ತೊರೆದ ಮಿತ್ರಪಕ್ಷ Read More »