ರಾಷ್ಟ್ರೀಯ

ಮತ್ತೊಮ್ಮೆ ತೆರೆಯಲಿದೆ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರ

ಸಮಗ್ರ ನ್ಯೂಸ್‌: ನಾಲ್ಕು ದಶಕಗಳ ನಂತರ ವಿಶ್ವಪ್ರಸಿದ್ಧ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರವನ್ನು ಜು.14ರಂದು ತೆರೆಯಲು ಒಡಿಶಾ ಸರ್ಕಾರ ನಿರ್ಧರಿಸಿದೆ. ಆಭರಣ ಹಾಗೂ ಬೆಲೆಬಾಳುವ ಲೋಹಗಳಿರುವ ಈ ತಿಜೋರಿಯನ್ನು ಕೊನೆಯ ಬಾರಿಗೆ 1985ರಲ್ಲಿ ತೆರೆಯಲಾಗಿತ್ತು. ಮುಖ್ಯಮಂತ್ರಿ ಮೋಹನ್ ಮಾಝಿ ಸರ್ಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿ ರತ್ನಭಂಡಾರದಲ್ಲಿರುವ ಅಮೂಲ್ಯ ವಸ್ತುಗಳನ್ನು ದಾಸ್ತಾನು ಮಾಡಲಿದೆ. ಕಳೆದ ಬಾರಿ ತೆರೆಯಲಾದಾಗ ಭಂಡಾರದಲ್ಲಿ 12,500 ರತ್ನಖಚಿತ ಚಿನ್ನದ ಆಭರಣ ಹಾಗೂ 22,000 ತುಂಡು ಬೆಳ್ಳಿ ಇತ್ತು. 2018ರಲ್ಲಿ ಇದರ ತನಿಖೆ […]

ಮತ್ತೊಮ್ಮೆ ತೆರೆಯಲಿದೆ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರ Read More »

ಬಾಲಕನಿಗೆ ಕಿರುಕುಳ ನೀಡಿದ ಆರೋಪ/ ದಲೈಲಾಮ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿ ವಜಾ

ಸಮಗ್ರ ನ್ಯೂಸ್‌: ಟಿಬೆಟನ್ ಧರ್ಮಗುರು ದಲೈಲಾಮ ವಿರುದ್ಧ ಬಾಲಕನೊಬ್ಬನಿಗೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಬಾಲಕನ ತುಟಿ ಚುಂಬಿಸಿ, ತಮ್ಮ ನಾಲಿಗೆ ಚೀಪುವಂತೆ ದಲೈಲಾಮ ಅವರು ಹೇಳುವ ವಿಡಿಯೋ ಕಳೆದ ವರ್ಷ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ವಿವಾದಕ್ಕೆ ಕಾರಣವಾಗಿತ್ತು. ದಲೈಲಾಮ ವಿರುದ್ಧ ಪೋಟೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕೆಂದು ಕೋರಿ ‘ಕಾನ್ಸೆಡರೇಷನ್ ಆಫ್ ಎನ್‌ಜಿಒ’ ತನ್ನ ಅರ್ಜಿಯಲ್ಲಿ ಮನವಿ ಮಾಡಿತ್ತು. ಹಂಗಾಮಿ ಮುಖ್ಯ ನ್ಯಾಯಮೂರ್ತಿ

ಬಾಲಕನಿಗೆ ಕಿರುಕುಳ ನೀಡಿದ ಆರೋಪ/ ದಲೈಲಾಮ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿ ವಜಾ Read More »

ಉತ್ತರಪ್ರದೇಶದಲ್ಲಿ ಭೀಕರ ಅಪಘಾತ| ಮಗು ಸೇರಿ 18 ಮಂದಿ ದುರ್ಮರಣ

ಸಮಗ್ರ ನ್ಯೂಸ್::ಉತ್ತರ ಪ್ರದೇಶದ ಉನ್ನಾವ್‌ ಬಳಿ ಭೀಕರ ರಸ್ತೆ ಅಪಘಾತದ ಸಂಭವಿಸಿದ್ದು, ಮಗು, ಮೂವರು ಮಹಿಳೆಯರು ಸೇರಿದಂತೆ 18 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಹ್ತಾ ಮುಜಾವರ್ ಪ್ರದೇಶದ ಗರ್ಹಾ ಗ್ರಾಮದ ಬಳಿ ಮುಂದೆ ಚಲಿಸುತ್ತಿದ್ದ ಹಾಲಿನ ಟ್ಯಾಂಕರ್ ನ ಹಿಂಭಾಗಕ್ಕೆ ಸ್ಲೀಪರ್ ಬಸ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಮಗು ಸೇರಿದಂತೆ 18 ಜನರು ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿದ್ದಾರೆ. ಮುಂಜಾನೆ 5:30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಸ್ಲೀಪರ್ ಬಸ್ ಹಿಂದಿನಿಂದ ಮುಂದೆ ಚಲಿಸುತ್ತಿದ್ದ

