ರಾಷ್ಟ್ರೀಯ

ಮುಂದಿನ ಚುನಾವಣೆಯಲ್ಲೂ ಮೋದಿಯೇ ಪ್ರಧಾನಿ ಅಭ್ಯರ್ಥಿ – ಅಮಿತ್ ಷಾ

ಸಮಗ್ರ ನ್ಯೂಸ್: ಬಿಜೆಪಿ ಮತ್ತು ಜೆಡಿಯು ಮೈತ್ರಿಯು 2024ರ ಲೋಕಸಭಾ ಚುನಾವಣೆಯಲ್ಲಿಯೂ ಮುಂದುವರಿಯುತ್ತದೆ. ನರೇಂದ್ರ ಮೋದಿ ಅವರೇ ಮುಂದಿನ ಪ್ರಧಾನಿ ಅಭ್ಯರ್ಥಿ ಯಾಗಿರುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಬಿಹಾರ ರಾಜಧಾನಿ ಪಾಟ್ನಾದಲ್ಲಿ ನಡೆದ ಭಾರತೀಯ ಜನತಾ ಪಕ್ಷದ ವಿವಿಧ ಮೋರ್ಚಾಗಳ ಜಂಟಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 2024ರ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪ್ರಧಾನಿ ಅಭ್ಯರ್ಥಿ ಯಾರಾಗಿರಬೇಕು ಎನ್ನುವುದು ಬಿಸಿಬಿಸಿ ಚರ್ಚೆಯ ವಿಚಾರವಾಗಿತ್ತು. ಹೊಸಬರಿಗೆ […]

ಮುಂದಿನ ಚುನಾವಣೆಯಲ್ಲೂ ಮೋದಿಯೇ ಪ್ರಧಾನಿ ಅಭ್ಯರ್ಥಿ – ಅಮಿತ್ ಷಾ Read More »

ಕರ್ನಾಟಕವನ್ನು ತರಾಟೆಗೆ ತೆಗೆದುಕೊಂಡ ‌ರಾಜಾಸ್ಥಾನ| 48 ಗಂಟೆ ಕಳೆದರೂ‌ ಪ್ರವೀಣ್ ಕೊಲೆಗಡುಕರ ಬಂಧಿಸದ್ದಕ್ಕೆ ಪ್ರಶ್ನೆ|

ಸಮಗ್ರ‌ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರೋ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್​ ನೆಟ್ಟಾರು ಹತ್ಯೆಯನ್ನು ನಾನು ಖಂಡಿಸುತ್ತೇನೆ ಎಂದು ರಾಜಸ್ಥಾನ ಸಿಎಂ ಅಶೋಕ್​​ ಗೆಹ್ಲೋಟ್​ ಟ್ವೀಟ್​ ಮಾಡಿದ್ದಾರೆ. “ಇತ್ತೀಚೆಗೆ ಉದಯಪುರದಲ್ಲಿ ಕನ್ಹಯ್ಯ ಲಾಲ್​ ಹತ್ಯೆ ಆದಾಗ ಕೇವಲ 4 ಗಂಟೆಯಲ್ಲೇ ಆರೋಪಿಗಳನ್ನು ಬಂಧಿಸಿದ್ದೆವು. ಈಗ ಕರ್ನಾಟಕದಲ್ಲಿ ಪ್ರವೀಣ್​ ಹತ್ಯೆಯಾಗಿ 48 ಗಂಟೆ ಆದ್ರೂ ಆರೋಪಿ ಬಂಧನವಾಗಿಲ್ಲ” ಎಂದು ಗೆಹ್ಲೋಟ್​ ಪ್ರಶ್ನಿಸಿದ್ದಾರೆ. ಇನ್ನು, ಕನ್ಹಯ್ಯ ಲಾಲ್​​ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡಿದ್ದೇವೆ. ಕನ್ಹಯ್ಯ

ಕರ್ನಾಟಕವನ್ನು ತರಾಟೆಗೆ ತೆಗೆದುಕೊಂಡ ‌ರಾಜಾಸ್ಥಾನ| 48 ಗಂಟೆ ಕಳೆದರೂ‌ ಪ್ರವೀಣ್ ಕೊಲೆಗಡುಕರ ಬಂಧಿಸದ್ದಕ್ಕೆ ಪ್ರಶ್ನೆ| Read More »

