ರಾಷ್ಟ್ರೀಯ

ಪೆಟ್ರೋಲ್, ಡೀಸೆಲ್ ಜಿಎಸ್‍ಟಿ ವ್ಯಾಪ್ತಿಗೆ? ಜಿಎಸ್ಟಿ ಮಂಡಳಿ ಜೊತೆ ‌ಚರ್ಚೆಗೆ‌ ನಿರ್ಧಾರ

ನವದೆಹಲಿ: ಪೆಟ್ರೋಲ್, ಡೀಸೆಲ್ ಇತರ ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ವ್ಯಾಪ್ತಿಗೆ ತರುವ ಬಗ್ಗೆ ಜಿಎಸ್‍ಟಿ ಮಂಡಳಿ ಸೆ.17ರಂದು ನಡೆಯಲಿರುವ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಿದೆ. ಕಳೆದ ಜೂನ್ ತಿಂಗಳಿನಲ್ಲಿ ಕೇರಳ ಹೈಕೋರ್ಟ್ ರಾಜ್ಯಗಳು ಪೆಟ್ರೋಲ್, ಡೀಸೆಲ್ ಮೇಲೆ ಪ್ರತ್ಯೇಕ ದರವನ್ನು ವಿಧಿಸುತ್ತಿರುವ ಹಿನ್ನೆಲೆಯಲ್ಲಿ ಇವುಗಳನ್ನು ಜಿಎಸ್‍ಟಿ ವ್ಯಾಪ್ತಿಗೆ ತರುವ ಬಗ್ಗೆ ತೀರ್ಮಾನ ಕೈಗೊಳ್ಳುವಂತೆ ಜಿಎಸ್‍ಟಿ ಮಂಡಳಿಗೆ ಸೂಚಿಸಿತ್ತು. ಹೈಕೋರ್ಟ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಿಎಸ್‍ಟಿ ಮಂಡಳಿಯ ಸಭೆಯಲ್ಲಿ ಈ ವಿಚಾರವನ್ನು ಚರ್ಚೆಗೆ […]

ಪೆಟ್ರೋಲ್, ಡೀಸೆಲ್ ಜಿಎಸ್‍ಟಿ ವ್ಯಾಪ್ತಿಗೆ? ಜಿಎಸ್ಟಿ ಮಂಡಳಿ ಜೊತೆ ‌ಚರ್ಚೆಗೆ‌ ನಿರ್ಧಾರ Read More »

ಸರಣಿ ಸ್ಫೋಟಕ್ಕೆ ಸಂಚು ರೂಪಿಸಿದ 6 ಉಗ್ರರ ಬಂಧನ|ಇಬ್ಬರು ಪಾಕಿಸ್ತಾನದವರು

ನವದೆಹಲಿ: ರಾಜ್ಯದ ವಿವಿಧ ಕಡೆ ಸರಣಿ ಸ್ಪೋಟಕ್ಕೆ ಸಂಚು ರೂಪಿಸಿದ್ದ 6 ಉಗ್ರರನ್ನು ಬಂಧಿಸಲಾಗಿದ್ದು ಇದರಲ್ಲಿ 2 ಮಂದಿ ಪಾಕಿಸ್ತಾನ ಮೂಲದ ಐಎಸ್‍ಐನಿಂದ ತರಬೇತಿ ಪಡೆದ ಉಗ್ರರಾಗಿದ್ದಾರೆ.ಬಂಧಿತ ಉಗ್ರರನ್ನು ಜಾನ್ ಮೊಹಮ್ಮದ್ ಶೇಖ್ ಅಲಿಯಾಸ್ ಸಮೀರ್(47), ಮೂಲ್‍ಚಂದ್(47), ಮೊಹಮ್ಮದ್ ಅಬುಬಕರ್(23) ಹಾಗೂ ಮೊಹಮ್ಮದ್ ಅಮಿರ್ ಜಾವೇದ್(31) ಹಾಗೇ ಪಾಕಿಸ್ತಾನ ಮೂಲದ ಒಸಾಮಾ(22), ಝೀಶನ್ ಖಮರ್(28), ಎಂದು ಗುರುತಿಸಲಾಗಿದೆ. ಇವರುಗಳು ಗಣೇಶ ಚತುರ್ಥಿ, ನವರಾತ್ರಿ ಹಾಗೂ ರಾಮಲೀಲಾ ಹಬ್ಬಗಳ ಸಂದರ್ಭದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ.