ಉತ್ತರಪ್ರದೇಶದಲ್ಲಿ ಭೀಕರ ಅಪಘಾತ| ಮಗು ಸೇರಿ 18 ಮಂದಿ ದುರ್ಮರಣ Read More »

ಎಲೆಕ್ಟ್ರಿಕ್ ವಾಹನದಲ್ಲಿ ಪುತಿನ್ – ಮೋದಿ ರೌಂಡ್ಸ್| ನಮೋಗೆ ಸಾರಥಿಯಾದ ರಷ್ಯಾ ಅಧ್ಯಕ್ಷ

ಸಮಗ್ರ ನ್ಯೂಸ್: ರಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರನ್ನು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಬಹಳ ಆತ್ಮೀಯವಾಗಿ ನಿನ್ನೆ ಬರಮಾಡಿಕೊಂಡಿದ್ದು, ಅದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವ ವೀಡಿಯೋದಲ್ಲಿ ರಷ್ಯಾ ಅಧ್ಯಕ್ಷ ಪುಟಿನ್ ಅವರು ಡ್ರೈವರ್ ಸೀಟಿನಲ್ಲಿ ಕುಳಿತಿದ್ದು, ಪ್ರಧಾನಿ ಮೋದಿ ಅವರ ಪಕ್ಕದಲ್ಲೇ ಕುಳಿತಿದ್ದಾರೆ. ಇಬ್ಬರು ಆ ಪ್ರಯಾಣವನ್ನು ಎಂಜಾಯ್ ಮಾಡುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಹೀಗೆ ಕಾರಿನಲ್ಲಿ ಪ್ರಧಾನಿಯವರನ್ನು ಕೂರಿಸಿಕೊಂಡೆ ರಷ್ಯಾ ಅಧ್ಯಕ್ಷ ಪುಟಿನ್ ಅವರು ತಮ್ಮ ಬಂಗಲೆಗೆ ಒಂದು

ಎಲೆಕ್ಟ್ರಿಕ್ ವಾಹನದಲ್ಲಿ ಪುತಿನ್ – ಮೋದಿ ರೌಂಡ್ಸ್| ನಮೋಗೆ ಸಾರಥಿಯಾದ ರಷ್ಯಾ ಅಧ್ಯಕ್ಷ Read More »

ಜಮ್ಮು: ಸೇನೆಯ ಗುರಿಯಾಗಿಸಿ ಉಗ್ರರ ದಾಳಿ| ಗ್ರೆನೇಡ್ ಸ್ಪೋಟಕ್ಕೆ ನಾಲ್ವರು ಯೋಧರು ಹುತಾತ್ಮ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ ಹೆಚ್ಚಾಗುತ್ತಿದೆ. ಕಳೆದೆರಡು ತಿಂಗಳಲ್ಲಿ ಸೇನೆ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ಇದೀಗ ಕಥುವಾ ಬಳಿ ಭಾರತೀಯ ಸೇನಾ ವಾಹನ ಗುರಿಯಾಗಿ ಉಗ್ರರು ಭೀಕರ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ನಾಲ್ವರು ಯೋಧರು ಸ್ಥಳದಲ್ಲೇ ಹುತಾತ್ಮರಾಗಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೇನ ಪ್ರತಿ ದಾಳಿ ನಡೆಸುತ್ತಿದ್ದಂತೆ ಉಗ್ರರು ಕಾಡಿನೊಳಗೆ ಪರಾರಿಯಾಗಿದ್ದಾರೆ. ಈ ದಾಳಿಯ ಹೊಣೆಯನ್ನು ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆ ಹೊತ್ತುಕೊಂಡಿದೆ. ಇಂದು ಮಧ್ಯಾಹ್ನ 3.30ರ ವೇಳೆಗೆ

ಜಮ್ಮು: ಸೇನೆಯ ಗುರಿಯಾಗಿಸಿ ಉಗ್ರರ ದಾಳಿ| ಗ್ರೆನೇಡ್ ಸ್ಪೋಟಕ್ಕೆ ನಾಲ್ವರು ಯೋಧರು ಹುತಾತ್ಮ Read More »