ರಾಜಾಸ್ಥಾನ: ವಾಯುಪಡೆಯ ಮಿಗ್21 ವಿಮಾನ ಪತನ; ಪೈಲಟ್ ಗಳು‌ ಸಾವು

ಸಮಗ್ರ ನ್ಯೂಸ್: ಭಾರತೀಯ ವಾಯುಪಡೆಯ (IAF) ಮಿಗ್ -21 ವಿಮಾನವು ಗುರುವಾರ ರಾತ್ರಿ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಪತನಗೊಂಡಿದ್ದು, ಇಬ್ಬರೂ ಪೈಲಟ್‌ಗಳು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ. ಬಾರ್ಮರ್ʼನ ಭೀಮ್ಡಾ ಗ್ರಾಮದಲ್ಲಿ ಮಿಗ್ ಅಪಘಾತಕ್ಕೀಡಾಗಿದ್ದು, ಜೋರಾದ ಶಬ್ದದೊಂದಿಗೆ ಬೆಂಕಿಯ ದೊಡ್ಡ ಜ್ವಾಲೆಗಳನ್ನ ಜನರು ನೋಡಿದ್ದು ಮಿಗ್ ಅಪಘಾತದ ಸುದ್ದಿ ಕೋಲಾಹಲವನ್ನ ಸೃಷ್ಟಿಸಿದೆ. ಸಧ್ಯ ಸ್ಥಳಕ್ಕೆ ಅಧಿಕಾರಿಗಳು ತೆರಳುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಪಘಾತವು ಎಷ್ಟು ಗಂಭೀರವಾಗಿದೆಯೆಂದರೆ ಮಿಗ್ʼನ ಅವಶೇಷಗಳು ಅರ್ಧ ಕಿಲೋಮೀಟರ್ ದೂರದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಇನ್ನು

ರಾಜಾಸ್ಥಾನ: ವಾಯುಪಡೆಯ ಮಿಗ್21 ವಿಮಾನ ಪತನ; ಪೈಲಟ್ ಗಳು‌ ಸಾವು Read More »

ಕಾರ್ಗಿಲ್ ವಿಜಯ ದಿವಸ್| ಮರೆಯಲಾಗದ ಆ ನೆನಪುಗಳು

ಸಮಗ್ರ ನ್ಯೂಸ್: ಇಂದು (ಜು.26) ಕಾರ್ಗಿಲ್ ವಿಜಯ ದಿವಸ, ಯುದ್ಧದಲ್ಲಿ ಹುತಾತ್ಮರಾದ ನೂರಾರು ಭಾರತದ ಯೋಧರನ್ನು ಇಡೀ ದೇಶವೇ ಗೌರವಿಸುವ ದಿನ. ಈ ದಿನದಂದು ಕಾರ್ಗಿಲ್ ಯುದ್ಧದ ಇತಿಹಾಸ, ಮಹತ್ವ ಮತ್ತು ಸ್ಮರಣಾರ್ಥಗಳ ಬಗ್ಗೆ ನೋಡೋಣ.ಯಾಕೆಂದರೆ ಇದು ಇಡೀ ದೇಶವೇ ಹೆಮ್ಮೆ ಪಡುವ ದಿವಸ. 1999ರ ಇದೇ ದಿನದಂದು ಪಾಕಿಸ್ತಾನದ ವಿರುದ್ಧ ಕಾರ್ಗಿಲ್​ನಲ್ಲಿ ನಡೆದ ಯುದ್ಧದಲ್ಲಿ ಭಾರತ ಜಯ ಸಾಧಿಸಿದ ದಿವಸವಿದು. ಇದರ ನೆನಪಿಗಾಗಿ ಪ್ರತಿ ವರ್ಷ ಜು.26 ರಂದು ಕಾರ್ಗಿಲ್ ವಿಜಯ್ ದಿವಸ್ ಎಂದು ಆಚರಿಸಲಾಗುತ್ತದೆ.

