ಮಕ್ಕಳ ಕೈಗೆ ಮೊಬೈಲ್ ಕೊಡುತ್ತೀರಾ? ಹಾಗಾದ್ರೆ ಈ ವರದಿ ಓದ್ಲೇಬೇಕು| ದ.ಕ ಜಿಲ್ಲೆಯಲ್ಲಿನ ರಿಪೋರ್ಟ್ ತೀರಾ ಶಾಕಿಂಗ್!!
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಚ್ಚಿಬೀಳಿಸುವ ವರದಿಯೊಂದನ್ನು ಆರೋಗ್ಯ ಇಲಾಖೆ ರಿಲೀಸ್ ಮಾಡಿದ್ದು, ಒಂದಲ್ಲ ಎರಡಲ್ಲ ಬರೊಬ್ಬರಿ ನಾಲ್ಕು ಸಾವಿರ ಮಕ್ಕಳು ದೃಷ್ಟಿ ದೋಷ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಇದು ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ರಾಷ್ಟ್ರೀಯ ಅಂದತ್ವ ನಿವಾರಣ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಭಯಾನಕ ಮಾಹಿತಿ ಪತ್ತೆಯಾಗಿದೆ. ಕೇವಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 4 ಸಾವಿರ ಮಕ್ಕಳು ದೃಷ್ಟಿ ದೋಷದ ಸಮಸ್ಯೆ ಇದ್ದು, ಸುಮಾರು 4398 ಮಕ್ಕಳಿಗೆ ಗಂಭೀರ ದೃಷ್ಟಿ ದೋಷದ […]