ತ್ರಿಪುರಾದಲ್ಲಿ 47 ವಿದ್ಯಾರ್ಥಿಗಳು ಏಡ್ಸ್ ಗೆ ಬಲಿ| 828 ವಿದ್ಯಾರ್ಥಿಗಳಿಗೆ ಪಾಸಿಟಿವ್

ಸಮಗ್ರ ನ್ಯೂಸ್: ತ್ರಿಪುರಾ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ ಒಂದು ಶಾಕಿಂಗ್ ವರದಿಯನ್ನ ಬಿಡುಗಡೆ ಮಾಡಿದೆ. ಎಚ್‌ಐವಿ ಸೋಂಕಿನಿಂದ 47 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಇನ್ನೂ 828 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ. ತ್ರಿಪುರಾ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿಯ (TSACS) ಹಿರಿಯ ಅಧಿಕಾರಿ ಭಟ್ಟಾಚಾರ್ಜಿ, 220 ಶಾಲೆಗಳು, 24 ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಂದ ಚುಚ್ಚುಮದ್ದಿನ ಔಷಧಿಗಳನ್ನ ತೆಗೆದುಕೊಳ್ಳುತ್ತಿದ್ದ ವಿದ್ಯಾರ್ಥಿಗಳನ್ನ ಗುರುತಿಸಲಾಗಿದೆ ಎಂದು ಹೇಳಿದರು. ಪ್ರತಿದಿನ ಐದರಿಂದ ಏಳು ಹೊಸ ಪ್ರಕರಣಗಳು ವರದಿಯಾಗುತ್ತಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. ತ್ರಿಪುರಾ ಪತ್ರಕರ್ತರ

ತ್ರಿಪುರಾದಲ್ಲಿ 47 ವಿದ್ಯಾರ್ಥಿಗಳು ಏಡ್ಸ್ ಗೆ ಬಲಿ| 828 ವಿದ್ಯಾರ್ಥಿಗಳಿಗೆ ಪಾಸಿಟಿವ್ Read More »

ತಮಿಳುನಾಡು ಬಿಎಸ್ಪಿ ಪಕ್ಷದ ರಾಜ್ಯಾಧ್ಯಕ್ಷ ಆರ್ಮ್ ಸ್ಟ್ರಾಂಗ್ ಬರ್ಬರ ಹತ್ಯೆ| ಎಂಟು ಮಂದಿ ಶಂಕಿತರು ಅರೆಸ್ಟ್

ಸಮಗ್ರ ನ್ಯೂಸ್: ತಮಿಳುನಾಡು ಬಹುಜನ ಸಮಾಜ ವಾದಿ ಪಕ್ಷದ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಪೆರಂಬೂರ್‌ನಲ್ಲಿರುವ ಆರ್ಮ್‌ಸ್ಟ್ರಾಂಗ್‌ ಅವರ ನಿವಾಸದ ಬಳಿ ಆರು ಮಂದಿ ಅಪರಿಚಿತ ದಾಳಿಕೋರರು ದಾಳಿ ನಡೆಸಿ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಂಟು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಹತ್ಯೆಯ ಉದ್ದೇಶವನ್ನು ಕೂಲಂಕುಶವಾಗಿ ವಿಚಾರಣೆ ನಡೆಸಲಾಗುತ್ತದೆ ಎಂದು ಚೆನ್ನೈ ಹೆಚ್ಚುವರಿ ಆಯುಕ್ತ (ಉತ್ತರ) ಆಸ್ರಾ ಗರ್ಗ್‌ ಹೇಳಿದ್ದಾರೆ. ಆರ್ಮ್‌ಸ್ಟ್ರಾಂಗ್‌ ಅವರನ್ನು ಕೊಲೆಗೈದ ಬಳಿಕ ಆರೋಪಿಗಳು ಪರಾರಿಯಾಗುತ್ತಿರುವ

ತಮಿಳುನಾಡು ಬಿಎಸ್ಪಿ ಪಕ್ಷದ ರಾಜ್ಯಾಧ್ಯಕ್ಷ ಆರ್ಮ್ ಸ್ಟ್ರಾಂಗ್ ಬರ್ಬರ ಹತ್ಯೆ| ಎಂಟು ಮಂದಿ ಶಂಕಿತರು ಅರೆಸ್ಟ್ Read More »

ಭಾರತದಲ್ಲಿ ರಸ್ತೆಗಿಳಿದ ವಿಶ್ವದ ಮೊದಲ ಸಿಎನ್ ಜಿ‌ ಬೈಕ್| ಏನಿದರ ವಿಶೇಷತೆ? ಇಲ್ಲಿದೆ ಡೀಟೈಲ್ಡ್ ಸ್ಟೋರಿ…