ಸರಣಿ ಸ್ಫೋಟಕ್ಕೆ ಸಂಚು ರೂಪಿಸಿದ 6 ಉಗ್ರರ ಬಂಧನ|ಇಬ್ಬರು ಪಾಕಿಸ್ತಾನದವರು Read More »

ಸಿಎ ಪರೀಕ್ಷೆ‌: ಹೊಸ ಕೋರ್ಸ್ ನಲ್ಲಿ ನಂದಿನಿ ದೇಶಕ್ಕೆ ಟಾಪರ್| ಅಣ್ಣನಿಗೂ 18ನೇ ಸ್ಥಾನ

ಭೋಪಾಲ್: ಇನ್ಸಿಟಿಟ್ಯೂಟ್‌ ಆಫ್‌ ಚಾರ್ಟರ್ಡ್‌ ಅಕೌಂಟ್ಸ್‌ ಆಫ್‌ ಇಂಡಿಯಾದ ಅಖಿಲ ಭಾರತ ಮಟ್ಟದ ಚಾರ್ಟರ್ಡ್‌ ಅಕೌಂಟ್ಸ್‌ (ಸಿಎ) ಪರೀಕ್ಷೆ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಮಂಗಳೂರಿನ ರುಥ್‌ ಕ್ಲೇರ್‌ ಡಿಸಿಲ್ವ ಅವರು ದೇಶಕ್ಕೇ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಬಾರಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಇನ್ನು ಹೊಸ ಕೋರ್ಸ್​​ನಲ್ಲಿ ಮಧ್ಯಪ್ರದೇಶದ ಮೊರಿನಾದ ನಂದಿನಿ ಅಗರ್​ವಾಲ್​ ದೇಶಕ್ಕೇ ಟಾಪರ್ ಆಗಿದ್ದಾರೆ​. 800ಕ್ಕೆ 614 ಅಂಕ ಗಳಿಸಿದ ನಂದಿನಿ ಮೊದಲ ಸ್ಥಾನ ಗಳಿಸಿದ್ದರೆ, ಆಕೆಯ 21 ವರ್ಷದ ಅಣ್ಣ ಸಚಿನ್ ಅಗರ್ವಾಲ್

ಸಿಎ ಪರೀಕ್ಷೆ‌: ಹೊಸ ಕೋರ್ಸ್ ನಲ್ಲಿ ನಂದಿನಿ ದೇಶಕ್ಕೆ ಟಾಪರ್| ಅಣ್ಣನಿಗೂ 18ನೇ ಸ್ಥಾನ Read More »

ದಾಖಲೆ ಸೃಷ್ಟಿಸಿದ ಲಸಿಕೆ ವಿತರಣೆ| ಕೊರೊನಾ ‌ಹೋರಾಟದಲ್ಲಿ ಮೈಲಿಗಲ್ಲು ‌ಸಾಧಿಸಿದ ಭಾರತ

ನವದೆಹಲಿ : ಕೊರೊನಾವೈರಸ್ ಕಾಯಿಲೆಯ ವಿರುದ್ಧ ಭಾರತದ ಕೋವಿಡ್ ವ್ಯಾಕ್ಸಿನೇಷನ್‌ ಸೋಮವಾರ 75 ಕೋಟಿ-ಗಡಿ ದಾಟಿದ್ದು , ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ) ಆಗ್ನೇಯ ಏಷ್ಯಾ ಪ್ರಾದೇಶಿಕ ನಿರ್ದೇಶಕಿ ಡಾ.ಪೂನಂ ಖೇತ್ರಪಾಲ್ ಸಿಂಗ್ ಅವರು ‘ಅಭೂತಪೂರ್ವ ವೇಗದಲ್ಲಿ’ ಸಾಧನೆ ಮಾಡಿದ ಭಾರತವನ್ನು ಅಭಿನಂದಿಸಿದ್ದಾರೆ. ‘ಮೊದಲ 100 ಮಿಲಿಯನ್ (10 ಕೋಟಿ) ಡೋಸ್ ಗಳನ್ನು ನಿರ್ವಹಿಸಲು 85 ದಿನಗಳನ್ನು ತೆಗೆದುಕೊಂಡರೆ, ಭಾರತ ಕೇವಲ 13 ದಿನಗಳಲ್ಲಿ 650 ಮಿಲಿಯನ್ (65 ಕೋಟಿ) ನಿಂದ 750 ಮಿಲಿಯನ್ (75 ಕೋಟಿ)

ದಾಖಲೆ ಸೃಷ್ಟಿಸಿದ ಲಸಿಕೆ ವಿತರಣೆ| ಕೊರೊನಾ ‌ಹೋರಾಟದಲ್ಲಿ ಮೈಲಿಗಲ್ಲು ‌ಸಾಧಿಸಿದ ಭಾರತ Read More »

ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಇನ್ನಿಲ್ಲ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್(80) ಅವರು ಇಹಲೋಕ ತ್ಯಜಿಸಿದ್ದಾರೆ. ಯೋಗ ಮಾಡುವ ವೇಳೆ ಆಯತಪ್ಪಿ ಬಿದ್ದು, ತಲೆಗೆ ಪೆಟ್ಟು ಮಾಡಿಕೊಂಡಿದ್ದ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಬಳಿಕ ಮಂಗಳೂರಿನ ಯೆನಪೋಯ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ. ಕಾಂಗ್ರೆಸ್ ನಾಯಕರಾದ ಎಂ.ಬಿ.ಪಾಟೀಲ್, ಎಚ್.ಕೆ.ಪಾಟೀಲ್, ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಆಸ್ಪತ್ರೆಗೆ

ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಇನ್ನಿಲ್ಲ Read More »

ಗುಜರಾತ್ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್

ಗುಜರಾತ್ ನ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಅವರು ಆಯ್ಕೆಯಾಗಿದ್ದಾರೆ. ನೂತನ ಸಿಎಂ ಆಯ್ಕೆ ಸಂಬಂಧ ಇಂದು ನಡೆದ ಬಿಎಲ್ ಪಿ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿಜೆಪಿ ವೀಕ್ಷಕರು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ನರೇಂದ್ರ ಸಿಂಗ್ ತೋಮರ್ ನೂತನ ಸಿಎಂ ಆಯ್ಕೆಯನ್ನು ಘೋಷಿಸಿದರು. ಬಿಎಲ್ ಪಿ ಸಭೆಯಲ್ಲಿ ವಿಜಯ್ ರೂಪಾನಿ ಅವರು ಸಿಎಂ ಆಗಿ ಯಾರನ್ನು ಆಯ್ಕೆ ಮಾಡಬೇಕೆಂಬ

ಗುಜರಾತ್ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ Read More »

ರಾಜಸ್ಥಾನ – ಮಹಿಳಾ ಕಾನ್ಸ್​ಟೇಬಲ್ ಜೊತೆ ಡಿಎಸ್ ಪಿ ರಾಸಲೀಲೆ ವಿಡಿಯೋ ವೈರಲ್ – ಪೋಕ್ಸೋ ಕಾಯ್ದೆಯಡಿ ಅಧಿಕಾರಿ ಆರೆಸ್ಟ್

ರಾಜಸ್ಥಾನ : ಮಹಿಳಾ ಕಾಸ್ಸ್ಟೇಬಲ್ ಜೊತೆ ಡಿಎಸ್ ಪಿ ಅಧಿಕಾರಿಯೊಬ್ಬ ಸ್ವಿಮ್ಮಿಂಗ್ ಪೂಲ್ ನಲ್ಲಿ ನಡೆಸಿದ ರಾಸಲೀಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರು ವರ್ಷದ ಮಗುವಿನ ಮುಂದೆಯೆ ನಡೆಸಿದ ರಾಸಲೀಲೆ ಹಿನ್ನಲೆ ಪೊಲೀಸ್ ಅಧಿಕಾರಿಯನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಅಜ್ಮೇರ್ ಜಿಲ್ಲೆಯ ಬೇವಾರ್ ನಲ್ಲಿ ಆರೋಪಿ ಅಧಿಕಾರಿ ಹೀರಾ ಲಾಲ್ ಸೈನಿ, ಸರ್ಕಲ್ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದು, ಇದೇ ಠಾಣೆಯಲ್ಲಿ ಮಹಿಳಾ ಕಾನ್‌ಸ್ಟೆಬಲ್ ಸಹ ಕೆಲಸ ಮಾಡುತ್ತಿದ್ದರು. ಹೀರಾಲಾಲ್ ಸೈನಿ ಅವರನ್ನು

ರಾಜಸ್ಥಾನ – ಮಹಿಳಾ ಕಾನ್ಸ್​ಟೇಬಲ್ ಜೊತೆ ಡಿಎಸ್ ಪಿ ರಾಸಲೀಲೆ ವಿಡಿಯೋ ವೈರಲ್ – ಪೋಕ್ಸೋ ಕಾಯ್ದೆಯಡಿ ಅಧಿಕಾರಿ ಆರೆಸ್ಟ್ Read More »