ಕಾರ್ಗಿಲ್ ವಿಜಯ ದಿವಸ್| ಮರೆಯಲಾಗದ ಆ ನೆನಪುಗಳು Read More »

ಕಸ್ತೂರಿ ರಂಗನ್ ವರದಿ ವಿರೋಧಿಸಿದ್ದ ಶಾಸಕರ ನಿಯೋಗಕ್ಕೆ ಯಶಸ್ಸು| ಹೊಸ ಕಮಿಟಿ ರಚನೆಗೆ ಸಮ್ಮತಿಸಿದ ಕೇಂದ್ರ

ಸಮಗ್ರ ನ್ಯೂಸ್: ಕಸ್ತೂರಿರಂಗನ್ ವರದಿ ವಿರೋಧಿಸಿ ಮಲೆನಾಡಿನ ಶಾಸಕರ ನಿಯೋಗಕ್ಕೆ ಕೊನೆಗೂ ಯಶಸ್ವಿಯಾಗಿದ್ದಾರೆ. ಮುಖ್ಯಮಂತ್ರಿ ನೇತೃತ್ವದ ಮಲೆನಾಡಿನ ಶಾಸಕರ ನಿಯೋಗವು ಕಸ್ತೂರಿರಂಗನ್ ವರದಿ ಮಾಡಿದ ಪ್ರಕ್ರಿಯೆಯಲ್ಲಿ ಲೋಪ ಇದೆ ಎಂದು ದೂರು ಸಲ್ಲಿಸಿತ್ತು. ಹೀಗಾಗಿ ಕ್ಯಾಬಿನೆಟ್ ಸಬ್ ಕಮಿಟಿ ರಚಿಸಲು ಮನವಿ ಸಲ್ಲಿಸಿತ್ತು. ಈಗ ಇದಕ್ಕೆ ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್ ಒಪ್ಪಿಗೆ ನೀಡಿದ್ದಾರೆ. ಪಶ್ಚಿಮ ಘಟ್ಟದ ಪ್ರತಿ ಹಳ್ಳಿಗಳಿಗೂ ಭೇಟಿ ನೀಡಿ ಹೊಸ ವರದಿ ತಯಾರಿಸಲು ಹೊಸ ಕಮಿಟಿ ರಚನೆಗೆ ಸಮ್ಮತಿ ನೀಡಿದ್ದಾರೆ. ಈಗಾಗಲೇ

ಕಸ್ತೂರಿ ರಂಗನ್ ವರದಿ ವಿರೋಧಿಸಿದ್ದ ಶಾಸಕರ ನಿಯೋಗಕ್ಕೆ ಯಶಸ್ಸು| ಹೊಸ ಕಮಿಟಿ ರಚನೆಗೆ ಸಮ್ಮತಿಸಿದ ಕೇಂದ್ರ Read More »

ಇಂದಿನಿಂದ ಮಹಾಭಾರತದಲ್ಲಿ ದ್ರೌಪದಿ ಯುಗ| ಪ್ರಮಾಣವಚನ ಸ್ವೀಕರಿಸಲಿದ್ದಾರೆ ಮುರ್ಮು

ಸಮಗ್ರ ನ್ಯೂಸ್: ರಾಮಾನಾಥ ಕೋವಿಂದ್ ಅವರ ಅಧಿಕಾರಾವಧಿ ಜು.24ಕ್ಕೆ ಅಂತ್ಯಗೊಂಡ ಕಾರಣ, ದೇಶದ 15ನೇ ರಾಷ್ಟ್ರಪತಿಯಾಗಿ, ಇಂದು ದ್ರೌಪದಿ ಮುರ್ಮು ಅವರು ಪ್ರಮಾಣವಚನ ಸ್ವೀಕರಿಸಿ, ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ಭಾರೀ ಬಹುತದೊಂದಿಗೆ ಎನ್ ಡಿಎ ಬೆಂಬಲಿತ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಗೆಲುವು ಸಾಧಿಸಿದ್ದರು. ಇಂತಹ ಅವರು ಇಂದು 15ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಂದು ಬೆಳಿಗ್ಗೆ 10.15ಕ್ಕೆ ಅವರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಅವರು ಪ್ರಮಾಣವಚನ ಬೋಧಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ

ಇಂದಿನಿಂದ ಮಹಾಭಾರತದಲ್ಲಿ ದ್ರೌಪದಿ ಯುಗ| ಪ್ರಮಾಣವಚನ ಸ್ವೀಕರಿಸಲಿದ್ದಾರೆ ಮುರ್ಮು Read More »

ಇನ್ಮುಂದೆ ರಾತ್ರಿಯೂ ಹಾರಿಸಬಹುದು ತಿರಂಗಾ| ಧ್ವಜ ಸಂಹಿತೆಯಲ್ಲಿ ಬದಲಾವಣೆ ತಂದ ಸರ್ಕಾರ

ಸಮಗ್ರ ನ್ಯೂಸ್::ಕೇಂದ್ರ ಸರ್ಕಾರ ‘ಹರ್ ಘರ್ ತಿರಂಗಾ’ ಅಭಿಯಾನವನ್ನ ಪ್ರಾರಂಭಿಸುವುದರ ಜೊತೆಗೆ, ಭಾರತದ ಧ್ವಜ ಸಂಹಿತೆ 2002ರಲ್ಲಿ ಬದಲಾವಣೆಗಳನ್ನ ತಂದಿದೆ. ಇನ್ಮುಂದೆ ತ್ರಿವರ್ಣ ಧ್ವಜವನ್ನ ಹಗಲು ಮತ್ತು ರಾತ್ರಿ ಸಾರ್ವಜನಿಕರಿಗೆ ಹಾರಿಸಲು ಅನುಮತಿ ನೀಡಲಾಗಿದೆ. ಸ್ವತಂತ್ರ ಭಾರತದ 75ನೇ ವರ್ಷದ ಸ್ಮರಣಾರ್ಥ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 13ರಿಂದ 15ರವರೆಗೆ ‘ಹರ್ ಘರ್ ತಿರಂಗಾ’ ಆಚರಿಸಲಾಗುವುದು. ಎಲ್ಲಾ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ,

ಇನ್ಮುಂದೆ ರಾತ್ರಿಯೂ ಹಾರಿಸಬಹುದು ತಿರಂಗಾ| ಧ್ವಜ ಸಂಹಿತೆಯಲ್ಲಿ ಬದಲಾವಣೆ ತಂದ ಸರ್ಕಾರ Read More »

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ| ನಟ ಸೂರ್ಯ ಮತ್ತು ಅಜಯ್ ದೇವಗನ್‌ ಅತ್ಯುತ್ತಮ ನಟರು| “ಡೊಳ್ಳು” ಕನ್ನಡದ ಅತ್ಯುತ್ತಮ ಚಿತ್ರ

ಸಮಗ್ರ ನ್ಯೂಸ್: 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಘೋಷಿಸಲಾಗಿದ್ದು ತಮಿಳು ನಟ ಸೂರ್ಯ ಮತ್ತು ಅಜಯ್ ದೇವಗನ್ ಕ್ರಮವಾಗಿ ಸೂರರೈ ಪೊಟ್ರು ಮತ್ತು ತನ್ಹಾಜಿ: ದಿ ಅನ್ಸಂಗ್ ವಾರಿಯರ್ ಚಿತ್ರಗಳಲ್ಲಿನ ಅಭಿನಯಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ. ನಟಿ ಅಪರ್ಣಾ ಬಾಲಮುರಳಿ ಸೂರರೈ ಪೊಟ್ರು ಚಿತ್ರದಲ್ಲಿನ ನಟನೆಗಾಗಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದರು. ಕನ್ನಡದ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು “ಡೊಳ್ಳು” ಪಡೆದುಕೊಂಡಿತು. 68 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಶುಕ್ರವಾರ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಘೋಷಿಸಲಾಯಿತು.