ಸಮಗ್ರ ನ್ಯೂಸ್: ಭಾರತದಲ್ಲಿ ವಿಶ್ವದ ಮೊದಲ CNG ಬೈಕ್ ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆಯಾಗಿದೆ. ಬಜಾಜ್ CNG ಬೈಕ್ ಅನ್ನು ಬಿಡುಗಡೆ ಮಾಡಿದ ವಿಶ್ವದ ಮೊದಲ ದ್ವಿಚಕ್ರ ವಾಹನ ತಯಾರಕ ಕಂಪನಿ. ಇಡೀ ವಾಹನ ಲೋಕದ ಗಮನ ಈಗ ಈ ಕಂಪನಿಯತ್ತ ಹೊರಳುತ್ತಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಬೈಕ್ ಅನ್ನು ಭಾರತಕ್ಕೆ ಪರಿಚಯಿಸಿದ್ದು, ಭಾರತದಲ್ಲಿ ಮಾತ್ರವಲ್ಲ, ಜಾಗತಿಕವಾಗಿಯೂ ಇದರ ನಿರೀಕ್ಷೆಗಳು ಹಲವು ಪಟ್ಟು ಹೆಚ್ಚುತ್ತಿವೆ. ಸಿಎನ್‌ಜಿ ಚಾಲಿತ ಕಾರುಗಳು ಬಂದು ದಶಕಕ್ಕೂ ಹೆಚ್ಚು ಆದರೂ, ಸಿಎನ್‌ಜಿ-ಚಾಲಿತ

ಭಾರತದಲ್ಲಿ ರಸ್ತೆಗಿಳಿದ ವಿಶ್ವದ ಮೊದಲ ಸಿಎನ್ ಜಿ‌ ಬೈಕ್| ಏನಿದರ ವಿಶೇಷತೆ? ಇಲ್ಲಿದೆ ಡೀಟೈಲ್ಡ್ ಸ್ಟೋರಿ… Read More »

₹29 ಗಳಿಗೆ ದೊರೆಯುತ್ತಿದ್ದ ಭಾರತ್ ಅಕ್ಕಿ ಮಾರಾಟ ಸ್ಥಗಿತ

ಸಮಗ್ರ ನ್ಯೂಸ್: ಜುಲೈನಿಂದ ಭಾರತ್ ಅಕ್ಕಿ ಯೋಜನೆಯನ್ನು ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. 5 ಕೆಜಿ ಮತ್ತು 10 ಕೆಜಿ ಪ್ಯಾಕ್‌ಗಳಲ್ಲಿ ದೊರೆಯುತ್ತಿದ್ದ ಸಬ್ಸಿಡಿ ಅಕ್ಕಿ ಈಗ ಆನ್‌ಲೈನ್‌ನಲ್ಲಿಯೂ ಲಭ್ಯವಿಲ್ಲ. ಫೆಬ್ರವರಿಯಲ್ಲಿ ಕೇಂದ್ರ ಸರ್ಕಾರವು ಆರ್ಥಿಕವಾಗಿ ಅಸ್ಥಿರ ಮತ್ತು ಆರ್ಥಿಕವಾಗಿ ದುರ್ಬಲ ಸಮಾಜದ ವರ್ಗಗಳನ್ನು ಬೆಂಬಲಿಸಲು ಪ್ರತಿ ಕಿಲೋಗ್ರಾಂಗೆ 29 ಬೆಲೆ ರೂ.ಗೆ ಭಾರತ್ ರೈಸ್ ಅನ್ನು ಪರಿಚಯಿಸಿತ್ತು. ಸಬ್ಸಿಡಿ ಭಾರತ್ ರೈಸ್ ಅನ್ನು NAFED, NCCF ಮತ್ತು ಕೇಂದ್ರೀಯ ಭಂಡಾರ್‌ನಿಂದ ಮೊಬೈಲ್ ಅಪ್ಲಿಕೇಶನ್‌ಗಳ ಮೂಲಕ ಆನ್‌ಲೈನ್‌ನಲ್ಲಿ

₹29 ಗಳಿಗೆ ದೊರೆಯುತ್ತಿದ್ದ ಭಾರತ್ ಅಕ್ಕಿ ಮಾರಾಟ ಸ್ಥಗಿತ Read More »

ಜಾರ್ಖಂಡ್ ಸಿಎಂ ಆಗಿ‌ ಹೇಮಂತ್ ಸೊರೇನ್ ಪ್ರಮಾಣವಚನ ಸ್ವೀಕಾರ

ಸಮಗ್ರ ನ್ಯೂಸ್: ರಾಂಚಿಯ ರಾಜಭವನದಲ್ಲಿ ಗುರುವಾರ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ರಾಜ್ಯದಲ್ಲಿ ಸರ್ಕಾರ ರಚಿಸಲು ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಸೊರೆನ್ ಅವರನ್ನು ಆಹ್ವಾನಿಸಿದ ಕೆಲವೇ ಗಂಟೆಗಳ ನಂತರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಚಂಪೈ ಸೊರೆನ್ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ಒಂದು ದಿನದ ನಂತರ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಸೊರೆನ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರಾಜೇಶ್

ಜಾರ್ಖಂಡ್ ಸಿಎಂ ಆಗಿ‌ ಹೇಮಂತ್ ಸೊರೇನ್ ಪ್ರಮಾಣವಚನ ಸ್ವೀಕಾರ Read More »