ಗುಜರಾತ್ ಸಿಎಂ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ

ಗುಜರಾತ್: ಕ್ಷಿಪ್ರ ಬೆಳವಣಿಗೆಯಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರನ್ನ ಭೇಟಿಯಾಗಿ ವಿಜಯ್ ರೂಪಾನಿ ತಮ್ಮ ರಾಜೀನಾಮೆ ಪತ್ರ ನೀಡಿದ್ದಾರೆ ಎನ್ನಲಾಗಿದೆ. ನಿನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗಾಂಧಿನಗರಕ್ಕೆ ಬಂದಿದ್ದು ಅವರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆದಿದೆ ಎನ್ನಲಾಗಿದೆ. ಸಭೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿ ಇದೆ. ಇನ್ನು ರಾಜೀನಾಮೆ ನಂತರ ಹೇಳಿಕೆ ನೀಡಿರುವ ವಿಜಯ್ ರೂಪಾನಿ, ನಮ್ಮ ಪಕ್ಷದಲ್ಲಿ ಕಾಲಕ್ಕೆ

ಗುಜರಾತ್ ಸಿಎಂ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ Read More »

ಗಣಪತಿ ಮೂರ್ತಿ ಧ್ವಂಸ ಮಾಡಿದ ಕಿಡಿಗೇಡಿಗಳು ಗ್ರಾಮಸ್ಥರಿಂದ ಹೆಚ್ಚಿದ ಆಕ್ರೋಶ

ಚಿತ್ರದುರ್ಗ: ಗಣೇಶ ಹಬ್ಬದ ಪ್ರಯುಕ್ತ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ಮೂರ್ತಿಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯುವಕರು ಗಣೇಶ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಿದ್ದರು. ಆದರೆ ತಡರಾತ್ರಿ ಗಣಪತಿ ಮೂರ್ತಿಯನ್ನ ಯಾರೋ ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ. ಈ ಕೃತ್ಯದಿಂದಾಗಿ ಹಿರೇಹಳ್ಳಿ ಗ್ರಾಮಸ್ಥರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸತತ 14 ವರ್ಷಗಳಿಂದ ಗ್ರಾಮದ ಯುವಕರು ಗಣಪತಿಯನ್ನು ಪ್ರತಿಷ್ಠಾಪನೆ ಮಾಡಿಕೊಂಡು ಶಾಂತಿಯುತವಾಗಿ ಹಬ್ಬವನ್ನು ಆಚರಿಸಿಕೊಂಡು ಬಂದಿದ್ದರು. ಆದರೆ ಈ ರೀತಿ ಮಾಡಿರುವುದು

ಗಣಪತಿ ಮೂರ್ತಿ ಧ್ವಂಸ ಮಾಡಿದ ಕಿಡಿಗೇಡಿಗಳು ಗ್ರಾಮಸ್ಥರಿಂದ ಹೆಚ್ಚಿದ ಆಕ್ರೋಶ Read More »

ನಟ ಸಾಯಿ ಧರ್ಮ ತೇಜ್ ಬೈಕ್ ಅಪಘಾತ: ಸ್ಥಿತಿ ಗಂಭೀರ

ಹೈದರಾಬಾದ್‌: ಇಲ್ಲಿನ ಕೇಬಲ್‌ ಸೇತುವೆಯ ಮೇಲೆ ನಡೆದ ಅಪಘಾತದಲ್ಲಿ ತೆಲುಗು ಚಿತ್ರನಟ ಸಾಯಿ ಧರ್ಮ ತೇಜ್ ಅವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಹೈದರಾಬಾದ್‌ನ ಕೇಬಲ್‌ ಸೇತುವೆಯ ಮೇಲೆ ಸಾಯಿ ಧರ್ಮ ತೇಜ್‌ ವೇಗವಾಗಿ ಚಲಿಸುತ್ತಿದ್ದ ಬೈಕ್‌ ಸ್ಕಿಡ್‌ ಆಗಿದ್ದರಿಂದ ಈ ಅಪಘಾತ ಸಂಭವಿಸಿದೆ. ಸಾಯಿ ಧರ್ಮ ತೇಜ್‌ ಅವರು ಹೆಲ್ಮೆಟ್‌ ಧರಿಸಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಅಪಘಾತ ಪ್ರಕರಣ ದಾಖಲಿಸಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ. ಜುಬಿಲಿ ಹಿಲ್ಸ್‌ನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಯಿ ಧರ್ಮ

ನಟ ಸಾಯಿ ಧರ್ಮ ತೇಜ್ ಬೈಕ್ ಅಪಘಾತ: ಸ್ಥಿತಿ ಗಂಭೀರ Read More »