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ| ನಟ ಸೂರ್ಯ ಮತ್ತು ಅಜಯ್ ದೇವಗನ್‌ ಅತ್ಯುತ್ತಮ ನಟರು| “ಡೊಳ್ಳು” ಕನ್ನಡದ ಅತ್ಯುತ್ತಮ ಚಿತ್ರ Read More »

ರಾಜಕೀಯ ನಿವೃತ್ತಿ ಘೋಷಿಸಿದ ರಾಜಾಹುಲಿ; ಪುತ್ರನಿಗಾಗಿ ಶಸ್ತ್ರ ತ್ಯಾಗ

ಸಮಗ್ರ‌ ನ್ಯೂಸ್: ರಾಜ್ಯ ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ದೊಡ್ಡ ಮಟ್ಟಿನ ಶಾಕ್ ನೀಡಿದ್ದು ಇದೀಗ ರಾಜ್ಯ ಬಿಜೆಪಿ ವಲಯದಲ್ಲಿ ಬಾರಿ ಕುತೂಹಲಕ್ಕೆ ಕಾರಣವಾಗಿದೆ. ನಾನು ರಾಜಕೀಯ ನಿವೃತ್ತಿ ಘೋಷಿಸುತ್ತಿದ್ದು ಇದೀಗ ಶಿವಮೊಗ್ಗದ ಶಿಕಾರಿಪುರದಲ್ಲಿ ನನ್ನ ಬದಲಿಗೆ ವಿಜೇಯೇಂದ್ರರವರು ಸ್ಪರ್ದಿಸಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.ಇದೀಗ ಯಡಿಯೂರಪ್ಪರ ಈ ಹೇಳಿಕೆ ರಾಜ್ಯ ಬಿಜೆಪಿಯಲ್ಲಿ ಬಾರೀ ಸಂಚಲನ ಸೃಷ್ಟಿಸಿದ್ದು,ಯಡಿಯೂರಪ್ಪ ನಿವೃತ್ತಿ ಘೋಷಿಸಿದರೆ ರಾಜ್ಯ ಬಿಜೆಪಿಗೆ ಈ ಬಾರಿಯ ಚುನಾವಣೆ ನುಂಗಲಾರದ ತುತ್ತಾಗಲಿದೆ. ಮಾಜಿ ಸಿಎಂ ಯಡಿಯೂರಪ್ಪ ಪುತ್ರನಿಗಾಗಿ ತಮ್ಮ

ರಾಜಕೀಯ ನಿವೃತ್ತಿ ಘೋಷಿಸಿದ ರಾಜಾಹುಲಿ; ಪುತ್ರನಿಗಾಗಿ ಶಸ್ತ್ರ ತ್ಯಾಗ Read More »

ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ| ಬುಡಕಟ್ಟು ಜನಾಂಗದ ಮಹಿಳೆಗೊಲಿದ ಅತ್ಯುನ್ನತ ಪಟ್ಟ|

ಸಮಗ್ರ ನ್ಯೂಸ್: ಜುಲೈ 18ರಂದು ನಡೆದಿದ್ದ ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ದೇಶದ 15ನೇ ರಾಷ್ಟ್ರಪತಿಯಾಗಿ ಎನ್ ಡಿ ಎ ಮೈತ್ರಿಕೂಟ ಬೆಂಬಲಿತ ಅಭ್ಯರ್ಥಿ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಈ ಮೂಲಕ ಬುಡಕಟ್ಟು ಜನಾಂಗದ ಮಹಿಳೆಯೋರ್ವರು ದೇಶದ ಅತ್ಯುನ್ನತ ಸ್ಥಾನವನ್ನು ಅಲಂಕರಿಸಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ ಎನ್ ಡಿ ಎ ಮೈತ್ರಿಕೂಟದಿಂದ ದ್ರೌಪದಿ ಮುರ್ಮು ಕಣಕ್ಕಿಳಿದಿದ್ದರೆ ಯುಪಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಯಶ್ವಂತ್ ಸಿನ್ಹಾ ಸ್ಪರ್ಧಿಸಿದ್ದರು. ದ್ರೌಪದಿ ಮುರ್ಮು ಅವರಿಗೆ ಯುಪಿಎ ಮೈತ್ರಿಕೂಟದಲ್ಲಿದ್ದ ಕೆಲವೊಂದು ಪಕ್ಷಗಳು ಬೆಂಬಲಿಸಿದ್ದು ಗಮನಾರ್ಹ.

ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ| ಬುಡಕಟ್ಟು ಜನಾಂಗದ ಮಹಿಳೆಗೊಲಿದ ಅತ್ಯುನ್ನತ ಪಟ್ಟ| Read More »